ಆರೋಗ್ಯ
ಅಧೋ ಮುಖ ಸ್ವನಾಸನ
ನಮ್ಮ ಮನಸ್ಸು ಮತ್ತು ದೇಹವನ್ನು ನಾವೇ ರಕ್ಷಿಸಿಕೊಳ್ಳುವ ಸರಳ ವಿಧಾನವೆಂದರೆ ಯೋಗಾಸನ. ಅಧೋ ಮುಖ ಎಂದರೆ- ಕೆಳಮುಖವಾಗಿ ಕಾಣುವ ಮುಖ, ಸ್ವಾನಂ ಎಂದರೆ ನಾಯಿ, ಈ ಆಸನವು ನಾಯಿಯು ಸೋಮಾರಿತನವನ್ನು ಹೋಗಲಾಡಿಸಲು ತನ್ನ ದೇಹವನ್ನು ಚಾಚಿದಂತೆ ಕಾಣುತ್ತದೆ. ಆದ್ದರಿಂದ ಅದು ಹೆಸರು ಪಡೆಯುತ್ತದೆ.
ಅಧೋ ಮುಖ ಸ್ವನಾಸನ ಮಾಡುವ ವಿಧಾನ:
ನಾಯಿಯಂತೆ ನಿಮ್ಮ ಮೊಣಕಾಲು ಊರಿ ನಿಂತುಕೊಳ್ಳಿ.
ನಿಧಾನವಾಗಿ ಉಸಿರು ಬಿಡಿ ಮತ್ತು ಸೊಂಟವನ್ನು ಮೇಲಕ್ಕೆತ್ತಿ.
ಮೊಣಕೈ ಮತ್ತು ಮೊಣಕಾಲನ್ನು ನೇರವಾಗಿಸಿ.
ದೇಹವು ‘ವಿ’ ಆಕಾರದಲ್ಲಿ ಇರಬೇಕು.
ಕೈಗಳು ಭುಜದ ಸಮಾನಾಂತರವಾಗಿರಬೇಕು ಮತ್ತು ಪಾದಗಳು ಸೊಂಟದ ಸಮಾನವಾಗಿರಲಿ.
ಹೆಬ್ಬೆರಳುಗಳು ಮೇಲಿನ ಭಾಗಕ್ಕೆ ನೋಡುತ್ತಿರಲಿ.
ಕೈಗಳನ್ನು ನೆಲಕ್ಕೆ ಊರಿಕೊಳ್ಳಿ ಮತ್ತು ಕುತ್ತಿಗೆ ಎಳೆಯಿರಿ.
ಕಿವಿಗಳು ಒಳಭಾಗದ ಕೈಗಳನ್ನು ಮುಟ್ಟಬೇಕು ಮತ್ತು ನಾಭಿ ಕಡೆಗೆ ನೋಟವನ್ನಿಡಿ.
ಕೆಲವು ಸೆಕೆಂಡು ಹಾಗೆ ಇರಿ ಮತ್ತು ಇದರ ಬಳಿಕ ಮತ್ತೆ ಮೊಣಕಾಲುಗಳನ್ನು ಮಡಚಿ ಮೊದಲಿನ ಭಂಗಿಗೆ ಬನ್ನಿ.
ಅಧೋ ಮುಖ ಸ್ವನಾಸನದ ಅನುಕೂಲಗಳು:
ಮಾನಸಿಕ ಆರೋಗ್ಯವನ್ನು ಹೆಚ್ಚಿಸುತ್ತದೆ
ನಿಮ್ಮ ಕಾಲುಗಳ ಸ್ನಾಯುಗಳನ್ನು ಬಲಪಡಿಸುತ್ತದೆ.
ನಿಮ್ಮ ಮೆದುಳಿಗೆ ರಕ್ತದ ಹರಿವನ್ನು ಹೆಚ್ಚಿಸುತ್ತದೆ.
