Connect with us

ದೇಶ

ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’: ಅರಬ್ ರಾಷ್ಟ್ರಗಳಲ್ಲಿ ಬ್ಯಾನ್ ಭೀತಿ?

ಚೆನ್ನೈ: ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಹಾಗೂ ಕೊನೆಯ ಸಿನಿಮಾ ʻಜನ ನಾಯಗನ್ʼ ಜನವರಿ 9ರಂದು ವಿಶ್ವದಾದ್ಯಂತ ಬಿಡುಗಡೆಯಾಗಲು ಸಿದ್ಧವಾಗಿದೆ. ಸಿನಿಮಾ ತೆರೆಗೆ ಬರಲು ಇನ್ನೆರಡು ದಿನಗಳಷ್ಟೇ ಬಾಕಿ ಇರುವ ಹಿನ್ನೆಲೆಯಲ್ಲಿ ದೇಶ-ವಿದೇಶಗಳಲ್ಲಿ ವಿಜಯ್ ಅಭಿಮಾನಿಗಳು ಚಿತ್ರವನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.

ಮಲೇಷಿಯಾ, ಸಿಂಗಪೂರ್, ಅಮೆರಿಕ (USA), ಕೆನಡಾ ಸೇರಿದಂತೆ ಅನೇಕ ದೇಶಗಳಲ್ಲಿ ‘ಜನ ನಾಯಗನ್’ ಸಿನಿಮಾ ರಿಲೀಸ್‌ಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಆದರೆ ಇದೇ ವೇಳೆ ಅರಬ್ ರಾಷ್ಟ್ರಗಳಲ್ಲಿ ಚಿತ್ರಕ್ಕೆ ಬ್ಯಾನ್ ಭೀತಿ ಎದುರಾಗಿದೆ ಎಂಬ ವರದಿಗಳು ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ವರದಿಗಳ ಪ್ರಕಾರ, ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಹಾಗೂ ಸೌದಿ ಅರೇಬಿಯಾ ಸೇರಿದಂತೆ ಕೆಲವು ಅರಬ್ ರಾಷ್ಟ್ರಗಳು ‘ಜನ ನಾಯಗನ್’ ಸಿನಿಮಾಗೆ ನಿಷೇಧ ಹೇರಲು ಚಿಂತನೆ ನಡೆಸಿವೆ ಎನ್ನಲಾಗಿದೆ. ಸಿನಿಮಾದ ಟ್ರೇಲರ್ ಬಿಡುಗಡೆಯಾದ ಬಳಿಕವೇ ಅಲ್ಲಿನ ಸರ್ಕಾರಗಳು ಈ ನಿರ್ಧಾರಕ್ಕೆ ಬಂದಿವೆ ಎಂಬ ಮಾಹಿತಿ ಹರಿದಾಡುತ್ತಿದೆ.

ಈ ವಿವಾದಕ್ಕೆ ಕಾರಣ ಚಿತ್ರದ ಕಥಾ ಅಂಶವಾಗಿದ್ದು, ಚಿತ್ರದಲ್ಲಿನ ವಿಲನ್ ಪಾತ್ರಧಾರಿ ಪಾಕಿಸ್ತಾನದಿಂದ ಬಂದ ವ್ಯಕ್ತಿಯಾಗಿ ತೋರಿಸಲ್ಪಟ್ಟಿದ್ದಾನೆ. ಆತನನ್ನು ದೇಶದೊಳಗಿನ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವನಾಗಿ ಚಿತ್ರಿಸಲಾಗಿದ್ದು, ಆತನಿಗೆ ಬುದ್ಧಿ ಕಲಿಸುವ ನಾಯಕನ ಪಾತ್ರದಲ್ಲಿ ವಿಜಯ್ ಅಭಿನಯಿಸಿದ್ದಾರೆ. ಈ ಅಂಶವೇ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಅರಬ್ ರಾಷ್ಟ್ರಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಸ್ಪಷ್ಟನೆ ಇನ್ನೂ ಹೊರಬಂದಿಲ್ಲ. ‘ಜನ ನಾಯಗನ್’ ವಿಜಯ್ ಅವರ ಕೊನೆಯ ಸಿನಿಮಾ ಎನ್ನುವ ಕಾರಣಕ್ಕೆ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ಬ್ಯಾನ್ ವಿಚಾರವು ಚಿತ್ರ ಬಿಡುಗಡೆಗೆ ಮುನ್ನ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ದೇಶ

