Connect with us

ರಾಜ್ಯ

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬಿಸಿಯೂಟ ಯೋಜನೆ 212 ಕೋಟಿ ರೂ.ಹಣ ಬಿಡುಗಡೆ

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬಿಸಿಯೂಟ ಯೋಜನೆ 212 ಕೋಟಿ ರೂ.ಹಣ ಬಿಡುಗಡೆ:

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಯೋಜನೆ ಗೆ ಕೇಂದ್ರ ಸರ್ಕಾರದಿಂದ 131 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 81 ಕೋಟಿ ರೂ. ಒಟ್ಟು 212 ಕೋಟಿ ರೂ. ಹಣವನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಸದ್ಯ ಬಿಡುಗಡೆ ಮಾಡಲಾಗಿರುವ ಅನುದಾನಕ್ಕೆ ವೆಚ್ಚ ಭರಿಸಲು ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ಸಂಬಂಧಿಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಮುಖ್ಯ ಲೆಕ್ಕಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ.ಈ ಆದೇಶದಲ್ಲಿ ಬಿಡುಗಡೆ ಮಾಡಲಾಗಿರುವ ಅನುದಾನವನ್ನು 1-8ನೇ ತರಗತಿ ಮಧ್ಯಾಹ್ನ ಉಪಹಾರ ಯೋಜನೆಯನ್ನು ಅನುಷ್ಠಾನ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಯಂತೆ ನಿಗದಿತ ಉದ್ದೇಶಗಳಿಗೆ ಮಾತ್ರ ವೆಚ್ಚ ಭರಿಸುವಂತೆ ಸೂಚಿಸಲಾಗಿದೆ.ಬಿಡುಗಡೆ ಮಾಡಲಾಗಿರುವ ಅನುದಾನವನ್ನು ಖಜಾನೆ-2 PFMS ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯಿಂದ ನೀಡಲಾಗಿರುವ ಮಾರ್ಗಸೂಚಿಯಂತೆ ಅನುಷ್ಠಾನ ಮಾಡಲಾಗಿದೆ.ಬಿಸಿಯೂಟದ ಅನುದಾನವನ್ನು ಪ್ರಧಾನ ಮಂತ್ರಿ ಪೋಷಣೆ ಶಕ್ತಿ ನಿರ್ಮಾಣ ಯೋಜನೆಯ ಮಧ್ಯಾಹ್ನ ಉಪಹಾರ ಯೋಜನೆ ಖಾತೆಗೆ ಜಮಾ ಮಾಡಿಕೊಂಡು ನಿಯಮಾನುಸಾರ ವೆಚ್ಚ ಭರಿಸುವಂತೆ ತಿಳಿಸಲಾಗಿದೆ.ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರ್ಥಿಕ ಇಲಾಖೆ, ಖಜಾನೆ ಆಯುಕ್ತರು ಹಾಗೂ INMC ಯನ್ನು ಸಂಪರ್ಕಿಸಿ ಸಮನ್ವಯ ಸಾಧಿಸಿಕೊಂಡು ಎಲ್ಲಾ ಅಗತ್ಯ ಪೂರ್ವಭಾವಿ ಕ್ರಮಗಳನ್ನು ನಿರ್ದೇಶಕರು, ಪ್ರಧಾನ ಮಂತ್ರಿ ಘೋಷಣ ಶಕ್ತಿ ನಿರ್ಮಾಣ್‌ ಯೋಜನೆ ತ್ವರಿತವಾಗಿ ಕೈಗೊಂಡು Singal Nodal Agency ಖಾತೆಗೆ ಅನುದಾನ ಜಮೆಯಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.ಸದ್ಯ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳು ಸೂಕ್ತ ಲೆಕ್ಕ ಪತ್ರಗಳನ್ನು ದಾಖಲಿಸುವಂತೆ ಮತ್ತು ಅದರ ಮೇಲ್ವಿಚಾರಣೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆಗೆ ತಿಳಿಸಿದ್ದು, ಹಾಗೂ ರಾಜ್ಯ ಕಛೇರಿ ಹಂತದಲ್ಲಿ ಭರಿಸುವ ವೆಚ್ಚಗಳಿಗೆ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಸೂಕ್ತ ಲೆಕ್ಕ ಪತ್ರಗಳನ್ನು ದಾಖಲಿಸುವಂತೆ ಸೂಚಿಸಲಾಗಿದೆ.

