ದೇಶ
ಹಿಂದೂ ಕಾರ್ಯಕರ್ತರೇ ಕಾಂಗ್ರೆಸ್ ಸರ್ಕಾರದ ಟಾರ್ಗೆಟ್ ಸಿ ಟಿ ರವಿ ಆರೋಪ
ಬೆಂಗಳೂರು: ಮತಾಂಧರನ್ನು ಮೆರೆಸುವ ಕೆಲಸಕ್ಕೆ ರಾಜ್ಯ ಸರ್ಕಾರ ಬೆನ್ನೆಲುಬಾಗಿ ನಿಂತಿದೆ ಎಂದು ಬಿಜೆಪಿ ಮಾಜಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆರೋಪಿಸಿದರು, ಬೆಂಗಳೂರಿನಲ್ಲಿ ಇರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇತ್ತೀಚಿಗೆ ರಾಜ್ಯದಲ್ಲಿ ನಡೆದ ವಿವಿಧ ಹತ್ಯೆ ಕೊಲೆ ಯತ್ನ ಪ್ರಕರಣಗಳಲ್ಲಿ ಹಿಂದೂ ಕಾರ್ಯಕರ್ತರನ್ನೇ ರಾಜ್ಯ ಸರ್ಕಾರ ಟಾರ್ಗೆಟ್ ಮಾಡುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಪಾಕಿಸ್ತಾನಕ್ಕೂ ಋಷಿ ಕೊಟ್ಟಿದೆ, ಅದಕ್ಕೆ ಬೇಕಾದ ಬೆಂಬಲವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಇದಕ್ಕೆ ಉದಾಹರಣೆ ಬೆಳಗಾವಿಯಲ್ಲಿ ಪಾಕಿಸ್ತನ್ ಜಿಂದಾಬಾದ್ ಘೋಷಣೆ ಎಂದರು,
ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪಿಗಳನ್ನು ರಕ್ಷಿಸಲು ಕಾಂಗ್ರೆಸ್ ಮುಂದಾಗಿದೆ, ಸನಾತನ ಧರ್ಮದ ಅವಹೇಳನ ಮಾಡುವವರು ಇಲ್ಲಿ ಗಲಭೆ ಹುಟ್ಟಿಸುವವರು ಎಂದು ಸರ್ಕಾರಕ್ಕೆ ಅನ್ನಿಸುತ್ತಿಲ್ಲ, ಇದರಲ್ಲಿ ಪ್ರಿಯಾಂಕ್ ಖರ್ಗೆಯವರೂ ಇದ್ದಾರೆ, ಕೇವಲ ಮುಸ್ಲಿಮರ ಋಣದ ಬಗ್ಗೆ ಮಾತನಡುವ ಇವರಿಗೆ ಕೇವಲ ಮುಸ್ಲಿಮರು ಮಾತ್ರ ಹಾಕಿರುವುದೇ ಎಂದು ಪ್ರಶ್ನಿಸಿದರು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಮೊಕ್ಕದ್ದಮ್ಮೆಗಳನ್ನು ದಾಖಲಿಸಲಾಗುತ್ತಿದೆ, ಇದ್ರೀಸ್ ಪಾಷಾ ಸಾವಿನ ಪ್ರಕರಣಕ್ಕೆ ಸಂಬAಧಿಸಿ ಮರಣೋತ್ತರ ಪರೀಕ್ಷೆಯಲ್ಲಿ ಸಹಜ ಸಾವು ಎಂದು ಬಂದಿದ್ದರು ಪೊಲೀಸರು ಪುನೀತ್ ಕೆರೆಹಳ್ಳಿಯವರನ್ನು ಬಂಧಿಸಿ ಇದ್ರಿಸ್ ಪಾಷಾ ಕುಟುಂಬಕ್ಕೆ ಪರಿಹಾರ ಕೊಟ್ಟಿದೆ, ಪುನೀತ್ ಕೆರೆಹಳ್ಳಿ ಮೇಲಿನ ಆರೋಪಗಳಿಗೆ ಸಾಕ್ಷö್ಯ ಕೊಡಿ, ವೇಶ್ಯಾವಾಟಿಕೆ ಮಾಡಿದ್ರೆ, ಲಾಂಗ್ ಮಚ್ಚು ಇಟ್ಟಿದ್ರೆ ದಾಖಲೆ ಕೊಡಿ, ಇಲ್ಲದಿದ್ದರೆ ನಿಮ್ಮ ಇಲಾಖೆಯದ್ದೇ ತಪ್ಪು ಅಂತ ಒಪ್ಪಿಕೊಳ್ಳಿ ಎಂದು ಸಿ ಟಿ ರವಿ ಆಗ್ರರುಸಿದರು, ರಾಷ್ಟç ರಕ್ಷಣಾ ಸಂಘಟನೆಯ ಮುಖ್ಯಸ್ಧರಾಗಿರುವ ಪುನೀತ್ ಕೆರೆಹಳ್ಳಿಯನ್ನು ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದ ಪೊಲೀಸರು ಜೈಲಿಗೆ ಕಳುಹಿಸಿದ್ದರು, ಅದರೆ ಸಾಕ್ಷಾö್ಯಧಾರಗಳ ಕೊರತೆ ಹಿನ್ನೆಲೆ ನ್ಯಾಯಲಯ ಪುನೀತ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿದೆ, ಹೀಗಾಗಿ ತಮ್ಮ ಗೌರವಕ್ಕೆ ಧಕ್ಕೆಯಾಗಿದೆ ಎಂದು ಪುನೀತ್ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಅವರ ಜೀವಕ್ಕೆ ಏನಾದರೂ ಅದರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದರು,
