Connect with us

ದೇಶ

ಕೆನರಾ ಬ್ಯಾಂಕ್ ಒಳಗೇ ಗಲಾಟೆ: ಮ್ಯಾನೇಜರ್ ಹೇಳಿಕೆ ಉದ್ಯೋಗಿಗಳ ಆತಂಕ!

ಬೆಂಗಳೂರು: ಕೆನರಾ ಬ್ಯಾಂಕ್‌ನ ಮ್ಯಾನೇಜರ್ ಒಬ್ಬರ ಮಾತು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ವಿಡಿಯೋ ಕಾನ್ಫರೆನ್ಸ್ ವೇಳೆ ಮ್ಯಾನೇಜರ್ ಸ್ವೈನ್ ತಮ್ಮ ಸಿಬ್ಬಂದಿಗೆ “ರಜೆಯಲ್ಲಿದ್ದರೂ ಕೆಲಸ ಮಾಡಬೇಕು” ಎಂದು ಗರಂ ಆಗಿ ಹೇಳಿರುವ ವಿಡಿಯೋ ವೈರಲ್ ಆಗಿದೆ.

ವೈರಲ್ ವಿಡಿಯೋದಲ್ಲಿ ಅವರು ಒಬ್ಬ ಉದ್ಯೋಗಿಗೆ, “ನಿಮ್ಮ ಕುಟುಂಬ ಹಾಳಾಗಲಿ, ನನಗೆ ನಿಮ್ಮ ಕುಟುಂಬದ ಬಗ್ಗೆ ಕಾಳಜಿ ಇಲ್ಲ. ಬ್ಯಾಂಕ್ ನಿಮಗೆ ಕೆಲಸ ಮಾಡಲು ವೇತನ ನೀಡುತ್ತದೆ, ರಜೆಯಲ್ಲಿ ಸುತ್ತಾಡಲು ಅಲ್ಲ. ನನಗೂ ಕುಟುಂಬವಿದೆ, ಆದರೆ ನಾನು ಕೇರ್ ಮಾಡಲ್ಲ” ಎಂದು ಗದರಿಸಿರುವುದು ಕೇಳಿಬರುತ್ತದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ, ಬಳಕೆದಾರರು ಬ್ಯಾಂಕ್‌ನ ಕೆಲಸದ ಸಂಸ್ಕೃತಿಯನ್ನು ಪ್ರಶ್ನಿಸಿದ್ದಾರೆ. “ಉದ್ಯೋಗಿಗಳ ಮೇಲೆ ಒತ್ತಡ ಹೇರುವಂತಹ ಅನಾರೋಗ್ಯಕರ ಕೆಲಸದ ವಾತಾವರಣ ಬೆಳೆಸಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

ಈ ವಿವಾದದ ನಂತರ, ಕೆನರಾ ಬ್ಯಾಂಕ್ ತನ್ನ ಸಿಬ್ಬಂದಿಗೆ “ಆಂತರಿಕ ಸಭೆಗಳನ್ನು ರೆಕಾರ್ಡ್ ಮಾಡಬಾರದು ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಬಾರದು” ಎಂದು ಸೂಚನೆ ನೀಡಿದೆ. ಆದರೆ, ವಿವಾದಾತ್ಮಕ ಹೇಳಿಕೆ ನೀಡಿದ ಮ್ಯಾನೇಜರ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

ದೇಶ

LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.

“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.

ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.

ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.

Continue Reading

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

ದೇಶ

“ಉರ್ಕೆ ಉಂಡ್ರಾ?”: ಮಧುಗಿರಿಯಲ್ಲಿ ‘ಸಿಎಂ ಆಗಿ’ ಘೋಷಣೆಗೆ ಪರಮೇಶ್ವರ್ ತೆಲುಗಿನಲ್ಲಿ ತಿರುಗೇಟು

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ “ಸಿಎಂ ಆಗಬೇಕು” ಎಂಬ ಘೋಷಣೆ ಕೇಳಿಬಂದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಯೊಬ್ಬರು “ನೀವು ಸಿಎಂ ಆಗಬೇಕು” ಎಂದು ಕೂಗಿದ ಪ್ರಸಂಗ ನಡೆದಿದೆ.

ಭಾಷಣದ ಅಂತ್ಯದಲ್ಲಿ ಈ ಘೋಷಣೆ ಕೇಳಿಬಂದಾಗ, ಪರಮೇಶ್ವರ್ ಅವರು ಕ್ಷಣಮಾತ್ರ ನಿಂತು ಕಾರ್ಯಕರ್ತನ ಮಾತಿಗೆ ತೆಲುಗಿನಲ್ಲಿ ಪ್ರತಿಕ್ರಿಯಿಸಿದರು. “ಉರ್ಕೆ ಉಂಡ್ರ… ನೀನು ಸಿಎಂ ಅಂಟ?” ಎಂದು ಹೇಳಿ, “ನಾನು ಸಿಎಂ ಆಗಬೇಕಂತೆ… ಸುಮ್ಮನಿರು” ಎಂದು ಹಾಸ್ಯಭರಿತವಾಗಿ ಹೇಳಿ ಕಾರ್ಯಕರ್ತನ ಬಾಯಿ ಮುಚ್ಚಿಸಿದರು.

ಈ ದೃಶ್ಯ ಅಲ್ಲಿದ್ದ ಜನರಲ್ಲಿ ನಗೆರಸ ಮೂಡಿಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಾಜಕೀಯ ವಲಯದಲ್ಲೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಪರಮೇಶ್ವರ್ ಅವರ ಪ್ರತಿಕ್ರಿಯೆ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಭಿವೃದ್ಧಿ, ಮೂಲಸೌಕರ್ಯ ಬಲಪಡಿಸುವುದು ಮತ್ತು ಸಾರ್ವಜನಿಕ ಸೇವೆ ಸುಧಾರಣೆ ಕುರಿತು ಗೃಹ ಸಚಿವರು ಮಾತನಾಡಿದರು. ಆದರೆ “ಸಿಎಂ ಆಗಿ” ಘೋಷಣೆಯ ಘಟನೆ ಸಮಾರಂಭದ ಪ್ರಮುಖ ಹೈಲೈಟ್ ಆಗಿದೆ.

Continue Reading

Trending