ಅಪರಾಧ
ಸ್ಲೀಪರ್ ಬಸ್‌ಗೆ ಬೆಂಕಿ: 40 ಪ್ರಯಾಣಿಕರು ಅದೃಷ್ಟವಶಾತ್ ಪಾರು
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಹಾಗೂ ಸೂಡೂರು ಗೇಟ್ ಸಮೀಪ ಭಾನುವಾರ ಭಾರೀ ಅವಘಡವೊಂದು ಸಂಭವಿಸಿದೆ. ಖಾಸಗಿ ಸ್ಲೀಪರ್ ಬಸ್‌ವೊಂದು ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅನ್ನಪೂರ್ಣೇಶ್ವರಿ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಬಸ್ ನಿಟ್ಟೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಚಾಲಕ ಮತ್ತು ಕ್ಲೀನರ್ ಸೇರಿ ಸುಮಾರು 40 ಮಂದಿ ಪ್ರಯಾಣಿಕರು ಬಸ್‌ನಲ್ಲಿ ಇದ್ದರು. ನಿಟ್ಟೂರಿನಿಂದ ಅರಸಾಳು ಕಡೆಗೆ ಸಾಗುತ್ತಿದ್ದಾಗ ಬಸ್‌ನ ಎಂಜಿನ್ ಭಾಗದಲ್ಲಿ ಅಚಾನಕ್ ಹೊಗೆ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಹೊಗೆ ಭಾರೀ ಬೆಂಕಿಯಾಗಿ ಮಾರ್ಪಟ್ಟಿದ್ದು, ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ.
ಅಪಾಯವನ್ನು ಅರಿತ ಚಾಲಕ ತಕ್ಷಣವೇ ಬಸ್ ಅನ್ನು ರಸ್ತೆ ಬದಿಗೆ ತಿರುಗಿಸಲು ಯತ್ನಿಸಿದ್ದು, ಈ ವೇಳೆ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ಬೆಂಕಿ ವ್ಯಾಪಕವಾಗುತ್ತಿದ್ದಂತೆ ಚಾಲಕ ಮತ್ತು ಕ್ಲೀನರ್ ತಕ್ಷಣ ತುರ್ತು ನಿರ್ಗಮನ ವ್ಯವಸ್ಥೆ ತೆರೆದಿದ್ದಾರೆ. ಪ್ರಯಾಣಿಕರು ಡೋರ್ ಮತ್ತು ಕಿಟಕಿಗಳ ಮೂಲಕ ತಕ್ಷಣ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಅವಘಡದಲ್ಲಿ ಬಸ್ ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ಅಲ್ಲದೆ ಬಸ್‌ನಿಂದ ಇಳಿಯುವ ಸಂದರ್ಭದಲ್ಲಿ 5–6 ಪ್ರಯಾಣಿಕರಿಗೆ ಸಣ್ಣ ಗಾಯಗಳು ಉಂಟಾಗಿವೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಸ್‌ಗೆ ಬೆಂಕಿ ಹೊತ್ತಿಕೊಂಡ ಕಾರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಅವಘಡವು ಮತ್ತೊಮ್ಮೆ ಖಾಸಗಿ ಬಸ್‌ಗಳ ಸುರಕ್ಷತೆ ಕುರಿತು ಪ್ರಶ್ನೆ ಎತ್ತಿದೆ.
ಅಪರಾಧ
KANPUR ಲ್ಯಾಂಬೋರ್ಗಿನಿ ಅಪಘಾತ: ಕೆಕೆ ಮಿಶ್ರಾ ಪುತ್ರ ಶಿವಂ ಬಂಧನ
ಲಕ್ನೋ: ಕಾನ್ಪುರದಲ್ಲಿ ಇತ್ತೀಚೆಗೆ ನಡೆದ ಲ್ಯಾಂಬೋರ್ಗಿನಿ (Lamborghini Revuelto) ಕಾರು ಅಪಘಾತ ಪ್ರಕರಣದಲ್ಲಿ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್ಪುರದ ವಿಐಪಿ ರಸ್ತೆಯಲ್ಲಿ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಶಿವಂ ಮಿಶ್ರಾ ಕುಡಿದ ಮತ್ತಿನಲ್ಲಿ ಅತಿ ವೇಗದಲ್ಲಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.
ವೇಗವಾಗಿ ಬಂದ ಕಾರು ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಗುದ್ದಿತ್ತು. ಬೈಕ್ ಕಾರಿನ ಕೆಳಗೆ ಸಿಲುಕಿ ಕೆಲ ಅಂತರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು. ಗಾಯಗೊಂಡವರಲ್ಲಿ ತೌಫಿಕ್ ಅಹ್ಮದ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಮೂಳೆ ಮುರಿತ ಉಂಟಾಗಿದೆ.
