ಅಪರಾಧ
37 ಲಕ್ಷ ರೂ. ಸಂಬಳ ಪಡೆದ ನಕಲಿ ಉದ್ಯೋಗಿ! ರಾಜಸ್ಥಾನದಲ್ಲಿ ಭ್ರಷ್ಟಾಚಾರದ ಹೊಸ ಮಾದರಿ!
ಜೈಪುರ: ಕೆಲಸ ಮಾಡದೆ ದುಡ್ಡು ಗಳಿಸುವುದು ಹಗಲು ಕನಸಾದರೂ, ರಾಜಸ್ಥಾನದಲ್ಲಿ ಅದು ನಿಜವಾಗಿದೆಯೆಂಬ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಎರಡು ವರ್ಷಗಳ ಕಾಲ ಏನೂ ಕೆಲಸ ಮಾಡದೆಯೇ ಎರಡು ಖಾಸಗಿ ಕಂಪನಿಗಳಿಂದ ಒಟ್ಟು ₹37.54 ಲಕ್ಷ ಸಂಬಳ ಪಡೆದಿದ್ದಾರೆ ಎಂದು ರಾಜಸ್ಥಾನ ಹೈಕೋರ್ಟ್ನಲ್ಲಿ ದಾಖಲಾಗಿದ ಅರ್ಜಿಯ ನಂತರ ವಿಚಾರಣೆ ವೇಳೆ ಬಹಿರಂಗವಾಗಿದೆ.
ಈ ಪ್ರಕರಣದಲ್ಲಿ ರಾಜ್ಕಾಂಪ್ ಇನ್ಫೋ ಸರ್ವೀಸಸ್ನ ಐಟಿ ಜಂಟಿ ನಿರ್ದೇಶಕ ಪ್ರದ್ಯುಮನ್ ದೀಕ್ಷಿತ್ ಹಾಗೂ ಅವರ ಪತ್ನಿ ಪೂನಂ ದೀಕ್ಷಿತ್ ಪ್ರಮುಖ ಆರೋಪಿಗಳಾಗಿದ್ದಾರೆ. ಪ್ರದ್ಯುಮನ್ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು, ಸರ್ಕಾರಿ ಟೆಂಡರ್ಗಳನ್ನು ಪಡೆದ ಓರಿಯನ್ಪ್ರೊ ಸೊಲ್ಯೂಷನ್ಸ್ ಮತ್ತು ಟ್ರೀಜೆನ್ ಸಾಫ್ಟ್ವೇರ್ ಲಿಮಿಟೆಡ್ ಸಂಸ್ಥೆಗಳಿಗೆ ತಮ್ಮ ಪತ್ನಿಯನ್ನು ನಕಲಿ ಉದ್ಯೋಗಿಯಾಗಿ ನೇಮಿಸಲು ನಿರ್ದೇಶಿಸಿದ್ದರು ಎಂದು ಆರೋಪಿಸಲಾಗಿದೆ.
ಜನವರಿ 2019 ರಿಂದ ಸೆಪ್ಟೆಂಬರ್ 2020ರ ನಡುವೆ ಪೂನಂ ದೀಕ್ಷಿತ್ ಐದು ಬ್ಯಾಂಕ್ ಖಾತೆಗಳ ಮೂಲಕ ಈ ಎರಡೂ ಕಂಪನಿಗಳಿಂದ ₹37,54,405 ಸಂಬಳ ರೂಪದಲ್ಲಿ ಪಡೆದಿದ್ದಾರೆ. ತನಿಖೆಯಿಂದ ತಿಳಿದುಬಂದಂತೆ, ಪೂನಂ ಯಾವುದೇ ದಿನವೂ ಕಚೇರಿಗೆ ಹಾಜರಾಗಿರಲಿಲ್ಲ, ಆದರೆ ಪ್ರದ್ಯುಮನ್ ಅವರ ನಕಲಿ ಹಾಜರಾತಿ ವರದಿಗಳನ್ನು ಅನುಮೋದಿಸಿ ಪಾವತಿಗಳನ್ನು ಮುಂದುವರಿಸಿದ್ದರು.
ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ (ACB) ಪ್ರಾಥಮಿಕ ತನಿಖೆ ನಡೆಸಿ, ಅಕ್ಟೋಬರ್ 17ರಂದು ಔಪಚಾರಿಕ ಪ್ರಕರಣ ದಾಖಲಿಸಿದೆ. ಪ್ರದ್ಯುಮನ್, ಅವರ ಪತ್ನಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ, 1988 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣವು ರಾಜ್ಯ ಸರ್ಕಾರದ ಟೆಂಡರ್ ವ್ಯವಸ್ಥೆಯಲ್ಲಿನ ಅಕ್ರಮಗಳಿಗೆ ಹೊಸ ಬೆಳಕು ಚೆಲ್ಲಿದೆ.
ಅಪರಾಧ
KANPUR ಲ್ಯಾಂಬೋರ್ಗಿನಿ ಅಪಘಾತ: ಕೆಕೆ ಮಿಶ್ರಾ ಪುತ್ರ ಶಿವಂ ಬಂಧನ
ಲಕ್ನೋ: ಕಾನ್ಪುರದಲ್ಲಿ ಇತ್ತೀಚೆಗೆ ನಡೆದ ಲ್ಯಾಂಬೋರ್ಗಿನಿ (Lamborghini Revuelto) ಕಾರು ಅಪಘಾತ ಪ್ರಕರಣದಲ್ಲಿ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್ಪುರದ ವಿಐಪಿ ರಸ್ತೆಯಲ್ಲಿ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಶಿವಂ ಮಿಶ್ರಾ ಕುಡಿದ ಮತ್ತಿನಲ್ಲಿ ಅತಿ ವೇಗದಲ್ಲಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.
