Connect with us

ರಾಜ್ಯ

ಸಿಎಂ ಸಿದ್ಧರಾಮಯ್ಯ ಕುರಿತ ಸಂಶೋಧನೆಗೆ ಪಿಹೆಚ್‌ಡಿ ಪದವಿ ಪಡೆದ ಹಳ್ಳಿ ಹೈದ ಬೀರಪ್ಪ

ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿ  ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ಧರಾಮಯ್ಯ ಕುರಿತ ಸಂಶೋಧನೆಗೆ ಪಿಹೆಚ್‌ಡಿ ಪದವಿ ಪಡೆದ ಹಳ್ಳಿ ಹೈದ ಬೀರಪ್ಪ

ಮೈಸೂರು ಜಿಲ್ಲೆಯ ಹಳ್ಳಿ ಹುಡುಗ ಬೀರಪ್ಪ ಹೆಚ್‌ ತಮ್ಮ ಪಿಹೆಚ್‌ಡಿ ಸಂಶೋಧನಾ ವಿಷಯವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ಕುರಿತು ಅಧ್ಯಯನ ಮಾಡಿದ್ದು, ಈ ಸಂಶೋಧನೆಗೆ ಪಿಹೆಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಹಳ್ಳಿ ಹೈದ ಬೀರಪ್ಪ ಹೆಚ್‌ ಸಿಎಂ ಸಿದ್ಧರಾಮಯ್ಯ ನವರ ಕುರಿತು ಸಂಶೋಧನೆ ನಡೆಸಿ ಪಿಹೆಚ್‌ಡಿ ಪದವಿ ಪಡೆದಿದ್ದಾರೆ.

ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ನಂತರ, ಇದೇ ವಿವಿಯಲ್ಲಿ ಪ್ರಾಧ್ಯಾಪಕರಾದ ಡಾ ಎನ್‌ ಮಮತ ರವರ ಮಾರ್ಗದರ್ಶನದಲ್ಲಿ ಪಿಹೆಚ್‌ಡಿ ಸಂಶೋಧನೆಗೆ ಪ್ರವೇಶ ಪಡೆದಿದ್ದರು.

ಸಿದ್ಧರಾಮಯ್ಯನವರು ಮಾಜಿ ಸಿಎಂ ಆಗಿದ್ದ ಕಾಲದಲ್ಲೇ ಇವರ ಕುರಿತು ಸಂಶೋಧನೆ ಕೈಗೊಂಡಿದ್ದ ಬೀರಪ್ಪ, ಅಕ್ಟೋಬರ್ 12 ರಂದು ತಮ್ಮ ಸಂಶೋಧನಾ ಮಹಾಪ್ರಬಂಧವನ್ನು ವಿವಿಗೆ ಸಲ್ಲಿಸಿದ್ದಾರೆ.2019 ರಲ್ಲಿ ಬೀರಪ್ಪ ಕೈಗೊಂಡ ಸಿದ್ಧರಾಮಯ್ಯ ನವರ ಕುರಿತ ಪಿಹೆಚ್‌ಡಿ ಪದವಿಯ ವಿಷಯ ‘ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರವರ ರಾಜಕೀಯ ಸಂವಹನ ಮತ್ತು ಅಭಿವೃದ್ಧಿ ದೃಷ್ಟಿಕೋನ: ಒಂದು ವಿಶ್ಲೇಷಣಾತ್ಮಕ ಅಧ್ಯಯನ’.ಈ ಹಿಂದೆ ದೇವರಾಜ ಅರಸು ರವರು ಎಲ್ಲ ಸಮುದಾಯಗಳ ಏಳಿಗೆಗೆ ಕೆಲಸ ಮಾಡುತ್ತಿದ್ದರು. ಅವರ ಹಾಗೆಯೇ ಸಿದ್ಧರಾಮಯ್ಯ ನವರು ಸಹ. ಅವರ ಇಂತಹ ಗುಣಗಳೇ, ಅವರ ಅಭಿವೃದ್ಧಿ ದೃಷ್ಟಿಕೋನಗಳೇ ಸಿಎಂ ಸಿದ್ಧರಾಮಯ್ಯ ನವರ ಕುರಿತು ಸಂಶೋಧನೆ ಮಾಡಲು ಪ್ರೇರಣೆ ನೀಡಿದವು ಎಂದು ಪಿಹೆಚ್‌ಡಿ ಪದವಿ ಪಡೆದ ಬೀರಪ್ಪ ಹೇಳಿದ್ದಾರೆ.

ಬೀರಪ್ಪ, ತಾನು ಸ್ನಾತಕೋತ್ತರ ಪದವಿ ಪಡೆಯುವ ಮುನ್ನವೇ ಸರ್ಕಾರಿ ಉದ್ಯೋಗದಲ್ಲಿದ್ದೆ. ಆದರೆ ಕಾವೇರಿ ಹೋರಾಟಕ್ಕಾಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದೆ. ನಂತರ ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿಯೇ ಎಂಎ ಪದವಿ ಪಡೆದೆ. ಈಗ ಇದೇ ವಿಭಾಗದಲ್ಲಿ ಪಿಹೆಚ್‌ಡಿ ಪಡೆದಿರುವುದು, ಅದರಲ್ಲೂ ಸಿಎಂ ಸಿದ್ಧರಾಮಯ್ಯ ಕುರಿತು ಸಂಶೋಧನಾ ಮಹಾಪ್ರಬಂಧ ಮಂಡಿಸಿರುವುದು ನನಗೆ ಹೆಚ್ಚು ಸಂತೋಷ ಉಂಟುಮಾಡಿದೆ. ನನ್ನ ಮಾರ್ಗದರ್ಶಕರಾದ ಎನ್‌ ಮಮತ ರವರು ಹೆಚ್ಚು ಪ್ರೋತ್ಸಾಹ ನೀಡಿದರು, ವಿಭಾಗದ ಎಲ್ಲ ಪ್ರಾಧ್ಯಾಪಕರು ಈ ಸಂಶೋಧನೆಗೆ ಹಲವು ರೀತಿ ಸಹಾಯ ಮಾಡಿದ್ದಾರೆ ಎಂದಿದ್ದಾರೆ.

