ದೇಶ
L R Shivaramegowda ಅವಾಚ್ಯ ಪದ ಬಳಕೆ ಆರೋಪ: ಮಂಡ್ಯ ಕಾಂಗ್ರೆಸ್ನಿಂದ ಶಿಸ್ತು ಕ್ರಮಕ್ಕೆ ಒತ್ತಾಯ
ಮಂಡ್ಯ, ಫೆಬ್ರವರಿ 2: ಮಾಜಿ ಸಂಸದ, ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ವಕ್ತಾರ ಎಲ್.ಆರ್. ಶಿವರಾಮೇಗೌಡ (LR Shivaramegowda) ಅವರಿಗೆ ಆಡಿಯೋ ವೈರಲ್ ಪ್ರಕರಣ ತೀವ್ರ ರಾಜಕೀಯ ಸಂಕಷ್ಟವನ್ನು ತಂದಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ಒಂದು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರೇ ಶಿವರಾಮೇಗೌಡ ವಿರುದ್ಧ ತಕ್ಷಣ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಕಾರ್ಯಕರ್ತನೊಬ್ಬನೊಂದಿಗೆ ನಡೆದ ಫೋನ್ ಕರೆ ಸಂಭಾಷಣೆ ಎಂದು ಹೇಳಲಾಗುತ್ತಿರುವ ಆಡಿಯೋದಲ್ಲಿ, ನಟ ದಿ. ಅಂಬರೀಶ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಂಸದ ಮಾದೇಗೌಡ ಸೇರಿದಂತೆ ಹಲವು ನಾಯಕರ ವಿರುದ್ಧ ಅವಾಚ್ಯ ಪದಗಳನ್ನು ಬಳಸಲಾಗಿದೆ ಎನ್ನಲಾಗಿದೆ. ಅಲ್ಲದೆ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧವೂ ಟೀಕಾತ್ಮಕ ಹಾಗೂ ಅವಾಚ್ಯ ಹೇಳಿಕೆಗಳು ಇರುವುದಾಗಿ ಆರೋಪಿಸಲಾಗಿದೆ. ಈ ವಿಷಯ ಕಾಂಗ್ರೆಸ್ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರಿಗೆ ಪತ್ರ ಬರೆದು, ಪಕ್ಷದ ಗೌರವಕ್ಕೆ ಧಕ್ಕೆಯುಂಟುಮಾಡಿರುವ ಈ ಪ್ರಕರಣದಲ್ಲಿ ಶಿವರಾಮೇಗೌಡ ವಿರುದ್ಧ ತಕ್ಷಣ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪಕ್ಷದ ಹಿರಿಯ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ ಸಹಿಸಲಾಗದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಎಲ್.ಆರ್. ಶಿವರಾಮೇಗೌಡ, ಈ ಆಡಿಯೋ ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ನಕಲಿ ಆಡಿಯೋ ಎಂದು ಹೇಳಿ, ಇದು ತನ್ನ ವಿರುದ್ಧದ ಷಡ್ಯಂತ್ರ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ಹೇಳಿಕೆಯನ್ನು ಒಪ್ಪಲು ಮಂಡ್ಯದ ಕಾಂಗ್ರೆಸ್ ನಾಯಕರು ಸಿದ್ಧರಾಗಿಲ್ಲ.
ಗಮನಾರ್ಹವೆಂದರೆ, ಶಿವರಾಮೇಗೌಡ ಜೆಡಿಎಸ್ನಲ್ಲಿದ್ದಾಗಲೂ ಇದೇ ರೀತಿಯ ಆಡಿಯೋ ವಿವಾದ ಎದುರಿಸಿ, ಆಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದರು. ಇದೀಗ ಕಾಂಗ್ರೆಸ್ನಲ್ಲಿಯೂ ಇದೇ ವಿವಾದ ಮರುಕಳಿಸಿರುವುದರಿಂದ, ಶಿವರಾಮೇಗೌಡರಿಗೆ ಕಾಂಗ್ರೆಸ್ನಿಂದಲೂ ಗೇಟ್ ಪಾಸ್ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಯಾವ ರೀತಿಯ ಕಠಿಣ ಕ್ರಮ ಕೈಗೊಳ್ಳಲಿದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ದೇಶ
ಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್ಗಟ್ಟಲೆ ಇಮೇಲ್ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ ಕೆಲವು ಭಾರತೀಯರ ಹೆಸರುಗಳು ಕಾಣಿಸಿಕೊಂಡಿರುವುದು ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಹೆಸರು ಉಲ್ಲೇಖವಾಗಿರುವುದಾಗಿ ವರದಿಯಾಗುತ್ತಿದ್ದಂತೆಯೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನೊಳಗೂ ಹೊರಗೂ ಮಾತನಾಡಿದ ಅವರು, ಎಪ್ಸ್ಟೀನ್ ಪ್ರಕರಣದ ಉಲ್ಲೇಖದೊಂದಿಗೆ ಕೇಂದ್ರ ಸರ್ಕಾರವನ್ನು ಟೀಕಿಸಿದರು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಹರ್ದೀಪ್ ಪುರಿ, “ನಾನು ಜೆಫ್ರಿ ಎಪ್ಸ್ಟೀನ್ ಅವರನ್ನು ಕೆಲವೇ ಬಾರಿ, ಅದೂ ಔಪಚಾರಿಕ ಸಂದರ್ಭಗಳಲ್ಲಿ ಮಾತ್ರ ಭೇಟಿ ಮಾಡಿದ್ದೇನೆ. ಅವರ ಅಕ್ರಮ ಚಟುವಟಿಕೆಗಳಿಗೆ ನನ್ನೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.