ಅಮೆರಿಕ ವಿರುದ್ಧ ಪಾಕ್‌ ರಕ್ಷಣಾ ಸಚಿವ ಖವಾಜಾ ಆಸಿಫ್‌ ಆಕ್ರೋಶ: “ಟಾಯ್ಲೆಟ್‌ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡರು”

ಇಸ್ಲಾಮಾಬಾದ್: ಪಾಕಿಸ್ತಾನವನ್ನು ಅಮೆರಿಕ “ಟಾಯ್ಲೆಟ್‌ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ” ಎಂದು ಪಾಕ್‌ ರಕ್ಷಣಾ ಸಚಿವ ಖವಾಜಾ ಆಸಿಫ್‌ (Khawaja Asif) ಸಂಸತ್ತಿನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಬೆಂಬಲವನ್ನು ಅಂಧವಾಗಿ ಅನುಸರಿಸುವುದು ಪಾಕಿಸ್ತಾನ ಮಾಡಿದ ದೊಡ್ಡ ತಪ್ಪು ಎಂದು ಅವರು ಹೇಳಿದ್ದಾರೆ.

ಸಂಸತ್ತಿನಲ್ಲಿ ಮಾತನಾಡಿದ ಆಸಿಫ್‌, 2001ರ ಬಳಿಕ ಅಮೆರಿಕ ನೇತೃತ್ವದಲ್ಲಿ ನಡೆದ ಭಯೋತ್ಪಾದನೆ ವಿರುದ್ಧದ ಯುದ್ಧದಲ್ಲಿ ಪಾಕಿಸ್ತಾನ ಪ್ರಮುಖ ಪಾತ್ರವಹಿಸಿತು. ತಾಲಿಬಾನ್ ವಿರುದ್ಧ ಕಾರ್ಯಾಚರಣೆ ನಡೆಸಿದ ಪರಿಣಾಮ ದೇಶದ ಒಳಗಿನ ಭದ್ರತಾ ಪರಿಸ್ಥಿತಿ ಹದಗೆಟ್ಟಿತು. ಹಿಂಸಾಚಾರ, ಅತಿರೇಕವಾದ ಮತ್ತು ಆರ್ಥಿಕ ಒತ್ತಡದ ಸಂಕಷ್ಟವನ್ನು ಪಾಕಿಸ್ತಾನ ದಶಕಗಳ ಕಾಲ ಅನುಭವಿಸಬೇಕಾಯಿತು ಎಂದು ಹೇಳಿದರು.

“ಅಮೆರಿಕ ತನ್ನ ಉದ್ದೇಶ ಸಾಧಿಸಿದ ಬಳಿಕ ಹಿಂದೆ ಸರಿಯಿತು. ಆದರೆ ಅದರ ಪರಿಣಾಮಗಳನ್ನು ಪಾಕಿಸ್ತಾನ ಇನ್ನೂ ಭರಿಸುತ್ತಿದೆ. ನಾವು ಅನುಭವಿಸಿದ ನಷ್ಟಗಳನ್ನು ಎಂದಿಗೂ ಸರಿದೂಗಿಸಲು ಸಾಧ್ಯವಿಲ್ಲ,” ಎಂದು ಆಸಿಫ್‌ ಬೇಸರ ವ್ಯಕ್ತಪಡಿಸಿದರು.

ಇತರ ರಾಷ್ಟ್ರಗಳ ಸಂಘರ್ಷಗಳಲ್ಲಿ ತೊಡಗಿಸಿಕೊಂಡ ಪರಿಣಾಮ ಪಾಕಿಸ್ತಾನ ಒಂದು ಕೈಗೊಂಬೆಯಂತಾಗಿದೆ. ಆ ಕಾಲದ ನಿರ್ಧಾರಗಳು ಬದಲಾಯಿಸಲಾಗದ ತಪ್ಪುಗಳಾಗಿದ್ದು, ಈಗ ದೇಶದ ಆರ್ಥಿಕ ಮತ್ತು ಭದ್ರತಾ ಪರಿಸ್ಥಿತಿಗೆ ಹೊರೆ ಆಗಿವೆ ಎಂದು ಹೇಳಿದ್ದಾರೆ.

ಈ ಹೇಳಿಕೆ ಪಾಕಿಸ್ತಾನ-ಅಮೆರಿಕ ಸಂಬಂಧಗಳಲ್ಲಿ ಮತ್ತೆ ಚರ್ಚೆ ಹುಟ್ಟುಹಾಕಿದೆ. ಭವಿಷ್ಯದಲ್ಲಿ ವಿದೇಶಾಂಗ ನೀತಿಯಲ್ಲಿ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂಬ ಅಗತ್ಯವನ್ನೂ ಅವರು ಒತ್ತಿಹೇಳಿದ್ದಾರೆ.

