ಅಪರಾಧ
DCM DK ಶಿವಕುಮಾರ್ ಆಪ್ತನಿಗೆ ರೈತ ಮಹಿಳೆಯರಿಂದ ಕಿಡಿ – ವೈರಲ್ ಆಗಿದ ವಿಡಿಯೋ
ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (GBDA) ಕೈಗೊಂಡಿರುವ ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಗೆ ಸ್ಥಳೀಯ ರೈತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಭೂಸ್ವಾಧೀನ ಕ್ರಮ ಮುಂದುವರಿಸಿರುವ ಸರ್ಕಾರದ ವಿರುದ್ಧ ರೈತ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಬಿಜೆಪಿ ತನ್ನ ಎಕ್ಸ್ (Twitter) ಖಾತೆಯಲ್ಲಿ ವಿಡಿಯೋ ಹಂಚಿಕೊಂಡು, “ರೈತರ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡಕ್ಕೆ ಮಣಿಯುತ್ತಿದೆ” ಎಂದು ಆರೋಪಿಸಿದೆ. ಮಾಗಡಿ ಶಾಸಕ ಬಾಲಕೃಷ್ಣರನ್ನು ರೈತ ಮಹಿಳೆಯರು ಎದುರಿಸಿ ಪ್ರತಿಭಟನೆ ನಡೆಸಿದ್ದು, “ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರೂ ರೈತರ ಧರ್ಮದೇಟಿನಿಂದ ತಪ್ಪಿಸಿಕೊಂಡಿದ್ದಾರೆ” ಎಂದು ಬರೆದುಕೊಂಡಿದೆ.
ಬಿಡದಿ ಹೋಬಳಿಯ 9 ಗ್ರಾಮಗಳ ಸುಮಾರು 9,600 ಎಕರೆ ಭೂಮಿಯಲ್ಲಿ ಟೌನ್‌ಶಿಪ್ ನಿರ್ಮಾಣದ ಯೋಜನೆ ನಡೆಯುತ್ತಿದ್ದು, ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಕಳೆದ ಎರಡು ತಿಂಗಳಿನಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ನಿನ್ನೆ ಡಿಸಿ ಕಚೇರಿಯಲ್ಲಿ ನಡೆದ ಸಭೆಗೆ 500 ಕ್ಕೂ ಹೆಚ್ಚು ರೈತರು ಆಗಮಿಸಿದರೂ, ಕೇವಲ 30 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ರೈತರು ಹಳೆಯ ಬೆಂಗಳೂರು–ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಬಳಿಕ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಮಧ್ಯಪ್ರವೇಶಿಸಿದರು. ತಳ್ಳಾಟ-ನೂಕ್ಕಾಟ ನಡೆದಿದ್ದು, ಬಂಧಿಸಲು ಬಂದಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಟೈರ್‌ಗಳ ಗಾಳಿ ಬಿಡುವ ಮೂಲಕ ಪ್ರತಿಭಟನಾಕಾರರು ಹೈಡ್ರಾಮಾ ಸೃಷ್ಟಿಸಿದರು.
ಅಪರಾಧ
CRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಫೆ.11ರಂದು ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಚ್ಎಎಲ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 12.45ರ ವೇಳೆಗೆ ಕಾರು ಮತ್ತು ಗೂಡ್ಸ್ ವಾಹನ ಟಚ್ ಆದ ವಿಚಾರಕ್ಕೆ ಚಾಲಕರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಗೂಡ್ಸ್ ವಾಹನ ಚಾಲಕ ನಂಜುಂಡ ಕಾರಿನ ಮುಂದೆ ನಿಂತು ನಷ್ಟಪೂರೈಕೆ ಕೇಳಿದ್ದಾನೆ. ಆದರೆ ಕಾರು ಚಾಲಕ ಏಕಾಏಕಿ ವಾಹನ ಚಲಾಯಿಸಿದ್ದು, ನಂಜುಂಡ ಬಾನೆಟ್ ಮೇಲೆ ಬಿದ್ದರೂ ಸುಮಾರು 1 ಕಿ.ಮೀ ಹೆಚ್ಚು ದೂರ ಕಾರು ನಿಲ್ಲಿಸದೆ ಚಲಾಯಿಸಿದ್ದಾನೆ. ಟ್ರಿನಿಟಿ ಜಂಕ್ಷನ್‌ನಿಂದ ಸಿಬಿ ಜಂಕ್ಷನ್ ಹಾಗೂ ASC ಸೆಂಟರ್ ಕಾಲೇಜು ವರೆಗೆ ಕಾರು ಸಾಗಿದ ದೃಶ್ಯ ರಸ್ತೆಬದಿ ಜನರನ್ನು ಬೆಚ್ಚಿಬೀಳುವಂತೆ ಮಾಡಿತು. ಕೆಲವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇತರೆ ವಾಹನ ಚಾಲಕರು ಅಡ್ಡಹಾಕಿದ ಬಳಿಕ ಕಾರು ನಿಲ್ಲಿಸಲಾಯಿತು.
ಕಾರು ಚಾಲಕ ಬಂಧನ
ಪೊಲೀಸರು ಕಾರು ಚಾಲಕನನ್ನು ಪುಲಕೇಶಿ ನಗರದ 52 ವರ್ಷದ ಸುರೇಶ್ ಎಂದು ಗುರುತಿಸಿದ್ದಾರೆ. ಘಟನೆಯ ವೇಳೆ ಕಾರಿನಲ್ಲಿ ಪತ್ನಿಯೂ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ (Attempt to Murder) ಅಡಿಯಲ್ಲಿ ಆರೋಪಿಯನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತನಿಖೆಯಲ್ಲಿ ಸುರೇಶ್ ವಿರುದ್ಧ ಈ ಹಿಂದೆಯೂ ಅತಿವೇಗ ಚಾಲನೆ ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಇರುವುದಾಗಿ ತಿಳಿದುಬಂದಿದೆ.
ರಾಜಧಾನಿಯಲ್ಲಿ ಹೆಚ್ಚುತ್ತಿರುವ ರೋಡ್ ರೇಜ್
ಇತ್ತೀಚೆಗೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ರೋಡ್ ರೇಜ್ ಪ್ರಕರಣದಲ್ಲಿ ಕಾರು ಚಾಲಕ ತನ್ನ ಸ್ನೇಹಿತನನ್ನೇ ಗೋಡೆ ಹಾಗೂ ಮರಕ್ಕೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿದ್ದ ಘಟನೆ ಸ್ಮರಣೀಯವಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಘಟನೆಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿವೆ.
ಅಪರಾಧ
ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.
ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.
ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.
ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಅಪರಾಧ
BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.
ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.
-
ಬೆಂಗಳೂರು1 hour agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ20 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ18 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ19 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ17 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ17 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ19 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
-
ಅಪರಾಧ18 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
