Connect with us

ಬೆಂಗಳೂರು

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆಗೆ ಜಪಾನ್ ಟೆಕ್ನಾಲಜಿ!​

Published

on

ಬೆಂಗಳೂರಿನ ಟ್ರಾಫಿಕ್ ನಿರ್ವಹಣೆಗೆ ಜಪಾನ್ ಟೆಕ್ನಾಲಜಿ!​

ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ ಅತಿ ದೊಡ್ಡ ಸವಾಲು. ಅದರಲ್ಲೂ ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಬಿದ್ದರೆ ವಾಹನಗಳು ಮುಂದೆ ಸಾಗೋದಕ್ಕೇ ಸಾಕಷ್ಟು ಸಮಯ ಬೇಕಾಗುತ್ತೆ. ವಾಹನಗಳ ಪ್ರಮಾಣ ಕೂಡಾ ದಿನದಿಂದ ದಿನಕ್ಕೆ ಏರಿಕೆ ಆಗ್ತಿದೆ. ಹೀಗಾಗಿ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಅತ್ಯಾಧುನಿಕ ಟ್ರಾಫಿಕ್ ಮಾಹಿತಿ ಮತ್ತು ನಿರ್ವಹಣಾ ವ್ಯವಸ್ಥೆಯ ಮೊರೆ ಹೋಗಿದ್ದಾರೆ.ಬೆಂಗಳೂರು ನಗರದ ಹಲವೆಡೆ ಸುರಂಗ ರಸ್ತೆಗಳನ್ನ ನಿರ್ಮಾಣ ಮಾಡೋದಕ್ಕೆ ರಾಜ್ಯ ಸರ್ಕಾರ ಪ್ಲಾನ್ ಮಾಡ್ತಿದೆ. ಪಥದ ಟನಲ್ ರಸ್ತೆಗಳನ್ನ ನಿರ್ಮಿಸೋದಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಟೆಂಡರ್ ಕರೆಯೋಕೆ ನಿರ್ಧಾರ ಮಾಡಿದೆ. ಬೆಂಗಳೂರಿನ ಸಂಚಾರ ನಿರ್ವಹಣೆಗೆ ಪೊಲೀಸರು ಹಾಗೂ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಂಡಿದೆ.28 ಸಿಗ್ನಲ್‌ಗಳನ್ನೂ ಗುರ್ತಿಸಲಾಗಿದ್ದು, ನಗರದ ಎಲ್ಲಾ ಪ್ರಮುಖ 28 ಟ್ರಾಫಿಕ್ ಸಿಗ್ನಲ್‌ಗಳಿಗೆ ಇಂಟರ್‌ನೆಟ್ ಸಂಪರ್ಕ ಹಾಗೂ ಜಿಪಿಎಸ್ ವ್ಯವಸ್ಥೆ ಅಳವಡಿಕೆ ಮಾಡಲಾಗುತ್ತೆ. ಇದರ ನೇರ ಸಂಪರ್ಕ ಬೆಂಗಳೂರಿನ ಸಂಚಾರ ಮಾಹಿತಿ ಕೇಂದ್ರಕ್ಕೆ ರವಾನೆ ಆಗುತ್ತೆ. ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಈ ಕೇಂದ್ರವನ್ನ ಸ್ಥಾಪನೆ ಮಾಡಲಾಗಿದೆ.ಈ ಕೇಂದ್ರವು ಸಿಗ್ನಲ್‌ಗಳ ಮೇಲೆ ನಿಗಾ ವಹಿಸುತ್ತದೆ. ಯಾವುದಾದ್ರೂ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದ್ರೆ ಸಿಗ್ನಲ್ ಕೂಡಲೇ ಹಸಿರು ಬಣ್ಣಕ್ಕೆ ತಿರುಗುತ್ತೆ. ಈ ಮೂಲಕ ವಾಹನಗಳು ಗಂಟೆಗಟ್ಟಲೆ ಸಿಗ್ನಲ್‌ನಲ್ಲಿ ಕಾದು ನಿಲ್ಲೋದು ತಪ್ಪುತ್ತದೆ. ಇನ್ನು ಡಿಜಿಟಲ್ ಬೋರ್ಡ್‌ಗಳನ್ನ ಅಳವಡಿಕೆ ಮಾಡಿ ಸಂಚಾರ ದಟ್ಟಣೆ ಇರುವ ರಸ್ತೆಗಳ ಬಗ್ಗೆ ಮಾಹಿತಿ ನೀಡಲಾಗುತ್ತೆ. ಈ ಮಾಹಿತಿಯನ್ನ ನೋಡಿ ವಾಹನ ಸವಾರರು ತಮ್ಮ ಮಾರ್ಗ ಬದಲಾವಣೆ ಮಾಡಿಕೊಳ್ಳೋದಕ್ಕೂ ಅನುಕೂಲ ಆಗಲಿದೆ.