ಕ್ರೀಡೆ
ಭಾರತ ವಿರುದ್ಧ ಪಂದ್ಯ ಆಡಲ್ಲ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಘೋಷಣೆ
ಇಸ್ಲಾಮಾಬಾದ್ :
ಭಾರತದ ವಿರುದ್ಧ ನಡೆಯಬೇಕಿದ್ದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತೆ ದೃಢಪಡಿಸಿದ್ದಾರೆ. ಫೆಬ್ರವರಿ 15ರಂದು ಶ್ರೀಲಂಕಾದಲ್ಲಿ ನಡೆಯಲಿರುವ ಪಂದ್ಯವನ್ನು ಪಾಕಿಸ್ತಾನ ಆಡದು ಎಂಬುದು ದೇಶದ ಅಧಿಕೃತ ನಿಲುವಾಗಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಇಸ್ಲಾಮಾಬಾದ್‌ನಲ್ಲಿ ನಡೆದ ಫೆಡರಲ್ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಶೆಹಬಾಜ್ ಷರೀಫ್, “ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬುದರಲ್ಲಿ ನಾವು ಸ್ಪಷ್ಟ ನಿರ್ಧಾರ ತೆಗೆದುಕೊಂಡಿದ್ದೇವೆ. ಎಲ್ಲ ಆಯಾಮಗಳಿಂದ ಚರ್ಚಿಸಿದ ಬಳಿಕವೇ ಈ ತೀರ್ಮಾನಕ್ಕೆ ಬಂದಿದ್ದೇವೆ” ಎಂದು ಹೇಳಿದರು. ಕ್ರೀಡೆಯಲ್ಲಿ ರಾಜಕೀಯ ಇರಬಾರದು ಎಂಬ ಮಾತು ಹೇಳಿದರೂ, ಈ ನಿರ್ಧಾರ ಸೂಕ್ತವೆಂದು ಅವರು ಸಮರ್ಥಿಸಿಕೊಂಡರು.
ಈ ಹಿಂದೆ ಪಾಕಿಸ್ತಾನ ಸರ್ಕಾರ ಯಾವುದೇ ಕಾರಣ ತಿಳಿಸದೇ, ಭಾರತ ವಿರುದ್ಧದ ಲೀಗ್ ಹಂತದ ಪಂದ್ಯಗಳನ್ನು ಬಹಿಷ್ಕರಿಸುವುದಾಗಿ X (ಟ್ವಿಟರ್) ನಲ್ಲಿ ಘೋಷಿಸಿತ್ತು. ಇದರಿಂದ ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆ ಉಂಟಾಗಿತ್ತು.
ಈ ಬೆಳವಣಿಗೆಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಪ್ರತಿಕ್ರಿಯೆ ನೀಡಿ, “ಆಯ್ದ ಪಂದ್ಯಗಳಲ್ಲಿ ಮಾತ್ರ ಭಾಗವಹಿಸುವುದು ಜಾಗತಿಕ ಕ್ರೀಡಾಕೂಟದ ಮೂಲಭೂತ ತತ್ವಗಳಿಗೆ ವಿರುದ್ಧ. ಇದು ನ್ಯಾಯಸಮ್ಮತವಲ್ಲ” ಎಂದು ತಿಳಿಸಿತು. ಎಲ್ಲ ಅರ್ಹ ತಂಡಗಳು ವೇಳಾಪಟ್ಟಿಯಂತೆ ಸಮಾನವಾಗಿ ಸ್ಪರ್ಧಿಸಬೇಕೆಂಬುದೇ ಐಸಿಸಿ ಟೂರ್ನಿಗಳ ಮೂಲ ತತ್ವ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿತು.
ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಯಿಂದ ಅಧಿಕೃತ ಸಂವಹನಕ್ಕಾಗಿ ಕಾಯುತ್ತಿರುವುದಾಗಿ ಐಸಿಸಿ ತಿಳಿಸಿದ್ದು, ಕ್ರೀಡಾ ಸಮಗ್ರತೆ, ಸ್ಪರ್ಧಾತ್ಮಕತೆ ಮತ್ತು ನ್ಯಾಯತತ್ತ್ವಗಳಿಗೆ ಧಕ್ಕೆ ಉಂಟಾಗುವ ಯಾವುದೇ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ.
ಇದೇ ವೇಳೆ ಭದ್ರತಾ ಕಾರಣ ನೀಡಿ ಭಾರತದಲ್ಲಿ ಆಡಲು ನಿರಾಕರಿಸಿದ್ದ ಬಾಂಗ್ಲಾದೇಶ ತಂಡದ ಬದಲು ಸ್ಕಾಟ್ಲೆಂಡ್ ತಂಡವನ್ನು ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಆಯ್ಕೆ ಮಾಡಿರುವುದು ಗಮನಾರ್ಹವಾಗಿದೆ.
ಪಾಕಿಸ್ತಾನ ಸರ್ಕಾರದ ಈ ನಿಲುವು ಟಿ20 ವಿಶ್ವಕಪ್ 2026ರ ವೇಳಾಪಟ್ಟಿ, ವಾಣಿಜ್ಯ ಹಿತಾಸಕ್ತಿಗಳು ಹಾಗೂ ಕ್ರಿಕೆಟ್ ರಾಜತಾಂತ್ರಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕ್ರೀಡಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕ್ರೀಡೆ
ಸರಳ ಉಡುಪಿನಲ್ಲಿ ಆಶ್ರಮಕ್ಕೆ ಆಗಮಿಸಿದ ವಿರಾಟ್-ಅನುಷ್ಕಾ; ಫೋಟೋಗಳಿಗೆ ಭಾರಿ ಮೆಚ್ಚುಗೆ
ಲಕ್ನೋ: ಐಪಿಎಲ್ 2026ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಆಧ್ಯಾತ್ಮಿಕ ಪಯಣ ಕೈಗೊಂಡಿದ್ದಾರೆ. ಈ ದಂಪತಿ ಸೋಮವಾರ ವೃಂದಾವನದಲ್ಲಿರುವ ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಮಹಾರಾಜರ ‘ರಾಧಾ ಕೇಳಿ ಕುಂಜ್’ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.
ಆಶ್ರಮಕ್ಕೆ ಆಗಮಿಸಿದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮಹಾರಾಜರ ದರ್ಶನ ಪಡೆದು ಕೆಲ ಸಮಯ ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಭೇಟಿ ಬಳಿಕ ಆಶ್ರಮದಿಂದ ಹೊರಬರುತ್ತಿರುವ ಅವರ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಿರಾಟ್ ಮತ್ತು ಅನುಷ್ಕಾ ವೃಂದಾವನಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ಕೆಲವು ವರ್ಷಗಳಲ್ಲಿ ಅವರು ಹಲವು ಬಾರಿ ಪ್ರೇಮಾನಂದ್ ಮಹಾರಾಜರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಜೀವನದ ಪ್ರಮುಖ ಘಟ್ಟಗಳು ಹಾಗೂ ವೃತ್ತಿಜೀವನದ ಮಹತ್ವದ ಸಂದರ್ಭಗಳಲ್ಲಿ ಈ ದಂಪತಿ ಆಧ್ಯಾತ್ಮಿಕ ಮಾರ್ಗದರ್ಶನ ಪಡೆಯುವುದು ವಿಶೇಷವಾಗಿದೆ.
