ಅಪರಾಧ
ರಕ್ತದಲ್ಲಿ ಪತ್ರ ಬರೆದ ರೈತರು: “ನಮ್ಮ ಸಾವಿಗೆ ಜಮೀರ್ ಕಾರಣ”
ಚಿಕ್ಕಬಳ್ಳಾಪುರ: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಇದೀಗ ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ.
ಮೆಕ್ಕೆಜೋಳ ವ್ಯಾಪಾರಿಗಳಿಗೆ ವಂಚನೆ ಕೇಸ್ ಹಿನ್ನೆಲೆಯಲ್ಲಿ ರೈತರು ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಂಚಕರ ಪರವಾಗಿ ಜಮೀರ್ ನಿಂತಿದ್ದಾರೆಂದು ಆರೋಪಿಸಿ ರೈತರು ರಕ್ತದಲ್ಲಿ ಪತ್ರ ಬರೆದು ಪ್ರತಿಭಟಿಸಿದ್ದಾರೆ.
ರೈತರು “ನಮ್ಮ ಸಾವಿಗೆ ಜಮೀರ್ ಅಹ್ಮದ್ ಕಾರಣ” ಎಂದು ವಾಗ್ದಾಳಿ ನಡೆಸಿದ್ದಾರೆ.
ಸಚಿವರ ಆಪ್ತ ಅಕ್ಬರ್ ಪಾಷಾ ರೈತರಿಂದ ಮೆಕ್ಕೆಜೋಳ ಖರೀದಿಸಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾನೆ ಎಂಬ ಗಂಭೀರ ಆರೋಪ ಹೊರಬಿದ್ದಿದೆ.
ಅಕ್ಬರ್ ರೈತರಿಂದ ಖರೀದಿಸಿದ ಮೆಕ್ಕೆಜೋಳವನ್ನು ತೆಲಂಗಾಣದ ವ್ಯಾಪಾರಿಯೊಬ್ಬನಿಗೆ ಪಾಪ್‌ಕಾರ್ನ್ ತಯಾರಿಗಾಗಿ ಸರಬರಾಜು ಮಾಡಿದರೂ,
ಅದಕ್ಕೆ ಬಾಕಿ ಹಣವನ್ನು ರೈತರಿಗೆ ನೀಡದಿದ್ದಾನೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಅಕ್ಬರ್‌ರನ್ನು ಬಂಧಿಸಿದ್ದಾರೆ.
ಆದರೆ ವಿಚಾರಣೆ ಸಮಯದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪೊಲೀಸರಿಗೆ ಕರೆ ಮಾಡಿ
“ಅಕ್ಬರ್‌ರಿಗೆ ಸಹಾಯ ಮಾಡಿ, ಅವರು ನನ್ನ ಬ್ರದರ್” ಎಂದು ಹೇಳಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಆಡಿಯೋ ವೈರಲ್ ನಂತರ, ಜಮೀರ್ ವಿರುದ್ಧ ರೈತರು ಸಿಡಿದೆದ್ದಿದ್ದಾರೆ.
ಇಂದು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ ಸಚಿವರಿಗೆ ರೈತರು ಮುಖಾಮುಖಿಯಾಗಿ “ನೀವು ಮಧ್ಯ ಪ್ರವೇಶಿಸದೇ ಇದ್ದಿದ್ದರೆ, ನಮಗೆ ಹಣ ಸಿಕ್ಕುತ್ತಿತ್ತು” ಎಂದು ತರಾಟೆ ತೆಗೆದುಕೊಂಡಿದ್ದಾರೆ.
ಅಪರಾಧ
KPSC ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ಗೆ ಜೈಲು, ಕೋರ್ಟ್‌ನಿಂದ ಮಹತ್ವದ ಆದೇಶ
ಬೆಂಗಳೂರು, ಆಗಸ್ಟ್ 30: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಬಂಧಿಸಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಎರಡು ದಿನ ವಿಚಾರಣೆ ಬಳಿಕ ಬಂಧನ
ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ಬಳಿಕ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರ ಪಾತ್ರದ ಕುರಿತು ಸಿಐಡಿ ಅಧಿಕಾರಿಗಳು ಹಲವು ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ವಿವರಗಳನ್ನು ಪಡೆಯಲಾಗುತ್ತಿದೆ.