ನಿಮ್ಮ ತೋಳುಗಳು ಮತ್ತು ಭುಜಗಳನ್ನು ಬಲಪಡಿಸುತ್ತದೆ.
ಕೆಳಗಿನ ಬೆನ್ನಿನಲ್ಲಿ ನೋವನ್ನು ನಿವಾರಿಸುತ್ತದೆ.
ಒತ್ತಡ ಮತ್ತು ಆತಂಕವನ್ನು ನಿವಾರಿಸುತ್ತದೆ.
ಮೆದುಳಿಗೆ ರಕ್ತ ಪರಿಚಲನೆ ಸುಧಾರಿಸುತ್ತದೆ
ಎಚ್ಚರಿಕೆ:
ಬೆನ್ನುಮೂಳೆ, ಸೊಂಟ, ಮೊಣಕಾಲು ಮತ್ತು ಭುಜದ ಶಸ್ತ್ರಚಿಕಿತ್ಸೆ ಹೊಂದಿರುವ ಜನರು ಈ ಆಸನ ಮಾಡಬರದು.
ಗರ್ಭಿಣಿಯರು ಈ ಆಸನವನ್ನು ತುಂಬಾ ಎಚ್ಚರಿಕೆಯಿಂದ ಪಾಲಿಸಬೆಕು. ನೀವು ಅಭ್ಯಾಸ ಮಾಡುವ ಮೊದಲು ವೈದ್ಯರನ್ನು ಸಂಪರ್ಕಿಸಿ.
ಆರೋಗ್ಯ
LIFE STYLE ನಿಂತುಕೊಂಡು ನೀರು ಕುಡಿಯುವುದರಿಂದ ಏನಾಗುತ್ತದೆ?
ಬೆಂಗಳೂರು: ಇಂದಿನ ವೇಗದ ಜೀವನಶೈಲಿಯಲ್ಲಿ ನಾವು ಅನೇಕ ಸಣ್ಣ ಅಭ್ಯಾಸಗಳನ್ನು ಗಮನಿಸದೆ ನಿರ್ಲಕ್ಷಿಸುತ್ತೇವೆ. ಅದರಲ್ಲಿ ಪ್ರಮುಖವಾದುದು ನಿಂತುಕೊಂಡು ನೀರು ಕುಡಿಯುವ ಅಭ್ಯಾಸ. ಕಚೇರಿಯಾಗಲಿ, ಮನೆಯಲ್ಲಾಗಲಿ ಅಥವಾ ಹೊರಗಡೆ ಇದ್ದಾಗಲೂ ಜನರು ನಿಂತೆಯೇ ನೀರು ಕುಡಿಯುತ್ತಾರೆ. ಆದರೆ ಈ ಸಣ್ಣ ಅಭ್ಯಾಸವೇ ಭವಿಷ್ಯದಲ್ಲಿ ದೊಡ್ಡ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನುವುದು ಆಯುರ್ವೇದದ ಎಚ್ಚರಿಕೆ.
ನಾವು ಕುಳಿತುಕೊಂಡು ನೀರು ಕುಡಿದಾಗ ದೇಹವು ಅದನ್ನು ನಿಧಾನವಾಗಿ ಹೀರಿಕೊಳ್ಳಲು ಅವಕಾಶ ದೊರಕುತ್ತದೆ. ಇದರಿಂದ ನೀರು ದೇಹದ ಅಂಗಾಂಗಗಳಿಗೆ ಸಮರ್ಪಕವಾಗಿ ವಿತರಣೆ ಆಗುತ್ತದೆ. ಆದರೆ ನಿಂತುಕೊಂಡು ನೀರು ಕುಡಿಯುವಾಗ ನೀರು ವೇಗವಾಗಿ ಹೊಟ್ಟೆಗೆ ಸೇರುತ್ತದೆ. ಇದರಿಂದ ದೇಹವು ಅದನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗದೆ, ಜೀರ್ಣಕ್ರಿಯೆಯ ಮೇಲೆ ದುಷ್ಪರಿಣಾಮ ಬೀರುತ್ತದೆ.
