Connect with us

ಬೆಂಗಳೂರು

ಶಾಮನೂರು ಹೇಳಿಕೆ 100% ತಪ್ಪು ಎಂದ ರಾಯರೆಡ್ಡಿ

Published

on

ಶಾಮನೂರು ಹೇಳಿಕೆ 100% ತಪ್ಪು ಎಂದ ರಾಯರೆಡ್ಡಿ
ಶಾಮನೂರು ಹೇಳಿಕೆ 100% ತಪ್ಪು ಎಂದ ರಾಯರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆಯಾಗುತ್ತಿದೆ ಎಂಬ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಕಾಂಗ್ರೆಸ್ನ ಹಿರಿಯ ನಾಯಕ ಬಸವರಾಜ ರಾಯರೆಡ್ಡಿ ಅವರು ಆಕ್ಷೇಪಿಸಿದ್ದಾರೆ ಮತ್ತು ಶಾಮನೂರು ಅವರಿಗೆ ಮಾಹಿತಿಯ ಕೊರತೆ ಇದೆ ಎಂದಿದ್ದಾರೆ.
ರಾಜ್ಯದಲ್ಲಿ ಏಳು ಮಂದಿ ಎಸ್ಪಿಗಳು, ಮೂವರು ಜಿಲ್ಲಾಧಿಕಾರಿಗಳು ಮತ್ತು 41 ವಿವಿಗಳ ಪೈಕಿ 11 ವಿವಿಗಳಲ್ಲಿ ಲಿಂಗಾಯತ ಕುಲಪತಿಗಳಿದ್ದಾರೆ. ಇಲ್ಲಿ ಕಡೆಗಣನೆಯ ಪ್ರಶ್ನೆಯೇ ಬರುವುದಿಲ್ಲ. ಶಾಮನೂರು ಶಿವಶಂಕರಪ್ಪ ಅವರಿಗೆ ಮಾಹಿತಿಯ ಕೊರತೆಯಿಂದ ಈ ರೀತಿ ಹೇಳಿದ್ದಾರೆ ಎಂದು ರಾಯರೆಡ್ಡಿ ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು. ಇದರೊಂದಿಗೆ ಲಿಂಗಾಯತ ಸಿಎಂ ಚರ್ಚೆ ಕಣಕ್ಕೆ ಪ್ರವೇಶ ಪಡೆದರು.
ಲಿಂಗಾಯತ ಸಮಾಜದ ಅಧ್ಯಕ್ಷರಾಗಿರುವ ಶಾಮನೂರು ಅವರು ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸ್ಥಾನಮಾನ ಇಲ್ಲ ಎಂದು ಹೇಳಿರುವುದು ಸರಿಯಲ್ಲ. ಅಧಿಕಾರಿಗಳ ನೇಮಕ ಮಾಡುವಾಗ ಜಾತಿ ಆಧಾರದ ಮೇಲೆ ಪೋಸ್ಟಿಂಗ್ ಕೊಡಲು ಆಗುವುದಿಲ್ಲ. ಬೇಕಿದ್ದರೆ ಮಂತ್ರಿ ಮಂಡಲದ ರಚನೆಯ ವೇಳೆ ಜಾತಿ, ಪ್ರಾದೇಶಿಕ ಅಸಮಾನತೆ ತಪ್ಪಿಸಲು ಜಾತಿ ಆಧಾರಿತವಾಗಿ ಸಂಪುಟ ರಚಿಸಬಹುದು. ಇದೆಲ್ಲ ಸರಿಯೋ ತಪ್ಪೋ, ಮಾಡಬಹುದೋ ಮಾಡಬಾರದೋ ಎನ್ನುವುದು ಬೇರೆಯದೇ ಚರ್ಚೆ. ಸಿದ್ದರಾಮಯ್ಯನವರು ಈ ಸಂಪುಟ ಸರ್ಕಸ್ ಮಾಡಿದ್ದಾರೆʼʼ ಎಂದು ರಾಯರೆಡ್ಡಿ ಹೇಳಿದರು.