ಭಾಗವದ್ವಜ ಹಾಕಿದ್ರೆ ಅದನ್ನು ತೆಗೆಸಲು ಇಡೀ ಪೊಲೀಸ್ ಇಲಾಖೆ ಮುಂದಾಗುತ್ತದೆ ಅದರೆ ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡಿದ ಟಿಪ್ಟು ಸುಲ್ತಾನ್, ಔರಂಗಜೇಬ್‌ನ ಫೋಟೋ ಇಟ್ಟು ಮೆರೆಸುವುದನ್ನು ತಡೆಯುವುದಿಲ್ಲ ಇದು ಶಾಂತಿಯ ಸಂದೇಶವೇ ಎಂದರು,
ಈ ಸಂದರ್ಭದಲ್ಲಿ ಉಪಸ್ಧಿತರಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾತನಾಡುತ್ತ ರಾಜ್ಯದಲ್ಲಿ ಹಿಂದೂಗಳ ರಕ್ಷಣೆ ಮಾಡುವವರು ಯಾರು ಎನ್ನುವ ಪ್ರಶ್ನೆ ಉದ್ಭವವಾಗಿದೆ, ರಾಜ್ಯದಲ್ಲಿ ಪೊಲೀಸರಿಗೆ ನೈತಿಕ ಬಲವೇ ಇಲ್ಲದಂತಾಗಿದೆ, ಈ ಬಗ್ಗೆ ಗೃಹ ಮಂತ್ರಿಗಳು ಉತ್ತರಿಸಬೇಕಾಗಿದೆ ಎಂದರು, ಕಾವೇರಿ ವಿಚಾರದಲ್ಲಿ ಪ್ರಧಾನಿಯವರು ಮಧ್ಯ ಪ್ರವೇಶಿಸಬೇಕು ಎನ್ನುತ್ತೀರಿ, ಹಾಗಾದರೆ ಶಿವಮೊಗ್ಗ ಗಲಾಟೆ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶ ಮಾಡಲು ಕೇಳೋಣವೇ ಎಂದು ಪ್ರಶ್ನಿಸಿದರು
ದೇಶ
SIR ಎಂದರೇನು? ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸಂಪೂರ್ಣ ಮಾಹಿತಿ
ಬೆಂಗಳೂರು: ಕರ್ನಾಟಕದಲ್ಲಿ Special Intensive Revision (SIR) ಅಥವಾ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರ ಪಟ್ಟಿಯನ್ನು ಹೆಚ್ಚು ನಿಖರಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ (ECI) ರಾಜ್ಯಾದ್ಯಂತ ಮನೆ-ಮನೆ ಪರಿಶೀಲನೆ ನಡೆಸುತ್ತಿದೆ.
ಈ ಪ್ರಕ್ರಿಯೆಯ ಪ್ರಮುಖ ಉದ್ದೇಶ ಸತ್ತವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ನಕಲಿ ಹಾಗೂ ಅನರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಮತ್ತು ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದಾಗಿದೆ. ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರು ನೋಂದಾಯಿತರಾಗಿದ್ದು, ಅವರಲ್ಲಿ ಸುಮಾರು 91.61% ಮತದಾರರ ವಿವರಗಳು ಈಗಾಗಲೇ ಮ್ಯಾಪ್ ಆಗಿವೆ. ಉಳಿದ ಮತದಾರರ ಮಾಹಿತಿಯನ್ನು ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸಾವಿರಾರು ಅಧಿಕಾರಿಗಳು ಹಾಗೂ 5,950 BLOಗಳು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮತದಾರರಿಗೆ ಅಗತ್ಯ ದಾಖಲೆಗಳು ಹಾಗೂ ಪ್ರಮಾಣಪತ್ರಗಳನ್ನು ಸೇವಾ ಸಿಂಧು, ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯುವ ವ್ಯವಸ್ಥೆಯನ್ನೂ ಸರ್ಕಾರ ಕಲ್ಪಿಸಿದೆ.