ಆಯುರ್ವೇದದ ಪ್ರಕಾರ, ನಿಂತು ನೀರು ಕುಡಿಯುವುದರಿಂದ ದೇಹದ ನೀರಿನ ಸಮತೋಲನ ಹಾಳಾಗುತ್ತದೆ. ಪರಿಣಾಮವಾಗಿ ನೀರು ಕೀಲುಗಳು ಮತ್ತು ಮೊಣಕಾಲುಗಳ ಸುತ್ತ ಸಂಗ್ರಹವಾಗುತ್ತದೆ. ಇದರಿಂದ ಚಿಕ್ಕ ವಯಸ್ಸಿನಲ್ಲಿಯೇ ಮೊಣಕಾಲು ನೋವು, ಕೀಲು ಬಿಗಿತ ಮತ್ತು ಸಂಧಿ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.
ಇನ್ನೂ, ನಿಂತು ನೀರು ಕುಡಿಯುವುದರಿಂದ ನೀರು ಸರಿಯಾಗಿ ಶೋಧನೆ ಆಗದೆ ನೇರವಾಗಿ ಮೂತ್ರಪಿಂಡಗಳಿಗೆ ತಲುಪುತ್ತದೆ. ಇದು ಮೂತ್ರಪಿಂಡಗಳ ಮೇಲೆ ಹೆಚ್ಚುವರಿ ಒತ್ತಡ ಉಂಟುಮಾಡುತ್ತದೆ. ದೀರ್ಘಕಾಲ ಈ ಅಭ್ಯಾಸ ಮುಂದುವರಿದರೆ ಕಿಡ್ನಿ ಸಮಸ್ಯೆಗಳಿಗೂ ಕಾರಣವಾಗಬಹುದು.
ಜೀರ್ಣಕ್ರಿಯೆ ಹದಗೆಡುವುದರಿಂದ ಗ್ಯಾಸ್, ಆಮ್ಲೀಯತೆ, ಎದೆಯುರಿ, ಮಲಬದ್ಧತೆ ಹಾಗೂ ಹೊಟ್ಟೆ ಭಾರವಾದ ಅನುಭವ ಉಂಟಾಗುತ್ತದೆ. ದೇಹವು ನೀರನ್ನು ಸರಿಯಾಗಿ ಬಳಸಿಕೊಳ್ಳದಾಗ ಶಕ್ತಿ ಕುಂಠಿತವಾಗುತ್ತದೆ ಮತ್ತು ವ್ಯಕ್ತಿಗೆ ನಿರಂತರ ದಣಿವು ಹಾಗೂ ಆಲಸ್ಯ ಕಾಣಿಸಿಕೊಳ್ಳುತ್ತದೆ.
ಆರೋಗ್ಯವಾಗಿರಲು ಬಯಸಿದರೆ ಯಾವಾಗಲೂ ಆರಾಮವಾಗಿ ಕುಳಿತು, ನಿಧಾನವಾಗಿ ನೀರು ಕುಡಿಯಬೇಕು. ತುಂಬಾ ತಣ್ಣನೆಯ ನೀರನ್ನು ತಪ್ಪಿಸಿ, ಕೋಣೆಯ ಉಷ್ಣಾಂಶದ ನೀರನ್ನು ಗಾಜು ಅಥವಾ ಮಣ್ಣಿನ ಪಾತ್ರೆಯಲ್ಲಿ ಸಂಗ್ರಹಿಸಿ ಕುಡಿಯುವುದು ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ.