ಬೀರಪ್ಪ ನವರ ಮಹಾಪ್ರಬಂಧ ಮಂಡನೆ ವೇಳೆ ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಎನ್‌ ಮಮತ, ಡಾ ಸಿ ಕೆ ಪುಟ್ಟಸ್ವಾಮಿ, ಡಾ ಸಪ್ನ ರವರು ಹಾಜರಿದ್ದರು.

ರಾಜಕೀಯ

ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.

ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.

ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.

ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:

“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.

Continue Reading

ದೇಶ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರ ಅಂಜನಾದ್ರಿ ಬೆಟ್ಟ ಭೇಟಿ – ಆಂಜನೇಯ ದರ್ಶನ ಪಡೆದು ವಿಶೇಷ ಪೂಜೆ

ಕೊಪ್ಪಳ, ಆಗಸ್ಟ್ 7 – ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ಕುಟುಂಬದ ಸದಸ್ಯರೊಂದಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ವಾಯುಪುತ್ರ ಹನುಮಂತನ ಜನ್ಮಸ್ಥಳವೆಂದು ಪರಿಗಣಿಸಲ್ಪಡುವ ಈ ಪವಿತ್ರ ಸ್ಥಳದಲ್ಲಿ ಅವರು 575 ಮೆಟ್ಟಿಲುಗಳನ್ನು 30 ನಿಮಿಷಗಳಲ್ಲಿ ಏರಿ ಭಕ್ತಿಯಿಂದ ದರ್ಶನ ಪಡೆದರು.


🌄 ಅಂಜನಾದ್ರಿ ಬೆಟ್ಟ – ಭಕ್ತರ ಆಸ್ಥೆಯ ಗಗನಚುಂಬಿ ಸಂಕೇತ

ಅಂಜನಾದ್ರಿ ಬೆಟ್ಟವು ಹನುಮಂತನ ಜನ್ಮಸ್ಥಳ ಎಂಬ ನಂಬಿಕೆಯಿಂದ ಹೆಸರಾಗಿದ್ದು, ಪ್ರತಿದಿನ ನೂರಾರು ಭಕ್ತರು ಇಲ್ಲಿ ಆಗಮಿಸುತ್ತಾರೆ. ಶ್ರೀ ರಾಮ, ಸೀತಾ ದೇವಿಗಳ ಮೂರ್ತಿಗಳೂ ಇಲ್ಲಿ ಪೂಜಿಸಲ್ಪಡುತ್ತವೆ. ಬೆಟ್ಟದ ಶಿಖರದಿಂದ ತುಂಗಭದ್ರಾ ನದಿಯ ನೋಟ, ಸೂರ್ಯಾಸ್ತದ ಸೌಂದರ್ಯ ಮತ್ತು ಹಂಪಿಯ ಇತಿಹಾಸದ ಅವಶೇಷಗಳು ಮನ ಮೋಹಿಸುತ್ತವೆ.


🛕 ಅಂಜನಾದ್ರಿ ಬೆಟ್ಟದ ಪ್ರಮುಖ ಅಂಶಗಳು:

  • 575 ಮೆಟ್ಟಿಲುಗಳನ್ನು ಏರಿ ಸ್ವಾಮಿದರ್ಶನ
  • ರಾಜ್ಯಪಾಲರಿಗೆ ಜಿಲ್ಲಾಡಳಿತದಿಂದ ಸನ್ಮಾನ
  • ದೇವಾಲಯದ ಆಂತರಿಕ ಶ್ರದ್ಧಾ ಭರವಸೆಯ ಸ್ಥಳ
  • ಹಂಪಿಯಿಂದ ನದಿ ದಾಟಿ ಬೋಟ್ ಮೂಲಕ ಪ್ರವೇಶದ ಅನುಕೂಲ
  • ರೈಲು ಮಾರ್ಗ: ಕೊಪ್ಪಳ ಅಥವಾ ಮುನಿರಾಬಾದ್‌ ಮೂಲಕ
  • ರಸ್ತೆ ಸಂಪರ್ಕ ಉತ್ತಮ, ವಿಮಾನ ಸಂಪರ್ಕ ಇಲ್ಲ

📜 ಅಂಜನಾದ್ರಿ ಅಭಿವೃದ್ಧಿಯ ಬಗ್ಗೆ ಸರ್ಕಾರದ ದೃಷ್ಟಿಕೋನ

ಹನುಮ ಮಾಲೆ ಸಂದರ್ಭದಲ್ಲಿ ಸಾವಿರಾರು ಭಕ್ತರು ಇಲ್ಲಿ ಆಗಮಿಸುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಾಗ್ದಾನ ನೀಡಿದ್ದರು. ರಾಜ್ಯ ಸರಕಾರ ಕೂಡ ಈ ಸ್ಥಳವೇ ಆಂಜನೇಯನ ಜನ್ಮಭೂಮಿ ಎಂದು ಧರ್ಮಗ್ರಂಥಗಳ ಆಧಾರದ ಮೇಲೆ ದೃಢಪಡಿಸಿದೆ.

Continue Reading

Trending