Continue Reading

ದೇಶ

ರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ

ನವದೆಹಲಿ: ದೇಶದ ಸಾಂಸ್ಕೃತಿಕ ಮತ್ತು ದೇಶಭಕ್ತಿಯ ಸಂಕೇತವಾದ ‘ವಂದೇ ಮಾತರಂ’ (Vande Mataram) ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ನೂತನ ಮಾರ್ಗಸೂಚಿ ಹೊರಡಿಸಿದೆ. ಇದಕ್ಕೆ ಅನ್ವಯವಾಗಿ, ಅಧಿಕೃತGovernment ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಗೆ ಮೊದಲು ವಂದೇ ಮಾತರಂ ಗೀತೆಯನ್ನು ಅನಿವಾರ್ಯವಾಗಿ ಹಾಡಬೇಕು ಅಥವಾ ನುಡಿಸಬೇಕು ಎಂದು ಸರ್ಕಾರಿ ಸೂಚನೆ ನೀಡಲಾಗಿದೆ.

ಈ ಹೊಸ ಮಾರ್ಗಸೂಚಿಯು, ವಂದೇ ಮಾತರಂ ಗೀತೆಗೆ 150 ವರ್ಷ ಪೂರೈಸಿದ ಸಂದರ್ಭಕ್ಕೆ ಕೇಂದ್ರ ಸರ್ಕಾರ ಗೌರವ ಸಲ್ಲಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭಗಳು, ರಾಷ್ಟ್ರಪತಿಗಳ ಭಾಗವಹಿಸಬಹುದಾದ ಎಲ್ಲಾ ಅಧಿಕೃತ ಕಾರ್ಯಕ್ರಮಗಳು, ಚಿತ್ರಮಂದಿರ ಸ್ವಾಗತ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಬೃಹತ್Government ಘಟನೆಗಳಲ್ಲಿ ವಂದೇ ಮಾತರಂವನ್ನು ಹಾಡುವುದನ್ನು ಅಥವಾ ನುಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಂದೇ ಮಾತರಂ ಗೀತೆ 6 ಚರಣಗಳ 3 ನಿಮಿಷ 10 ಸೆಕೆಂಡ್‌ನ ವಿಸ್ತೃತ ಆವೃತ್ತಿಯನ್ನು ಬಳಸುವಾಗ, ಎಲ್ಲರೂ ಎದ್ದುನಿಂತು ಗೌರವ ವಂದನೆ ಸಲ್ಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ಈ ಮಾರ್ಗಸೂಚಿಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಸಂದರ್ಭದಲ್ಲಿ, ರಾಷ್ಟ್ರಪತಿ ಮತ್ತು ರಾಜ್ಯಪಾಲರ ಆಗಮನ ಅಥವಾ ಭಾಷಣದ ಮೊದಲು ಮತ್ತು ನಂತರವೂ ವಂದೇ ಮಾತರಂ ಗೀತೆಯನ್ನು ಅನಿವಾರ್ಯವಾಗಿ ಹಾಡಬೇಕೆಂದು ಕರೆದಿದೆ. ಜೊತೆಗೆ, “ರಾಷ್ಟ್ರದ ಗೌರವಕ್ಕೆ ಅಪಮಾನ ತಡೆ” ಕಾಯ್ದೆಯ ವ್ಯಾಪ್ತಿಯಲ್ಲಿ, ವಂದೇ ಮಾತರಂ ಮತ್ತು ರಾಷ್ಟ್ರಗೀತೆಗಳನ್ನು ಮಾನ್ಯತೆಯಿಲ್ಲದೆ ತಡೆಯುವವರಿಗೆ ಗರಿಷ್ಟ 3 ವರ್ಷದ ಜೈಲು ಶಿಕ್ಷೆ ವಿಧಿಸಬಹುದೆಂದು ಸೂಚಿಸಲಾಗಿದೆ.

