ದೇಶ
ಅತ್ಯಂತ ಜನಪ್ರಿಯ ಹಬ್ಬಗಳಲ್ಲಿ ಒಂದಾದ ಮೈಸೂರು ದಸರಾ ವೇಳಪಟ್ಟಿ.
ಮೈಸೂರು ದಸರಾ ಕರ್ನಾಟಕದ ರಾಜ್ಯ ಉತ್ಸವ ಮತ್ತು ಜನರು ಎದುರು ನೋಡುತ್ತಿರುವ ಅತ್ಯಂತ ಜನಪ್ರಿಯ ಹಬ್ಬಗಳಲ್ಲಿ ಒಂದಾಗಿದೆ. ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರತಿವರ್ಷ ದಸರಾವನ್ನು ಆಚರಿಸಲಾಗುತ್ತದೆ. ದಸರಾ ಹಬ್ಬ 10 ದಿನಗಳ ಕಾಲ ದಸರಾ ಆಚರಣೆಗಳು ನಡೆಯುತ್ತವೆ.
ದಸರಾ ಹಬ್ಬದಲ್ಲಿ ದುಷ್ಟಶಕ್ತಿಯ ಮೇಲೆ ಒಳ್ಳೆಯತನದ ಜಯಿಸುವಿಕೆಯನ್ನು ಆಚರಿಸಲಾಗುತ್ತದೆ. ಚಾಮುಂಡೇಶ್ವರಿ ದೇವಿಯು ಮಹಿಷಾಸುರ ಎಂಬ ರಾಕ್ಷಸನನ್ನು ವಧಿಸಿ ಶಾಂತಿ ಪಾಲನೆಗೆ ಕಾರಣವಾದದ್ದು ದಸರಾ ಹಬ್ಬಕ್ಕೆ ಸ್ಪೂರ್ತಿಯಾಗಿದೆ. 15 ನೇ ಶತಮಾನದಲ್ಲಿ ವಿಜಯನಗರ ಆಳ್ವಿಕೆಯಲ್ಲಿ ದಸರಾ ಉತ್ಸವ ಪ್ರಾರಂಭವಾಯಿತು,ಮೈಸೂರು ದಸರಾ ಸಮಯದಲ್ಲಿ ಸಂಪೂರ್ಣ ಮೈಸೂರು ನಗರವು ಅತ್ಯುತ್ತಮವಾಗಿ ಮದುವಣಗಿತ್ತಿಯಂತೆ ಶೃಂಗಾರಗೊಳ್ಳುತ್ತದೆ.
ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ. ಅಲ್ಲದೇ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳೊಂದಿಗೆ ಚಂದ್ರಯಾನ ಅನಾವರಣಗೊಳ್ಳಲಿವೆ. ನಗರದ ಪ್ರಮುಖ ಆಯ್ದ ಸ್ಥಳಗಳಲ್ಲಿ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಮಾದರಿಯಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಲಾಗಿದೆ. ಇಸ್ರೋದ ಚಂದ್ರಯಾನ, ಯುನೆಸ್ಕೋದಿಂದ ಗುರುತಿಸಿರುವ ಸೋಮನಾಥಪುರದ ಸೋಮನಾಥೇಶ್ವರ ದೇವಸ್ಥಾನದ ಮಾದರಿಗಳನ್ನು ನಿರ್ಮಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ.
ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆಯಲ್ಲಿ ನಡೆಯಲಿರುವ ಶರನ್ನವರಾತ್ರಿ ಉತ್ಸವದ ವೇಳಾಪಟ್ಟಿಯನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಬಿಡುಗಡೆಗೊಳಿಸಿದ್ದಾರೆ. ಅ. 9 ರಿಂದ ನ. 8 ರವರೆಗೆ ಖಾಸಗಿ ದರ್ಬಾರ್ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.ಅ. 9 ರಂದು ಬೆಳಗ್ಗೆ 7.15ಕ್ಕೆ ನವಗ್ರಹ ಹೋಮ ಮತ್ತು ಇತರೆ ಶಾಂತಿ ಪೂಜೆ ನಡೆಯಲಿದೆ. ಬೆಳಗ್ಗೆ 10.05ರಿಂದ 10.35 ರವರೆಗೆ ಅಂಬಾವಿಲಾಸ ದರ್ಬಾರ್ ಹಾಲ್ನಲ್ಲಿಸಿಂಹಾಸನ ಜೋಡಣೆ ಮತ್ತು ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಕಾರ್ಯಕ್ರಮ ನಡೆಯಲಿದೆ. 11ಕ್ಕೆ ಪಟ್ಟದ ಆನೆ, ಕುದುರೆ, ಹಸುಗಳನ್ನು ಗೋಶಾಲೆಗೆ ಕರೆತರಲಾಗುವುದು. ಅ. 15ರಂದು ಬೆಳಗ್ಗೆ 7.05ರಿಂದ 7.45ರವರೆಗೆ ವಾಣಿ ವಿಲಾಸ ದೇವರ ಮನೆಯಿಂದ ಚಾಮುಂಡಿ ತೊಟ್ಟಿಗೆ ಆಗಮಿಸಿ, ಕಂಕಣ ಧಾರಣೆ, 9.45ಕ್ಕೆ ಸಾವರ್ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತೆ ಪಟ್ಟದ ಹಸು ಆಗಮನ.