ಇದೀಗ SIR ಪ್ರಕ್ರಿಯೆ ರಾಜಕೀಯ ವಿವಾದಕ್ಕೂ ಕಾರಣವಾಗಿದೆ. ಕೆಲವು ರಾಜಕೀಯ ಪಕ್ಷಗಳು ಮನೆ-ಮನೆ ಪರಿಶೀಲನೆಯ ಬದಲು ಸಾರ್ವಜನಿಕ ಸ್ಥಳಗಳಲ್ಲಿ ಅರ್ಜಿ ವಿತರಣೆ, ನಿಯಮ ಉಲ್ಲಂಘನೆ ಹಾಗೂ ರಾಜಕೀಯ ಹಸ್ತಕ್ಷೇಪದ ಆರೋಪಗಳನ್ನು ಮಾಡಿವೆ. ಆದರೆ, ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ಇನ್ನೂ ಮ್ಯಾಪ್ ಆಗದ ಮತದಾರರ ಹೆಸರುಗಳು ತಕ್ಷಣವೇ ಪಟ್ಟಿಯಿಂದ ಕೈಬಿಡಲಾಗುವುದಿಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕ ದಾಖಲೆ ಸಲ್ಲಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಸೂಕ್ತ ಅವಕಾಶ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮತದಾರರ ಪಟ್ಟಿಯನ್ನು ಪಾರದರ್ಶಕ ಹಾಗೂ ನಿಖರವಾಗಿಡುವ ಉದ್ದೇಶದಿಂದ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಚುನಾವಣಾ ಆಯೋಗ ಮನವಿ ಮಾಡಿದೆ.
ದೇಶ
ಅಲಿ ಖಮೇನಿ ಅಂತ್ಯಕ್ರಿಯೆ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ: “ಅದು ಮೊಸಳೆ ಕಣ್ಣೀರು
ವಾಷಿಂಗ್ಟನ್: ಇರಾನ್ನ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ (Ali Khamenei) ಅವರ ಅಂತ್ಯಕ್ರಿಯೆ ವೇಳೆ ಸಾವಿರಾರು ಜನರು ಕಂಬನಿ ಮಿಡಿದ ಘಟನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಅಂತ್ಯಕ್ರಿಯೆಯಲ್ಲಿ ಜನರು ಅಳುತ್ತಿರುವುದು ನಿಜವಾದ ದುಃಖವಲ್ಲ, ಅದು “ಮೊಸಳೆ ಕಣ್ಣೀರು” ಎಂದು ಟ್ರಂಪ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಂತ್ಯಕ್ರಿಯೆಯಲ್ಲಿ ಇರಾನ್ನ ಪ್ರಮುಖ ರಾಜಕೀಯ ನಾಯಕರು, ಸಂಸದರು ಹಾಗೂ ಸಾವಿರಾರು ನಾಗರಿಕರು ಭಾಗವಹಿಸಿದ್ದರು. ಈ ದೃಶ್ಯಗಳನ್ನು ಉಲ್ಲೇಖಿಸಿದ ಟ್ರಂಪ್, “ಇರಾನ್ನ ಜನರು ಖಮೇನಿಯನ್ನು ದ್ವೇಷಿಸುತ್ತಿದ್ದರು. ಈಗ ಅವರು ಅಳುತ್ತಿರುವುದು ನಂಬಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ಇದೇ ವೇಳೆ, ಇರಾನ್ನ ಉಳಿದಿರುವ ನಾಯಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಮರ್ಥ್ಯ ಅಮೆರಿಕಕ್ಕೆ ಇದೆ. ಆದರೆ, ಮಾತುಕತೆ ಮುಂದುವರಿಸಲು ನಾಯಕತ್ವ ಉಳಿಯಬೇಕು ಎಂಬ ಕಾರಣಕ್ಕೆ ಅಂತಹ ನಿರ್ಧಾರ ಕೈಗೊಂಡಿಲ್ಲ ಎಂದು ಟ್ರಂಪ್ ತಿಳಿಸಿದ್ದಾರೆ. ಇರಾನ್ ಪರದಿಂದ ಒಪ್ಪಂದಕ್ಕೆ ಆಸಕ್ತಿ ವ್ಯಕ್ತವಾಗಿದ್ದು, ಮಾತುಕತೆ ಮುಂದುವರಿಸಲು ಎರಡೂ ದೇಶಗಳು ಸಮ್ಮತಿಸಿವೆ ಎಂದು ಅವರು ಹೇಳಿದ್ದಾರೆ.
