Connect with us

ದೇಶ

ಮೃಗಾಲಯದ ಪ್ರಮುಖ ಆಕರ್ಷಣೆ ಯುವರಾಜ ನಿಧನ

ಮೈಸೂರು, ಜ.29: ಮೈಸೂರು ಮೃಗಾಲಯದ ಅತ್ಯಂತ ಹಿರಿಯ ಮತ್ತು ಜನಪ್ರಿಯ ಜಿರಾಫೆ ‘ಯುವರಾಜ’ ಇಂದು ಕೊನೆಯುಸಿರೆಳೆದಿದ್ದು, ಪ್ರವಾಸಿಗರ ಹಾಗೂ ಮೃಗಾಲಯ ಅಭಿಮಾನಿಗಳ ಹೃದಯದಲ್ಲಿ ಗಂಭೀರ ಬೇಸರ ಮೂಡಿಸಿದೆ. 25 ವರ್ಷಗಳ ಕಾಲ ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಯುವರಾಜ ವಯೋಸಹಜ ಕಾಯಿಲೆಯಿಂದ ನಿಧನರಾದರು.

ಡಿಸೆಂಬರ್ 7, 2001ರಂದು ಮೈಸೂರು ಮೃಗಾಲಯದಲ್ಲಿ ಜನಿಸಿದ ಯುವರಾಜ, 1987ರಲ್ಲಿ ಜರ್ಮನಿಯ ಮೃಗಾಲಯದಿಂದ ಮೈಸೂರಿಗೆ ಬಂದ ಹೆನ್ರಿ ಮತ್ತು ಹನಿ ಜಿರಾಫೆ ದಂಪತಿಗಳ ಮರಿ. ಹುಟ್ಟಿನಿಂದಲೇ ಮೃಗಾಲಯದ ಸಿಬ್ಬಂದಿ ಯುವರಾಜನನ್ನು ಅತ್ಯಂತ ಪ್ರೀತಿಯಿಂದ ಪೋಷಿಸಿದರು. ಪ್ರವಾಸಿಗರು, ವಿಶೇಷವಾಗಿ ಮಕ್ಕಳು, ಯುವರಾಜನ ಎತ್ತರದ ನಿಲುವು ಮತ್ತು ಶಾಂತ ಸ್ವಭಾವವನ್ನು ಮೆಚ್ಚಿದ್ದರು.

ಜಿರಾಫೆಗಳ ಸರಾಸರಿ ಜೀವನಾವಧಿ 20–25 ವರ್ಷಗಳಿರುವುದು ಗಮನಿಸಿದರೆ, ಯುವರಾಜ ತನ್ನ ಜೀವಿತಾವಧಿಯ ಗರಿಷ್ಠ ಮಿತಿಯವರೆಗೆ ಬದುಕಿ ಮೃಗಾಲಯದ ಇತಿಹಾಸದಲ್ಲಿ ನೆನಪಿನ ಸಂಕೇತವಾಯಿತು. ಮೃಗಾಲಯದ ಸಿಬ್ಬಂದಿ ಹಾಗೂ ಲಕ್ಷಾಂತರ ಅಭಿಮಾನಿಗಳು ಅವನನ್ನು ಮಿಸ್ ಮಾಡಿಕೊಳ್ಳಲಿದ್ದಾರೆ.

ಚಾಮರಾಜೇಂದ್ರ ಮೃಗಾಲಯವು ದೇಶದಲ್ಲೇ ಅತಿ ಹೆಚ್ಚು ಜಿರಾಫೆಗಳನ್ನು ಹೊಂದಿರುವ ಮತ್ತು ಅವರ ಸಂತಾನೋತ್ಪತ್ತಿಯಲ್ಲಿ ಯಶಸ್ವಿಯಾದ ಮೃಗಾಲಯಗಳಲ್ಲಿ ಒಂದಾಗಿದೆ. ಸದ್ಯ 7–8 ಜಿರಾಫೆಗಳು ಇವೆ, ಅವುಗಳಲ್ಲಿ ಕೃಷ್ಣ, ಸುಧೀರ್, ಬಬೂಲಿ, ಭರತ್ ಸೇರಿದ್ದಾರೆ. ಈ ಜಿರಾಫೆಗಳು ದಕ್ಷಿಣ ಆಫ್ರಿಕಾ ಮತ್ತು ಜರ್ಮನಿಯ ತಳಿಗಳ ವಂಶಸ್ಥರಾಗಿದ್ದು, ಸಂತಾನೋತ್ಪತ್ತಿ ಪರಿಣಾಮವಾಗಿ ಹೈದರಾಬಾದ್, ಅಹಮದಾಬಾದ್ ಮತ್ತು ಚೆನ್ನೈನ ಮೃಗಾಲಯಗಳಿಗೆ ಪ್ರಾಣಿ ವಿನಿಮಯ ಯೋಜನೆಯಡಿ ನೀಡಲಾಗುತ್ತದೆ.