ಮೂರು ಮಿಲಿಯನ್ ಇಮೇಲ್ಗಳಲ್ಲಿ ತಮ್ಮ ಹೆಸರು ಕೇವಲ 3-4 ಬಾರಿ ಮಾತ್ರ ಉಲ್ಲೇಖವಾಗಿದೆ. ನಿಯೋಗದ ಭಾಗವಾಗಿ ಕೆಲ ಸಂದರ್ಭಗಳಲ್ಲಿ ಭೇಟಿಯಾಗಿದ್ದು, ಕೇವಲ ಒಂದು ಇಮೇಲ್ ವಿನಿಮಯ ಮಾಡಿಕೊಂಡಿದ್ದೇನೆ ಅಷ್ಟೇ ಹೊರತು, ಯಾವುದೇ ಅಕ್ರಮ ಸಂಬಂಧ ಇಲ್ಲ ಎಂದು ಹೇಳಿದರು.
ಇದೇ ವೇಳೆ, 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ಕುರಿತ ಉಲ್ಲೇಖಗಳನ್ನೂ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. “ಇದು ಅಧಿಕೃತ ಭೇಟಿಯೇ ಹೊರತು, ಉಳಿದ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಕಲ್ಪನೆಗಳಾಗಿವೆ” ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಎಪ್ಸ್ಟೀನ್ ಫೈಲ್ಸ್ ಪ್ರಕರಣ ಇದೀಗ ಭಾರತೀಯ ರಾಜಕೀಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.
ಕ್ರೀಡೆ
JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್ಬಾಲ್ ಹಬ್ಬ
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.
ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.
ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.
ಮೂರನೇ ಪಂದ್ಯದಲ್ಲಿ ಎಸ್ಆರ್ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್ಪಿಎಸ್ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.
ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.
ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.
ಆರನೇ ಪಂದ್ಯದಲ್ಲಿ ಎಲ್ಎನ್ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.
ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.
ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ದೇಶ
LATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು (Kiren Rijiju) ತಿಳಿಸಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ‘ಭಾರತ ಮಾತೆಯನ್ನು ಮಾರಿಬಿಟ್ಟಿದೆ’ ಎಂದು ಆರೋಪಿಸಿದ್ದರು. ಭಾರತ–ಅಮೆರಿಕ ವಾಣಿಜ್ಯ ಒಪ್ಪಂದವನ್ನು ‘ಸಂಪೂರ್ಣ ಶರಣಾಗತಿ’ ಎಂದು ಟೀಕಿಸಿದ ಅವರು, ದೇಶದ ಶಕ್ತಿ ಸುರಕ್ಷತೆ ಅಮೆರಿಕಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜುಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು. ಗಂಭೀರ ಆರೋಪ ಮಾಡಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಮತ್ತು ಪುರಾವೆ ಸಲ್ಲಿಸಬೇಕು. ಆದರೆ ರಾಹುಲ್ ಗಾಂಧಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡಿದ್ದಾರೆ,” ಎಂದು ರಿಜುಜು ಹೇಳಿದರು.
ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ದಾಖಲಾಗಿರುವ ತಪ್ಪು ಹೇಳಿಕೆಗಳು ಮತ್ತು ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ರಿಜುಜು ತಿಳಿಸಿದರು.
ಈ ಬೆಳವಣಿಗೆಗಳ ನಡುವೆ ಸಂಸತ್ ಕಲಾಪದಲ್ಲಿ ಮತ್ತಷ್ಟು ರಾಜಕೀಯ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇದೆ.
-
ದೇಶ6 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ13 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ12 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ5 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ13 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ದೇಶ13 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ಕ್ರೀಡೆ6 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ಅಪರಾಧ5 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