ʻಪ್ರಧಾನಿ ಯಾರು ಬೇಕಾದರೂ ಆಗಬಹುದು. ಹಾಗಂತ ಯಾರನ್ನು ಬೇಕಾದರೂ ಅಟೆಂಡರ್ ಮಾಡಲು ಸಾಧ್ಯವಿಲ್ಲ. ಅಟೆಂಡರ್ ಆಗೋಕೆ ಕ್ವಾಲಿಫಿಕೇಶನ್ ಇರಬೇಕುʼʼ ಎಂದು ರಾಯರೆಡ್ಡಿ ನುಡಿದರು.
ಶಾಮನೂರು ಅವರಿಗೆ ದಾವಣಗೆರೆ ಜಿಲೆಲಯ ಬಗ್ಗೆಯೇ ಮಾಹಿತಿ ಕೊರತೆ ಇದೆ. ದಾವಣಗೆರೆ ಜಿಲ್ಲೆಯಲ್ಲೇ ಮೂವರು ಲಿಂಗಾಯತ ಅಧಿಕಾರಿಗಳಿದ್ದಾರೆ. ದಾವಣಗೆರೆ ಸಿಇಒ ಸುರೇಶ್ ಹಿಟ್ನಾಳ್, ಎಸ್ಪಿ ಉಮಾರಾಣಿ ಲಿಂಗಾಯತರು ಎಂದು ವಿವರಿಸಿದರು. ಇನ್ನುಳಿದಂತೆ ರಾಜ್ಯದಲ್ಲಿ ನಿತೀಶ್ ಪಾಟೀಲ್, ದಿವಾಕರ್, ಗೋವಿಂದರೆಡ್ಡಿ ಲಿಂಗಾಯತ ಡಿಸಿಗಳು ಎಂದು ತಿಳಿಸಿದರು.
ಅದೇ ವೇಳೆ, ಜಾತಿ ಆಧಾರಿತವಾಗಿ ಮಾತನಾಡುವುದು ಸರಿಯಲ್ಲ ಎಂಬ ಕಿವಿಮಾತನ್ನೂ ಹೇಳಿದರು.
ʻʻಜಾತಿ ಆಧಾರದ ಮೇಲೆ ಪೋಸ್ಟಿಂಗ್ ಆಗಬಾರದು. ಎಲ್ಲ ಜಾತಿಗಳಲ್ಲಿ ಅರ್ಹ ಹಾಗು ಅನರ್ಹ ಅಧಿಕಾರಿಗಳು ಇದ್ದಾರೆ. ಜಾತಿ ಆಧಾರಿತ ಮೇಲೆ ಅಧಿಕಾರಿಗಳು ನೇಮಕ ಆಗಬಾರದು. ಇವತ್ತು ಲಿಂಗಾಯತ ಅಂತ ಹೇಳಿದ್ರೆ ನಾಳೆ ಒಕ್ಕಲಿಗರು ಕುರುಬ ಅಧಿಕಾರಿಗಳು ಅಂತ ಕೇಳ್ತಾರೆ. ಶ್ಯಾಮನೂರು ಅವರ ಹೇಳಿಕೆಗಳು ಆಡಳಿತದ ಮೇಲೆ ಪರಿಣಮ ಬೀರಲಿದೆʼʼ ಎಂದು ಹೇಳಿದ ರಾಯರೆಡ್ಡಿ ಅವರು, ʻʻಶ್ಯಾಮನೂರುಗೆ ಅಷ್ಟು ಪ್ರೀತಿ ಇದ್ರೆ ಲಿಂಗಾಯತ ಅಧಿಕಾರಿಗಳನ್ನು ಅವರ ಜಿಲ್ಲೆಯಲ್ಲಿ ನೇಮಕ ಮಾಡಿಕೊಳ್ಳಲಿʼʼ ಎಂದರು.
ಈಗ ನಾನು ಮಾಧ್ಯಮ ಗೋಷ್ಠಿ ಮಾಡಿದ ಕೂಡಲೇ ಕೆಲವರು ಸಿದ್ದರಾಮಯ್ಯ ಹೇಳಿ ರಾಯ ರೆಡ್ಡಿ ಮಾತನಾಡಿದರು ಎಂದು ಹೇಳಬಹುದು. ಆದರೆ, ನಾನು ಸಿದ್ದರಾಮಯ್ಯ ಹೇಳಿ ಮಾತನಾಡುತ್ತಿರುವುದಲ್ಲ. ನಾನೊಬ್ಬ ಜವಾಬ್ದಾರಿಯುತ ಶಾಸಕ. ಹಾಗಾಗಿ ಜವಾಬ್ದಾರಿಯುತವಾಗಿ ಮಾತನಾಡಬೇಕು. ಹಾಗಾಗಿ ಮಾತನಾಡಿದ್ದೇನೆ.
ʻʻನಾನು ಸಿದ್ದರಾಮಯ್ಯ ಬಳಿ ಏನೂ ಕೇಳಿಲ್ಲ. ನಾನು ಅಷ್ಟೊಂದು ಕೀಳು ಮಟ್ಟಕ್ಕೆ ಇಳಿದಿಲ್ಲ. ನನ್ನನ್ನ ನಾನು ಡಿಗ್ರೇಡ್ ಮಾಡಿಕೊಳ್ಳಲ್ಲ. ಅವರು ಹೇಳಿದ್ದಕ್ಕೆ ನಾನು ಪ್ರೆಸ್ನೀಟ್ ಮಾಡ್ತಿಲ್ಲʼʼ ಎಂದು ಸ್ಪಷ್ಟಪಡಿಸಿದರು.