ಈ ಬಾರಿ ಕೂಡ ಎಂದಿನಂತೆ ಯಾವುದೇ ವಿಶೇಷ ಭದ್ರತಾ ಪ್ರದರ್ಶನವಿಲ್ಲದೆ ಸರಳ ಉಡುಪಿನಲ್ಲಿ ಆಶ್ರಮಕ್ಕೆ ಆಗಮಿಸಿದ ವಿರಾಟ್ ಮತ್ತು ಅನುಷ್ಕಾ, ತಮ್ಮ ಸರಳತೆ ಮೂಲಕ ಗಮನ ಸೆಳೆದಿದ್ದಾರೆ. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವರ ಭಕ್ತಿ ಹಾಗೂ ವಿನಯಶೀಲತೆಯನ್ನು ಮೆಚ್ಚಿ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.
ಐಪಿಎಲ್ 2026ರ ನಿರ್ಣಾಯಕ ಹಂತದಲ್ಲಿ ಆರ್‌ಸಿಬಿ ತಂಡ ಉತ್ತಮ ಪ್ರದರ್ಶನ ನೀಡುತ್ತಿರುವ ವೇಳೆಯಲ್ಲೇ ಕೊಹ್ಲಿ ಆಧ್ಯಾತ್ಮಿಕ ಆಶೀರ್ವಾದ ಪಡೆಯಲು ತೆರಳಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಆಸಕ್ತಿ ಮೂಡಿಸಿದೆ. ಸದ್ಯ ಅವರ ವೃಂದಾವನ ಭೇಟಿ ಕುರಿತ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ.
ಕ್ರೀಡೆ
‘We Did It Twice’ ಟೀ-ಶರ್ಟ್ ವೈರಲ್! ಆರ್‌ಸಿಬಿ ಗೆಲುವಿನ ಅಪರೂಪದ ಫೋಟೋ ಹಂಚಿಕೊಂಡ ಅನುಷ್ಕಾ ಶರ್ಮಾ
ಬೆಂಗಳೂರು: ಐಪಿಎಲ್ 2026ರ ಚಾಂಪಿಯನ್ ಆಗಿ ಹೊರಹೊಮ್ಮಿದ Royal Challengers Bengaluru ತಂಡದ ಸಂಭ್ರಮ ಇನ್ನೂ ಮುಂದುವರಿದಿದೆ. ಸತತ ಎರಡನೇ ಬಾರಿ ಟ್ರೋಫಿ ಗೆದ್ದಿರುವ ಆರ್‌ಸಿಬಿ ಆಟಗಾರರು ಹಾಗೂ ಅಭಿಮಾನಿಗಳು ಐತಿಹಾಸಿಕ ಗೆಲುವನ್ನು ವಿಶೇಷವಾಗಿ ಆಚರಿಸುತ್ತಿದ್ದು, ಇದೀಗ ನಟಿ Anushka Sharma ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅನುಷ್ಕಾ ಶರ್ಮಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮದ ಕೆಲವು ಅಪರೂಪದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ಆರ್‌ಸಿಬಿಯ ಸ್ಟಾರ್ ಬ್ಯಾಟರ್ Virat Kohli ಹಾಗೂ ತಂಡದ ಬ್ಯಾಟಿಂಗ್ ಕೋಚ್ Dinesh Karthik ಕಾಣಿಸಿಕೊಂಡಿದ್ದಾರೆ.
