Connect with us

ದೇಶ

ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್​ಗೆ ಕ್ರಿಕೆಟ್‌ ಸೇರ್ಪಡೆ

Published

on

ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್ಗೆ ಕ್ರಿಕೆಟ್ ಸೇರ್ಪಡೆ
ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್ಗೆ ಕ್ರಿಕೆಟ್ ಸೇರ್ಪಡೆ

ಮುಂಬೈ: ಅಮೆರಿಕದ ಲಾಸ್‌ ಏಂಜಲಿಸ್‌ನಲ್ಲಿ 2028ಕ್ಕೆ ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ ಕೊನೆಗೂ ಕ್ರಿಕೆಟ್‌ ಸೇರ್ಪಡೆಯಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ ನಿರ್ವಾಹಕರು ಒಲಿಂಪಿಕ್ಸ್‌ ಕ್ರೀಡೆಯಲ್ಲಿ ಕ್ರಿಕೆಟ್‌ ಸೇರ್ಪಡೆಗೊಳಿಸಿರುವುದಾಗಿ ಘೋಷಣೆ ಮಾಡಿದ್ದಾರೆ,

ಮುಂಬೈನಲ್ಲಿ ಒಲಿಂಪಿಕ್ಸ್‌ ಸಮಿತಿಯ ಕಾರ್ಯಕಾರಿ ಮಂಡಳಿ ಸಭೆ ನಡೆದ 2 ದಿನಗಳ ಬಳಿಕ ಮಾತನಾಡಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ ಅಧ್ಯಕ್ಷ, ಥಾಮಸ್ ಬಾಚ್, ಬೇಸ್‌ಬಾಲ್/ಸಾಫ್ಟ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್ ಜೊತೆಗೆ 5 ಹೊಸ ಕ್ರೀಡೆಗಳನ್ನು ಒಲಿಂಪಿಕ್ಸ್‌ಗೆ ಸೇರ್ಪಡೆಗೊಳಿಸಲಾಗಿದೆ. ಇದರಲ್ಲಿ ಕ್ರಿಕೆಟ್‌ ಸಹ ಒಂದು. ಕ್ರಿಕೆಟ್‌ ಸೇರ್ಪಡೆಗೊಳಿಸುವ ಪ್ರಸ್ತಾವನೆಯನ್ನು ಲಾಸ್‌ ಏಂಜಲಿಸ್‌ನ ಸಂಘಟಕ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂಬುದಾಗಿಯೂ ತಿಳಿಸಿದ್ದಾರೆ.

1990ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಪದಕ ಸ್ಪರ್ಧೆಯಾಗಿತ್ತು. ಆಗ ಇಂಗ್ಲೆಂಡ್ -ಫ್ರಾನ್ಸ್ ಪುರುಷರ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿತ್ತು. ಕಳೆದ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್ ಒಂದು ಭಾಗವಾಗಿತ್ತು. ಆದರೆ 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್ ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್ ವಿಭಾಗದಲ್ಲಿ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ತಂಡಗಳು ಭಾಗವಹಿಸಲಿವೆ.

ಮಾಹಿತಿ ಪ್ರಕಾರ, 2024ರ ಟಿ20 ವಿಶ್ವಕಪ್ ಟೂರ್ನಿಯು ಮುಂದಿನ ಜೂನ್ 4 ರಿಂದ ಜೂನ್ 30ರ ವರೆಗೆ ನಡೆಯಲಿದೆ. ಈಗಾಗಲೇ ಐಸಿಸಿ ಅಧಿಕಾರಿಗಳು ಅಮೆರಿಕದಲ್ಲಿ ಆತಿಥ್ಯ ವಹಿಸುವ ಸಂಭಾವ್ಯ ಸ್ಥಳಗಳ ಪರಿಶೀಲನೆ ನಡೆಸಿದ್ದಾರೆ.