ಕ್ರೀಡೆ

ವಾಂಖೆಡೆನಲ್ಲಿ RCB ದಬ್ಬಾಳಿಕೆ: ಚಿನ್ನಸ್ವಾಮಿ ಕಾದಿದೆ!

Published

on

By

ಮುಂಬೈ: Indian Premier League 2026ರ ಪಂದ್ಯದಲ್ಲಿ Royal Challengers Bengaluru ತಂಡವು Mumbai Indians ವಿರುದ್ಧ 18 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ RCB ತನ್ನ ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತವನ್ನು ದಾಖಲಿಸಿದೆ.

ಈ ಪಂದ್ಯದಲ್ಲಿ Phil Salt 36 ಎಸೆತಗಳಲ್ಲಿ 78 ರನ್ ಸಿಡಿಸಿ ‘ಪ್ಲೇಯರ್ ಆಫ್ ದ ಮ್ಯಾಚ್’ ಪ್ರಶಸ್ತಿ ಪಡೆದರು. ನಾಯಕ Rajat Patidar ಕೇವಲ 20 ಎಸೆತಗಳಲ್ಲಿ 53 ರನ್ ಸಿಡಿಸಿ ತಂಡಕ್ಕೆ ಬಲವಾದ ವೇದಿಕೆ ಒದಗಿಸಿದರು. ಪಾಟಿದಾರ್ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಟೂರ್ನಿಯ ಇತಿಹಾಸದಲ್ಲೇ ವೇಗವಾದ ಫಿಫ್ಟಿ ಸಿಡಿಸಿದ ನಾಯಕ ಎಂಬ ದಾಖಲೆ ನಿರ್ಮಿಸಿದರು.

ಬೌಲಿಂಗ್ ವಿಭಾಗದಲ್ಲಿ Krunal Pandya (1/26) ಮತ್ತು Suyash Sharma (2/47) ಪ್ರಮುಖ ಪಾತ್ರವಹಿಸಿ ಮುಂಬೈ ತಂಡವನ್ನು ನಿಯಂತ್ರಿಸಿದರು.

ಪಂದ್ಯದ ಬಳಿಕ ಮಾತನಾಡಿದ ಪಾಟಿದಾರ್, “ಪ್ರತಿ ಪಂದ್ಯದಲ್ಲೂ 200ಕ್ಕೂ ಹೆಚ್ಚು ರನ್‌ಗಳು ಬರುತ್ತಿವೆ. ಇದು ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸುತ್ತಿದೆ” ಎಂದು ಹೇಳಿದರು. ತಮ್ಮ ಬ್ಯಾಟಿಂಗ್ ಬಗ್ಗೆ ಮಾತನಾಡಿ, “ನಾನು ಬಾಲ್‌ಗೆ ಪ್ರತಿಕ್ರಿಯಿಸುತ್ತೇನೆ, ಸ್ಪಷ್ಟತೆಯಿಂದ ಆಟ ಆಡುತ್ತೇನೆ” ಎಂದು ತಿಳಿಸಿದ್ದಾರೆ.

ಕೃಣಾಲ್ ಪಾಂಡ್ಯಾ ತಂಡದ ಬ್ಯಾಟಿಂಗ್ ಶಕ್ತಿಯನ್ನು ಮೆಚ್ಚಿ, “ವಿರಾಟ್, ಸಾಲ್ಟ್, ಟಿಮ್ ಎಲ್ಲರೂ ಕೊಡುಗೆ ನೀಡಿದ್ದಾರೆ” ಎಂದರು. ಕೋಚ್ Malolan Rangarajan ರಸಿಖ್‌ರ ಹೋರಾಟ ಮನೋಭಾವವನ್ನು ಶ್ಲಾಘಿಸಿದರು.