Blog
ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ
ಶಿವಮೊಗ್ಗ, ಜನವರಿ 29: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸಸಿ ತೋಟ ಗ್ರಾಮದಲ್ಲಿ ಮಂಗನ ಕಾಯಿಲೆ (KFD – Kyasanur Forest Disease) ಸೋಂಕಿಗೆ ಮತ್ತೊಂದು ಬಲಿ ಬಿದ್ದಿದೆ. 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಮೃತರನ್ನು ಸಸಿ ತೋಟ ನಿವಾಸಿ ಕಿಶೋರ್ ಎಂದು ಗುರುತಿಸಲಾಗಿದೆ. ಜನವರಿ 20ರಿಂದ ಕಿಶೋರ್ ಅವರಿಗೆ ತೀವ್ರ ಜ್ವರ, ತಲೆನೋವು, ದೇಹದ ನೋವು ಸೇರಿದಂತೆ ಮಂಗನ ಕಾಯಿಲೆಗೆ ಸಂಬಂಧಿಸಿದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದ್ದು, ಜ್ವರ ತಗ್ಗದೆ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು.
ರೋಗಲಕ್ಷಣಗಳು ಉಲ್ಬಣಗೊಂಡ ಹಿನ್ನೆಲೆ ಜನವರಿ 25ರಂದು ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ತಜ್ಞ ವೈದ್ಯರ ತಂಡ ಸತತವಾಗಿ ಚಿಕಿತ್ಸೆ ನೀಡಿದರೂ, ಸೋಂಕಿನ ತೀವ್ರತೆ ಹೆಚ್ಚಾಗಿದ್ದರಿಂದ ಕಿಶೋರ್ ಚಿಕಿತ್ಸೆಗೇ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಘಟನೆ ಬಳಿಕ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ತೀರ್ಥಹಳ್ಳಿ ಮತ್ತು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಮಂಗನ ಕಾಯಿಲೆ ಟಿಕ್ (Tick) ಮೂಲಕ ಹರಡುವ ಸೋಂಕಾಗಿರುವುದರಿಂದ ಅರಣ್ಯ ಪ್ರದೇಶಕ್ಕೆ ತೆರಳುವವರು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಕಳೆದ ಕೆಲ ತಿಂಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅರಣ್ಯ ಅಂಚಿನ ಗ್ರಾಮಗಳಲ್ಲಿ ವಾಸಿಸುವ ಜನರು ಮತ್ತು ಅರಣ್ಯಕ್ಕೆ ಹೋಗುವ ಕೂಲಿ ಕಾರ್ಮಿಕರು ವಿಶೇಷ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜ್ವರ, ತಲೆನೋವು, ರಕ್ತಸ್ರಾವದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಆರೋಗ್ಯ
EGG HEALTH BENIFITS : ಪ್ರತಿದಿನ ಮೊಟ್ಟೆ ತಿನ್ನುವುದರಿಂದ ಏನು ಲಾಭ?
ಆರೋಗ್ಯ ಡೆಸ್ಕ್: ಮೊಟ್ಟೆ (Egg) ಅತ್ಯಂತ ಪೌಷ್ಟಿಕ ಹಾಗೂ ಸುಲಭವಾಗಿ ಲಭ್ಯವಿರುವ ಆಹಾರಗಳಲ್ಲಿ ಒಂದಾಗಿದೆ. ಆದರೆ ದಿನಕ್ಕೆ ಎಷ್ಟು ಮೊಟ್ಟೆಗಳನ್ನು ಸೇವಿಸಬೇಕು ಎಂಬ ಗೊಂದಲ ಬಹುತೇಕ ಜನರಲ್ಲಿ ಕಂಡುಬರುತ್ತದೆ. ಅತಿಯಾದ ಮೊಟ್ಟೆ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ್ದರಿಂದ ಸರಿಯಾದ ಪ್ರಮಾಣ ತಿಳಿದುಕೊಳ್ಳುವುದು ಬಹಳ ಮುಖ್ಯ.