ಸಂಪರ್ಕ ರಸ್ತೆಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರ್ಕಾರ ಸುರಂಗ ರಸ್ತೆಗಳನ್ನ ನಿರ್ಮಾಣ ಮಾಡೋಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಒಟ್ಟು 190 ಕಿ. ಮೀ. ಉದ್ದಕ್ಕೆ ಸುರಂಗ ರಸ್ತೆ ನಿರ್ಮಿಸುವ ಯೋಜನೆ ಇದೆ. ಈ ಯೋಜನೆಗೆ 8 ಕಂಪನಿಗಳ ಅರ್ಹತೆ ಪಡೆದುಕೊಂಡಿದ್ದು, ಮುಂದಿನ 45 ದಿನಗಳ ಒಳಗೆ ಟೆಂಡರ್ ಕರೆಯಲು ನಿರ್ಧಾರ ಮಾಡಲಾಗಿದೆ. ಟೆಂಡರ್ ಪಡೆದ ಕಂಪನಿ ಮೊದಲು ಬೆಂಗಳೂರು ನಗರದ ಟ್ರಾಫಿಕ್ ಪರಿಸ್ತಿತಿಯ ಅಧ್ಯಯನ ಮಾಡಲಿದೆ. ಈ ಮೂಲಕ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಲಿದೆ.ಹಾಗೆ ನೋಡಿದ್ರೆ ಬೆಂಗಳೂರಿನಲ್ಲಿ ಈಗಾಗಲೇ ಅಂಡರ್ ಪಾಸ್‌ಗಳಿವೆ, ಈ ಅಂಡರ್‌ ಪಾಸ್‌ಗಳು ನಿರ್ವಹಣೆ ಕೊರತೆ ಎದುರಿಸುತ್ತಿವೆ. ಅದರಲ್ಲೂ ಮಳೆಗಾಲ ಬಂದ್ರೆ ಸಾಕು ಅಂಡರ್ ಪಾಸ್‌ಗಳಲ್ಲಿ ನೀರು ನಿಲ್ಲುತ್ತಿವೆ. ಅಂಡರ್ ಪಾಸ್‌ಗಳ ಪರಿಸ್ಥಿತಿಯೇ ಹೀಗಿರುವಾಗ ಮುಂದಿನ ದಿನಗಳಲ್ಲಿ ಸುರಂಗ ರಸ್ತೆ ಕಥೆ ನಿರ್ವಹಣೆ ಕಥೆ ಹೇಗೆ ಎಂಬ ಪ್ರಶ್ನೆಯೂ ಸಹಜವಾಗೇ ಮೂಡುತ್ತೆ.

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ಕ್ರೀಡೆ

ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!

Published

on

By

ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.

ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.

ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.

Continue Reading

ದೇಶ

K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ

Published

on

By

ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್‌ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.

ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.

ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ನೀಡಲಾಯಿತು.

ವಿಶೇಷವಾಗಿ, ಸ್ನೇಹಾ ಟಿ (ಎಂಎಸ್‌ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.

ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.

Continue Reading

Trending