ಈ ನಿರ್ಧಾರ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರ ಮತ್ತು ರಾಜ್ಯ ಸಚಿವಾಲಯಗಳು ಹಾಗೂ ಸಾಂವಿಧಾನಿಕ ಸಂಸ್ಥೆಗಳುಗಳಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಕಳುಹಿಸಲಾಗಿದೆ. ಇದುವರೆಗೆ ‘ವಂದೇ ಮಾತರಂ’ಗಾಗಿ ಯಾವುದೇ ಅಧಿಕೃತ ಶಿಸ್ತು ಅಥವಾ ಕ್ರಮವಿರಲಿಲ್ಲ, ಆದರೆ ಈಗ 1937 ರ ಬಳಿಕ 6 ಚರಣಗಳ ವಂದೇ ಮಾತರಂ ಸುಮಾರು ಎಲ್ಲಾ ಅಧಿಕೃತ Government ಕಾರ್ಯಕ್ರಮಗಳಲ್ಲಿ ಕಡ್ಡಾಯಗೊಳಿಸಲಾಗಿದೆ.

Continue Reading

ಅಪರಾಧ

ಮನುಷ್ಯತ್ವ ಹೂತುಹೋದ ಎಪ್‌ಸ್ಟೀನ್ ದ್ವೀಪ: ಜಗತ್ತಿನ ಎಲೈಟ್‌ಗಳನ್ನು ನಡುಗಿಸುತ್ತಿರುವ ‘ಲೋಲಿಟಾ ಎಕ್ಸ್‌ಪ್ರೆಸ್’ ರಹಸ್ಯ

ನವದೆಹಲಿ/ವಾಷಿಂಗ್ಟನ್:
ಮನುಷ್ಯತ್ವವೇ ಮರಳಲ್ಲಿ ಹೂತುಹೋದ ದ್ವೀಪವೊಂದು ವರ್ಷಗಳ ಕಾಲ ಜಗತ್ತಿನ ಕಣ್ಣು ತಪ್ಪಿಸಿ ಅನಾಚಾರದ ಸ್ವರ್ಗವಾಗಿ ಬೆಳೆದಿತ್ತು. ‘ಲೋಲಿಟಾ ಎಕ್ಸ್‌ಪ್ರೆಸ್’ ಎಂಬ ಖಾಸಗಿ ಜೆಟ್‌ ವಿಮಾನ ದಿನವೂ ಲಿಟಲ್ ಸೇಂಟ್ ಜೇಮ್ಸ್ ದ್ವೀಪಕ್ಕೆ ಹಾರಾಟ ನಡೆಸುತ್ತಿತ್ತು. ಹದಿಹರೆಯದ ಹುಡುಗಿಯರನ್ನು ಲೈಂಗಿಕ ದೌರ್ಜನ್ಯಕ್ಕೆ ಬಲಿಕೊಡುತ್ತಿದ್ದ ಈ ದ್ವೀಪವನ್ನು ಇಂದು ಜಗತ್ತು ‘ಎಪ್‌ಸ್ಟೀನ್ ದ್ವೀಪ’ ಅಥವಾ ‘ಪೆಡೋಪೈಲ್ ಐಲ್ಯಾಂಡ್’ ಎಂದೇ ಕರೆಯುತ್ತಿದೆ.

1998ರಲ್ಲಿ ಅಮೆರಿಕದ ಶತಕೋಟ್ಯಧಿಪತಿ ಜೆಫ್ರಿ ಎಪ್‌ಸ್ಟೀನ್ 8 ಮಿಲಿಯನ್ ಡಾಲರ್ ನೀಡಿ ಖರೀದಿಸಿದ 71 ಎಕರೆ ವಿಸ್ತೀರ್ಣದ ಈ ದ್ವೀಪದಲ್ಲಿ ಐಷಾರಾಮಿ ರೆಸಾರ್ಟ್‌ಗಳು, ವಿಲ್ಲಾಗಳು, ಹೆಲಿಪ್ಯಾಡ್‌ಗಳು ನಿರ್ಮಾಣವಾಗಿದ್ದವು. ಹೊರಜಗತ್ತಿನಿಂದ ಸಂಪೂರ್ಣ ಕಡಿದುಹಾಕಲ್ಪಟ್ಟ ಈ ಪ್ರದೇಶದಲ್ಲಿ ನೂರಾರು ಅಪ್ರಾಪ್ತ ಬಾಲಕಿಯರನ್ನು ಬಂಧಿಸಿ, ಜಗತ್ತಿನ ಎಲೈಟ್‌ಗಳಿಗೆ ಪೂರೈಸಲಾಗುತ್ತಿತ್ತು ಎಂಬ ಆರೋಪಗಳು ತನಿಖೆಯಲ್ಲಿ ಬಹಿರಂಗವಾದವು.