ನ್ಯಾಯಾಂಗ ಬಂಧನಕ್ಕೆ ಆದೇಶ
ಜ್ಞಾನೇಂದ್ರ ಕುಮಾರ್ ಅವರನ್ನು ಬೆಂಗಳೂರಿನ 1ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಇದರಿಂದಾಗಿ ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ತನಿಖೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಧಿಕಾರಿಗಳು ಹಾಗೂ ಇತರರ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ನಾಳೆ ತೆರೆದ ಕೋರ್ಟ್‌ಗೆ ಹಾಜರು
ಜ್ಞಾನೇಂದ್ರ ಕುಮಾರ್ ಅವರನ್ನು ಆಗಸ್ಟ್ 31ರಂದು ತೆರೆದ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ನಾಳಿನ ವಿಚಾರಣೆ ಪ್ರಕರಣದ ತನಿಖೆಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ಪರೀಕ್ಷಾ ಪ್ರಕ್ರಿಯೆ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ವಿವಿಧ ಹಂತಗಳ ಕುರಿತು ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬಂಧನದ ಬಳಿಕ ಪ್ರಕರಣದ ತನಿಖೆ ಮತ್ತಷ್ಟು ವೇಗ ಪಡೆಯುವ ನಿರೀಕ್ಷೆ ಇದೆ. ಅಕ್ರಮದ ಹಿಂದೆ ಯಾರ ಪಾತ್ರವಿದೆ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಯಾವ ರೀತಿಯ ಲೋಪಗಳು ನಡೆದಿವೆ ಎಂಬುದು ಮುಂದಿನ ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ಅಪರಾಧ
Hassan Jail Fight: ಫೋನ್ ಕರೆ ವಿಚಾರಕ್ಕೆ ಕೈದಿಗಳ ಮಾರಾಮಾರಿ; ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ
ಹಾಸನ: ವಿಚಾರಣಾಧೀನ ಕೈದಿಗಳ ನಡುವೆ ಫೋನ್ ಕರೆ ಮಾಡುವ ವಿಚಾರಕ್ಕೆ ಆರಂಭವಾದ ಜಗಳ ಜೈಲಿನೊಳಗೇ ಮಾರಾಮಾರಿಗೆ ತಿರುಗಿದ ಘಟನೆ Hassan ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಜಗಳ ಬಿಡಿಸಲು ಮುಂದಾದ ಜೈಲು ಸಿಬ್ಬಂದಿ ಮೇಲೂ ಕೈದಿಗಳು ಹಲ್ಲೆ ನಡೆಸಿದ್ದು, ಘಟನೆಯಿಂದ ಜೈಲಿನೊಳಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಫೋನ್ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ವಿಚಾರಣಾಧೀನ ಕೈದಿಗಳಾದ ಮೋಹನಕುಮಾರ ಹಾಗೂ ರಂಗಸ್ವಾಮಿ ನಡುವೆ ಮೊದಲು ಫೋನ್ ಕರೆ ಮಾಡುವ ವಿಚಾರವಾಗಿ ವಾಗ್ವಾದ ಆರಂಭವಾಗಿದೆ. ಮಾತಿನ ಚಕಮಕಿ ಬಳಿಕ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ
ಕೈದಿಗಳ ನಡುವಿನ ಜಗಳವನ್ನು ಗಮನಿಸಿದ ಜೈಲು ಮುಖ್ಯ ವೀಕ್ಷಕರಾದ ಪರಶುರಾಮ ಹಾಗೂ ವೀರೇಶ್ ಸಂಗಮದ್ ಅವರು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಒಂಬತ್ತು ಮಂದಿ ವಿಚಾರಣಾಧೀನ ಕೈದಿಗಳು ಪಿಸಿಎಸ್ ಕೊಠಡಿಯೊಳಗೆ ಏಕಾಏಕಿ ನುಗ್ಗಿ ರಂಗಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಶಶಿಧರ, ರಾಕೇಶ, ಯಲ್ಲಾಲಿಂಗ, ಆಕಾಶ, ಉಮೇಶ, ಸಾಯಿನಾಥ, ನಿರೂಪ್, ಭರತ ಹಾಗೂ ಚೇತನ್ ಎಂಬುವವರು ರಂಗಸ್ವಾಮಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.
