Connect with us

ದೇಶ

ದೆಹಲಿ ಜಾಮಾ ಮಸೀದಿಯಲ್ಲಿ ಈದ್-ಉಲ್-ಫಿತರ್ ಸಂಭ್ರಮ: ದೇಶಾದ್ಯಂತ ಭಕ್ತರ ಪ್ರಾರ್ಥನೆ

Published

on

ನವದೆಹಲಿ: ಜಾಮಾ ಮಸೀದಿಯಲ್ಲಿ ಶನಿವಾರ ಬೆಳಗ್ಗೆ ಈದ್-ಉಲ್-ಫಿತರ್ ವಿಶೇಷ ನಮಾಜ್ ಭಕ್ತಿಭಾವದಿಂದ ನೆರವೇರಿತು. ಪವಿತ್ರ ರಂಜಾನ್ ತಿಂಗಳ ಅಂತ್ಯವನ್ನು ಸೂಚಿಸುವ ಈ ಹಬ್ಬದ ಹಿನ್ನೆಲೆಯಲ್ಲಿ ಮಸೀದಿ ಆವರಣ ಮತ್ತು ಹಳೆಯ ದೆಹಲಿಯ ಬೀದಿಗಳು ಭಕ್ತರಿಂದ ಕಿಕ್ಕಿರಿದು ಕಂಡವು.

ಶವ್ವಾಲ್ ಅರ್ಧಚಂದ್ರದ ದರ್ಶನದ ನಂತರ ಆರಂಭವಾದ ಈದ್ ಸಂಭ್ರಮದಲ್ಲಿ ಕುಟುಂಬಗಳು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಹಬ್ಬದ ಮುನ್ನ ದಿನ ಜಾಮಾ ಮಸೀದಿ ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ಭಾರೀ ಜನಸಂದಣಿ ಕಂಡುಬಂದಿದ್ದು, ಜನರು ಬಟ್ಟೆ ಹಾಗೂ ಆಹಾರ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿದ್ದರು.

ಭದ್ರತೆ ದೃಷ್ಟಿಯಿಂದ ದೆಹಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರು. ಇದೇ ವೇಳೆ ‘ಅಲ್ವಿದಾ ನಮಾಜ್’ ಕೂಡ ಭಕ್ತರಿಂದ ಭಕ್ತಿಪೂರ್ವಕವಾಗಿ ನೆರವೇರಿತು.

ದೇಶದ ವಿವಿಧ ಭಾಗಗಳಲ್ಲಿಯೂ ಈದ್ ಹಬ್ಬದ ಸಂಭ್ರಮ ಜೋರಾಗಿದೆ. ಜೋಹಾರಿ ಬಜಾರ್ ಜಾಮಾ ಮಸೀದಿಯಲ್ಲಿಯೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ದೇಶದ ಜನತೆಗೆ ಶುಭಾಶಯ ಕೋರಿ, ಈ ಹಬ್ಬವು ಪ್ರೀತಿ, ಸಹೋದರತ್ವ ಮತ್ತು ಶಾಂತಿಯ ಸಂದೇಶವನ್ನು ಸಾರುತ್ತದೆ ಎಂದು ಹೇಳಿದ್ದಾರೆ.

ರಂಜಾನ್ ತಿಂಗಳು ಮುಸ್ಲಿಮರಿಗೆ ಅತ್ಯಂತ ಪವಿತ್ರ ಕಾಲವಾಗಿದ್ದು, ಉಪವಾಸ, ಪ್ರಾರ್ಥನೆ ಮತ್ತು ದಾನ ಧರ್ಮದ ಮೂಲಕ ಆತ್ಮಶುದ್ಧಿಯನ್ನು ಸಾಧಿಸುವ ಸಮಯವಾಗಿದೆ. ಈದ್-ಉಲ್-ಫಿತರ್ ಉಪವಾಸದ ಅಂತ್ಯವನ್ನು ಸೂಚಿಸುವ ಹಬ್ಬವಾಗಿದ್ದು, ಕುಟುಂಬಗಳು ಒಟ್ಟಾಗಿ ಹಬ್ಬದ ಊಟವನ್ನು ಹಂಚಿಕೊಂಡು, ಬಡವರಿಗೆ ಸಹಾಯ ಮಾಡುವ ಮೂಲಕ ಸಂಭ್ರಮಿಸುತ್ತಾರೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಅಪರಾಧ

Bidadi Township ವಿವಾದ ತೀವ್ರ: 20ಕ್ಕೂ ಹೆಚ್ಚು ರೈತರ ವಿರುದ್ಧ ಎಫ್‌ಐಆರ್

Published

on

ರಾಮನಗರ: Bidadi Township ಬಿಡದಿ ಟೌನ್‌ಶಿಪ್ ಯೋಜನೆ (Bidadi Township Project) ಸಂಬಂಧ ಜಂಟಿ ಭೂಮಾಪನ (JMC Survey) ಕಾರ್ಯದ ವೇಳೆ ಉಂಟಾದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ನಡೆಸುವುದು ಹಾಗೂ ಸರ್ವೆ ಕಾರ್ಯಕ್ಕೆ ಅಡ್ಡಿಯಾಗಿರುವ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಇದಕ್ಕೂ ನಡುವೆ, ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ಕಟ್ಟೆಚ್ಚರ ವಹಿಸಿದ್ದು, ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆ ಆರಂಭಿಸಲು ಮುಂದಾದರೆ ಸ್ಥಳದಲ್ಲೇ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ರೈತ ಸಂಘಟನೆಗಳು ಹಾಗೂ ಸ್ಥಳೀಯರು ಯಾವುದೇ ಸಂದರ್ಭಕ್ಕೂ ಸಜ್ಜಾಗಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜೆಎಂಸಿ ಸರ್ವೆ ಕಾರ್ಯವನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಮೊದಲು ಪ್ರತಿಭಟನಾ ನಿರತ ರೈತರೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಮತ್ತೊಂದೆಡೆ, ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳಲ್ಲಿ ಮಾತ್ರ ಸರ್ವೆ ಕಾರ್ಯ ಮುಂದುವರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯೊಂದಿಗೆ ಸರ್ವೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳಿಂದ ಬಿಡದಿ ಟೌನ್‌ಶಿಪ್ ಯೋಜನೆ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ರೈತರ ನಡುವಿನ ಮಾತುಕತೆ ಮಹತ್ವ ಪಡೆದುಕೊಳ್ಳಲಿದೆ. ಯೋಜನೆ (Bidadi Township Project) ಸಂಬಂಧ ಜಂಟಿ ಭೂಮಾಪನ (JMC Survey) ಕಾರ್ಯದ ವೇಳೆ ಉಂಟಾದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಮತ್ತೊಂದೆಡೆ, ಯೋಜನೆಗೆ ಒಪ್ಪಿಗೆ ಸೂಚಿಸಿರುವ ರೈತರ ಜಮೀನುಗಳಲ್ಲಿ ಮಾತ್ರ ಸರ್ವೆ ಕಾರ್ಯ ಮುಂದುವರಿಸಲು ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯೊಂದಿಗೆ ಸರ್ವೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಈ ಬೆಳವಣಿಗೆಗಳಿಂದ ಬಿಡದಿ ಟೌನ್‌ಶಿಪ್ ಯೋಜನೆ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತು ರೈತರ ನಡುವಿನ ಮಾತುಕತೆ ಮಹತ್ವ ಪಡೆದುಕೊಳ್ಳಲಿದೆ.

Continue Reading

ಬೆಂಗಳೂರು

ಮಾಜಿ ಸಚಿವ ರಾಮಚಂದ್ರಗೌಡ ನಿಧನ: ಬೆಂಗಳೂರಿನಲ್ಲಿ ರಾಜಕೀಯ ಶೋಕ

Published

on

ಬೆಂಗಳೂರು: ಮಾಜಿ ಸಚಿವ ರಾಮಚಂದ್ರಗೌಡ ಹಾಗೂ ಕರ್ನಾಟಕದ ಹಿರಿಯ ರಾಜಕಾರಣಿ ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಚಂದ್ರಾಲೇಔಟ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ 6.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಮಚಂದ್ರಗೌಡ ಅವರು ವೈದ್ಯಕೀಯ ಶಿಕ್ಷಣ, ರೇಷ್ಮೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿ ರಾಜ್ಯಕ್ಕೆ ಸೇವೆ ಸಲ್ಲಿಸಿದ್ದರು. ಸಾರ್ವಜನಿಕ ಜೀವನದಲ್ಲಿ ಹಲವು ದಶಕಗಳ ಕಾಲ ಸಕ್ರಿಯರಾಗಿದ್ದ ಅವರು ಬೆಂಗಳೂರು ಪದವೀಧರರ ಕ್ಷೇತ್ರವನ್ನು ಸಮರ್ಥವಾಗಿ ಪ್ರತಿನಿಧಿಸಿ ಜನಪ್ರಿಯ ನಾಯಕನಾಗಿ ಗುರುತಿಸಿಕೊಂಡಿದ್ದರು.