ದೇಶ

ಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ

Published

on

By

ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಕ್ಕೂ ಜಗಳ-ಕೇಸು ಸಾಮಾನ್ಯವಾಗಿರುವ ಸಂದರ್ಭದಲ್ಲೇ, ಬಿಹಾರದ ಒಂದು ಹಳ್ಳಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಿದೆ. ಕಲಿಯಾಚಕ್ ಗ್ರಾಮ ಕಳೆದ 118 ವರ್ಷಗಳಿಂದ ಯಾವುದೇ ಅಪರಾಧ ದಾಖಲಾಗದೇ ಶಾಂತಿಯುತ ಜೀವನ ನಡೆಸುತ್ತಿರುವುದು ವಿಶೇಷ.

ನಳಂದ ಜಿಲ್ಲೆಯ ಈ ಗ್ರಾಮದಲ್ಲಿ ಸ್ಥಾಪನೆಯಾದ ದಿನದಿಂದಲೂ ಗಂಭೀರ ಅಪರಾಧಗಳೇ ನಡೆದಿಲ್ಲ. ಅಷ್ಟೇ ಅಲ್ಲ, ಇಷ್ಟು ವರ್ಷಗಳಲ್ಲಿ ಪೊಲೀಸ್ ಸೈರನ್ ಕೂಡ ಕೇಳಿಸಿಲ್ಲ ಎಂಬುದು ಆಶ್ಚರ್ಯಕರ ಸಂಗತಿ. ಗ್ರಾಮದಲ್ಲಿ ಯಾವುದೇ ಸಣ್ಣಪುಟ್ಟ ವಿವಾದಗಳು ಉಂಟಾದರೂ, ಹಿರಿಯರು ಕೂತು ಸಮಸ್ಯೆಯನ್ನು ಪರಿಹರಿಸುತ್ತಾರೆ.

ಈ ಗ್ರಾಮ ಹಿಲ್ಸಾ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ. ಆದರೆ ಪೊಲೀಸ್ ದಾಖಲೆಗಳಲ್ಲಿ ಈ ಗ್ರಾಮದಿಂದ ಒಂದೇ ಒಂದು ದೂರು ಕೂಡ ಇಲ್ಲದಿರುವುದು ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದೆ.

ಗ್ರಾಮದಲ್ಲಿ ಸುಮಾರು 60 ಕುಟುಂಬಗಳು, 500 ಜನರು ವಾಸಿಸುತ್ತಿದ್ದು, ವಿವಿಧ ಜಾತಿ-ವರ್ಗಗಳ ಜನರು ಸಹೋದರತ್ವದಿಂದ ಬದುಕುತ್ತಿದ್ದಾರೆ. “ಗ್ರಾಮದ ಸಮಸ್ಯೆಗಳನ್ನು ಗ್ರಾಮದಲ್ಲೇ ಬಗೆಹರಿಸಬೇಕು” ಎಂಬುದು ಇವರ ಮೂಲ ತತ್ವವಾಗಿದೆ.

ಈ ಶಾಂತಿಯುತ ವಾತಾವರಣಕ್ಕೆ ಪ್ರಮುಖ ಕಾರಣ ಮಾಜಿ ಪಂಚಾಯಿತಿ ಅಧ್ಯಕ್ಷ ಸಾಧು ಶರಣ್ ಸಿಂಗ್ ಅವರ ಮಾರ್ಗದರ್ಶನ. ಅವರ ಪ್ರಯತ್ನದಿಂದ ಈ ಗ್ರಾಮ ಮಾದರಿಯಾಗಿ ರೂಪುಗೊಂಡಿದೆ.

ಇಲ್ಲಿನ ಯುವಕರು ಕೆಟ್ಟ ಅಭ್ಯಾಸಗಳಿಂದ ದೂರವಿದ್ದು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳತ್ತ ಗಮನ ಹರಿಸುತ್ತಿದ್ದಾರೆ.