ಖಮೇನಿ ಅವರ ಅಂತ್ಯಕ್ರಿಯೆ ಪೂರ್ಣಗೊಳ್ಳುವವರೆಗೆ ಅಮೆರಿಕ ಹಾಗೂ ಇರಾನ್ ನಡುವೆ ನಡೆಯಬೇಕಿದ್ದ ಮಾತುಕತೆಗೆ ಒಂದು ವಾರ ವಿರಾಮ ನೀಡಲು ನಿರ್ಧರಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಕಡೆಯಿಂದಲೂ ದಾಳಿ ನಡೆಯುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.
36 ವರ್ಷಗಳ ಕಾಲ ಇರಾನ್ನ ಸರ್ವೋಚ್ಚ ನಾಯಕತ್ವ ವಹಿಸಿದ್ದ ಅಲಿ ಖಮೇನಿ, ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಯುದ್ಧದ ಪರಿಸ್ಥಿತಿಯಿಂದಾಗಿ ಅವರ ಅಂತ್ಯಕ್ರಿಯೆ ತಡವಾಗಿ ನಡೆಯುತ್ತಿರುವುದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಬೆಳವಣಿಗೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ.
ದೇಶ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅವ್ಯವಸ್ಥೆ? ಬಿಎಲ್ಒಗಳ ಮೇಲೆ ಒತ್ತಡ ಆರೋಪಿಸಿದ ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಗಂಭೀರ ಅವ್ಯವಸ್ಥೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲೆ ಒತ್ತಡ ಹೇರುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ನಮೂನೆಗಳನ್ನು ವಿತರಿಸುವ ಬದಲು ಕಲ್ಯಾಣ ಮಂಟಪ, ಚೌಲ್ಟ್ರಿ ಹಾಗೂ ಮಸೀದಿಗಳಲ್ಲಿ ಕುಳಿತು ಅರ್ಜಿಗಳನ್ನು ಹಂಚುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ ಎಂದು ದೂರಿದರು. ಕೆಲವು ಶಾಸಕರ ಕಚೇರಿಗಳಲ್ಲೇ ಬಿಎಲ್ಒಗಳನ್ನು ಕೂರಿಸಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ, ಈ ಕುರಿತು ಸಾಕ್ಷ್ಯ ಸಮೇತ ದೂರು ಸಲ್ಲಿಸಿರುವುದಾಗಿ ತಿಳಿಸಿದರು.
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಿತರಿಸಲಾಗುತ್ತಿರುವ ಅರ್ಜಿಗಳ ಮೇಲೆ ಕಾಂಗ್ರೆಸ್ ಮುಖಂಡರ ಫೋಟೋಗಳು ಮುದ್ರಣಗೊಂಡಿರುವ ವಿಚಾರವನ್ನೂ ಚುನಾವಣಾ ಆಯೋಗದ ಗಮನಕ್ಕೆ ತಂದಿರುವುದಾಗಿ ವಿಜಯೇಂದ್ರ ಹೇಳಿದರು. ಎಸ್ಐಆರ್ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿರುವ ಎಲ್ಲೆಡೆ ಮರುಪರಿಷ್ಕರಣೆ ನಡೆಸುವಂತೆ ಆಗ್ರಹಿಸಿದರು.
ಮೈಸೂರು ಸಂಸದ ಯದುವೀರ್ ಒಡೆಯರ್ ಮಾತನಾಡಿ, ನರಸಿಂಹರಾಜ ಕ್ಷೇತ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಅಸಹಜ ಏರಿಕೆ ಕಂಡುಬಂದಿದ್ದು, ಮನೆಗಳ ಸಂಖ್ಯೆ ಹೆಚ್ಚಳವಾಗದೆ ಮತದಾರರ ಸಂಖ್ಯೆ ಮಾತ್ರ ಹೆಚ್ಚಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು. ಅಕ್ರಮ ಮತದಾರರನ್ನು ತಡೆಯಲು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವುದು ಅಗತ್ಯ ಎಂದು ಒತ್ತಾಯಿಸಿದರು.
ಇದೇ ವೇಳೆ, ಬರ ಪರಿಸ್ಥಿತಿಯಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡುವ ಬದಲು ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆ ನಡೆಸುವುದು ಸೂಕ್ತ ಎಂದು ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.