ಹಾರ್ವರ್ಡ್ ಹಾಗೂ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯಗಳೊಂದಿಗೆ ಕಾರ್ಯನಿರ್ವಹಿಸುವ ಖ್ಯಾತ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಸೌರಭ್ ಸೇಥಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಪ್ರಕಾರ, ಮೊಟ್ಟೆಗಳು ಸಂಪೂರ್ಣ ಪ್ರೋಟೀನ್ ಅನ್ನು ಹೊಂದಿದ್ದು, ಒಂಬತ್ತು ಅಗತ್ಯ ಅಮೈನೋ ಆಮ್ಲಗಳನ್ನು ಒಳಗೊಂಡಿವೆ. ಇದರಿಂದ ಸ್ನಾಯುಗಳ ನಿರ್ಮಾಣ ಮತ್ತು ಪುನರ್ ನಿರ್ಮಾಣಕ್ಕೆ ಸಹಾಯವಾಗುತ್ತದೆ. ಜಿಮ್ಗೆ ಹೋಗುವವರಿಗೆ ಇದು ಅತ್ಯುತ್ತಮ ಮತ್ತು ಕಡಿಮೆ ವೆಚ್ಚದ ಆಹಾರವಾಗಿದೆ.
ಡಾ. ಸೇಥಿ ಅವರು ಹಸಿ ಮೊಟ್ಟೆ ಸೇವನೆ ತಪ್ಪಿಸಬೇಕು ಎಂದು ಎಚ್ಚರಿಸಿದ್ದಾರೆ. ಹಸಿ ಮೊಟ್ಟೆಗಳಿಂದ ಸಾಲ್ಮೊನೆಲ್ಲಾ ಸೋಂಕಿನ ಅಪಾಯವಿದ್ದು, ಬೇಯಿಸಿದ ಮೊಟ್ಟೆಗಳಲ್ಲಿ ಇರುವ ಪ್ರೋಟೀನ್ ದೇಹಕ್ಕೆ ಉತ್ತಮವಾಗಿ ಹೀರಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಮೊಟ್ಟೆಗಳು ವಿಟಮಿನ್ ಎ, ಡಿ, ಇ, ಬಿ12 ಹಾಗೂ ಕಬ್ಬಿಣ, ಸೆಲೆನಿಯಮ್, ರಂಜಕದಂತಹ ಖನಿಜಗಳಲ್ಲಿ ಸಮೃದ್ಧವಾಗಿವೆ. ಮೊಟ್ಟೆಯ ಹಳದಿ ಭಾಗದಲ್ಲಿರುವ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಕಣ್ಣುಗಳ ಆರೋಗ್ಯಕ್ಕೆ ಉಪಯುಕ್ತವಾಗಿದ್ದು, ವಯಸ್ಸಿನ ಪರಿಣಾಮದಿಂದ ಉಂಟಾಗುವ ದೃಷ್ಟಿ ಸಮಸ್ಯೆಗಳಿಂದ ರಕ್ಷಿಸುತ್ತದೆ.
ಸಾಮಾನ್ಯವಾಗಿ, ಪ್ರತಿದಿನ 1 ರಿಂದ 2 ಮೊಟ್ಟೆಗಳನ್ನು ಸೇವಿಸುವುದು ಹೆಚ್ಚಿನ ಜನರಿಗೆ ಸುರಕ್ಷಿತ ಎಂದು ಡಾ. ಸೌರಭ್ ಸೇಥಿ ಹೇಳಿದ್ದಾರೆ. ಸರಿಯಾದ ಪ್ರಮಾಣದಲ್ಲಿ ಮೊಟ್ಟೆ ಸೇವಿಸಿದರೆ ತೂಕ ನಿಯಂತ್ರಣ, ಹೃದಯ ಆರೋಗ್ಯ ಮತ್ತು ಒಟ್ಟಾರೆ ದೈಹಿಕ ಕ್ಷೇಮಕ್ಕೆ ಸಹಕಾರಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
ಬೆಂಗಳೂರು6 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ23 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ24 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ಅಪರಾಧ23 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ22 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ21 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ5 hours agoGBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ
-
ದೇಶ24 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