10.15ಕ್ಕೆ ಕಳಶ ಪೂಜೆ ಮತ್ತು ಸಿಂಹಾಸನ ಪೂಜೆ ಆರಂಭ. ಮಧ್ಯಾಹ್ನ 1.45ರಿಂದ 2.05ವರೆಗೆ ತಾಯಿ ಚಾಮುಂಡೇಶ್ವರಿ ಅಮ್ಮನವರನ್ನು ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ಕರೆತರಲಾಗುವುದು.ಅ. 20ರಂದು ಬೆಳಗ್ಗೆ 10.05ರಿಂದ 10.25ರವರೆಗೆ ಸರಸ್ವತಿ ಪೂಜೆ, 21ರಂದು ಸಂಜೆ ನಂತರ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ, 22ರಂದು ದುರ್ಗಾಷ್ಟಮಿ, 23ರ ಮಹಾನವಮಿಯಂದು ಬೆಳಗ್ಗೆ 5.30ಕ್ಕೆ ಚಂಡಿ ಹೋಮ ಆರಂಭ, 6.05ರಿಂದ 6.15ರವರೆಗೆ ಆನೆ ಬಾಗಿಲು ಮೂಲಕ ಶ್ರೀಕೋಡಿ ಸೋಮೇಶ್ವರ ಸ್ವಾಮಿ ದೇವಸ್ಥಾನಕ್ಕೆ ಖಾಸಗಿ ಆಯುಧಗಳನ್ನು ಕೊಂಡೊಯ್ಯಲಾಗುತ್ತದೆ. 7.15ಕ್ಕೆ ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇವಸ್ಥಾನದಿಂದ ಆನೆ ಬಾಗಿಲು ಮೂಲಕ ಕಲ್ಯಾಣ ಮಂಟಪಕ್ಕೆ ಖಾಸಗಿ ಆಯುಧಗಳನ್ನು ವಾಪಸ್ ತರುವುದು, 9.30ಕ್ಕೆ ಚಂಡಿ ಹೋಮದ ಪೂರ್ಣಾಹುತಿ, 12.20ರಿಂದ 12.45ರವರೆಗೆ ಕಲ್ಯಾಣ ಮಂಟಪದಲ್ಲಿಆಯುಧ ಪೂಜೆ ನಡೆಯಲಿದೆ. ಸಂಜೆ ದರ್ಬಾರ್ ಹಾಗೂ ಸಿಂಹ ವಿಸರ್ಜನೆ, ಕಂಕಣ ವಿಸರ್ಜನೆಯು ಖಾಸ ದೇವರ ಮನೆ ಹಾಗೂ ವಾಣಿವಿಲಾಸ ದೇವರ ಮನೆಯಲ್ಲಿ ನಡೆಯುತ್ತದೆ.ಅ. 24ರ ವಿಜಯದಶಮಿಯಂದು ಬೆಳಗ್ಗೆ 9.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಪಟ್ಟದ ಹಸು ಆಗಮನ ಕಲ್ಯಾಣ ಮಂಟಪದಲ್ಲಿಖಾಸ ಆಯುಧಗಳಿಗೆ ಉತ್ತರ ಪೂಜೆ, 11.10ರಿಂದ 11.45ರವರೆಗೆ ವಿಜಯ ಯಾತ್ರೆ ಮತ್ತು ಶಮಿ ಪೂಜೆ ನಡೆಯಲಿದೆ. ನ. 8ರಂದು ಬೆಳಗ್ಗೆ 10.15ರಿಂದ 10.45ರವರೆಗೆ ತೋರಣವನ್ನು ತೋರಣ ಕೊಠಡಿಗೆ ಸೇರಿಸಲಾಗುತ್ತದೆ.
