ಕ್ರೀಡೆ
ಪಾಕಿಸ್ತಾನದ ಬುರುಡೆ ಮೇಲೆ ಗೆಲುವಿನ ಆಮ್ಲೇಟ್ ಬೇಯಿಸಿದ ಆಫ್ಘನ್!
ಚೆನ್ನೈ: ನಾವೇ ನಂಬರ್ ಒನ್, ಕಪ್ ಗೆಲ್ಲುವುದು ನಾವೇ ಎಂದುಕೊಂಡು ಭಾರತಕ್ಕೆ ವಿಶ್ವ ಕಪ್ ಆಡಲು ಬಂದಿದ್ದ ಪಾಕಿಸ್ತಾನ ತಂಡ ದುರ್ಬಲ ಅಫಘಾನಿಸ್ತಾನ ತಂಡದ ವಿರುದ್ಧವೇ ಸೋತು ಅವಮಾನಕ್ಕೆ ಈಡಾಗಿದೆ. ಇದು ಬಾಬರ್ ಅಜಮ್ ನೇತೃತ್ವದ ಪಾಕ್ ಬಳಗಕ್ಕೆ ಹಾಲಿ ವಿಶ್ವ ಕಪ್ನಲ್ಲಿ ಸತತ ಮೂರನೇ ಸೋಲು. ಭಾರತ ವಿರುದ್ಧ ಮೋದಿ ಸ್ಟೇಡಿಯಮ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲ ಸೋಲು ಕಂಡಿದ್ದ ಪಾಕಿಸ್ತಾನ, ನಂತರ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. ಇದೀಗ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಅಫಘಾನಿಸ್ತಾನ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಸುಲಿನ ಸುಳಿಯಲ್ಲಿ ಸಿಲುಕಿದ್ದ ಪಾಕ್ ತಂಡದ ಬುರುಡೆ ಮೇಲೆ ಅಫಘಾನಿಸ್ತಾನದ ಆಟಗಾರರು ಆಮ್ಲೇಟ್ ಬೇಯಿಸಿದಂತಾಗಿದೆ.
ಚೆನ್ನೈನ ಚೆಪಾಕ್ ಸ್ಟೇಡಿಯಮ್ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಮೊದಲು ಬ್ಯಾಟ್ ಮಾಡಲು ಮುಂದಾಯಿತು. ಅಂತೆಯೇ ಆಫ್ಘನ್ ಬೌಲರ್ಗಳೆದುರು ವೈಫಲ್ಯ ಕಂಡು ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ಗೆ 282 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಅಪಘಾನಿಸ್ತಾನ ತಂಡ ಇನ್ನೂ ಆರು ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್ ನಷ್ಟಕ್ಕೆ 286 ರನ್ ಬಾರಿಸಿ ಎಂಟು ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿತು. ಇದು ಏಕ ದಿನ ಕ್ರಿಕೆಟ್ ಮಾದರಿಯಲ್ಲಿ ಪಾಕ್ ವಿರುದ್ಧ ಅಫಘಾನಿಸ್ತಾನ ತಂಡ ದಾಖಲಿಸಿದ ಮೊದಲ ವಿಜಯವಾಗಿದೆ. ಜತೆಗೆ ಏಕ ದಿನ ಮಾದರಿಯಲ್ಲಿನ ಅತಿ ದೊಡ್ಡ ಚೇಸಿಂಗ್ ಜಯ.
ಅಫಘಾನಿಸ್ತಾನ ತಂಡ ಈ ಹಿಂದೆ ಎರಡು ಆವೃತ್ತಿಯ ವಿಶ್ವ ಕಪ್ನಲ್ಲಿ ಆಡಿತ್ತು. ಎರಡರಲ್ಲೂ ತಲಾ ಒಂದು ವಿಜಯ ಕಂಡಿತ್ತು. ಈ ಬಾರಿ ಎರಡನೇ ಗೆಲುವು ಕಂಡಿದೆ ಎಂಬುದೂ ವಿಶೇಷವೇ ಸರಿ. ಡೆಲ್ಲಿಯಲ್ಲಿ ನಡೆದ ಪಂದ್ಯದಲ್ಲಿ 2019ರ ಆವೃತ್ತಿಯ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿದ್ದ ಅಪಘಾನಿಸ್ತಾನ ತಂಡ ಇದೀಗ ಐಸಿಸಿ ಏಕ ದಿನ ರ್ಯಾಂಕ್ ಪಟ್ಟಿಯ ಮೂರನೇ ತಂಡವಾಗಿರುವ ಪಾಕಿಸ್ತಾನವನ್ನು ಮಣಿಸಿದೆ. ಹೀಗಾಗಿ ಅಫಘಾನಿಸ್ತಾನ ತಂಡಕ್ಕಿದು ಅದ್ಭುತ ಆವೃತ್ತಿ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ.
