ಅಪರಾಧ
Latest : ಪಾಕ್ ಐಎಸ್‌ಐ ಪಿತೂರಿ ಬಯಲು: ದೆಹಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ
ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಪಾಕಿಸ್ತಾನದ ಐಎಸ್‌ಐ ರೂಪಿಸಿದ್ದ ಸಂಚನ್ನು Delhi Police Special Cell ಭಗ್ನಗೊಳಿಸಿದೆ. ಬಂಧಿತ ಆರೋಪಿಗಳ ವಿಚಾರಣೆ ವೇಳೆ ಪಾಕ್ ಬೆಂಬಲಿತ ಶಹಜಾದ್ ಭಟ್ಟಿ ಮಾಡ್ಯೂಲ್‌ಗೆ ಸಂಬಂಧಿಸಿದ ಭಯೋತ್ಪಾದಕ ಪಿತೂರಿ ಬೆಳಕಿಗೆ ಬಂದಿದ್ದು, ದೆಹಲಿಯ ಐತಿಹಾಸಿಕ ದೇವಾಲಯ ಸೇರಿದಂತೆ ಹಲವು ಪ್ರದೇಶಗಳು ಉಗ್ರರ ಟಾರ್ಗೆಟ್ ಪಟ್ಟಿಯಲ್ಲಿದ್ದವು ಎಂದು ತಿಳಿದುಬಂದಿದೆ.
ತನಿಖಾಧಿಕಾರಿಗಳ ಪ್ರಕಾರ, ಬಂಧಿತ ಆರೋಪಿಗಳಲ್ಲಿ ಒಬ್ಬನು ದಾಳಿ ನಡೆಸುವ ಉದ್ದೇಶದಿಂದ ದೆಹಲಿಯ ಐತಿಹಾಸಿಕ ದೇವಾಲಯ ಹಾಗೂ ಹಿಸಾರ್‌ನಲ್ಲಿರುವ ಮಿಲಿಟರಿ ಕ್ಯಾಂಪ್‌ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದ. ಬಳಿಕ ಅಲ್ಲಿನ ಫೋಟೋಗಳನ್ನು ಪಾಕಿಸ್ತಾನ ಮೂಲದ ಸೋಷಿಯಲ್ ಮೀಡಿಯಾ ಹ್ಯಾಂಡ್ಲರ್‌ಗೆ ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ. ದೇವಸ್ಥಾನದ ಮೇಲೆ ದಾಳಿ ನಡೆಸುವ ಮೊದಲು ಪೊಲೀಸರು ಮತ್ತು ಅರೆಸೇನಾ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸುವ ಯೋಜನೆಯೂ ಉಗ್ರರ ಸಂಚಿನಲ್ಲಿ ಸೇರಿತ್ತು ಎನ್ನಲಾಗಿದೆ.
ಇದರ ಜೊತೆಗೆ, ದೆಹಲಿ-ಸೋನಿಪತ್ ಹೆದ್ದಾರಿಯಲ್ಲಿರುವ ಹರಿಯಾಣದ ಜನಪ್ರಿಯ ಡಾಬಾ ಮೇಲೂ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದರು. ಪ್ರತಿದಿನ ಸಾವಿರಾರು ಜನ ಭೇಟಿ ನೀಡುವ ಈ ಸ್ಥಳದಲ್ಲಿ ಹ್ಯಾಂಡ್ ಗ್ರೆನೇಡ್ ಬಳಸಿ ಭಾರೀ ಸಾವು-ನೋವು ಉಂಟುಮಾಡುವ ಯೋಜನೆ ರೂಪಿಸಲಾಗಿತ್ತು ಎಂದು ತನಿಖೆ ವೇಳೆ ಬಹಿರಂಗವಾಗಿದೆ.
