Connect with us

ದೇಶ

ಸಿದ್ದರಾಮಯ್ಯ ಬದಲಾವಣೆಗೆ ಹೈಕಮಾಂಡ್‌ಗೆ ತಲೆನೋವು – ಇಲ್ಲಿದೆ ಕಾರಣಗಳು!

Published

on

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿಗೆ ಮುಂದುವರಿಸಬೇಕೆಂದು ಒಂದು ಬಣ ಒತ್ತಾಯಿಸುತ್ತಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಬೇಕೆಂದು ಮತ್ತೊಂದು ಬಣ ಒತ್ತಾಯಿಸುತ್ತಿದೆ.

ಆದರೆ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರನ್ನು ಬದಲಿಸಲು ತೀರ್ಮಾನಿಸುವುದು ಅಷ್ಟೇನೂ ಸುಲಭವಲ್ಲ. ಕಾರಣ, ಅವರ ರಾಜಕೀಯ ಪ್ರಭಾವ ಮತ್ತು ಆಡಳಿತದ ಅನುಭವದ ಐದು ಅಸ್ತ್ರಗಳು ಅವರನ್ನು ಅಸ್ಥಿರಗೊಳಿಸದಂತೆ ತಡೆದಿವೆ.

1️⃣ ಅಹಿಂದ ಮತಬ್ಯಾಂಕ್‌ನ ನಿಷ್ಠೆ:
ಸಿದ್ದರಾಮಯ್ಯ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರು) ಮತದಾರರ ಅಪ್ರತಿಮ ನಾಯಕ. ಈ ವರ್ಗದ ಬೆಂಬಲವು ಕಾಂಗ್ರೆಸ್‌ಗೆ ಜೀವಾಳ. ಸಿದ್ದರಾಮಯ್ಯನವರನ್ನು ಬದಲಿಸಿದರೆ ಈ ಮತಬ್ಯಾಂಕ್ ದೂರ ಹೋಗುವ ಅಪಾಯ ಹೈಕಮಾಂಡ್‌ಗೆ ಇದೆ.

2️⃣ ಆಡಳಿತದ ಅನುಭವ:
ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ತಹಶೀಲ್ದಾರ್ ಮಟ್ಟದಿಂದಲೇ ಆಡಳಿತದ ಎಲ್ಲ ಹಂತಗಳನ್ನು ಕಂಡ ನಾಯಕ. ಇಂತಹ ಅನುಭವಿ ನಾಯಕನ ಬದಲಾವಣೆ ಆಡಳಿತದ ಸ್ಥಿರತೆಯ ಮೇಲೆ ಪರಿಣಾಮ ಬೀರುವ ಭೀತಿ ಕಾಂಗ್ರೆಸ್‌ಗೆ ಇದೆ.

3️⃣ ಕ್ಲೀನ್ ಇಮೇಜ್:
ಇಂದಿನ ರಾಜಕೀಯದಲ್ಲಿ ಭ್ರಷ್ಟಾಚಾರದ ಆರೋಪಗಳಿಲ್ಲದ ನಾಯಕರು ವಿರಳ. ಆದರೆ ಸಿದ್ದರಾಮಯ್ಯನವರು ತಮ್ಮ ಇಮೇಜ್‌ನ್ನು ಶುದ್ಧವಾಗಿ ಕಾಪಾಡಿಕೊಂಡಿದ್ದಾರೆ. ಇದರಿಂದ ವಿರೋಧ ಪಕ್ಷಗಳು ಅವರ ವಿರುದ್ಧ ನೇರ ದಾಳಿ ಮಾಡಲು ಕಷ್ಟವಾಗಿದೆ.