ಸೋಲಿನ ಹೊರತಾಗಿಯೂ ಅಂಕಪಟ್ಟಿಯಲ್ಲಿ ಪಾಕಿಸ್ತಾನ ತಂಡದ ಸ್ಥಾನವೇನೂ ಪಲ್ಲಟವಾಗಿಲ್ಲ. ಅದಿನ್ನೂ ಐದನೇ ಸ್ಥಾನಲ್ಲಿಯೇ ಉಳಿದುಕೊಂಡಿದೆ. ಅದೇ ರೀತಿ ಅಪಘಾನಿಸ್ತಾನ ತಂಡದ ಸ್ಥಾನವೂ ಅಷ್ಟರಲ್ಲೇ ಇದೆ. ನೆಟ್ರೇಟ್ ಪ್ರಕಾರ ಅಫಘಾನಿಸ್ತಾನಕ್ಕಿಂತ ಕೊಂಚ ಮುಂದಿರುವ ಪಾಕಿಸ್ತಾನ ಐದನೇ ಸ್ಥಾನದಲ್ಲಿ ಉಳಿದುಕೊಂಡಿದೆ.
ಸ್ಪರ್ಧಾತ್ಮಕ ಗುರಿಯನ್ನು ಪಡೆದಿದ್ದ ಅಫಘಾನಿಸ್ತಾನ ತಂಡದ ಬ್ಯಾಟರ್ಗಳು ತಮ್ಮ ಅದ್ಭುತ ಬ್ಯಾಟಿಂಗ್ ಕೌಶಲವನ್ನು ಪ್ರದರ್ಶಿಸಿದರು. ಉತೃಷ್ಟ ತಂಡಗಳು ನೀಡುವ ಪ್ರದರ್ಶನದಂತಿತ್ತು ಆಫ್ಘನ್ ಆಟಗಾರರ ಆಟ. ಆರಂಭಿಕ ಜೋಡಿಯಾಗಿರುವ ರಹ್ಮನುಲ್ಲಾ ಗುರ್ಬಜ್ (65) ಹಾಗೂ ಇಬ್ರಾಹಿಂ ಜದ್ರಾನ್ (87) ಮೊದಲ ವಿಕೆಟ್ಗೆ 130 ರನ್ ಬಾರಿಸಿ ಮಿಂಚಿದರು. ನಂತರದ ವಿಕೆಟ್ಗೆ ಇನ್ನೂ 60 ರನ್ ಸೇರ್ಪಡೆಗೊಂಡಿತು. ಮೂರನೇ ವಿಕೆಟ್ಗೆ 96 ರನ್ಗಳು ಸೇರ್ಪಡೆಗೊಂಡವು. ಮೂರನೇ ಕ್ರಮಾಂಕದಲ್ಲಿ ಆಡಿದ ರಹ್ಮತ್ ಶಾ (77) ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರೆ, ನಾಯಕ ಹಶ್ಮತುಲ್ಲಾ ಶಾಹಿದಿ 48 ರನ್ ಬಾರಿಸಿದರು. ಅಂದಹಾಗೆ ಮೊದಲ ಮೂವರು ಬ್ಯಾಟರ್ಗಳು ಅರ್ಧ ಶತಕ ಬಾರಿಸಿ ಮಿಂಚಿದರೆ, ಹಶ್ಮತುಲ್ಲಾ 2 ರನ್ಗಳ ಕೊರತೆಯಿಂದ ಅರ್ಧ ಶತಕದ ಅವಕಾಶ ತಪ್ಪಿಸಿಕೊಂಡರು. ಇದು ಏಕ ದಿನ ಮಾದರಿಯಲ್ಲಿ ಅಫಘಾನಿಸ್ತಾನ ತಂಡದ ಅಮೋಘ ಪ್ರದರ್ಶನ ಎನಿಸಿಕೊಳ್ಳಲಿದೆ.