ದೇಶ
‘ನೀಟ್ ಅಕ್ರಮಕ್ಕೆ ಮೋದಿ-ಧರ್ಮೇಂದ್ರ ಪ್ರಧಾನ್ ಹೊಣೆ’: CM ಸಿದ್ದರಾಮಯ್ಯ
ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ NEET ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ Narendra Modi ಹಾಗೂ ಕೇಂದ್ರ ಶಿಕ್ಷಣ ಸಚಿವ Dharmendra Pradhan ನೇರ ಹೊಣೆ ಹೊರಬೇಕು ಎಂದು ಮುಖ್ಯಮಂತ್ರಿ Siddaramaiah ಒತ್ತಾಯಿಸಿದರು.
ಬೆಂಗಳೂರಿನ Freedom Park ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, “ಈ ಹಿಂದೆ ರಾಜ್ಯಗಳು ತಮ್ಮದೇ CET ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿದ್ದರು. ಆದರೆ 2016ರಲ್ಲಿ ಮೋದಿ ಸರ್ಕಾರ ಬಲವಂತವಾಗಿ NEET ಜಾರಿಗೆ ತಂದ ಬಳಿಕ ಅಕ್ರಮಗಳು ಹೆಚ್ಚಾಗಿವೆ” ಎಂದು ಆರೋಪಿಸಿದರು.
“ಶಿಕ್ಷಣ ಸಂವಿಧಾನದ ಸಮವರ್ತಿ ಪಟ್ಟಿಯ ವಿಷಯ. ರಾಜ್ಯಗಳಿಗೆ ಸ್ವಾಯತ್ತತೆ ಇರಬೇಕು. ಆದರೆ ಕೇಂದ್ರ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನಲ್ಲೇ ಕೇಂದ್ರೀಕರಿಸಿಕೊಂಡ ಪರಿಣಾಮ ಇಂತಹ ಹಗರಣಗಳು ಮರುಕಳಿಸುತ್ತಿವೆ” ಎಂದು ಅವರು ಹೇಳಿದರು.
ಕಳೆದ ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, “ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ವರ್ಷವಿಡೀ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪೇಪರ್ ಲೀಕ್ ಮೂಲಕ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಸಿಎಂ, “ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹತಾಶರಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಬಿಜೆಪಿ ಆಡಳಿತದಲ್ಲಿ ಅಕ್ರಮಗಳ ಸರಮಾಲೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ PSI ನೇಮಕಾತಿ ಹಗರಣವನ್ನೂ ಉಲ್ಲೇಖಿಸಿದರು. “ದೇಶದ ಯುವಜನತೆ ಆಕ್ರೋಶದಲ್ಲಿದ್ದರೂ ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ” ಎಂದು ಟೀಕಿಸಿದರು.
ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ದೊರೆಯುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ದೇಶ
ಸಿ.ಟಿ. ರವಿ ಎದುರೇ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಭಾರೀ ಘರ್ಷಣೆ
ಚಿಕ್ಕಮಗಳೂರು: ಜಿಲ್ಲೆಯ ರಾಂಪುರ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ರಾಜಕೀಯ ಘರ್ಷಣೆ ಸಂಭವಿಸಿದ್ದು, ಕೆಲಕಾಲ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ C. T. Ravi ಅವರ ಸಮ್ಮುಖದಲ್ಲೇ ಈ ಗಲಾಟೆ ನಡೆದಿರುವುದು ವಿಶೇಷ ಗಮನ ಸೆಳೆದಿದೆ.
ಸಿ.ಟಿ. ರವಿ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಸ್ಥಳೀಯ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಆರಂಭವಾದ ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತು. ಉಭಯ ಪಕ್ಷಗಳ ಬೆಂಬಲಿಗರು ಪರಸ್ಪರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪರಿಸ್ಥಿತಿ ಕೈಮೀರಿದ ಪರಿಣಾಮ ತಳ್ಳಾಟ-ನೂಕಾಟ ನಡೆಯಿತು.