ಆದರೆ ಎಲ್ಲರ ಗಮನ ಸೆಳೆದಿರುವುದು ವಿರಾಟ್ ಕೊಹ್ಲಿ ಧರಿಸಿದ್ದ ವಿಶೇಷ ಟೀ-ಶರ್ಟ್. ಟೀ-ಶರ್ಟ್‌ನ ಹಿಂಭಾಗದಲ್ಲಿ “One Felt Nice… We Did It Twice” ಎಂಬ ಸಾಲು ಮುದ್ರಿತವಾಗಿದ್ದು, ಆರ್‌ಸಿಬಿಯ ಎರಡನೇ ಐಪಿಎಲ್ ಪ್ರಶಸ್ತಿಯ ಸಂಭ್ರಮವನ್ನು ಪ್ರತಿಬಿಂಬಿಸಿದೆ. ಈ ಸಂದೇಶ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಕಳೆದ ಸೀಸನ್‌ನಲ್ಲಿ ಪ್ರಶಸ್ತಿ ಗೆದ್ದು ದೀರ್ಘಕಾಲದ ಕನಸನ್ನು ನನಸು ಮಾಡಿಕೊಂಡಿದ್ದ ಆರ್‌ಸಿಬಿ, ಇದೀಗ 2026ರ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಮತ್ತೊಮ್ಮೆ ಕಪ್ ಎತ್ತಿಹಿಡಿದಿದೆ. ಹೀಗಾಗಿ ಈ ಬಾರಿ ಗೆಲುವಿನ ಸಂಭ್ರಮವೂ ವಿಶೇಷವಾಗಿದ್ದು, ಆಟಗಾರರು ತಮ್ಮ ಯಶಸ್ಸನ್ನು ವಿಭಿನ್ನ ರೀತಿಯಲ್ಲಿ ಆಚರಿಸುತ್ತಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರ ಫೋಟೋಗಳಿಗೆ ಅಭಿಮಾನಿಗಳಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದ್ದು, “ಈ ಸಲ ಮಾತ್ರವಲ್ಲ, ಎರಡು ಸಲ ಕಪ್ ನಮ್ದೇ” ಎಂಬ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಕ್ರೀಡೆ
ವಿರಾಟ್ ಕೊಹ್ಲಿ ಮಾಸ್ಟರ್ ಕ್ಲಾಸ್; ಆರ್‌ಸಿಬಿ ಐತಿಹಾಸಿಕ ಗೆಲುವಿಗೆ MLA S T Somashekhar ಮೆಚ್ಚುಗೆ
ಬೆಂಗಳೂರು: ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಆರ್‌ಸಿಬಿ ತಂಡದ ಎಲ್ಲ ಆಟಗಾರರು, ತರಬೇತುದಾರರು ಹಾಗೂ ನಿರ್ವಹಣಾ ಮಂಡಳಿಗೆ ಶುಭಾಶಯ ಕೋರಿದರು. ಫೈನಲ್ ಪಂದ್ಯದಲ್ಲಿ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ವೆಂಕಟೇಶ್ ಅಯ್ಯರ್ ಅವರೊಂದಿಗೆ ತಂಡಕ್ಕೆ ಭದ್ರ ಅಡಿಪಾಯ ಹಾಕಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
“ಗುರಿ ಬೆನ್ನತ್ತಿದ ಆರಂಭದಲ್ಲೇ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಅವರ ಆಕರ್ಷಕ ಆಟದಿಂದ ಆರ್‌ಸಿಬಿ ತಂಡ ಪವರ್‌ಪ್ಲೇನಲ್ಲೇ ಗೆಲುವಿನ ಹಾದಿಯನ್ನು ಸುಗಮಗೊಳಿಸಿತು. ವಿರಾಟ್ ಕೊಹ್ಲಿ ಮತ್ತೊಮ್ಮೆ ತಮ್ಮ ಅನುಭವ ಮತ್ತು ಕ್ಲಾಸ್ ತೋರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು,” ಎಂದು ಎಸ್.ಟಿ. ಸೋಮಶೇಖರ್ ಹೇಳಿದರು.
