ದೇಶ
ಸಂಕ್ರಾಂತಿ ಸಂಭ್ರಮಕ್ಕೆ ಆತ್ಮೀಯತೆ ಹೆಚ್ಚಿಸಿದ ಸೂರ್ಯರಶ್ಮಿ ಸ್ಪರ್ಶ
ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿ (Sankranti) ದಿನದಂದು ಸೂರ್ಯ ತನ್ನ ಪಥವನ್ನು ಉತ್ತರಾಯಣಕ್ಕೆ ಬದಲಿಸಿದ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿರುವ ಕಾಶಿ ಚಂದ್ರಮೌಳೇಶ್ವರ ಸ್ವಾಮಿಯ (Chandramouleshwara Temple) ಗರ್ಭಗುಡಿಯ ಶಿವಲಿಂಗದ ಮೇಲೆ ಸೂರ್ಯರಶ್ಮಿ ನೇರವಾಗಿ ಸ್ಪರ್ಶಿಸಿದ ಅಪರೂಪದ ದೈವಿಕ ಘಟನೆ ನಡೆದಿದೆ.
ಪ್ರತಿ ವರ್ಷ ಸಂಕ್ರಾಂತಿ ದಿನದಂದು ಸೂರ್ಯರಶ್ಮಿ ಶಿವಲಿಂಗದ ಮೇಲೆ ಬೀಳುವ ಪ್ರತೀತಿ ಇಲ್ಲಿದೆ. ಅದರಂತೆ ಈ ವರ್ಷವೂ ಬೆಳಗ್ಗೆ 7.50 ಗಂಟೆಯ ಸುಮಾರಿಗೆ ಸೂರ್ಯನ ಕಿರಣಗಳು ನೇರವಾಗಿ ಶಿವಲಿಂಗವನ್ನು ತಲುಪಿದವು. ಈ ದೃಶ್ಯವನ್ನು ಕಂಡ ಭಕ್ತರು ಭಕ್ತಿಭಾವದಲ್ಲಿ ಮುಳುಗಿ ದೈವಿಕ ಅನುಭವ ಪಡೆದರು.
ಸೂರ್ಯರಶ್ಮಿ ಶಿವಲಿಂಗದ ಮೇಲೆ ಬೀಳುತ್ತಿದ್ದಂತೆಯೇ, ಚಂದ್ರವನ ಆಶ್ರಮದ ಪೀಠಾಧ್ಯಕ್ಷರಾದ ಮಹಾಂತ ಶಿವಯೋಗಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಕಾಶಿ ಚಂದ್ರಮೌಳೇಶ್ವರ ಸ್ವಾಮಿಗೆ ವಿವಿಧ ರೀತಿಯ ಅಭಿಷೇಕಗಳು ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ವೇದಘೋಷ, ಮಂತ್ರೋಚ್ಚಾರಣೆಗಳ ನಡುವೆ ಪೂಜಾ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.
ಈ ವಿಶೇಷ ಕ್ಷಣವನ್ನು ಕಣ್ತುಂಬಿಕೊಂಡ ಭಕ್ತರು ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಸಂಕ್ರಾಂತಿ ದಿನ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವುದು ಶುಭ ಸೂಚಕ ಎಂದು ಭಕ್ತರು ನಂಬಿಕೆ ಇಟ್ಟುಕೊಂಡಿದ್ದು, ಈ ಕಾರಣಕ್ಕೆ ಚಂದ್ರವನ ಆಶ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.
ಈ ದೈವಿಕ ಘಟನೆ ಸಂಕ್ರಾಂತಿ ಹಬ್ಬಕ್ಕೆ ಮತ್ತಷ್ಟು ಆಧ್ಯಾತ್ಮಿಕ ಮಹತ್ವ ನೀಡಿದೆ.
ಅಪರಾಧ
ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.
ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.
ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.
ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ದೇಶ
LATEST NEWS “ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ”: ಅಮೆರಿಕಾ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ
ನವದೆಹಲಿ: ಅಮೆರಿಕದೊಂದಿಗೆ ನಡೆದ ವ್ಯಾಪಾರ ಒಪ್ಪಂದದ ಕುರಿತು ಲೋಕಸಭೆಯಲ್ಲಿ ಬಜೆಟ್ ಚರ್ಚೆಯ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಭಾರತ ಯಾರಿಂದ ತೈಲ ಖರೀದಿಸಬೇಕು ಎಂಬುದನ್ನೂ ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡು ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲವೇ?” ಎಂದು ಪ್ರಶ್ನಿಸಿದರು.
ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಂಡಿರುವುದು ಸರ್ಕಾರದ ಶರಣಾಗತಿ ರಾಜಕೀಯ ಎಂದು ಅವರು ಆರೋಪಿಸಿದರು. ಈ ಹಿಂದೆ ಭಾರತದ ಉತ್ಪನ್ನಗಳಿಗೆ 3% ಟ್ಯಾರಿಫ್ ಇದ್ದದ್ದು, ಈಗ ಅದನ್ನು 18%ಕ್ಕೆ ಏರಿಸಲಾಗಿದೆ. ಇದನ್ನು ಸರ್ಕಾರ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಟೀಕಿಸಿದರು.
ಟೆಕ್ಸ್‌ಟೈಲ್ ವಸ್ತುಗಳಿಗೆ ಭಾರತಕ್ಕೆ 18% ಟ್ಯಾರಿಫ್ ವಿಧಿಸಿರುವಾಗ, ಬಾಂಗ್ಲಾದೇಶಕ್ಕೆ 0% ಟ್ಯಾರಿಫ್ ನೀಡಲಾಗಿದೆ. “ಇದು ಭಾರತೀಯ ಕೈಗಾರಿಕೆಗಳಿಗೆ ಹಿನ್ನಡೆಯಾಗಿದೆ. ಟ್ರಂಪ್ ಮೋದಿ ಮೇಲೆ ಬಿಗಿಪಟ್ಟು ಹಾಕಿದ್ದಾರೆ” ಎಂದು ಹೇಳಿದರು.
ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ನಿಂದ 146 ಬಿಲಿಯನ್ ಡಾಲರ್‌ಗೆ ಏರಿಕೆಯಾಗಲಿದೆ ಎಂದು ಹೇಳಿದ ರಾಹುಲ್, “ಅಮೆರಿಕಕ್ಕೆ ಭಾರತದ ಬಗ್ಗೆ ಬದ್ಧತೆ ಇಲ್ಲ. ಆದರೆ ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿದೆ. ನಾವು ಮೂರ್ಖರಂತೆ ನಿಂತಿದ್ದೇವೆ” ಎಂದು ಕಿಡಿಕಾರಿದರು.
ದೇಶ
BIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
ಹೊಸದಿಲ್ಲಿ: ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 10ಕ್ಕೂ ಹೆಚ್ಚು ಕೇಂದ್ರ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ತಿಳಿಸಿದ್ದಾರೆ.
600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಷ್ಕರದ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬ್ಯಾಂಕ್, ವಿಮಾ, ರಕ್ಷಣಾ, ರೈಲ್ವೆ, ಬಂದರು, ವಿಮಾನಯಾನ ಹಾಗೂ ವಿವಿಧ ಗುತ್ತಿಗೆ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ಸಹ ಪ್ರತಿಭಟನೆಗಳಲ್ಲಿ ಭಾಗಿಯಾಗಲಿವೆ.
ನವೆಂಬರ್ 2025ರಲ್ಲಿ ಸೂಚಿಸಲಾದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘಟನೆಗಳು ಮುಂದಿಟ್ಟಿವೆ. ಒಡಿಶಾ ಮತ್ತು ಅಸ್ಸಾಂ ರಾಜ್ಯಗಳು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶಾಲೆ-ಕಾಲೇಜುಗಳ ಮುಚ್ಚುವಿಕೆ ಕುರಿತು ಅಧಿಕೃತ ಘೋಷಣೆ ಇಲ್ಲದಿದ್ದರೂ, ಕೆಲವು ರಾಜ್ಯಗಳಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಸಾರ್ವಜನಿಕ ಸಾರಿಗೆ ಸೇವೆಗಳು ಅಸ್ತವ್ಯಸ್ತವಾಗಬಹುದು. ಆದರೆ ಹಾಲು, ಆಸ್ಪತ್ರೆ, ಮೆಡಿಕಲ್, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.
-
ದೇಶ9 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ದೇಶ2 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ಚುನಾವಣೆ9 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ9 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ದೇಶ9 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ಕ್ರೀಡೆ2 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ9 hours agoಹಿರಿಯ ಪತ್ರಕರ್ತ ಹಾಗೂ ಮಾಜಿ ಎಂಎಲ್ಸಿ ಪಿ. ರಾಮಯ್ಯ ನಿಧನ: ಪತ್ರಿಕೋದ್ಯಮದ ‘ತಪಸ್ವಿ’ಗೆ ಅಂತಿಮ ವಿದಾಯ
-
ದೇಶ2 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