ವೇಗವಾಗಿ ಬಂದ ಕಾರು ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸಿದ್ದ ರಾಯಲ್ ಎನ್ಫೀಲ್ಡ್ ಬೈಕ್ಗೆ ಗುದ್ದಿತ್ತು. ಬೈಕ್ ಕಾರಿನ ಕೆಳಗೆ ಸಿಲುಕಿ ಕೆಲ ಅಂತರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು. ಗಾಯಗೊಂಡವರಲ್ಲಿ ತೌಫಿಕ್ ಅಹ್ಮದ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಮೂಳೆ ಮುರಿತ ಉಂಟಾಗಿದೆ.
ಪ್ರಾರಂಭದಲ್ಲಿ ಕುಟುಂಬದ ವಕೀಲರು ಡ್ರೈವರ್ ಮೋಹನ್ ಕಾರು ಚಲಾಯಿಸುತ್ತಿದ್ದರೆಂದು ಹೇಳಿದ್ದರೂ, ಸಿಸಿಟಿವಿ ದೃಶ್ಯಾವಳಿ ಚಾಲಕನ ಸೀಟಿನಲ್ಲಿ ಶಿವಂ ಮಿಶ್ರಾ ಇದ್ದುದನ್ನು ಸ್ಪಷ್ಟಪಡಿಸಿದೆ. ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
ಅಪರಾಧ
CRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಫೆ.11ರಂದು ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಚ್ಎಎಲ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 12.45ರ ವೇಳೆಗೆ ಕಾರು ಮತ್ತು ಗೂಡ್ಸ್ ವಾಹನ ಟಚ್ ಆದ ವಿಚಾರಕ್ಕೆ ಚಾಲಕರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಗೂಡ್ಸ್ ವಾಹನ ಚಾಲಕ ನಂಜುಂಡ ಕಾರಿನ ಮುಂದೆ ನಿಂತು ನಷ್ಟಪೂರೈಕೆ ಕೇಳಿದ್ದಾನೆ. ಆದರೆ ಕಾರು ಚಾಲಕ ಏಕಾಏಕಿ ವಾಹನ ಚಲಾಯಿಸಿದ್ದು, ನಂಜುಂಡ ಬಾನೆಟ್ ಮೇಲೆ ಬಿದ್ದರೂ ಸುಮಾರು 1 ಕಿ.ಮೀ ಹೆಚ್ಚು ದೂರ ಕಾರು ನಿಲ್ಲಿಸದೆ ಚಲಾಯಿಸಿದ್ದಾನೆ. ಟ್ರಿನಿಟಿ ಜಂಕ್ಷನ್ನಿಂದ ಸಿಬಿ ಜಂಕ್ಷನ್ ಹಾಗೂ ASC ಸೆಂಟರ್ ಕಾಲೇಜು ವರೆಗೆ ಕಾರು ಸಾಗಿದ ದೃಶ್ಯ ರಸ್ತೆಬದಿ ಜನರನ್ನು ಬೆಚ್ಚಿಬೀಳುವಂತೆ ಮಾಡಿತು. ಕೆಲವರು ಮೊಬೈಲ್ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇತರೆ ವಾಹನ ಚಾಲಕರು ಅಡ್ಡಹಾಕಿದ ಬಳಿಕ ಕಾರು ನಿಲ್ಲಿಸಲಾಯಿತು.
ಕಾರು ಚಾಲಕ ಬಂಧನ
ಪೊಲೀಸರು ಕಾರು ಚಾಲಕನನ್ನು ಪುಲಕೇಶಿ ನಗರದ 52 ವರ್ಷದ ಸುರೇಶ್ ಎಂದು ಗುರುತಿಸಿದ್ದಾರೆ. ಘಟನೆಯ ವೇಳೆ ಕಾರಿನಲ್ಲಿ ಪತ್ನಿಯೂ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ (Attempt to Murder) ಅಡಿಯಲ್ಲಿ ಆರೋಪಿಯನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತನಿಖೆಯಲ್ಲಿ ಸುರೇಶ್ ವಿರುದ್ಧ ಈ ಹಿಂದೆಯೂ ಅತಿವೇಗ ಚಾಲನೆ ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಇರುವುದಾಗಿ ತಿಳಿದುಬಂದಿದೆ.
ರಾಜಧಾನಿಯಲ್ಲಿ ಹೆಚ್ಚುತ್ತಿರುವ ರೋಡ್ ರೇಜ್
ಇತ್ತೀಚೆಗೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ರೋಡ್ ರೇಜ್ ಪ್ರಕರಣದಲ್ಲಿ ಕಾರು ಚಾಲಕ ತನ್ನ ಸ್ನೇಹಿತನನ್ನೇ ಗೋಡೆ ಹಾಗೂ ಮರಕ್ಕೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿದ್ದ ಘಟನೆ ಸ್ಮರಣೀಯವಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಘಟನೆಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿವೆ.
-
ಬೆಂಗಳೂರು16 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ13 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ದೇಶ15 hours agoGBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ
-
ಕ್ರೀಡೆ10 hours agoIND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
-
ದೇಶ13 hours agoLATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
-
ಅಪರಾಧ15 hours agoCRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
-
ದೇಶ14 hours agoBHARATH BANDH : ದೇಶವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರ ಹೋರಾಟ, ಹಲವು ರಾಜ್ಯಗಳಲ್ಲಿ ಬಂದ್ ಪರಿಣಾಮ
-
ದೇಶ10 hours agoHAL ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