2005ರಲ್ಲಿ ಫ್ಲೋರಿಡಾದ 14 ವರ್ಷದ ಬಾಲಕಿಯ ತಾಯಿಯೊಬ್ಬರು ನೀಡಿದ ದೂರು ಈ ಮಹಾ ಲೈಂಗಿಕ ಹಗರಣದ ಮೊದಲ ಕಿಡಿಯಾಗಿತ್ತು. ಬಳಿಕ 50ಕ್ಕೂ ಹೆಚ್ಚು ಅಪ್ರಾಪ್ತೆಯರು ದೂರು ದಾಖಲಿಸಿದರು. 2008ರಲ್ಲಿ ಎಪ್‌ಸ್ಟೀನ್ ತಪ್ಪಿತಸ್ಥನಾಗಿದ್ದರೂ, ಕೇವಲ 13 ತಿಂಗಳ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದನು. 2019ರಲ್ಲಿ ಪುನಃ ಮಕ್ಕಳ ಕಳ್ಳಸಾಗಣೆ ಆರೋಪದ ಮೇಲೆ ಬಂಧನಕ್ಕೊಳಗಾದ ಎಪ್‌ಸ್ಟೀನ್, ವಿಚಾರಣೆಗೆ ಮುನ್ನವೇ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಮೆರಿಕ ಸರ್ಕಾರ ಘೋಷಿಸಿತು. ಆದರೆ, ಈ ಸಾವಿನ ಸುತ್ತ ಇನ್ನೂ ಹಲವು ಅನುಮಾನಗಳಿವೆ.

ಜನವರಿ 30ರಂದು ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಸುಮಾರು 30 ಲಕ್ಷ ಪುಟಗಳ ದಾಖಲೆಗಳು ಜಗತ್ತನ್ನೇ ಬೆಚ್ಚಿಬೀಳುವಂತೆ ಮಾಡಿವೆ. ರಾಜಕೀಯ ನಾಯಕರು, ಬಿಲಿಯನೇರ್‌ಗಳು, ರಾಜಮನೆತನದವರು, ವಿಜ್ಞಾನಿಗಳು, ಉದ್ಯಮಿಗಳೆಂದರೆ ಯಾರೂ ಹೊರತಲ್ಲ. 80ಕ್ಕೂ ಹೆಚ್ಚು ಪ್ರಭಾವಿ ವ್ಯಕ್ತಿಗಳು ತನಿಖೆಗೆ ಒಳಗಾಗಿದ್ದು, ಯುರೋಪ್‌ನ ಹಲವೆಡೆ ರಾಜೀನಾಮೆ ಅಲೆ ಎದ್ದಿದೆ.

ಆದರೆ, ಎಪ್‌ಸ್ಟೀನ್ ಫೈಲ್‌ನಲ್ಲಿ ಹೆಸರು ಕಾಣಿಸಿಕೊಂಡ ಮಾತ್ರಕ್ಕೆ ಅಪರಾಧ ಸಾಬೀತಾಗುವುದಿಲ್ಲ ಎಂದು ಅಮೆರಿಕದ ನ್ಯಾಯಾಲಯ ಸ್ಪಷ್ಟಪಡಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಫೋಟೊ, ವಿಡಿಯೋ ಅಥವಾ ಹಣಕಾಸು ದಾಖಲೆಗಳಿದ್ದಾಗ ಮಾತ್ರ ಕಾನೂನು ಕ್ರಮ ಸಾಧ್ಯವೆಂದು ಹೇಳಿದೆ.

ಈ ಎಲ್ಲದ ನಡುವೆ, ಈ ಮಹಾ ಹಗರಣದ ನಿಜವಾದ ಬಲಿಪಶುಗಳು ನೂರಾರು ಅಪ್ರಾಪ್ತ ಬಾಲಕಿಯರು ಎಂಬ ಸತ್ಯ ಮಾತ್ರ ಬದಲಾಗಿಲ್ಲ. ಅಧಿಕಾರ, ಹಣ ಮತ್ತು ಪ್ರಭಾವದ ಅಡ್ಡೆಗೋಡೆಯ ಹಿಂದೆ ನಡೆದ ಈ ಅಮಾನುಷ ಕೃತ್ಯಗಳು ಇಂದು ಜಗತ್ತಿನ ಅಂತರಾತ್ಮವನ್ನೇ ಪ್ರಶ್ನಿಸುತ್ತಿವೆ.

Continue Reading

Trending