ಮಾತಿನ ವಾಗ್ವಾದ ಹೆಚ್ಚಾಗುತ್ತಿದ್ದಂತೆ ಕಾರ್ಯಕರ್ತರು ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿದ್ದು, ಸಿ.ಟಿ. ರವಿ ಅವರ ಸಮ್ಮುಖದಲ್ಲೇ ಹಲ್ಲೆ ನಡೆಸಲು ಯತ್ನಿಸಲಾಗಿದೆ ಎನ್ನಲಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಮುಖಂಡರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದರು.
ಘಟನೆ ನಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಯಾವುದೇ ಅನಾಹುತ ಸಂಭವಿಸದಂತೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಘರ್ಷಣೆಯಿಂದ ಕೆಲಕಾಲ ರಾಂಪುರ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ರಾಜಕೀಯ ವೈಷಮ್ಯದ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲಾ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ಪೊಲೀಸರು ನಿಗಾವಹಿಸಿದ್ದಾರೆ.
ದೇಶ
“ನಾವು ಯಾರೂ ಸುರಕ್ಷಿತರಲ್ಲ”: ಮುಂದಿನ ಮಹಾಮಾರಿಯ ಬಗ್ಗೆ ಜಾಗತಿಕ ವರದಿ ಆತಂಕ
ಕೊವಿಡ್ ಮಹಾಮಾರಿಯ ಆಘಾತದಿಂದ ಜಗತ್ತು ಇನ್ನೂ ಸಂಪೂರ್ಣ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಭೀಕರ ಸಾಂಕ್ರಾಮಿಕದ ಎಚ್ಚರಿಕೆ ಹೊರಬಿದ್ದಿದೆ. World Health Organization (WHO) ಹಾಗೂ ವಿಶ್ವ ಬ್ಯಾಂಕ್ ಬೆಂಬಲಿತ ಜಾಗತಿಕ ಸಿದ್ಧತಾ ಮೇಲ್ವಿಚಾರಣಾ ಮಂಡಳಿ (GPMB) ಬಿಡುಗಡೆ ಮಾಡಿರುವ ‘A World on the Edge’ ವರದಿ, “ಜಗತ್ತು ಮುಂದಿನ ಮಹಾಮಾರಿಯ ಅಂಚಿನಲ್ಲಿದೆ” ಎಂದು ಎಚ್ಚರಿಸಿದೆ.
ವರದಿಯ ಪ್ರಕಾರ, ಕೋವಿಡ್ ನಂತರ ಅಂತರರಾಷ್ಟ್ರೀಯ ಸಹಕಾರ ಕುಸಿದಿದ್ದು, ಲಸಿಕೆ ಹಂಚಿಕೆಯಲ್ಲಿ ತಾರತಮ್ಯ ಹೆಚ್ಚಾಗಿದೆ. ಇದೇ ಪರಿಸ್ಥಿತಿಯಲ್ಲಿ ಹೊಸ ವೈರಸ್ ಹರಡಿದರೆ, ಅದು ಕೋವಿಡ್ಗಿಂತಲೂ ಹೆಚ್ಚು ವಿನಾಶಕಾರಿ ಪರಿಣಾಮ ಉಂಟುಮಾಡಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.
ಇದೀಗ ಮಧ್ಯ ಆಫ್ರಿಕಾದ ಕಾಂಗೋ ಮತ್ತು ಉಗಾಂಡಾದಲ್ಲಿ ‘ಬುಂಡಿಬುಗ್ಯೋ’ ಎಂಬ ಅಪರೂಪದ ಎಬೋಲಾ ರೂಪಾಂತರ ಪತ್ತೆಯಾಗಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ. ಜೊತೆಗೆ Mpox ಪ್ರಕರಣಗಳು ಮತ್ತೆ ಹೆಚ್ಚುತ್ತಿದ್ದು, ಹಕ್ಕಿ ಜ್ವರ ಮತ್ತು ಹಂಟಾವೈರಸ್ಗಳಂತಹ ಸಾಂಕ್ರಾಮಿಕಗಳು ಯಾವುದೇ ಕ್ಷಣದಲ್ಲಿ ಜಾಗತಿಕ ಭೀತಿಗೆ ಕಾರಣವಾಗಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಅರಣ್ಯ ನಾಶ ಮತ್ತು ಮಾನವ ವಸತಿ ವಿಸ್ತರಣೆಯಿಂದ ಪ್ರಾಣಿಗಳಲ್ಲಿರುವ ವೈರಸ್ಗಳು ಮನುಷ್ಯರಿಗೆ ಸುಲಭವಾಗಿ ಹರಡುತ್ತಿವೆ. ಅಂತರರಾಷ್ಟ್ರೀಯ ವಿಮಾನಯಾನ ಹೆಚ್ಚಿರುವುದರಿಂದ ಹೊಸ ವೈರಸ್ ಕೆಲವೇ ಗಂಟೆಗಳಲ್ಲಿ ವಿಶ್ವದಾದ್ಯಂತ ಹರಡುವ ಅಪಾಯವಿದೆ ಎಂದು ವರದಿ ಎಚ್ಚರಿಸಿದೆ.