4️⃣ ಶಾಸಕರ ಬೆಂಬಲ ಮತ್ತು ಜನಪ್ರಿಯತೆ:
ಸಿದ್ದರಾಮಯ್ಯ ಜನಪ್ರೀಯ ಮುಖ ಮಾತ್ರವಲ್ಲ, ಶಾಸಕರ ನಾಯಕ ಕೂಡ ಹೌದು. ಕಾಂಗ್ರೆಸ್ ಶಾಸಕರ ಬಹುಪಾಲು ಅವರ ಬೆಂಬಲಿಗರು. ಮೈಸೂರಿನವರಾದರೂ ಬಾದಾಮಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿಯೂ ಭಾರಿ ಜನಬೆಂಬಲ ಪಡೆದಿದ್ದಾರೆ.

5️⃣ 2028ರ ಚುನಾವಣಾ ತಂತ್ರಜ್ಞಾನ:
ಕಾಂಗ್ರೆಸ್ ಹೈಕಮಾಂಡ್‌ಗಾಗಿ 2028ರ ಚುನಾವಣೆಯು ಮುಖ್ಯ ಗುರಿ. ಸಿದ್ದರಾಮಯ್ಯ ವಿರೋಧ ಪಕ್ಷಗಳ ತಂತ್ರಗಳಿಗೆ ಎದುರಾಗಿ ಜನರನ್ನು ಸೆಳೆಯುವ ಸಾಮರ್ಥ್ಯ ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಕಾಯ್ದುಕೊಳ್ಳಬಹುದು ಎಂಬ ವಿಶ್ವಾಸ ಹೈಕಮಾಂಡ್‌ಗೆ ಇದೆ.

ಇದೆಲ್ಲ ಕಾರಣಗಳಿಂದ ಸಿದ್ದರಾಮಯ್ಯನವರ ಸ್ಥಾನ ಅಲುಗಾಡದಂತಾಗಿದೆ. ಅಧಿಕಾರ ಹಸ್ತಾಂತರದ ಚರ್ಚೆ ನಡೆಯುತ್ತಿದ್ದರೂ, ಹೈಕಮಾಂಡ್‌ಗೆ ನಿರ್ಧಾರ ಸುಲಭವಾಗಿಲ್ಲ.

ದೇಶ

ಬಿಜೆಪಿ ಮಹತ್ವದ ಸಂಘಟನಾ ಬದಲಾವಣೆ: 4 ರಾಜ್ಯಗಳಿಗೆ ನೂತನ ಅಧ್ಯಕ್ಷರ ನೇಮಕ

Published

on

ನವದೆಹಲಿ: ಮುಂಬರುವ ರಾಜಕೀಯ ಚಟುವಟಿಕೆಗಳು ಹಾಗೂ ಚುನಾವಣಾ ಸಿದ್ಧತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಲ್ಕು ಪ್ರಮುಖ ರಾಜ್ಯ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಪಂಜಾಬ್, ಹರಿಯಾಣ, ದೆಹಲಿ ಹಾಗೂ ತ್ರಿಪುರಾ ರಾಜ್ಯ ಘಟಕಗಳಲ್ಲಿ ಸಂಘಟನಾ ಪುನರ್‌ರಚನೆ ನಡೆಸಿ ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ.

ಯಾರಿಗೆ ಯಾವ ರಾಜ್ಯದ ಜವಾಬ್ದಾರಿ?

ಪಂಜಾಬ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೇವಲ್ ಸಿಂಗ್ ಧಿಲ್ಲೋನ್ ಅವರನ್ನು ನೇಮಕ ಮಾಡಲಾಗಿದೆ. ಹರಿಯಾಣ ಬಿಜೆಪಿ ಅಧ್ಯಕ್ಷೆಯಾಗಿ ಅರ್ಚನಾ ಗುಪ್ತಾ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕೇಂದ್ರ ಸಚಿವ ಹರ್ಷ್ ಮಲ್ಹೋತ್ರಾ ಹಾಗೂ ತ್ರಿಪುರಾ ಬಿಜೆಪಿ ಅಧ್ಯಕ್ಷರಾಗಿ ಶಾಸಕ ಅಭಿಷೇಕ್ ದೆಬ್ರಾಯ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿದ್ದ ಧಿಲ್ಲೋನ್‌ಗೆ ದೊಡ್ಡ ಹುದ್ದೆ