ಹಿಸಾರ್ ಮಿಲಿಟರಿ ಕ್ಯಾಂಪ್ ಮೇಲೆ ದಾಳಿ ನಡೆಸುವುದು ಹಾಗೂ ಉತ್ತರ ಪ್ರದೇಶದ ಕೆಲ ಪೊಲೀಸ್ ಅಧಿಕಾರಿಗಳನ್ನು ಹತ್ಯೆಗೈಯುವ ಸಂಚಿನ ಕುರಿತ ಮಾಹಿತಿಯೂ ಪೊಲೀಸರಿಗೆ ಲಭ್ಯವಾಗಿದೆ.
ಗುರುವಾರ ದೆಹಲಿ ಪೊಲೀಸ್ ವಿಶೇಷ ಘಟಕ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳು ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಶಹಜಾದ್ ಭಟ್ಟಿ ಮಾಡ್ಯೂಲ್‌ಗೆ ಸಂಬಂಧಿಸಿದ 9 ಆರೋಪಿಗಳನ್ನು ಬಂಧಿಸಿವೆ. ಈ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಪರಾಧ
ಆರ್‌ಎಸ್‌ಎಸ್ ವಿರುದ್ಧದ ಹೇಳಿಕೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಕೋರ್ಟ್ ಸಮನ್ಸ್, ಜುಲೈ 21ಕ್ಕೆ ಖುದ್ದು ಹಾಜರಿಗೆ ಆದೇಶ
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಜುಲೈ 21ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ಸಿದ್ದಾಪುರ ನಿವಾಸಿ ಎ. ತೇಜಸ್ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರಿಯಾಂಕ್ ಖರ್ಗೆ ಹಾಗೂ ಹ್ಯಾರಿಸ್ ನಲಪಾಡ್ ವಿರುದ್ಧ ಕಾಗ್ನಿಜೆನ್ಸ್ ತೆಗೆದುಕೊಂಡು ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ ಪ್ರಕರಣದ ಎರಡನೇ ಆರೋಪಿಯಾಗಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಆರೋಪವನ್ನು ಕೈಬಿಡಲಾಗಿದೆ.
ಪ್ರಕರಣದ ಪ್ರಕಾರ, ಆರ್‌ಎಸ್‌ಎಸ್ ಸಂಘಟನೆಯ ಚಟುವಟಿಕೆಗಳ ವಿರುದ್ಧ ಪ್ರಿಯಾಂಕ್ ಖರ್ಗೆ ಅವರು ಈ ಹಿಂದೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸಂಘದ ಮೇಲೆ ನಿಷೇಧ ಹೇರಬೇಕು ಎಂದು ಆಗ್ರಹಿಸಿದ್ದರು. ಸರ್ಕಾರಿ ಶಾಲೆಗಳು, ಸರ್ಕಾರಿ ಸ್ಥಳಗಳು ಹಾಗೂ ಸಾರ್ವಜನಿಕ ಮೈದಾನಗಳಲ್ಲಿ ಸಂಘದ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು. ಈ ಪತ್ರವನ್ನು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಲ್ಲದೆ, ಆರ್‌ಎಸ್‌ಎಸ್ ಜೊತೆ ಸ್ನೇಹ ಮಾಡಬಾರದು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದರು.
ಇನ್ನೊಂದೆಡೆ, ಹ್ಯಾರಿಸ್ ನಲಪಾಡ್ ಖಾಸಗಿ ಯೂಟ್ಯೂಬ್ ವಾಹಿನಿಯೊಂದರಲ್ಲಿ ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಗಳಿಂದ ಸಂಘದ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿ ಕಾನೂನು ಕ್ರಮಕ್ಕೆ ಮನವಿ ಮಾಡಲಾಗಿತ್ತು.