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಸಾಧಾರಣ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆರಂಭಿಕ ಆಟಗಾರ ಅಬ್ದುಲ್ಲಾ ಶಫಿಕ್ (58) ಹಾಗೂ ನಾಯಕ ಬಾಬರ್ ಅಜಮ್ (74) ಅರ್ಧ ಶತಕ ಬಾರಿಸಿದರೂ ಅವರ ಈ ಆಟದಲ್ಲಿ ಯಾವುದೇ ಕಿಮ್ಮತ್ತು ಇರಲಿಲ್ಲ. ತಂಡದ ಪಾಲಿಗೆ ದೊಡ್ಡ ಮೊತ್ತ ಪೇರಿಸುವ ಗುರಿಯೂ ಇಲಿಲ್ಲ. ಅಂತಿಮವಾಗಿ ಶದಾಬ್ ಖಾನ್ ಹಾಗೂ ಇಫ್ತಿಕಾರ್ ಅಹಮದ್ ಕಡಿಮೆ ಎಸೆತಗಳಲ್ಲಿ ತಲಾ 40 ರನ್ ಬಾರಿಸಿದರೂ ಅದರಿಂದ ತಂಡಕ್ಕೆ ಪ್ರಯೋಜನ ಆಗಿಲ್ಲ ಎಂಬುದು ಫಲಿತಾಂಶದ ಬಳಿಕ ಗೊತ್ತಾಯಿತು. ಚೇಸ್ ಮಾಡಿ ಗೆಲ್ಲಬಹುದಾದ ಚೆನ್ನೈ ಪಿಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ಅದಕ್ಕೆ ಬೆಲೆ ತೆತ್ತಿತು.
ಕ್ರೀಡೆ
IND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
ಟಿ20 ವಿಶ್ವಕಪ್ ಟೂರ್ನಿಯ ಬಹು ನಿರೀಕ್ಷಿತ ಭಾರತ–ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಶಿವರಾತ್ರಿ ಹಬ್ಬದಂದೇ ನಡೆಯಲಿರುವ ಈ ನಿರ್ಣಾಯಕ ಸಮರಕ್ಕಾಗಿ ಎರಡೂ ತಂಡಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ.
ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ಫೆ.12ರಂದು ನಮೀಬಿಯಾ ವಿರುದ್ಧ ಕಣಕ್ಕಿಳಿದು ಗೆಲುವಿನ ಆತ್ಮವಿಶ್ವಾಸದೊಂದಿಗೆ ಪಾಕಿಸ್ತಾನ ಎದುರಿಸಲು ಸಜ್ಜಾಗಿದೆ.
ಈ ಮಧ್ಯೆ, ಪಾಕಿಸ್ತಾನದ ನಿಗೂಢ ಸ್ಪಿನ್ನರ್ ಉಸ್ಮಾನ್ ತಾರಿಕ್ ಭಾರತಕ್ಕೆ ಬಲವಾದ ಎಚ್ಚರಿಕೆ ನೀಡಿದ್ದಾರೆ. “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ. ಅದಕ್ಕಾಗಿ ನನ್ನ ಬೌಲಿಂಗ್ ಶೈಲಿಯ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.
ಮಾತಿನ ಸಮರ ಜೋರಾಗಿದೆ
ಟಿ20 ವಿಶ್ವಕಪ್ ಈಗ ರೋಚಕ ಹಂತ ತಲುಪಿದ್ದು, ಈಗಾಗಲೇ 15ಕ್ಕೂ ಹೆಚ್ಚು ಪಂದ್ಯಗಳು ಪೂರ್ಣಗೊಂಡಿವೆ. ಭಾರತ–ಪಾಕಿಸ್ತಾನ ಪಂದ್ಯ ನಡೆಯುತ್ತದೆಯೇ? ಎಂಬ ಅನುಮಾನಕ್ಕೆ ತೆರೆಬಿದ್ದಿದ್ದು, ಪಾಕಿಸ್ತಾನ ಪಂದ್ಯಕ್ಕೆ ಒಪ್ಪಿಗೆ ನೀಡಿದೆ.