ಪಂಜಾಬ್ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಕೇವಲ್ ಸಿಂಗ್ ಧಿಲ್ಲೋನ್ ಈ ಹಿಂದೆ ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದರು. ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆಪ್ತರಾಗಿದ್ದ ಅವರು 2012 ರಿಂದ 2017ರವರೆಗೆ ಬರ್ನಾಲಾ ಕ್ಷೇತ್ರದ ಶಾಸಕರಾಗಿದ್ದರು. 2022ರಲ್ಲಿ ಬಿಜೆಪಿ ಸೇರ್ಪಡೆಯಾದ ಧಿಲ್ಲೋನ್‌ಗೆ ಈಗ ಪಂಜಾಬ್‌ನಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿ ನೀಡಲಾಗಿದೆ.

ದೆಹಲಿ ಬಿಜೆಪಿಗೆ ಹರ್ಷ್ ಮಲ್ಹೋತ್ರಾ ನೇತೃತ್ವ

ದೆಹಲಿ ಬಿಜೆಪಿ ಅಧ್ಯಕ್ಷರಾಗಿರುವ ಹರ್ಷ್ ಮಲ್ಹೋತ್ರಾ ಪ್ರಸ್ತುತ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು, ಕೇಂದ್ರ ಸರ್ಕಾರದಲ್ಲಿ ಕಾರ್ಪೊರೇಟ್ ವ್ಯವಹಾರಗಳು ಹಾಗೂ ರಸ್ತೆ ಸಾರಿಗೆ ಸಚಿವಾಲಯದ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದೆಹಲಿ ರಾಜಕಾರಣದಲ್ಲಿ ದೀರ್ಘ ಅನುಭವ ಹೊಂದಿರುವ ಅವರ ನೇಮಕ ಪಕ್ಷಕ್ಕೆ ಹೊಸ ಚೈತನ್ಯ ನೀಡಲಿದೆ ಎಂದು ಹೇಳಲಾಗುತ್ತಿದೆ.

ಮಹಿಳಾ ನಾಯಕಿ ಅರ್ಚನಾ ಗುಪ್ತಾ ಭಾವುಕ ಪೋಸ್ಟ್

ಹರಿಯಾಣ ಬಿಜೆಪಿ ಅಧ್ಯಕ್ಷೆಯಾಗಿ ನೇಮಕಗೊಂಡ ಅರ್ಚನಾ ಗುಪ್ತಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪಕ್ಷದ ನಾಯಕತ್ವಕ್ಕೆ ಧನ್ಯವಾದ ತಿಳಿಸಿದ್ದಾರೆ. “ಈ ಜವಾಬ್ದಾರಿಯನ್ನು ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವದಿಂದ ನಿಭಾಯಿಸುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.

ತ್ರಿಪುರಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಭಿಷೇಕ್ ದೆಬ್ರಾಯ್ 2023ರ ವಿಧಾನಸಭೆ ಚುನಾವಣೆಯಲ್ಲಿ ಮಾತಬಾರಿ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು.

ಈ ನಾಲ್ಕು ರಾಜ್ಯಗಳಲ್ಲಿ ನಡೆದಿರುವ ಸಂಘಟನಾ ಬದಲಾವಣೆ ಬಿಜೆಪಿಯ ಮುಂದಿನ ಚುನಾವಣಾ ರಣತಂತ್ರದಲ್ಲಿ ಮಹತ್ವದ ಪಾತ್ರವಹಿಸುವ ನಿರೀಕ್ಷೆಯಿದೆ.