ಇತ್ತೀಚೆಗಷ್ಟೇ ಆರ್‌ಎಸ್‌ಎಸ್ ನೋಂದಣಿಯಾಗದಿರುವ ವಿಚಾರ ಪ್ರಸ್ತಾಪಿಸಿ, ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಪ್ರಿಯಾಂಕ್ ಖರ್ಗೆ ಎಂಟು ಪ್ರಶ್ನೆಗಳನ್ನೊಳಗೊಂಡ ಪತ್ರ ಬರೆದಿದ್ದರು. ಈ ಪತ್ರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ಇದೇ ವಿಚಾರಗಳ ನಡುವೆ ನ್ಯಾಯಾಲಯದ ಸಮನ್ಸ್ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದು, ಜುಲೈ 21ರಂದು ನಡೆಯಲಿರುವ ವಿಚಾರಣೆಯತ್ತ ರಾಜಕೀಯ ವಲಯದ ಗಮನ ನೆಟ್ಟಿದೆ.
ಇನ್ನಷ್ಟು ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ನಿರಂತರವಾಗಿ ಭೇಟಿ ನೀಡಿ Hosasuddi.in.
ನಿಮ್ಮ ವಿಶ್ವಾಸವೇ ನಮ್ಮ ಶಕ್ತಿ – ಕ್ಷಣಕ್ಷಣದ ಸುದ್ದಿಗಳಿಗೆ Hosasuddi.in ಜೊತೆಯಲ್ಲಿರಿ.
ಅಪರಾಧ
ಪ್ರೇಮ ಕಲಹಕ್ಕೆ ಭೀಕರ ಅಂತ್ಯ! ತುಮಕೂರು ಹೆದ್ದಾರಿಯಲ್ಲಿ ಕಾರಿನೊಳಗೆ ಬೆಂಕಿ ದುರಂತ
ತುಮಕೂರು: ಪ್ರೇಮಿಗಳ ನಡುವಿನ ವೈಯಕ್ತಿಕ ಮನಸ್ತಾಪ ಭೀಕರ ದುರಂತಕ್ಕೆ ತಿರುಗಿದ ಘಟನೆ ತುಮಕೂರು–ಪುಣೆ ರಾಷ್ಟ್ರೀಯ ಹೆದ್ದಾರಿಯ ಸಿರಾ ಸಮೀಪದ ಜೋಗಿಹಳ್ಳಿ ಬಳಿ ನಡೆದಿದೆ. ಯುವಕನೊಬ್ಬ ತನ್ನ ಪ್ರೇಯಸಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ಕಾರಿನೊಳಗೆ ಸ್ಫೋಟಕ ದ್ರವ ಬಳಸಿ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಯುವತಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತನನ್ನು ಬೆಂಗಳೂರಿನ ನಾಗೇಂದ್ರ ಎಂದು ಗುರುತಿಸಲಾಗಿದ್ದು, ಗಾಯಾಳು ರಮ್ಯಾ ಬೆಂಗಳೂರಿನ ಜಯನಗರದಲ್ಲಿ ವಾಸವಿದ್ದು, ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಓಟಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಳು. ಇಬ್ಬರೂ ಸುಮಾರು ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಉಂಟಾದ ಮನಸ್ತಾಪದಿಂದ ರಮ್ಯಾ ನಾಗೇಂದ್ರನ ಸಂಪರ್ಕವನ್ನು ಕಡಿತಗೊಳಿಸಿದ್ದಳು ಎಂದು ತಿಳಿದುಬಂದಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ನಾಗೇಂದ್ರ ಶನಿವಾರ ಬೆಳಗ್ಗೆ ರಮ್ಯಾಳ ನಿವಾಸಕ್ಕೆ ತೆರಳಿ ಗಲಾಟೆ ನಡೆಸಿದ್ದಾನೆ. ಬಳಿಕ ಆಕೆಯನ್ನು ಬಲವಂತವಾಗಿ ಬಾಡಿಗೆ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಪ್ರಯಾಣದ ವೇಳೆ ಇಬ್ಬರ ನಡುವೆ ಮತ್ತೆ ವಾಗ್ವಾದ ನಡೆದಿದ್ದು, ಕಾರಿನಲ್ಲಿ ಸ್ಫೋಟಕ ದ್ರವವನ್ನು ತೋರಿಸಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಸಿರಾ ಸಮೀಪದ ಜೋಗಿಹಳ್ಳಿ ಬಳಿ ಕಾರು ತಲುಪುತ್ತಿದ್ದಂತೆ ನಾಗೇಂದ್ರ, ರಮ್ಯಾಳ ತಲೆ ಮತ್ತು ಕೈಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಸಮಯಪ್ರಜ್ಞೆ ಮೆರೆದ ರಮ್ಯಾ ಚಲಿಸುತ್ತಿದ್ದ ಕಾರಿನಿಂದ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಬಳಿಕ ಕಾರಿನೊಳಗೆ ಬೆಂಕಿ ಕಾಣಿಸಿಕೊಂಡು ನಾಗೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಎಲ್ಲಾ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪರಾಧ
ಕರ್ತವ್ಯದ ವೇಳೆ ಪೊಲೀಸ್ ಠಾಣೆಯಲ್ಲಿ ರೋಮ್ಯಾನ್ಸ್: ತನಿಖೆಗೆ ಆದೇಶ
ಲಕ್ನೋ: ಉತ್ತರ ಪ್ರದೇಶದ ಜಾಲೌನ್ ಜಿಲ್ಲೆಯ ಉರೈ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದ ವೇಳೆ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಪೊಲೀಸ್ ಠಾಣೆಯ ಕಂಟ್ರೋಲ್ ರೂಂನಲ್ಲೇ ಮಹಿಳಾ ತರಬೇತಿ ಪೇದೆಯೊಬ್ಬರು ತಮ್ಮ ಸಹೋದ್ಯೋಗಿಯನ್ನು ತಬ್ಬಿಕೊಂಡು ಮುತ್ತಿಡಲು ಯತ್ನಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ವೈರಲ್ ವಿಡಿಯೋ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಪುರುಷ ಪೇದೆ ಅರವಿಂದ್ ಪಟೇಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. 2018ರ ಬ್ಯಾಚ್‌ಗೆ ಸೇರಿದ ಅರವಿಂದ್ ಪಟೇಲ್ ಅವರು ಸದ್ಯ ಉರೈ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಾಹಿತಿಯ ಪ್ರಕಾರ, ಬುಧವಾರ ರಾತ್ರಿ ಅರವಿಂದ್ ಪಟೇಲ್ ಕಂಟ್ರೋಲ್ ರೂಂನಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದರು. ಅವರು ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಮಹಿಳಾ ತರಬೇತಿ ಪೇದೆಯೊಬ್ಬರು ಹಿಂದಿನಿಂದ ಬಂದು ಅವರ ಹೆಗಲ ಮೇಲೆ ಕೈಹಾಕಿ ಮುತ್ತಿಡಲು ಯತ್ನಿಸಿದ್ದಾರೆ. ಈ ವೇಳೆ ಅರವಿಂದ್ ಕುರ್ಚಿಯಿಂದ ಎದ್ದು ದೂರ ಸರಿಯಲು ಪ್ರಯತ್ನಿಸಿದರೂ, ಮಹಿಳಾ ಪೇದೆ ಅವರನ್ನು ಹಿಂಬಾಲಿಸಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. ಘಟನೆಯ ಸಮಯದಲ್ಲಿ ಇಬ್ಬರೂ ನಾಗರಿಕ ಉಡುಪಿನಲ್ಲಿದ್ದರು ಎಂದು ತಿಳಿದುಬಂದಿದೆ.
ಪೊಲೀಸ್ ಠಾಣೆಯಂತಹ ಸೂಕ್ಷ್ಮ ಭದ್ರತಾ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಇಲಾಖಾ ಕ್ರಮ ಕೈಗೊಂಡಿದ್ದಾರೆ.