ಪಂದ್ಯ ಖಚಿತವಾದ ಬೆನ್ನಲ್ಲೇ ಎರಡೂ ತಂಡಗಳ ನಡುವೆ ಮಾತಿನ ಸಮರ ಜೋರಾಗಿದೆ. ಪಾಕಿಸ್ತಾನಿ ಆಟಗಾರರು ಭಾರತವನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದರೆ, ಭಾರತೀಯರು ಪಾಕಿಸ್ತಾನವನ್ನು ಮಣಿಸುತ್ತೇವೆ ಎಂದು ತಿರುಗೇಟು ನೀಡುತ್ತಿದ್ದಾರೆ.
ತಾರಿಕ್ ಸಮರ್ಥನೆ
ಭಾರತೀಯರು ನನ್ನ ಬೌಲಿಂಗ್ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಐಸಿಸಿ ನಿಯಮಗಳ ಪ್ರಕಾರ ನನ್ನ ಬೌಲಿಂಗ್ ಶೈಲಿ ಮಾನ್ಯವಾಗಿದೆ ಎಂದು ಉಸ್ಮಾನ್ ತಾರಿಕ್ ಸಮರ್ಥಿಸಿಕೊಂಡಿದ್ದಾರೆ.
“ಭಾರತೀಯ ಆಟಗಾರರಿಗೆ ನನ್ನ ಬೌಲಿಂಗ್ನಿಂದ ಹೆಚ್ಚುವರಿ ಒತ್ತಡ ಇದೆ. ಅದಕ್ಕಾಗಿಯೇ ಆರೋಪ ಮಾಡುತ್ತಿದ್ದಾರೆ. ಫೆಬ್ರವರಿ 15ರಂದು ಭಾರತದ ಅಗ್ರ ಕ್ರಮಾಂಕವನ್ನು ಕೆಡವುತ್ತೇನೆ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ನನ್ನ ಬಗ್ಗೆ ಏನು ಚರ್ಚೆ ನಡೆಯುತ್ತಿದೆ ಎಂಬುದನ್ನು ನಾನು ಪರಿಗಣಿಸುವುದಿಲ್ಲ. ನನ್ನ ಗಮನ ಪಂದ್ಯದಲ್ಲೇ ಇದೆ” ಎಂದು ತಾರಿಕ್ ಹೇಳಿದ್ದಾರೆ.
ಕ್ರೀಡೆ
RCB ಮಾರಾಟ ಪ್ರಕ್ರಿಯೆ ಆರಂಭ: ಜೈಲಿನಿಂದಲೇ ಸುಕೇಶ್ ₹8,300 ಕೋಟಿ ಬಿಡ್?
ಬೆಂಗಳೂರು, ಫೆ.12: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾರಾಟ ಪ್ರಕ್ರಿಯೆಯ ಮೊದಲ ಹಂತ ಅಧಿಕೃತವಾಗಿ ಆರಂಭವಾಗಿದೆ. ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವ ಡಿಯಾಜಿಯೋ (Diageo) ಕಂಪನಿಯು ಆಸಕ್ತ ಖರೀದಿದಾರರಿಗೆ ಮಾಹಿತಿ ಪತ್ರಗಳನ್ನು ವಿತರಿಸಿದೆ. ಈ ನಡುವೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಅವರು RCB ಖರೀದಿಗೆ ಬಿಡ್ ಸಲ್ಲಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಕೇಂದ್ರ ಕಾನೂನು ಸಚಿವಾಲಯದ ಅಧಿಕಾರಿ ಎಂದು ಬಿಂಬಿಸಿಕೊಂಡು ವಂಚನೆ ಆರೋಪದಡಿ ಬಂಧನದಲ್ಲಿರುವ ಸುಕೇಶ್, ತಮ್ಮ ಎಲ್ಎಸ್ ಹೋಲ್ಡಿಂಗ್ಸ್ (LS Holdings) ಸಂಸ್ಥೆ ಮೂಲಕ ಡಿಯಾಜಿಯೋಗೆ ಪತ್ರ ಬರೆದು 1 ಬಿಲಿಯನ್ ಯುಎಸ್ ಡಾಲರ್ (ಸುಮಾರು ₹8,300 ಕೋಟಿ) ಮೊತ್ತದ ಸಂಪೂರ್ಣ ನಗದು ಬಿಡ್ ನೀಡಲು ಸಿದ್ಧ ಎಂದು ತಿಳಿಸಿದ್ದಾರೆ. 48 ಗಂಟೆಗಳೊಳಗೆ ಪಾವತಿ ಪೂರ್ಣಗೊಳಿಸಲು ಸಿದ್ಧತೆ ಇದೆ ಎಂದು ಕೂಡ ಹೇಳಿದ್ದಾರೆ.