Continue Reading

ದೇಶ

ಪ್ರಿಯಾಂಕ ಖರ್ಗೆಗೆ ಡಿಸಿಎಂ ಸ್ಥಾನ ನೀಡುವಂತೆ ಕಲಬುರಗಿಯಲ್ಲಿ ವಿಶೇಷ ಪೂಜೆ, 101 ತೆಂಗಿನಕಾಯಿ ಒಡೆದು ಪ್ರಾರ್ಥನೆ

Published

on

ಕಲಬುರಗಿ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂಬ ಒತ್ತಾಯ ಕಲಬುರಗಿಯಲ್ಲಿ ಜೋರಾಗಿದೆ. ಪ್ರಿಯಾಂಕ ಖರ್ಗೆ ಅಭಿಮಾನಿಗಳ ಬಳಗ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಸಮಿತಿಯ ನೇತೃತ್ವದಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.

ಸಮಿತಿಯ ಜಿಲ್ಲಾಧ್ಯಕ್ಷ ಶಿವಾನಂದ ಹೊನಗುಂಟಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಿದರು. ರಾಜ್ಯ ಸರ್ಕಾರದಲ್ಲಿ ನಡೆಯಬಹುದಾದ ನಾಯಕತ್ವ ಬದಲಾವಣೆಯ ಸಂದರ್ಭದಲ್ಲಿ ಪ್ರಿಯಾಂಕ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡ ಶಿವಾನಂದ ಹೊನಗುಂಟಿ, “2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಿಯಾಂಕ ಖರ್ಗೆ ಮಹತ್ವದ ಪಾತ್ರವಹಿಸಿದ್ದರು. ಬಿಜೆಪಿ ಸರ್ಕಾರದ ಅವಧಿಯ ಪಿಎಸ್‌ಐ ನೇಮಕಾತಿ ಅಕ್ರಮ ಹಾಗೂ ಕೆಕೆಆರ್‌ಡಿಬಿ ಹಗರಣಗಳನ್ನು ಬಹಿರಂಗಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು” ಎಂದು ಹೇಳಿದರು.

ಐಟಿ-ಬಿಟಿ ಸಚಿವರಾಗಿ ಪ್ರಿಯಾಂಕ ಖರ್ಗೆ ರಾಜ್ಯದ ತಂತ್ರಜ್ಞಾನ ಕ್ಷೇತ್ರಕ್ಕೆ ಹೊಸ ದಿಕ್ಕು ನೀಡಿದ್ದರು. ಕೈಗಾರಿಕಾ ಮತ್ತು ಐಟಿ ವಲಯದ ಬೆಳವಣಿಗೆಗೆ ಅವರ ಕೊಡುಗೆ ಮಹತ್ವದ್ದಾಗಿದ್ದು, ಮತ್ತೆ ಅವರಿಗೆ ಅದೇ ಖಾತೆ ನೀಡಬೇಕು ಎಂಬ ಬೇಡಿಕೆಯೂ ಕೇಳಿಬಂದಿದೆ ಎಂದು ಅವರು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ದೂರದೃಷ್ಟಿಯ ನಾಯಕತ್ವ ಅಗತ್ಯವಿದ್ದು, ಪ್ರಿಯಾಂಕ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ಈ ಭಾಗಕ್ಕೆ ಮತ್ತಷ್ಟು ಶಕ್ತಿ ಸಿಗಲಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟರು.

ಕೋಲಿ, ಕಬ್ಬಲಿಗ, ಬೆಸ್ತ, ಮೊಗವೀರ ಮತ್ತು ಅಂಬಿಗ ಸಮುದಾಯಗಳಿಗೆ ಎಸ್‌ಟಿ ಮಾನ್ಯತೆ ವಿಚಾರದಲ್ಲಿ ಪ್ರಿಯಾಂಕ ಖರ್ಗೆ ಸ್ಪಂದಿಸುತ್ತಿದ್ದಾರೆ ಎಂದು ಸಮುದಾಯದ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲಿ ಈ ಬೆಳವಣಿಗೆ ರಾಜಕೀಯವಾಗಿ ಸಾಕಷ್ಟು ಕುತೂಹಲ ಮೂಡಿಸಿದೆ.