ತಾವು ಆರ್‌ಸಿಬಿಯ ದೊಡ್ಡ ಅಭಿಮಾನಿಯಾಗಿದ್ದು, ತಂಡವು ಎರಡನೇ ಬಾರಿ ಐಪಿಎಲ್ ಟ್ರೋಫಿ ಗೆದ್ದಿರುವುದು ಅಪಾರ ಸಂತಸ ತಂದಿದೆ ಎಂದರು. “ನಿನ್ನೆ ಬೆಂಗಳೂರಿನಲ್ಲಿ ಮಾತ್ರವಲ್ಲ, ಇಡೀ ಕರ್ನಾಟಕ ರಾಜ್ಯದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಲಕ್ಷಾಂತರ ಆರ್‌ಸಿಬಿ ಅಭಿಮಾನಿಗಳು ತಂಡದ ಐತಿಹಾಸಿಕ ಗೆಲುವನ್ನು ಸಂಭ್ರಮದಿಂದ ಆಚರಿಸಿದರು. ಕರ್ನಾಟಕದ ಹೆಮ್ಮೆ ಎನಿಸಿರುವ ಆರ್‌ಸಿಬಿ ಮತ್ತೊಮ್ಮೆ ಚಾಂಪಿಯನ್ ಆಗಿರುವುದು ನಮಗೆಲ್ಲಾ ಹೆಮ್ಮೆಯ ವಿಚಾರ,” ಎಂದು ಹೇಳಿದರು.
ಆರ್‌ಸಿಬಿ ಅಭಿಮಾನಿಗಳ ಬಹುಕಾಲದ ಕನಸಾಗಿದ್ದ ‘ಈ ಸಲ ಕಪ್ ನಮ್ದೇ’ ಎಂಬ ಘೋಷಣೆ ಇದೀಗ ಮತ್ತೊಮ್ಮೆ ನಿಜವಾಗಿದೆ. ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದು ಆರ್‌ಸಿಬಿ ಐಪಿಎಲ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದೆ. ಈ ಗೆಲುವು ಕರ್ನಾಟಕದ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳಿಗೆ ಮರೆಯಲಾಗದ ಕ್ಷಣಗಳನ್ನು ನೀಡಿದೆ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಸಂತಸ ವ್ಯಕ್ತಪಡಿಸಿದರು.
-
ದೇಶ10 hours agoಅಮಿತ್ ಷಾ ಭೇಟಿಗೆ ದೆಹಲಿಗೆ ಅಣ್ಣಾಮಲೈ ದೌಡು; ಬಿಜೆಪಿ ತೊರೆಯುವ ಚರ್ಚೆ ತೀವ್ರ
-
ದೇಶ11 hours agoನೆತನ್ಯಾಹು ವಿರುದ್ಧ ಟ್ರಂಪ್ ಆಕ್ರೋಶ: ‘ನಿನಗೆ ಹುಚ್ಚು ಹಿಡಿದಿದ್ಯಾ?’ ಎಂದು ದೂರವಾಣಿಯಲ್ಲೇ ತರಾಟೆ
-
ದೇಶ10 hours agoಜಮೀರ್ ನಿವಾಸಕ್ಕೆ ಡಿ.ಕೆ. ಸುರೇಶ್ ದಿಢೀರ್ ಭೇಟಿ: ಕಾಂಗ್ರೆಸ್ನಲ್ಲಿ ಹೊಸ ರಾಜಕೀಯ ಲೆಕ್ಕಾಚಾರ!
-
ದೇಶ10 hours ago‘ಚೋರ್, ಚೋರ್’ ಘೋಷಣೆಗಳ ನಡುವೆ ಅಭಿಷೇಕ್ ಓಟ; ಬಿಜೆಪಿ-ಟಿಎಂಸಿ ವಾಕ್ಸಮರ ತೀವ್ರ
-
ದೇಶ9 hours agoಪ್ರಮಾಣವಚನ ಸಮಾರಂಭದ ಭದ್ರತೆಗಾಗಿ ಸರ್ಕಾರಿ ನೌಕರರಿಗೆ ವಿಶೇಷ ರಜೆ ಘೋಷಣೆ
-
ಕ್ರೀಡೆ9 hours agoಸರಳ ಉಡುಪಿನಲ್ಲಿ ಆಶ್ರಮಕ್ಕೆ ಆಗಮಿಸಿದ ವಿರಾಟ್-ಅನುಷ್ಕಾ; ಫೋಟೋಗಳಿಗೆ ಭಾರಿ ಮೆಚ್ಚುಗೆ