ಈ ಗೆಲುವಿನೊಂದಿಗೆ RCB ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದು, ಮುಂದಿನ ಚಿನ್ನಸ್ವಾಮಿ ಪಂದ್ಯಕ್ಕಾಗಿ ಕಾತುರವಾಗಿದೆ.

Continue Reading

ದೇಶ

ಕಾಂಗ್ರೆಸ್‌ನಲ್ಲಿ ಭೂಕಂಪ: ನಜೀರ್ ಅಹ್ಮದ್‌ಗೆ ಸುರ್ಜೇವಾಲಾ ಅಲ್ಟಿಮೇಟಂ

Published

on

By

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಳಅಸಮಾಧಾನ ತೀವ್ರಗೊಂಡಿರುವ ನಡುವೆಯೇ, ರಾಜ್ಯ ಉಸ್ತುವಾರಿ Randeep Singh Surjewala ಅವರು ಸಿಎಂ ರಾಜಕೀಯ ಕಾರ್ಯದರ್ಶಿ Naseer Ahmed ಅವರಿಗೆ ಕಠಿಣ ಡೆಡ್‌ಲೈನ್ ನೀಡಿದ್ದಾರೆ.

ಇಂದು (ಏಪ್ರಿಲ್ 13) ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿರುವ ಸುರ್ಜೇವಾಲಾ, ಸಮಯಕ್ಕೆ ರಾಜೀನಾಮೆ ನೀಡದಿದ್ದರೆ ಅವರನ್ನು ಸ್ಥಾನದಿಂದ ವಜಾಗೊಳಿಸಲು ಮುಖ್ಯಮಂತ್ರಿ Siddaramaiah ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, “ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಕೊಡಬಹುದು. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಕೆಲವು ನಾಯಕರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ನಸೀರ್ ಅಹ್ಮದ್ ಅವರು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆಂದು ಸಿಎಂ ಹೇಳಿದ್ದಾರೆ.

ಇದಕ್ಕೂ ಮೊದಲು ಸುರ್ಜೇವಾಲಾ ಅವರು ಸಚಿವ Zameer Ahmed Khan, Abdul Jabbar ಹಾಗೂ ನಸೀರ್ ಅಹ್ಮದ್ ವಿರುದ್ಧ ವರದಿ ಸಲ್ಲಿಸಿದ್ದರು. ಈಗಾಗಲೇ ಅಬ್ದುಲ್ ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದನ್ನು D. K. Shivakumar ಅಂಗೀಕರಿಸಿದ್ದಾರೆ.

ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Continue Reading

ದೇಶ

ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

Published

on

By

ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ G. Parameshwara ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅದೇನು ಗ್ಯಾಂಬ್ಲಿಂಗ್ ಅಲ್ಲ, ಶಾಸಕರು ತಮ್ಮ ಅರ್ಹತೆಯ ಆಧಾರದಲ್ಲಿ ಕೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕೇಳುವುದು ಸಹಜ. ಆದರೆ ಅಂತಿಮ ನಿರ್ಧಾರ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಕೈಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಪಕ್ಷ ಪುನಾರಚನೆ ಕುರಿತು ಮಾತನಾಡಿದ ಪರಮೇಶ್ವರ್, “ನಾಯಕತ್ವ ವಿಚಾರವಾಗಲಿ, ಸಚಿವ ಸಂಪುಟ ಪುನಾರಚನೆ ಆಗಲಿ, ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈಗ ಪುನಾರಚನೆ ಚರ್ಚೆ ನಡೆಯುತ್ತಿದೆ. ಅಧ್ಯಕ್ಷ ಸ್ಥಾನ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇವೆ” ಎಂದು ಹೇಳಿದರು.

ಇನ್ನೂ ದಾವಣಗೆರೆ ಕ್ಷೇತ್ರದಲ್ಲಿ Abdul Jabbar ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಅವರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿದರು. D. K. Shivakumar ಹೊಸ ಸಮಿತಿ ರಚನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪುನಾರಚನೆ ನಡೆದರೆ ಹಿರಿಯರು ಸ್ಥಾನ ಬಿಟ್ಟುಕೊಡಬೇಕಾದರೆ ನಾವು ಒಪ್ಪಲೇಬೇಕು. ಹೈಕಮಾಂಡ್ ತೀರ್ಮಾನಕ್ಕೆ ಯಾರೂ ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Continue Reading

Trending