ಯುವರಾಜನ ಅಗಲಿಕೆಯ ನಂತರ, ಕೃಷ್ಣ ಮತ್ತು ಇತರ ಯುವ ಜಿರಾಫೆಗಳು ಅವನ ಸ್ಥಾನವನ್ನು ತುಂಬಲಿವೆ. ಪ್ರತಿದಿನ ಅವುಗಳಿಗೆ 50–60 ಕೆಜಿ ಹಸಿರು ಮೇವು, ಆಲದ ಎಲೆಗಳು ಮತ್ತು ವಿಶೇಷ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಮೈಸೂರಿನ ಮೃಗಾಲಯವು ಜಿರಾಫೆಗಳ ಸಂರಕ್ಷಣೆಗಾಗಿ ವಿಭಿನ್ನ ಆವರಣ ವ್ಯವಸ್ಥೆ ಹೊಂದಿದ್ದು, ಪ್ರವಾಸಿಗರಿಗೆ ಜಿರಾಫೆ ಕುಟುಂಬವನ್ನು ಆನೆಯ ಆವರಣದ ಸಮೀಪದಲ್ಲಿ ವೀಕ್ಷಿಸಲು ಅವಕಾಶ ಇದೆ.

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ದೇಶ

LATEST NEWS “ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ”: ಅಮೆರಿಕಾ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ: ಅಮೆರಿಕದೊಂದಿಗೆ ನಡೆದ ವ್ಯಾಪಾರ ಒಪ್ಪಂದದ ಕುರಿತು ಲೋಕಸಭೆಯಲ್ಲಿ ಬಜೆಟ್ ಚರ್ಚೆಯ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಭಾರತ ಯಾರಿಂದ ತೈಲ ಖರೀದಿಸಬೇಕು ಎಂಬುದನ್ನೂ ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡು ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲವೇ?” ಎಂದು ಪ್ರಶ್ನಿಸಿದರು.

ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಂಡಿರುವುದು ಸರ್ಕಾರದ ಶರಣಾಗತಿ ರಾಜಕೀಯ ಎಂದು ಅವರು ಆರೋಪಿಸಿದರು. ಈ ಹಿಂದೆ ಭಾರತದ ಉತ್ಪನ್ನಗಳಿಗೆ 3% ಟ್ಯಾರಿಫ್ ಇದ್ದದ್ದು, ಈಗ ಅದನ್ನು 18%ಕ್ಕೆ ಏರಿಸಲಾಗಿದೆ. ಇದನ್ನು ಸರ್ಕಾರ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಟೀಕಿಸಿದರು.

ಟೆಕ್ಸ್‌ಟೈಲ್ ವಸ್ತುಗಳಿಗೆ ಭಾರತಕ್ಕೆ 18% ಟ್ಯಾರಿಫ್ ವಿಧಿಸಿರುವಾಗ, ಬಾಂಗ್ಲಾದೇಶಕ್ಕೆ 0% ಟ್ಯಾರಿಫ್ ನೀಡಲಾಗಿದೆ. “ಇದು ಭಾರತೀಯ ಕೈಗಾರಿಕೆಗಳಿಗೆ ಹಿನ್ನಡೆಯಾಗಿದೆ. ಟ್ರಂಪ್ ಮೋದಿ ಮೇಲೆ ಬಿಗಿಪಟ್ಟು ಹಾಕಿದ್ದಾರೆ” ಎಂದು ಹೇಳಿದರು.

ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ನಿಂದ 146 ಬಿಲಿಯನ್ ಡಾಲರ್‌ಗೆ ಏರಿಕೆಯಾಗಲಿದೆ ಎಂದು ಹೇಳಿದ ರಾಹುಲ್, “ಅಮೆರಿಕಕ್ಕೆ ಭಾರತದ ಬಗ್ಗೆ ಬದ್ಧತೆ ಇಲ್ಲ. ಆದರೆ ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿದೆ. ನಾವು ಮೂರ್ಖರಂತೆ ನಿಂತಿದ್ದೇವೆ” ಎಂದು ಕಿಡಿಕಾರಿದರು.

Continue Reading

ದೇಶ

BIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್‌, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 10ಕ್ಕೂ ಹೆಚ್ಚು ಕೇಂದ್ರ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ತಿಳಿಸಿದ್ದಾರೆ.

600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಷ್ಕರದ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬ್ಯಾಂಕ್‌, ವಿಮಾ, ರಕ್ಷಣಾ, ರೈಲ್ವೆ, ಬಂದರು, ವಿಮಾನಯಾನ ಹಾಗೂ ವಿವಿಧ ಗುತ್ತಿಗೆ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ಸಹ ಪ್ರತಿಭಟನೆಗಳಲ್ಲಿ ಭಾಗಿಯಾಗಲಿವೆ.

ನವೆಂಬರ್ 2025ರಲ್ಲಿ ಸೂಚಿಸಲಾದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘಟನೆಗಳು ಮುಂದಿಟ್ಟಿವೆ. ಒಡಿಶಾ ಮತ್ತು ಅಸ್ಸಾಂ ರಾಜ್ಯಗಳು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶಾಲೆ-ಕಾಲೇಜುಗಳ ಮುಚ್ಚುವಿಕೆ ಕುರಿತು ಅಧಿಕೃತ ಘೋಷಣೆ ಇಲ್ಲದಿದ್ದರೂ, ಕೆಲವು ರಾಜ್ಯಗಳಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಸಾರ್ವಜನಿಕ ಸಾರಿಗೆ ಸೇವೆಗಳು ಅಸ್ತವ್ಯಸ್ತವಾಗಬಹುದು. ಆದರೆ ಹಾಲು, ಆಸ್ಪತ್ರೆ, ಮೆಡಿಕಲ್‌, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.

Continue Reading

Trending