ಕೈದಿಗಳ ದಾಳಿಯನ್ನು ತಡೆಯಲು ಮುಂದಾದ ಜೈಲು ಸಿಬ್ಬಂದಿ ವೀರೇಶ್ ಸಂಗಮದ್, ಶಿವಕುಮಾರ ಹಾಗೂ ಪರಶುರಾಮ ಹೆಚ್. ಅವರ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ. ವೀರೇಶ್ ಸಂಗಮದ್ ಅವರನ್ನು ಆರೋಪಿಗಳು ತಳ್ಳಿ ಕೆಳಗೆ ಬೀಳಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಜೈಲು ಸಿಬ್ಬಂದಿಗೆ ಗಾಯ
ಕೈದಿಗಳ ಹಲ್ಲೆಯಿಂದ ಗಾಯಗೊಂಡಿರುವ ಜೈಲು ವೀಕ್ಷಕ ವೀರೇಶ್ ಸಂಗಮದ್ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಘಟನೆ ಬಳಿಕ ಜೈಲು ಅಧಿಕಾರಿಗಳು ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆ ಪ್ರಕರಣದ ಆರೋಪಿಗಳು
ಹಲ್ಲೆ ನಡೆಸಿದ ಆರೋಪಿಗಳು ನಟೋರಿಯಸ್ ರೌಡಿಶೀಟರ್ ಮಂಜೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣಾಧೀನ ಕೈದಿಗಳಾಗಿರುವ ಇವರ ವಿರುದ್ಧ ಇದೀಗ ಜೈಲಿನೊಳಗಿನ ಹಲ್ಲೆ ಪ್ರಕರಣವೂ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಜೈಲಿನೊಳಗೆ ಕೈದಿಗಳ ನಡುವೆ ನಡೆದ ಈ ಗಲಾಟೆ ಹಾಗೂ ಸಿಬ್ಬಂದಿ ಮೇಲಿನ ಹಲ್ಲೆಯ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಬೇಕಿದೆ.
ಅಪರಾಧ
Instagram Influencer Manjeet Kaur Death: ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ, ಕೊನೆಗೂ ದಾರುಣ ಅಂತ್ಯ
ಚಂಡೀಗಢ: Instagram Influencer ಹಾಗೂ ಮಾಡೆಲ್ ಆಗಿ ಗುರುತಿಸಿಕೊಂಡಿದ್ದ Manjeet Kaur ಅವರ ಅಪಹರಣ ಮತ್ತು ಬೆಂಕಿ ಹಚ್ಚಿದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಗಂಭೀರ ಸುಟ್ಟ ಗಾಯಗಳಿಂದಾಗಿ ಸುಮಾರು ಎರಡು ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಮಂಜಿತ್ ಕೌರ್, ಆಗಸ್ಟ್ 26ರಂದು ಚಂಡೀಗಢದ ಪಿಜಿಐಎಂಇಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಂಜಿತ್ ಕೌರ್ ವಿಚ್ಛೇದಿತರಾಗಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಅವರು ಏಳು ವಾರಗಳ ಗರ್ಭಿಣಿಯಾಗಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ. ಪರಿಚಯಸ್ಥರಿಂದಲೇ ತಮ್ಮ ಮಗಳ ಮೇಲೆ ದಾಳಿ ನಡೆದಿದೆ ಎಂದು ಮಂಜಿತ್ ಅವರ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಅಪಹರಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ಆರೋಪ
ತಾಯಿಯ ದೂರಿನ ಪ್ರಕಾರ, ಜುಲೈ 3ರಂದು ಮಂಜಿತ್ ಕೌರ್ ಅವರನ್ನು ಚಂಡೀಗಢದ ಸೆಕ್ಟರ್ 34ರ ಸಮೀಪಕ್ಕೆ ಬರುವಂತೆ ಪರಿಚಯಸ್ಥರಾದ ಶುಭಿ ಮತ್ತು ಪಿಂಡಾ ಎಂಬವರು ಬೆದರಿಸಿದ್ದರು ಎನ್ನಲಾಗಿದೆ. ಅಲ್ಲಿಗೆ ತೆರಳಿದ ಬಳಿಕ ಅವರನ್ನು ಬಲವಂತವಾಗಿ ಪಂಜಾಬ್‌ನ ರೂಪನಗರ ಜಿಲ್ಲೆಯ ಮೊರಿಂಡಾಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.