Continue Reading

ದೇಶ

ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ: ಸಿದ್ದರಾಮಯ್ಯ ಸ್ಪಷ್ಟನೆ

Published

on

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಲೋಕಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹೈಕಮಾಂಡ್ ಹೇಳಿದ ತಕ್ಷಣ ನಾನು ರಾಜೀನಾಮೆ ನೀಡುವುದಾಗಿ ಮೊದಲೇ ಹೇಳಿದ್ದೆ. ಅದರಂತೆಯೇ ಇಂದು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದೇನೆ” ಎಂದರು.

ರಾಜೀನಾಮೆ ಪ್ರಕ್ರಿಯೆ ಕುರಿತು ವಿವರಿಸಿದ ಸಿದ್ದರಾಮಯ್ಯ, “ನಾನು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಲು ಹೋದೆ. ಆದರೆ ರಾಜ್ಯಪಾಲರು ಸದ್ಯ ನಗರದಲ್ಲಿ ಇರಲಿಲ್ಲ. ಅವರು ಇಂದು ರಾತ್ರಿ ವಾಪಸ್ ಬರುತ್ತಾರೆ ಎಂದು ಕಚೇರಿಯಲ್ಲಿ ತಿಳಿಸಿದರು. ಹೀಗಾಗಿ ಅವರ ಕಾರ್ಯದರ್ಶಿಗೆ ಪತ್ರ ಸಲ್ಲಿಸಿದ್ದೇನೆ. ರಾಜ್ಯಪಾಲರು ಬಂದ ಬಳಿಕ ಸಂವಿಧಾನಾತ್ಮಕವಾಗಿ ಅದನ್ನು ಅಂಗೀಕರಿಸಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

ರಾಜ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ಮಾತನಾಡಿದ ಅವರು, “ನಮ್ಮ ಪಕ್ಷಕ್ಕೆ 135ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ. ಇಬ್ಬರು ಪಕ್ಷೇತರ ಶಾಸಕರೂ ನಮ್ಮೊಂದಿಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಹೊಂದಿದ್ದು ಯಾವುದೇ ಗೊಂದಲವಿಲ್ಲದೆ ಮುಂದಿನ ಮುಖ್ಯಮಂತ್ರಿಗೆ ಅವಕಾಶ ಕಲ್ಪಿಸಬೇಕು” ಎಂದು ಮನವಿ ಮಾಡಿದರು.

ತಮ್ಮ ರಾಜಕೀಯ ಬದುಕಿನ ಕುರಿತು ಭಾವುಕರಾಗಿ ಮಾತನಾಡಿದ ಸಿದ್ದರಾಮಯ್ಯ, “ಡಾ. ರಾಜ್‌ಕುಮಾರ್ ಜನರನ್ನು ‘ಅಭಿಮಾನಿ ದೇವರುಗಳು’ ಎಂದು ಕರೆಯುತ್ತಿದ್ದರು. ನನ್ನ ಪಾಲಿಗೂ ರಾಜ್ಯದ ಮತದಾರರೇ ಅಭಿಮಾನಿ ದೇವರುಗಳು. ಸಂವಿಧಾನವೇ ನನ್ನ ಧರ್ಮ ಎಂದು ನಂಬಿ ರಾಜಕೀಯ ಜೀವನ ನಡೆಸಿದ್ದೇನೆ” ಎಂದು ಹೇಳಿದರು.

“ರಾಜ್ಯದ ಜನತೆ ನನಗೆ ಎರಡು ಬಾರಿ ಮುಖ್ಯಮಂತ್ರಿ ಆಗುವ ಅವಕಾಶ ನೀಡಿದ್ದಾರೆ. ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿಯೂ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ. ಅದಕ್ಕಾಗಿ ನಾನು ಜನರಿಗೆ ಸದಾ ಋಣಿ” ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ಇದೇ ವೇಳೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದರು.

Continue Reading

Trending