ಜಾಲೌನ್ ಪೊಲೀಸರು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದು, ವೈರಲ್ ವಿಡಿಯೊವನ್ನು ಪರಿಶೀಲಿಸಿದ ಬಳಿಕ ಪೇದೆ ಅರವಿಂದ್ ಪಟೇಲ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಗರ ಉಪ ವಿಭಾಗೀಯ ಪೊಲೀಸ್ ಅಧಿಕಾರಿಗೆ ಸೂಚನೆ ನೀಡಲಾಗಿದೆ.
ತನಿಖಾ ವರದಿ ಬಂದ ಬಳಿಕ ಪ್ರಕರಣದಲ್ಲಿ ಯಾರ ಹೊಣೆಗಾರಿಕೆ ಎಷ್ಟಿದೆ ಎಂಬುದನ್ನು ಪರಿಶೀಲಿಸಿ, ಪೊಲೀಸ್ ಇಲಾಖೆಯ ನಿಯಮಾವಳಿಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಕರ್ತವ್ಯದ ವೇಳೆ ಪೊಲೀಸ್ ಸಿಬ್ಬಂದಿಯ ನಡೆ-ನುಡಿಗಳ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.
-
ದೇಶ19 hours ago‘ಖಬರ್ದಾರ್ ಕುಮಾರಣ್ಣ, ನಿಮ್ಮ ಚೇಲಾಗಳಿಗೆ ಹೆದರಲ್ಲ’ : ಪ್ರದೀಪ್ ಈಶ್ವರ್ ಆಕ್ರೋಶ!
-
ದೇಶ19 hours agoಬಿಡದಿ ಟೌನ್ಶಿಪ್ ಹೋರಾಟದಲ್ಲಿ ಹೈಡ್ರಾಮಾ! ಡಿಕೆಶಿಗೆ ಖಾಲಿ ಕುರ್ಚಿ ಇಟ್ಟ ಕುಮಾರಸ್ವಾಮಿ
-
ದೇಶ19 hours agoಆರ್‌ಎಸ್‌ಎಸ್ ನೋಂದಣಿಗೆ ಪೇಜಾವರ ಶ್ರೀ ಬೆಂಬಲ! ರಾಮಮಂದಿರ ಹಗರಣದ ಎಸ್ಐಟಿ ತನಿಖೆಗೆ ಸ್ವಾಗತ
-
ದೇಶ20 hours agoತೊಡೆ ತಟ್ಟಿ ಸವಾಲು ಹಾಕಿದ ಪ್ರದೀಪ್ ಈಶ್ವರ್; ಲಾಠಿ ಪ್ರಹಾರ ನಡೆಸಿದ ಪೊಲೀಸರು
-
ಅಪರಾಧ20 hours agoಪ್ರೇಮ ಕಲಹಕ್ಕೆ ಭೀಕರ ಅಂತ್ಯ! ತುಮಕೂರು ಹೆದ್ದಾರಿಯಲ್ಲಿ ಕಾರಿನೊಳಗೆ ಬೆಂಕಿ ದುರಂತ
-
ದೇಶ20 hours agoಶೋಯೆಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಲಷ್ಕರ್ ಉಗ್ರರ ಹಾಜರಿ? ವೈರಲ್ ವಿಡಿಯೋ ಹೊಸ ವಿವಾದಕ್ಕೆ ಕಾರಣ
-
ಕ್ರೀಡೆ4 hours agoಜೀವನದಲ್ಲಿ ಕ್ರೀಡೆಗೆ ಮಹತ್ವದ ಸ್ಥಾನ: ಡಾ. ಕೆ. ಗೋವಿಂದರಾಜು ಕರೆ
-
ಕ್ರೀಡೆ19 hours agoFIFA WORLD CUP 2026ರಲ್ಲಿ ಹೊಸ ದಾಖಲೆಗಳ ಸುರಿಮಳೆ! ಆಟಗಾರರ ಧರ್ಮಕ್ಕೆ ಗೌರವ ನೀಡಿ ಪ್ರಶಸ್ತಿಯಲ್ಲಿ ಮಹತ್ವದ ಬದಲಾವಣೆ