ಅಲ್ಲಿ ಮಂಜಿತ್ ಅವರ ಮೇಲೆ ಹಲ್ಲೆ ನಡೆಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಮಂಜಿತ್ ಅವರ ಸ್ನೇಹಿತರೊಬ್ಬರು ಸ್ಥಳಕ್ಕೆ ಆಗಮಿಸಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು ಎನ್ನಲಾಗಿದೆ.
ತೀವ್ರ ಸುಟ್ಟ ಗಾಯಗಳಿಂದ ಚಿಕಿತ್ಸೆ
ಮೊದಲು ಮಂಜಿತ್ ಅವರನ್ನು ಮೊರಿಂಡಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೊಹಾಲಿಗೆ ಸ್ಥಳಾಂತರಿಸಲಾಗಿತ್ತು. ಸುಟ್ಟ ಗಾಯಗಳ ಗಂಭೀರತೆಯಿಂದಾಗಿ ಜುಲೈ 9ರಂದು ಚಂಡೀಗಢದ ಪಿಜಿಐಎಂಇಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು.
ಹಲವು ವಾರಗಳ ಕಾಲ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಗಸ್ಟ್ 5ರಂದು ಸ್ವಲ್ಪ ಚೇತರಿಸಿಕೊಂಡು ಮಾತನಾಡಲು ಆರಂಭಿಸಿದ್ದ ಮಂಜಿತ್, ತಮ್ಮ ಪೋಷಕರಿಗೆ ನಡೆದ ಘಟನೆಯ ಕುರಿತು ಕೆಲವು ಮಾಹಿತಿಗಳನ್ನು ನೀಡಿದ್ದರು ಎನ್ನಲಾಗಿದೆ. ಆದರೆ ನಂತರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 26ರಂದು ಮೃತಪಟ್ಟಿದ್ದಾರೆ.
‘ಚೇತರಿಸಿಕೊಳ್ಳುತ್ತಿದ್ದಾರೆ’ ಎಂದಿದ್ದ ಸ್ನೇಹಿತ
ಜುಲೈ 28ರಂದು ಮಂಜಿತ್ ಅವರ ಆಪ್ತ ಸ್ನೇಹಿತ ಹಾಗೂ ಪಂಜಾಬ್ ಮೂಲದ ಇನ್‌ಫ್ಲುಯೆನ್ಸರ್ ಗಿಲ್ ಮೊಹಾಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಮಂಜಿತ್ ಸುಮಾರು ಶೇ.50ರಷ್ಟು ಚೇತರಿಸಿಕೊಂಡಿದ್ದಾರೆ ಮತ್ತು 10ರಿಂದ 15 ದಿನಗಳಲ್ಲಿ ಸ್ವತಃ ಲೈವ್ ಬಂದು ನಡೆದ ಘಟನೆ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದರು.
ಆದರೆ, ಆಕೆ ಚೇತರಿಸಿಕೊಂಡು ಸಾರ್ವಜನಿಕವಾಗಿ ಮಾತನಾಡುವ ಮುನ್ನವೇ ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಆಪ್ತರಲ್ಲಿ ಆಘಾತ ಮೂಡಿಸಿದೆ.