ಸುಕೇಶ್, RCB ಅನ್ನು ತಮ್ಮ ತವರು ತಂಡ ಎಂದು ಬಣ್ಣಿಸಿ, ಫ್ರಾಂಚೈಸಿಯನ್ನು ಸ್ವಾಧೀನಪಡಿಸಿಕೊಂಡರೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ಗೆ ಉಡುಗೊರೆಯಾಗಿ ನೀಡುವುದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಇದೇವರೆಗೆ 9 ಬಿಡ್ಗಳು ಸಲ್ಲಿಕೆಯಾಗಿವೆ ಎಂದು ವರದಿಗಳು ಸೂಚಿಸುತ್ತವೆ. ಸೀರಂ ಇನ್ಸ್ಟಿಟ್ಯೂಟ್ನ ಅದಾರ್ ಪೂನಾವಾಲಾ ಹಾಗೂ ಮ್ಯಾಂಚೆಸ್ಟರ್ ಯುನೈಟೆಡ್ ಸಹ ಮಾಲೀಕತ್ವ ಹೊಂದಿರುವ ಗ್ಲೇಝರ್ಸ್ ಕಂಪನಿಗಳು ಪೈಪೋಟಿಯಲ್ಲಿ ಇದ್ದಾರೆ. ಗ್ಲೇಝರ್ಸ್ ಸಂಸ್ಥೆ ಸುಮಾರು ₹16,300 ಕೋಟಿ ಮೊತ್ತದ ಬಿಡ್ ಸಲ್ಲಿಸಿದೆ ಎನ್ನಲಾಗಿದೆ.
RCB ಮಾರಾಟ ಪ್ರಕ್ರಿಯೆ ಈಗ ಕ್ರಿಕೆಟ್ ಮತ್ತು ಉದ್ಯಮ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ.
ಕ್ರೀಡೆ
ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ಗೆ ಜನ್ಮದಿನ ಸಂಭ್ರಮ: ವಿಶಿಯ ಕಲಾತ್ಮಕ ಬ್ಯಾಟಿಂಗ್ಗೆ 77ನೇ ವಸಂತ
ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಕಲಾತ್ಮಕ ಬ್ಯಾಟ್ಸ್ಮನ್ಗಳಲ್ಲಿ ಅಗ್ರಸ್ಥಾನ ಪಡೆದಿರುವ ಗುಂಡಪ್ಪ ರಂಗನಾಥ್ ವಿಶ್ವನಾಥ್ (GR Vishwanath) ಅವರಿಗೆ ಫೆಬ್ರವರಿ 12ರಂದು ಜನ್ಮದಿನ ಸಂಭ್ರಮ. ವಿಶಿ ಕ್ರೀಸಿಗೆ ಬಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಶತಕ ಸಿಡಿಸಿದ ಯಾವುದೇ ಪಂದ್ಯದಲ್ಲಿ ಭಾರತ ಸೋತ ಉದಾಹರಣೆ ಇಲ್ಲ — ಒಂದೋ ಗೆಲುವು, ಇಲ್ಲವೇ ಡ್ರಾ!
1969ರಲ್ಲಿ ಕಾನ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದ ವಿಶಿ, ಮೊದಲ ಇನ್ನಿಂಗ್ಸ್ನಲ್ಲಿ ಶೂನ್ಯಕ್ಕೆ ಔಟ್ ಆದರೂ, ಎರಡನೇ ಇನ್ನಿಂಗ್ಸ್ನಲ್ಲಿ 25 ಬೌಂಡರಿಗಳೊಂದಿಗೆ 137 ರನ್ ಸಿಡಿಸಿ ಕ್ರಿಕೆಟ್ ಲೋಕದ ಗಮನ ಸೆಳೆದರು. ಅವರ ಸ್ಕ್ವೇರ್ ಕಟ್ ಶಾಟ್ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆದ್ದಿತ್ತು.