Continue Reading

ದೇಶ

“ಯತೀಂದ್ರಗೆ ಮಿನಿಮಮ್ ಕಾಮನ್ ಸೆನ್ಸ್ ಇಲ್ಲ” – ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಮಾಗಡಿ ಶಾಸಕ ಬಾಲಕೃಷ್ಣ ಕಿಡಿಕಾರಿದ್ದಾರೆ. “ಯತೀಂದ್ರ ಅವರಿಗೆ ಮಿನಿಮಮ್ ಕಾಮನ್ ಸೆನ್ಸ್ ಕೂಡ ಇಲ್ಲ” ಎಂದು ಅವರು ನೇರ ವಾಗ್ದಾಳಿ ನಡೆಸಿದರು.

ಹೈಕಮಾಂಡ್‌ನಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಯತೀಂದ್ರ ನೀಡಿದ್ದ ಹೇಳಿಕೆಗೆ ಸುವರ್ಣ ಸೌಧದಲ್ಲಿ ಪ್ರತಿಕ್ರಿಯಿಸಿದ ಬಾಲಕೃಷ್ಣ, “ದೊಡ್ಡವರಿಗೆ ಒಂದು ನ್ಯಾಯ, ಚಿಕ್ಕವರಿಗೆ ಒಂದು ನ್ಯಾಯ ಆಗುತ್ತಿದೆ. ಯತೀಂದ್ರಗೆ ನೋಟಿಸ್ ನೀಡದೇ ಇದ್ದದ್ದು ಅಸಮಾಧಾನಕಾರಿ” ಎಂದರು.

“ಈ ರೀತಿ ನಡೆಯುತ್ತಿರುವುದಕ್ಕೆ ನಮ್ಮ ಇಕ್ಬಾಲ್ ಹುಸೇನ್ ಮಾತಾಡಿದ್ರೆ ಬಲಾತ್ಕಾರ, ಯತೀಂದ್ರ ಮಾತಾಡಿದ್ರೆ ಚಮತ್ಕಾರ… ಅದನ್ನು ಅದ್ಭುತವಾಗಿ ಹೇಳಿದ್ದಾರೆ” ಎಂದು ಬಾಲಕೃಷ್ಣ ಮತ್ತಷ್ಟು ತಿರುಗೇಟು ನೀಡಿದರು.

ಇದಕ್ಕೂ ಮುಂಚೆ ಸಚಿವ ಡಿ.ಕೆ. ಶಿವಕುಮಾರ್ ಪರವಾಗಿ ಕೆಲವು ಶಾಸಕರು ನೀಡಿದ ಹೇಳಿಕೆಗಳಿಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿತ್ತು. ಆದರೆ ಈಗ ಸಿಎಂ ಪುತ್ರ ಯತೀಂದ್ರ ನೇರವಾಗಿ ತಂದೆಯ ಪರ ಬ್ಯಾಟ್ ಬೀಸಿದರೂ ಇನ್ನೂ ನೋಟಿಸ್ ನೀಡಿಲ್ಲ ಎಂಬ ಪ್ರಶ್ನೆಯನ್ನು ಡಿಕೆ ಬೆಂಬಲಿಗ ಶಾಸಕರು ಎತ್ತಿದ್ದಾರೆ.

ಬೆಳಗಾವಿ ಅಧಿವೇಶನದ ರಾಜಕೀಯ ವಾತಾವರಣ ಈ ಆರೋಪ-ಪ್ರತ್ಯಾರೋಪಗಳಿಂದ ಮತ್ತಷ್ಟು ಕಾವು ಪಡೆದಿದೆ.