ಕುಟುಂಬಸ್ಥರ ಮಾಹಿತಿಯಂತೆ, ಇಂದು ಕಾಮಾಕ್ಷಿಪಾಳ್ಯದ ಜಮೀನಿನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅವರ ನಿಧನದ ಸುದ್ದಿ ರಾಜ್ಯ ರಾಜಕೀಯ ವಲಯದಲ್ಲಿ ಆಘಾತ ಮತ್ತು ದುಃಖವನ್ನುಂಟು ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ರಾಮಚಂದ್ರಗೌಡರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡ ವಿಜಯೇಂದ್ರ, ರಾಮಚಂದ್ರಗೌಡರು ಪಕ್ಷದ ಹಿರಿಯ ನಾಯಕರು, ಮಾರ್ಗದರ್ಶಕರು ಹಾಗೂ ಜನಸಾಮಾನ್ಯರ ಧ್ವನಿಯಾಗಿದ್ದರು ಎಂದು ಹೇಳಿದ್ದಾರೆ.

ಸಂಘದ ಸ್ವಯಂಸೇವಕರಾಗಿ ಸಾರ್ವಜನಿಕ ಜೀವನ ಆರಂಭಿಸಿದ ಅವರು ಜನಸಂಘದ ದಿನಗಳಿಂದಲೇ ತತ್ವಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿದರು. ಬೆಂಗಳೂರು ಪಾಲಿಕೆ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಸಚಿವರಾಗಿ ಅವರು ಸಲ್ಲಿಸಿದ ಸೇವೆ ರಾಜ್ಯ ರಾಜಕಾರಣದಲ್ಲಿ ಆದರ್ಶಪ್ರಾಯವಾಗಿದೆ ಎಂದು ವಿಜಯೇಂದ್ರ ಸ್ಮರಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸಂಘಟನೆಯನ್ನು ತಳಮಟ್ಟದಿಂದ ಬೆಳೆಸುವಲ್ಲಿ ರಾಮಚಂದ್ರಗೌಡರ ಪಾತ್ರ ಮಹತ್ತರವಾಗಿದೆ. ಅವರ ಆಡಳಿತಾತ್ಮಕ ದಕ್ಷತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಪ್ರೇರಣಾದಾಯಕವಾಗಿದ್ದು, ಅವರ ಅಗಲಿಕೆ ರಾಜ್ಯ ರಾಜಕಾರಣಕ್ಕೆ ಭರಿಸಲಾಗದ ನಷ್ಟವಾಗಿದೆ ಎಂದು ನಾಯಕರು ಅಭಿಪ್ರಾಯಪಟ್ಟಿದ್ದಾರೆ.

Continue Reading

ರಾಜ್ಯ

Gruha Lakshmi ಫಲಾನುಭವಿಗಳೇ ಗಮನಿಸಿ: ಇ-ಕೆವೈಸಿ ಸುದ್ದಿ ಸುಳ್ಳು, ಸೈಬರ್ ಕೇಂದ್ರಕ್ಕೆ ಅಲೆಯದಿರಿ

Published

on

ಬೆಂಗಳೂರು: Gruha Lakshmi ಫಲಾನುಭವಿಗಳೇ ಗಮನಿಸಿ: ಇ-ಕೆವೈಸಿ ಸುದ್ದಿ ಸುಳ್ಳು, ಸೈಬರ್ ಕೇಂದ್ರಕ್ಕೆ ಅಲೆಯದಿರಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಸರ್ಕಾರ ಒಂದು ಮಹತ್ವದ ಸ್ಪಷ್ಟನೆ ನೀಡಿದೆ. ಗೃಹಲಕ್ಷ್ಮಿ ಹಣ ಮುಂದುವರಿಸಿಕೊಳ್ಳಲು ಇ-ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ಸ್ಪಷ್ಟಪಡಿಸಿದ್ದಾರೆ.

ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಲಾಭ ಮುಂದುವರೆಸಲು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಮುಗಿಬೀಳುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕರು ವಿನಾಕಾರಣ ಸೈಬರ್ ಕೇಂದ್ರಗಳಿಗೆ ಅಲೆದಾಡಿ ಹಣ ಹಾಗೂ ಸಮಯ ವ್ಯಯಿಸಿ ತೊಂದರೆಗೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಮಾಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದ್ದರೂ ಸಹ, ಈ ಪರಿಷ್ಕರಣೆ ಯಾವ ಮಟ್ಟದಲ್ಲಿ ನಡೆಯಬೇಕು ಮತ್ತು ಯಾವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಮಾರ್ಗದರ್ಶನ ಅಥವಾ ಸೂಚನೆಗಳು ಇನ್ನೂ ಹೊರಬಿದ್ದಿಲ್ಲ. ಪ್ರಸ್ತುತ ಯಾವುದೇ ಅಡಚಣೆಯಿಲ್ಲದೆ ಹಣ ಪಾವತಿಯಾಗುತ್ತಿದ್ದು, ಇ-ಕೆವೈಸಿ ನೆಪದಲ್ಲಿ ಸಾರ್ವಜನಿಕರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಎ.ಪಿ.ಎಲ್, ಬಿ.ಪಿ.ಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೇರವಾಗಿ ಡಿ.ಬಿ.ಟಿ (DBT) ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಯೋಜನೆ ಆರಂಭವಾದಾಗಿನಿಂದ ಇದುವರೆಗೆ ಒಟ್ಟು 30 ಕಂತುಗಳಲ್ಲಿ ಹಣವನ್ನು ಯಶಸ್ವಿಯಾಗಿ ಪಾವತಿಸಲಾಗಿದ್ದು, ಲಕ್ಷಾಂತರ ಮಹಿಳೆಯರು ತಮ್ಮ ಕುಟುಂಬದ ದೈನಂದಿನ ಖರ್ಚು, ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ವೆಚ್ಚಗಳನ್ನು ನಿರ್ವಹಿಸಲು ಈ ಯೋಜನೆಯಿಂದ ನೆರವು ಪಡೆಯುತ್ತಿದ್ದಾರೆ.

ಕರ್ನಾಟಕದ ಶಾಶ್ವತ ನಿವಾಸಿಯಾಗಿರುವ, ರೇಷನ್ ಕಾರ್ಡ್‌ನಲ್ಲಿ ಕುಟುಂಬದ ಮುಖ್ಯಸ್ಥೆಯಾಗಿರುವ ಮತ್ತು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿರುವ ಮಹಿಳೆಯರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಆದರೆ, ಸರ್ಕಾರಿ ನೌಕರರು ಹಾಗೂ ಆದಾಯ ತೆರಿಗೆ ಪಾವತಿಸುವವರಿಗೆ ಈ ಯೋಜನೆಯಡಿ ಲಾಭ ಸಿಗುವುದಿಲ್ಲ. ಫಲಾನುಭವಿಗಳು ತಮ್ಮ ಖಾತೆಗೆ ಹಣ ಬಂದಿದೆಯೇ ಎಂದು ಪರಿಶೀಲಿಸಲು ‘DBT ಕರ್ನಾಟಕ’ ಆ್ಯಪ್, ಸೇವಾ ಸಿಂಧು ಪೋರ್ಟಲ್, ಬ್ಯಾಂಕ್ ಪಾಸ್‌ಬುಕ್ ಅಪ್ಡೇಟ್ ಅಥವಾ ಬ್ಯಾಂಕಿನಿಂದ ಬರುವ ಎಸ್‌ಎಮ್‌ಎಸ್ (SMS) ಮೂಲಕ ಸುಲಭವಾಗಿ ತಿಳಿದುಕೊಳ್ಳಬಹುದು. ಯಾವುದೇ ಗೊಂದಲಕ್ಕೆ ಒಳಗಾಗದೆ, ಅಧಿಕೃತ ಮೂಲಗಳಿಂದ ಮಾಹಿತಿ ಪಡೆಯುವಂತೆ ಪ್ರಾಧಿಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Continue Reading

Trending