ಪ್ರಾರಂಭದಲ್ಲಿ ಕುಟುಂಬದ ವಕೀಲರು ಡ್ರೈವರ್ ಮೋಹನ್ ಕಾರು ಚಲಾಯಿಸುತ್ತಿದ್ದರೆಂದು ಹೇಳಿದ್ದರೂ, ಸಿಸಿಟಿವಿ ದೃಶ್ಯಾವಳಿ ಚಾಲಕನ ಸೀಟಿನಲ್ಲಿ ಶಿವಂ ಮಿಶ್ರಾ ಇದ್ದುದನ್ನು ಸ್ಪಷ್ಟಪಡಿಸಿದೆ. ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
ಅಪರಾಧ
CRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಫೆ.11ರಂದು ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಚ್ಎಎಲ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 12.45ರ ವೇಳೆಗೆ ಕಾರು ಮತ್ತು ಗೂಡ್ಸ್ ವಾಹನ ಟಚ್ ಆದ ವಿಚಾರಕ್ಕೆ ಚಾಲಕರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಗೂಡ್ಸ್ ವಾಹನ ಚಾಲಕ ನಂಜುಂಡ ಕಾರಿನ ಮುಂದೆ ನಿಂತು ನಷ್ಟಪೂರೈಕೆ ಕೇಳಿದ್ದಾನೆ. ಆದರೆ ಕಾರು ಚಾಲಕ ಏಕಾಏಕಿ ವಾಹನ ಚಲಾಯಿಸಿದ್ದು, ನಂಜುಂಡ ಬಾನೆಟ್ ಮೇಲೆ ಬಿದ್ದರೂ ಸುಮಾರು 1 ಕಿ.ಮೀ ಹೆಚ್ಚು ದೂರ ಕಾರು ನಿಲ್ಲಿಸದೆ ಚಲಾಯಿಸಿದ್ದಾನೆ. ಟ್ರಿನಿಟಿ ಜಂಕ್ಷನ್‌ನಿಂದ ಸಿಬಿ ಜಂಕ್ಷನ್ ಹಾಗೂ ASC ಸೆಂಟರ್ ಕಾಲೇಜು ವರೆಗೆ ಕಾರು ಸಾಗಿದ ದೃಶ್ಯ ರಸ್ತೆಬದಿ ಜನರನ್ನು ಬೆಚ್ಚಿಬೀಳುವಂತೆ ಮಾಡಿತು. ಕೆಲವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇತರೆ ವಾಹನ ಚಾಲಕರು ಅಡ್ಡಹಾಕಿದ ಬಳಿಕ ಕಾರು ನಿಲ್ಲಿಸಲಾಯಿತು.
ಕಾರು ಚಾಲಕ ಬಂಧನ
ಪೊಲೀಸರು ಕಾರು ಚಾಲಕನನ್ನು ಪುಲಕೇಶಿ ನಗರದ 52 ವರ್ಷದ ಸುರೇಶ್ ಎಂದು ಗುರುತಿಸಿದ್ದಾರೆ. ಘಟನೆಯ ವೇಳೆ ಕಾರಿನಲ್ಲಿ ಪತ್ನಿಯೂ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ (Attempt to Murder) ಅಡಿಯಲ್ಲಿ ಆರೋಪಿಯನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತನಿಖೆಯಲ್ಲಿ ಸುರೇಶ್ ವಿರುದ್ಧ ಈ ಹಿಂದೆಯೂ ಅತಿವೇಗ ಚಾಲನೆ ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಇರುವುದಾಗಿ ತಿಳಿದುಬಂದಿದೆ.
ರಾಜಧಾನಿಯಲ್ಲಿ ಹೆಚ್ಚುತ್ತಿರುವ ರೋಡ್ ರೇಜ್
ಇತ್ತೀಚೆಗೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ರೋಡ್ ರೇಜ್ ಪ್ರಕರಣದಲ್ಲಿ ಕಾರು ಚಾಲಕ ತನ್ನ ಸ್ನೇಹಿತನನ್ನೇ ಗೋಡೆ ಹಾಗೂ ಮರಕ್ಕೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿದ್ದ ಘಟನೆ ಸ್ಮರಣೀಯವಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಘಟನೆಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿವೆ.
-
ಬೆಂಗಳೂರು4 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ23 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ21 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ22 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ21 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ಅಪರಾಧ22 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ20 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ22 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