Continue Reading

ರಾಜಕೀಯ

“ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು” : ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಬಾರಿ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ಬಲವಾಗಿ ಮಾತಾಡಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಶೇಖರ್, “ಡಿಕೆ ಶಿವಕುಮಾರ್ ಏಕೆ ಮುಖ್ಯಮಂತ್ರಿಯಾಗಬಾರದು? ಪಕ್ಷವನ್ನು ಕಟ್ಟಿಕೊಂಡವರು, ಪಕ್ಷದ ಶಕ್ತಿ ಹೆಚ್ಚಿಸಿದವರು. ಅವರ ಹಣೆಯಲ್ಲಿ ಸಿಎಂ ಸ್ಥಾನ ಬರೆದಿದ್ದರೆ, ಅವರು ಖಚಿತವಾಗಿ ಸಿಎಂ ಆಗುತ್ತಾರೆ” ಎಂದು ಸ್ಪಷ್ಟಪಡಿಸಿದರು. ಅವರು ನಿನ್ನೆ ನಡೆದ ಡಿನ್ನರ್ ಬಗ್ಗೆ ಹೇಳುವಾಗ, “ಶಿವಕುಮಾರ್ ಅವರು ಊಟಕ್ಕೆ ಕರೆದಿದ್ದರು, ಅಲ್ಲಿ ಸುಮಾರು 70 ಶಾಸಕರು ಇದ್ದರು” ಎಂದು ಮಾಹಿತಿ ಹಂಚಿಕೊಂಡರು.

ಡಿನ್ನರ್ ಬಳಿಕ ಮತ್ತೊಬ್ಬ ಪ್ರಮುಖ ನಾಯಕ ಮತ್ತು ಡಿಕೆ ಶಿವಕುಮಾರ್ ಅವರ ಆಪ್ತನಾದ ಇಕ್ಬಾಲ್ ಹುಸೇನ್ ಕೂಡಾ ತೀವ್ರ ಹೇಳಿಕೆ ನೀಡಿ, “ಸಂಕ್ರಾಂತಿ ಅಲ್ಲ, ಅಧಿವೇಶನ ಮುಗಿಯುತ್ತಲೇ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ” ಎಂದು ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದರು.

ತಡರಾತ್ರಿ ಪ್ರವೀಣ್ ದೊಡ್ಡಣ್ಣನವರ್ ತೋಟದ ಮನೆಯಲ್ಲಿ ನಡೆದ ಈ ಭರ್ಜರಿ ಸಭೆಯಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಹ್ಯಾರಿಸ್, ಮಾಗಡಿ ಬಾಲಕೃಷ್ಣ ಸೇರಿದಂತೆ 55–70 ಶಾಸಕರು ಭಾಗಿಯಾಗಿದ್ದರು. ಸಭೆಯ ನಂತರವೇ DKShi ಪರವಾಗಿ ನೀಡಲಾದ ಹೇಳಿಕೆಗಳು ಸಿದ್ಧರಾಮಯ್ಯ ಬಣಕ್ಕೆ ಆತಂಕ ತರಿಸಿದೆ.

ಈ ನಡುವೆ ಹೈಕಮಾಂಡ್ ಕೂಡಾ ಪರಿಸ್ಥಿತಿ ಗಂಭೀರವಾಗುತ್ತಿರುವುದರಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಆಂತರಿಕ ಚರ್ಚೆ ನಡೆಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಅಧಿವೇಶನ ಮುಗಿದ ನಂತರ ತೀರ್ಮಾನ ಸಂಭವನೀಯ ಎಂಬ ಇಕ್ಬಾಲ್ ಹುಸೇನ್ ಹೇಳಿಕೆ ರಾಜಕೀಯದಲ್ಲಿ ಬೆಂಕಿಗೆ ಎಣ್ಣೆ ಸುರಿದಂತಾಗಿದೆ.

ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬದಲಾವಣೆ ಕುರಿತು ಪ್ರಸಕ್ತ ಗಾಳಿಚರ್ಚೆಗಳಿಗೆ ತೆರೆ ಬಿದ್ದಂತೆ ಮಾತನಾಡಿ, “ಮುಖ್ಯಮಂತ್ರಿ ಬದಲಾವಣೆ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ” ಎಂದು ಹೇಳಿದ್ದಾರೆ. ಕೇವಲ ಎರಡು ದಿನಗಳೊಳಗೆ ಅವರು ಎರಡನೇ ಬಾರಿ ಇದೇ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಬಲವಾದ ಸಂದೇಶ ನೀಡಿದಂತಾಗಿದೆ.

Continue Reading

ದೇಶ

ಅಧಿವೇಶನದ ನಂತರ ಡಿಕೆಶಿ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್

ಬೆಳಗಾವಿ: “ಸಂಕ್ರಾಂತಿಯಲ್ಲ, ಅಧಿವೇಶನ ಮುಗಿದ ಕೂಡಲೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಬೆಳಗಾವಿ ಸುವರ್ಣಸೌಧದಲ್ಲಿ ಸ್ಪಷ್ಟಪಡಿಸಿದ್ದಾರೆ.

“ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕನಾಗಿದ್ದೇನೆ. ಹಾಗೆಯೇ ಡಿ.ಕೆ. ಶಿವಕುಮಾರ್ ಅವರ ಹಣೆಯಲ್ಲಿ ಸಿಎಂ ಸ್ಥಾನ ಬರೆದಿದೆ. ಅವರು ಖಚಿತವಾಗಿ ಸಿಎಂ ಆಗುತ್ತಾರೆ” ಎಂದು ಇಕ್ಬಾಲ್ ಹುಸೇನ್ ಹೇಳಿದರು. “ನಿನ್ನೆ 55 ಜನ ಶಾಸಕರು ಒಟ್ಟಿಗೆ ಊಟ ಮಾಡಿದ್ದೇವೆ. ಅದರಲ್ಲಿ ಯಾವ ರಾಜಕೀಯ ಚರ್ಚೆಯೂ ನಡೆಯಲಿಲ್ಲ. ನಮಗೆ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು, ಆಗಲೇಬೇಕು” ಎಂದರು.

“ಡಿ.ಕೆ. ಶಿವಕುಮಾರ್ ಕಷ್ಟಪಟ್ಟಿದ್ದಾರೆ, ಅದರ ಫಲ ಅವರು ಪಡೆಯಲೇಬೇಕು. ಅಧಿವೇಶನ ಮುಗಿದ ತಕ್ಷಣ ಬದಲಾವಣೆ ಸಾಧ್ಯ. ಸಂಖ್ಯಾಬಲ ಮುಖ್ಯವಲ್ಲ, ಹೈಕಮಾಂಡ್ ನಿರ್ದೇಶನೆಯೇ ಅಂತಿಮ” ಎಂದು ಅವರು ಹೇಳಿದರು.

ಡಿನ್ನರ್‌ ಸಭೆಯಲ್ಲಿ 50–60 ಮಂದಿ ಸೇರಿದ್ದರೂ, ಇದು ರಾಜಕೀಯ ಚರ್ಚೆಗೆ ವೇದಿಕೆ ಆಗಲಿಲ್ಲ ಎಂದು ಸ್ಪಷ್ಟಪಡಿಸಿದರು. “ಡಿ.ಕೆ. ಶಿವಕುಮಾರ್ ಕರೆದರೆ ಯಾವ ಪಕ್ಷದವರಾದರೂ ಬರುತ್ತಾರೆ. ವಿಶ್ವಾಸ, ಪ್ರೀತಿ, ಬಾಂಧವ್ಯ – ಪಕ್ಷವೇನೂ matter ಆಗೋದಿಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷ” ಎಂದರು.

ಮುಖ್ಯಮಂತ್ರಿಯ ಪರವಾಗಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೀಡಿರುವ ಮಾರ್ಗದರ್ಶನವೇ ನಮಗೆ ಅಂತಿಮ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ; ನಾನು ಡಿನ್ನರ್‌ಗೆ ಹೋಗಿರಲಿಲ್ಲ” ಎಂದು ಹೇಳಿದರು.

Continue Reading

Trending