ಕೋವಿಡ್ ಸಮಯದಲ್ಲಿ ಶ್ರೀಮಂತ ರಾಷ್ಟ್ರಗಳು ಲಸಿಕೆಗಳನ್ನು ಸಂಗ್ರಹಿಸಿಕೊಂಡಿದ್ದರೆ, ಬಡ ರಾಷ್ಟ್ರಗಳು ಔಷಧಕ್ಕಾಗಿ ಪರದಾಡಿದ್ದವು. ಈಗ ಎಂಪಾಕ್ಸ್ ಲಸಿಕೆಗಳ ವಿಷಯದಲ್ಲೂ ಇದೇ ಅಸಮಾನತೆ ಮರುಕಳಿಸಿದೆ ಎಂದು ವರದಿ ಟೀಕಿಸಿದೆ.
ತಜ್ಞರ ಪ್ರಕಾರ, ಕೃತಕ ಬುದ್ಧಿಮತ್ತೆ (AI) ವೈರಸ್ ಹರಡುವಿಕೆಯನ್ನು ಮುಂಚಿತವಾಗಿ ಪತ್ತೆಹಚ್ಚಲು ನೆರವಾಗಬಹುದು. ಆದರೆ ಇದೇ ತಂತ್ರಜ್ಞಾನ ತಪ್ಪು ಮಾಹಿತಿ ಹರಡುವ ಸಾಧನವಾಗುವ ಅಪಾಯವೂ ಇದೆ. ಭಾರತದಂತಹ ಹೆಚ್ಚು ಜನಸಂಖ್ಯೆ ಹಾಗೂ ಕಿಕ್ಕಿರಿದ ನಗರಗಳಿರುವ ದೇಶಗಳು ಭವಿಷ್ಯದ ಮಹಾಮಾರಿಗೆ ಹೆಚ್ಚು ತುತ್ತಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
-
ಕ್ರೀಡೆ8 hours agoಹಾಂಗ್ ಕಾಂಗ್ನಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಶಿಪ್ಗೆ ಕರ್ನಾಟಕದ ಇಬ್ಬರು ಆಯ್ಕೆ
-
ದೇಶ12 hours ago59 ವರ್ಷಗಳ ಬಳಿಕ ತಮಿಳುನಾಡು ಸಚಿವ ಸಂಪುಟಕ್ಕೆ ಕಾಂಗ್ರೆಸ್ ಎಂಟ್ರಿ! ಇಂದು ವಿಜಯ್ ಕ್ಯಾಬಿನೆಟ್ ವಿಸ್ತರಣೆ
-
ದೇಶ11 hours agoಬಿಜೆಪಿಗಿಂತ ವೇಗವಾಗಿ ಬೆಳೆದ ‘Cockroach Janta Party’!
-
ದೇಶ6 hours ago“ನಾವು ಯಾರೂ ಸುರಕ್ಷಿತರಲ್ಲ”: ಮುಂದಿನ ಮಹಾಮಾರಿಯ ಬಗ್ಗೆ ಜಾಗತಿಕ ವರದಿ ಆತಂಕ
-
ದೇಶ6 hours agoCockroach Janata Party ಖಾತೆ ತಡೆ: ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ
-
ಅಪರಾಧ10 hours agoLatest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ
-
ದೇಶ9 hours agoಮೆಲೊಡಿ ಟ್ರೆಂಡ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ಜೋಡಿ: ಸೋನಾಕ್ಷಿ ವಿಡಿಯೋ ಸದ್ದು
-
ದೇಶ9 hours ago‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಯಾದರೆ ₹7 ಲಕ್ಷ ಕೋಟಿ ಉಳಿತಾಯ: ಜೆಪಿಸಿ ಸಮಿತಿ
