ದೇಶ
ಜಿಬಿಎ ಚುನಾವಣೆಗೆ ಸೋಮವಾರದಿಂದ ಅರ್ಜಿ ಸ್ವೀಕಾರ – ಡಿಸಿಎಂ ಡಿ.ಕೆ. ಶಿವಕುಮಾರ್
ಸೋಮವಾರದಿಂದ ಜಿಬಿಎ (GBE) ಚುನಾವಣೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೀಸಲಾತಿ ಇನ್ನೂ ಅಂತಿಮವಾಗಿಲ್ಲವಾದರೂ, 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು ಆಸಕ್ತಿ ಇರುವವರ ಮಾಹಿತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾತನಾಡಿದ ಡಿಕೆಶಿ, ಶನಿವಾರ ಸಚಿವರೊಂದಿಗೆ ಚರ್ಚಿಸಿ, ಅರ್ಜಿಯೊಂದಿಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಲಾಗಿದೆ ಎಂದರು.
👉 ಸಾಮಾನ್ಯ ವರ್ಗಕ್ಕೆ ₹50,000
👉 ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯಕ್ಕೆ ₹25,000
ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮತಗಳ್ಳತನ ವಿರುದ್ಧ ಹೋರಾಟ ಮುಂದುವರಿಕೆ
ಮತಗಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಅಂತ್ಯವಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ,
“ಪ್ರಜಾಪ್ರಭುತ್ವ ಉಳಿಸಲು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ. ಪ್ರತಿ ಕ್ಷೇತ್ರದಲ್ಲೂ ಲೀಗಲ್ ಬ್ಯಾಂಕ್ ಸ್ಥಾಪಿಸಲಾಗುತ್ತದೆ” ಎಂದರು.
ಪಕ್ಷದ ಪರ ಇರುವ ವಕೀಲರನ್ನು ಈ ಲೀಗಲ್ ಬ್ಯಾಂಕ್‌ಗೆ ಸೇರಿಸಿ, ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು ಎಂದು ಹೇಳಿದರು. ಬಿಎಲ್‌ಎ ಗುರುತಿನ ಚೀಟಿ ನೀಡುವ ಪ್ರಕ್ರಿಯೆಗೆ ಜಿ.ಸಿ. ಚಂದ್ರಶೇಖರ್ ಸಿದ್ಧತೆ ನಡೆಸಿದ್ದು, ಎಐಸಿಸಿಯಿಂದ ಅನುಮೋದನೆ ಪಡೆಯಲಾಗುವುದು ಎಂದರು.
ಜನರ ಉತ್ಸಾಹ ಮುಂದಿನ ಚುನಾವಣೆಗಳಿಗೆ ನಾಂದಿ
ದೆಹಲಿಯ ಪ್ರತಿಭಟನೆಯಲ್ಲಿ ಜನರಲ್ಲಿದ್ದ ಉತ್ಸಾಹವು 2028 ಹಾಗೂ 2029ರ ಚುನಾವಣೆಗಳಿಗೆ ನಾಂದಿ ಹಾಡಿದೆ ಎಂದು ಡಿಕೆಶಿ ಅಭಿಪ್ರಾಯಪಟ್ಟರು.
“ಈ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ. ಅಧಿಕಾರವಿಲ್ಲದ ಕಾರ್ಯಕರ್ತರೂ ತಮ್ಮ ಸ್ವಂತ ಹಣದಲ್ಲಿ ಪ್ರತಿಭಟನೆಗೆ ಬಂದಿದ್ದಾರೆ. ಇದು ನನ್ನ ಆತ್ಮಸ್ಥೈರ್ಯ ಹೆಚ್ಚಿಸಿದೆ” ಎಂದರು.
ಹೈಕಮಾಂಡ್ ಭೇಟಿ ಬಗ್ಗೆ ಡಿಕೆಶಿ ಸ್ಪಷ್ಟನೆ
ಹೈಕಮಾಂಡ್ ನಾಯಕರ ಭೇಟಿ ಕುರಿತು ಕೇಳಿದ ಪ್ರಶ್ನೆಗೆ,
“ಇದು ಸೌಹಾರ್ದಯುತ ಭೇಟಿ. ವೈಯಕ್ತಿಕ ಭೇಟಿ ಅಲ್ಲ. ಬೇರೆ ವಿಚಾರ ಬಹಿರಂಗಪಡಿಸುವ ಅಗತ್ಯವಿಲ್ಲ” ಎಂದು ಹೇಳಿದರು.
ಸೋನಿಯಾ ಗಾಂಧಿ ಭೇಟಿ ಬಗ್ಗೆ ಕೇಳಿದಾಗ, “ನಾವು ಭೇಟಿಯಾದಾಗ ಹೇಳಿಕೊಳ್ಳುವುದಿಲ್ಲ” ಎಂದು ಪ್ರತಿಕ್ರಿಯಿಸಿದರು.
“ನಿಮಗೆ ಅಭಯ ಸಿಕ್ಕಿದೆಯೇ?” ಎಂಬ ಪ್ರಶ್ನೆಗೆ, “ನನಗೆ ಯಾವುದೇ ಸಮಸ್ಯೆ ಇಲ್ಲ. ನೀವು ಸಮಸ್ಯೆ ಸೃಷ್ಟಿಸುತ್ತಿದ್ದೀರಿ” ಎಂದು ತಿರುಗೇಟು ನೀಡಿದರು.