ಇಬ್ಬರು ಆರೋಪಿಗಳಿಗಾಗಿ ಶೋಧ
ಮಂಜಿತ್ ಕೌರ್ ಸಾವಿನ ಬಳಿಕ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 140(1) ಅಪಹರಣ, 103(1) ಕೊಲೆ ಮತ್ತು 3(5) ಜಂಟಿ ಅಪರಾಧ ಹೊಣೆಗಾರಿಕೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಸೆಕ್ಟರ್ 34ರ ಎಸ್‌ಎಚ್‌ಒ ಶಾಧಿ ಲಾಲ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿರುವ ಶುಭಿ ಮತ್ತು ಪಿಂಡಾ ಅವರಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆಯ ಬಳಿಕ ದಾಳಿಯ ಹಿಂದಿನ ನಿಖರ ಕಾರಣ ಹಾಗೂ ಇತರ ಆರೋಪಿಗಳ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ.
-
ರಾಜ್ಯ24 ಗಂಟೆಗಳು agoST Leaders ನ್ನೇ ಗುರಿಯಾಗಿಸಲಾಗುತ್ತಿದೆ: B Nagendra ರಾಜೀನಾಮೆ ಕುರಿತು K N Rajanna ಸ್ಫೋಟಕ ಹೇಳಿಕೆ
-
ದೇಶ24 ಗಂಟೆಗಳು agoRewa Hospital ‘ಇಲ್ಲಿ ಡೆಲಿವರಿ ಮಾಡಿಸಬೇಡಿ’ ಎಂದ ಯುವತಿ: ಹೆರಿಗೆ ಬಳಿಕ ತಾಯಿ-ಮಗು ದಾರುಣ ಸಾವು
-
ದೇಶ24 ಗಂಟೆಗಳು agoNepal ದಲ್ಲಿ ಪ್ರವಾಹದ ಆರ್ಭಟ: ತೇಲಿಬಂದ Bank ಲಾಕರ್ ಒಡೆದು ಲಕ್ಷಾಂತರ ರೂಪಾಯಿ ಕಳವು
-
ಬೆಂಗಳೂರು13 ಗಂಟೆಗಳು agoGruha Lakshmi ಯೋಜನೆ: ಫಲಾನುಭವಿಗಳಿಗೆ ಹೊಸ ನಿಯಮ, ಆಗಸ್ಟ್ 30ರಿಂದ ಬಯೋಮೆಟ್ರಿಕ್ ಪರಿಶೀಲನೆ
-
ಬೆಂಗಳೂರು4 ಗಂಟೆಗಳು agoKPSC ಅಕ್ರಮಕ್ಕೆ ಬಿಜೆಪಿ ಸರ್ಕಾರವೇ ಕಾರಣ? ಜ್ಞಾನೇಂದ್ರ ಕುಮಾರ್ ನೇಮಕದ ಬಗ್ಗೆ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ
-
ಬೆಂಗಳೂರು6 ಗಂಟೆಗಳು agoKPSC ರದ್ದು ಮಾಡುತ್ತೇನೆ ಎಂದಿದ್ದ ಪ್ರಿಯಾಂಕ್ ಖರ್ಗೆ ಈಗ ಏಕೆ ಸುಮ್ಮನಿದ್ದಾರೆ? ಹೆಚ್ಡಿಕೆ ಕಿಡಿ
-
ರಾಜ್ಯ8 ಗಂಟೆಗಳು agoಮೈಸೂರಿ ನಲ್ಲಿ Siddaramaiah ಕಾರಿಗೆ ಮುತ್ತಿಗೆ; 165 ಎಕರೆ ಭೂಮಿಗಾಗಿ ರೈತರ ಪ್ರತಿಭಟನೆ
-
ದೇಶ10 ಗಂಟೆಗಳು agoMysuru Dasara ಗಜಪಡೆ ದರ್ಶನಕ್ಕೆ ಟಿಕೆಟ್ ರದ್ದು: ಸಾರ್ವಜನಿಕರ ವಿರೋಧದ ಬಳಿಕ ಮಹತ್ವದ ನಿರ್ಧಾರ