ಗವಾಸ್ಕರ್ ಪ್ರಶಂಸೆ, ಹೆಲ್ಮೆಟ್ ಇಲ್ಲದೆ ವೇಗದ ಬೌಲರ್ ಎದುರಿಸಿದ ಧೈರ್ಯ
“ನನ್ನಂತಹ ನೂರು ಗವಾಸ್ಕರ್ ಬರಬಹುದು, ಆದರೆ ವಿಶಿಯಂತವರು ಬರಲಾರರು” ಎಂಬ ಸುನಿಲ್ ಗವಾಸ್ಕರ್ ಮಾತುಗಳು ವಿಶಿಯ ಮಹತ್ವ ಸಾರುತ್ತವೆ. ಆಂಡಿ ರಾಬರ್ಟ್ಸ್, ಜೆಫ್ ಥಾಂಪ್ಸನ್ಂತಹ ವೇಗದ ಬೌಲರ್ಗಳನ್ನು ಹೆಲ್ಮೆಟ್ ಇಲ್ಲದೆ ಎದುರಿಸಿದ ಧೈರ್ಯವೂ ವಿಶಿಯ ವಿಶೇಷ.
ಕ್ರೀಡಾಸ್ಪೂರ್ತಿಗೆ ಮಾದರಿ
1980ರ ಸುವರ್ಣ ಮಹೋತ್ಸವ ಟೆಸ್ಟ್ನಲ್ಲಿ ಅಂಪೈರ್ ತಪ್ಪು ತೀರ್ಪು ನೀಡಿದಾಗ ಬಾಬ್ ಟೇಲರ್ ಅವರನ್ನು ಮರು ಕ್ರೀಸಿಗೆ ಕರೆಸಿದ ವಿಶಿಯ ಕ್ರೀಡಾಸ್ಫೂರ್ತಿ ಕ್ರಿಕೆಟ್ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ.
ರಣಜಿ ಫೈನಲ್ಗೂ ಮದುವೆಯೂ ಒಂದೇ ಸಮಯ
1978ರಲ್ಲಿ ಗವಾಸ್ಕರ್ ಸಹೋದರಿ ಕವಿತಾ ಅವರನ್ನು ಮದುವೆಯಾದ ವಿಶಿ, ಮದುವೆಯ ಬಳಿಕ ನೇರವಾಗಿ ಮೈದಾನಕ್ಕಿಳಿದು ರಣಜಿ ಫೈನಲ್ನಲ್ಲಿ 247 ರನ್ ಸಿಡಿಸಿ ಕರ್ನಾಟಕಕ್ಕೆ ಕಿರೀಟ ತಂದುಕೊಟ್ಟರು.
ವಿಶಿಯ ಮೂರು ಸ್ಮರಣೀಯ ಇನ್ನಿಂಗ್ಸ್
- 1975, ಮದ್ರಾಸ್: ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್
- 1969, ಕಾನ್ಪುರ: ಪಾದಾರ್ಪಣೆ ಪಂದ್ಯದಲ್ಲೇ 137 ರನ್
- 1981, ಎಂಸಿಜಿ: ಆಸ್ಟ್ರೇಲಿಯಾ ವಿರುದ್ಧ 114 ರನ್
77ನೇ ವಸಂತಕ್ಕೆ ಕಾಲಿಡುತ್ತಿರುವ ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ ಅವರಿಗೆ ಹಾರ್ದಿಕ ಶುಭಾಶಯಗಳು.
-
ಕ್ರೀಡೆ20 hours agoIND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
-
ದೇಶ21 hours agoHAL ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
-
ದೇಶ23 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ದೇಶ23 hours agoLATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
-
ದೇಶ20 hours agoವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಎಚ್ಚರಿಕೆ: “ಭಾರತಕ್ಕೆ ಮರಳದಿದ್ದರೆ ಅರ್ಜಿ ವಿಚಾರಣೆ ಇಲ್ಲ”
-
ದೇಶ21 hours agoಜೈರಾಮ್ ರಮೇಶ್ಗೆ ಸುಪ್ರೀಂಕೋರ್ಟ್ ಕಿಡಿ: “ಮಾಧ್ಯಮ ಪ್ರಚಾರಕ್ಕೇ ಅರ್ಜಿ?”
-
ದೇಶ22 hours agoಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ
-
ದೇಶ21 hours agoMumbai Musical Road: ‘ಜೈ ಹೋ’ ರಾಗ ಕೇಳಿಸುವ ಭಾರತದ ಮೊದಲ ಮ್ಯೂಸಿಕಲ್ ರಸ್ತೆ