ದೇಶ
LATEST NEWS “ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ”: ಅಮೆರಿಕಾ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ
ನವದೆಹಲಿ: ಅಮೆರಿಕದೊಂದಿಗೆ ನಡೆದ ವ್ಯಾಪಾರ ಒಪ್ಪಂದದ ಕುರಿತು ಲೋಕಸಭೆಯಲ್ಲಿ ಬಜೆಟ್ ಚರ್ಚೆಯ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಭಾರತ ಯಾರಿಂದ ತೈಲ ಖರೀದಿಸಬೇಕು ಎಂಬುದನ್ನೂ ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡು ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲವೇ?” ಎಂದು ಪ್ರಶ್ನಿಸಿದರು.
ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಂಡಿರುವುದು ಸರ್ಕಾರದ ಶರಣಾಗತಿ ರಾಜಕೀಯ ಎಂದು ಅವರು ಆರೋಪಿಸಿದರು. ಈ ಹಿಂದೆ ಭಾರತದ ಉತ್ಪನ್ನಗಳಿಗೆ 3% ಟ್ಯಾರಿಫ್ ಇದ್ದದ್ದು, ಈಗ ಅದನ್ನು 18%ಕ್ಕೆ ಏರಿಸಲಾಗಿದೆ. ಇದನ್ನು ಸರ್ಕಾರ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಟೀಕಿಸಿದರು.
ಟೆಕ್ಸ್‌ಟೈಲ್ ವಸ್ತುಗಳಿಗೆ ಭಾರತಕ್ಕೆ 18% ಟ್ಯಾರಿಫ್ ವಿಧಿಸಿರುವಾಗ, ಬಾಂಗ್ಲಾದೇಶಕ್ಕೆ 0% ಟ್ಯಾರಿಫ್ ನೀಡಲಾಗಿದೆ. “ಇದು ಭಾರತೀಯ ಕೈಗಾರಿಕೆಗಳಿಗೆ ಹಿನ್ನಡೆಯಾಗಿದೆ. ಟ್ರಂಪ್ ಮೋದಿ ಮೇಲೆ ಬಿಗಿಪಟ್ಟು ಹಾಕಿದ್ದಾರೆ” ಎಂದು ಹೇಳಿದರು.
ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ನಿಂದ 146 ಬಿಲಿಯನ್ ಡಾಲರ್‌ಗೆ ಏರಿಕೆಯಾಗಲಿದೆ ಎಂದು ಹೇಳಿದ ರಾಹುಲ್, “ಅಮೆರಿಕಕ್ಕೆ ಭಾರತದ ಬಗ್ಗೆ ಬದ್ಧತೆ ಇಲ್ಲ. ಆದರೆ ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿದೆ. ನಾವು ಮೂರ್ಖರಂತೆ ನಿಂತಿದ್ದೇವೆ” ಎಂದು ಕಿಡಿಕಾರಿದರು.
ದೇಶ
BIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
ಹೊಸದಿಲ್ಲಿ: ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 10ಕ್ಕೂ ಹೆಚ್ಚು ಕೇಂದ್ರ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ತಿಳಿಸಿದ್ದಾರೆ.
600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಷ್ಕರದ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬ್ಯಾಂಕ್, ವಿಮಾ, ರಕ್ಷಣಾ, ರೈಲ್ವೆ, ಬಂದರು, ವಿಮಾನಯಾನ ಹಾಗೂ ವಿವಿಧ ಗುತ್ತಿಗೆ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ಸಹ ಪ್ರತಿಭಟನೆಗಳಲ್ಲಿ ಭಾಗಿಯಾಗಲಿವೆ.
ನವೆಂಬರ್ 2025ರಲ್ಲಿ ಸೂಚಿಸಲಾದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘಟನೆಗಳು ಮುಂದಿಟ್ಟಿವೆ. ಒಡಿಶಾ ಮತ್ತು ಅಸ್ಸಾಂ ರಾಜ್ಯಗಳು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶಾಲೆ-ಕಾಲೇಜುಗಳ ಮುಚ್ಚುವಿಕೆ ಕುರಿತು ಅಧಿಕೃತ ಘೋಷಣೆ ಇಲ್ಲದಿದ್ದರೂ, ಕೆಲವು ರಾಜ್ಯಗಳಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಸಾರ್ವಜನಿಕ ಸಾರಿಗೆ ಸೇವೆಗಳು ಅಸ್ತವ್ಯಸ್ತವಾಗಬಹುದು. ಆದರೆ ಹಾಲು, ಆಸ್ಪತ್ರೆ, ಮೆಡಿಕಲ್, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.
ದೇಶ
638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ
ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.
ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.
-
ದೇಶ8 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ದೇಶ2 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ಚುನಾವಣೆ8 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ9 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ದೇಶ9 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ಕ್ರೀಡೆ1 hour agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ8 hours agoಹಿರಿಯ ಪತ್ರಕರ್ತ ಹಾಗೂ ಮಾಜಿ ಎಂಎಲ್ಸಿ ಪಿ. ರಾಮಯ್ಯ ನಿಧನ: ಪತ್ರಿಕೋದ್ಯಮದ ‘ತಪಸ್ವಿ’ಗೆ ಅಂತಿಮ ವಿದಾಯ
-
ದೇಶ2 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