ಗಮನಿಸಿ: ಮೇಲಿನ ವಿವರಗಳು ಬಿಹಾರದ ಕಲಿಯಾಚಕ್ ಗ್ರಾಮದ ಕುರಿತು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಆಧರಿಸಿವೆ. ಇದು ಅಪರಾಧ ಮುಕ್ತ ಗ್ರಾಮವಾಗಿ ದೇಶದಲ್ಲಿ ವಿಶೇಷ ಮನ್ನಣೆಯನ್ನು ಗಳಿಸಿದೆ.

ಒಟ್ಟಿನಲ್ಲಿ, ಕಲಿಯಾಚಕ್ ಗ್ರಾಮವು ಒಗ್ಗಟ್ಟು, ಸಹೋದರತ್ವ ಮತ್ತು ಶಾಂತಿಯುತ ಬದುಕಿನ ನಿಜವಾದ ಮಾದರಿಯಾಗಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ.

Continue Reading

ದೇಶ

ಯುದ್ಧ ಮಧ್ಯೆ ಸಾಹಸ ಕಾರ್ಯಾಚರಣೆ: ಅಮೆರಿಕಾ ಪೈಲಟ್ ರಕ್ಷಣೆ ಘೋಷಣೆ

Published

on

By

Continue Reading

ಚುನಾವಣೆ

“ಟ್ರಂಪ್ ಅನುಮತಿ ಇಲ್ಲದೆ ತೈಲ ಖರೀದಿ ಸಾಧ್ಯವಿಲ್ಲ”: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Published

on

By

ಅಸ್ಸಾಂ ರಾಜ್ಯದ ಗೋಲಾಘಾಟ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಉಲ್ಲೇಖಿಸಿದ ಅವರು, “ಟ್ರಂಪ್ ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.

ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಟ್ರಂಪ್ ಬಹಿರಂಗವಾಗಿ ಮೋದಿ ಬಗ್ಗೆ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಭಾರತದ ಇಂಧನ ಭದ್ರತೆ ಮತ್ತು ಪ್ರಮುಖ ಮಾಹಿತಿಯನ್ನು ಅಮೆರಿಕದ ಕೈಗೆ ಒಪ್ಪಿಸಿದ್ದಾರೆ,” ಎಂದು ಗಂಭೀರ ಆರೋಪ ಮಾಡಿದರು.

ಇದೇ ವೇಳೆ ಅವರು ಎಪ್ಸ್ಟೀನ್ ಫೈಲ್ ಕುರಿತು ಉಲ್ಲೇಖಿಸಿ, ಟ್ರಂಪ್ ಬಳಿ ಮೋದಿ ಬಗ್ಗೆ ಮಾಹಿತಿಯಿದೆ ಎಂದು ಹೇಳಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ, ಉದ್ಯಮಿ ಅದಾನಿ ವಿರುದ್ಧ ಅಮೆರಿಕದಲ್ಲಿ ಪ್ರಕರಣ ದಾಖಲಾಗಿರುವುದನ್ನೂ ಅವರು ಪ್ರಸ್ತಾಪಿಸಿದರು.

ಈ ನಡುವೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ ಸನ್ನಾಹಗಳು ಜೋರಾಗಿದ್ದು, ಅಸ್ಸಾಂ ಸೇರಿದಂತೆ ಹಲವೆಡೆ ರಾಜಕೀಯ ತಾಪಮಾನ ಏರಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಪ್ರಚಾರ ತೀವ್ರಗೊಳಿಸಿದ್ದು, ಬಿಜೆಪಿ ಕೂಡ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ತೀವ್ರ ಪ್ರಚಾರ ನಡೆಸುತ್ತಿದೆ.

ಒಟ್ಟಿನಲ್ಲಿ, ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ಮಾತಿನ ಸಮರ ಮತ್ತಷ್ಟು ತೀವ್ರಗೊಳ್ಳುವ ಸೂಚನೆ ನೀಡಿದೆ.

Continue Reading

Trending