ಬೆಂಗಳೂರು
ಡಿಕೆ ಶಿವಕುಮಾರ್ ನಾಳೆಯೇ ಸಿಎಂ ಆಗೋದಾದರೆ ಜೆಡಿಎಸ್ ಬೆಂಬಲ: ಹೆಚ್ ಡಿಕೆ ಆಫರ್
ಬೆಂಗಳೂರು: ಡಿ.ಕೆ ಶಿವಕುಮಾರ್ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ಜೆಡಿಎಸ್ ಪಕ್ಷದ 19 ಶಾಸಕರು ಬೆಂಬಲ ನೀಡುತ್ತಾರೆ ಎಂದು ಓಪನ್ ಆಫರ್ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಲ್ಲರೂ ತಾವು ಸಿಎಂ ಆಕಾಂಕ್ಷಿ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದರು. ಹೀಗಾಗಿ ರಾಜ್ಯ ಕಾಂಗ್ರೆಸ್ ಅನ್ನು ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ವಿದೇಶ ಪ್ರವಾಸ ಮುಗಿಸಿ ರಾಜ್ಯಕ್ಕೆ ಮರಳಿರುವ ಎಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗಿದ್ದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶ
ಮದ್ಯಪ್ರಿಯರಿಂದ ಸರ್ಕಾರಕ್ಕೆ ಬಂಪರ್ ಆದಾಯ: ಬಿಯರ್ ಬೆಲೆ ಇಳಿಕೆ, ಮಾರಾಟ ಏರಿಕೆ
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಆಲ್ಕೋಹಾಲ್ ಇನ್ ಬಿವರೇಜ್ (AIB)’ ಆಧಾರಿತ ಹೊಸ ತೆರಿಗೆ ವ್ಯವಸ್ಥೆಯು ಅಬಕಾರಿ ಇಲಾಖೆಯ ಆದಾಯದಲ್ಲಿ ಗಮನಾರ್ಹ ಏರಿಕೆಗೆ ಕಾರಣವಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸುವ ಈ ಹೊಸ ನೀತಿಯ ಪರಿಣಾಮವಾಗಿ ಲಘು ಆಲ್ಕೋಹಾಲ್ ಹೊಂದಿರುವ ಬಿಯರ್ಗಳ ಮಾರಾಟ ಹೆಚ್ಚಾಗಿದ್ದು, ಸರ್ಕಾರದ ಆದಾಯವೂ ಹೊಸ ದಾಖಲೆ ಬರೆದಿದೆ.
ಅಬಕಾರಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಏಪ್ರಿಲ್ನಿಂದ ಜೂನ್ವರೆಗಿನ ಮೊದಲ ತ್ರೈಮಾಸಿಕದಲ್ಲೇ ಸರ್ಕಾರಕ್ಕೆ ಒಟ್ಟು ₹10,599.29 ಕೋಟಿ ಅಬಕಾರಿ ಆದಾಯ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 14.39ರಷ್ಟು ಹೆಚ್ಚಳವಾಗಿದೆ.
ಬಿಯರ್ ಮಾರಾಟದಿಂದ ಮಾತ್ರ ₹1,914.81 ಕೋಟಿ ಆದಾಯ ಬಂದಿದ್ದು, ಕಳೆದ ವರ್ಷದ ಇದೇ ಅವಧಿಗಿಂತ ₹312.67 ಕೋಟಿ ಹೆಚ್ಚುವರಿ ಆದಾಯ ದಾಖಲಾಗಿದೆ. ಭಾರತೀಯ ಮದ್ಯ (IML) ಮಾರಾಟದಿಂದ ₹8,394.32 ಕೋಟಿ ಆದಾಯ ಹರಿದುಬಂದಿದೆ.
ಹೊಸ ತೆರಿಗೆ ವ್ಯವಸ್ಥೆಯಿಂದ ಕಡಿಮೆ ಆಲ್ಕೋಹಾಲ್ ಹೊಂದಿರುವ ಪ್ರೀಮಿಯಂ ಲಾಗರ್ ಬಿಯರ್ಗಳ ಬೆಲೆ ಇಳಿಕೆಯಾಗಿರುವುದು ಗ್ರಾಹಕರ ಖರೀದಿ ಹೆಚ್ಚಲು ಕಾರಣವಾಗಿದೆ. ವ್ಯಾಪಾರಿಗಳ ಪ್ರಕಾರ, ಕಳೆದ ಕೆಲವು ವಾರಗಳಲ್ಲಿ ಬಿಯರ್ ಮಾರಾಟದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ದಾಸ್ತಾನು ವೇಗವಾಗಿ ಖಾಲಿಯಾಗಿದೆ.
ರಾಜ್ಯ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ₹45,000 ಕೋಟಿ ಅಬಕಾರಿ ಆದಾಯ ಸಂಗ್ರಹಿಸುವ ಗುರಿ ಹೊಂದಿದೆ. ಇದರ ಭಾಗವಾಗಿ ಬಳಕೆಯಾಗದೆ ಉಳಿದಿರುವ 483 ಚಿಲ್ಲರೆ ಮದ್ಯದ ಅಂಗಡಿ (CL-2A) ಹಾಗೂ 96 ಬಾರ್ (CL-9A) ಪರವಾನಗಿಗಳನ್ನು ಇದೇ ತಿಂಗಳ ಕೊನೆಯಲ್ಲಿ ಆನ್ಲೈನ್ ಹರಾಜು ಮೂಲಕ ವಿತರಿಸಲು ಇಲಾಖೆ ಯೋಜನೆ ರೂಪಿಸಿದೆ. ಈ ಪರವಾನಗಿಗಳನ್ನು ಐದು ವರ್ಷಗಳ ಅವಧಿಗೆ ನೀಡಲಾಗಲಿದ್ದು, ಇದರಿಂದ ಸರ್ಕಾರದ ಆದಾಯ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ.
ಹಣಕಾಸು ಇಲಾಖೆ ಅಧಿಕಾರಿಗಳ ಪ್ರಕಾರ, ಹೊಸ AIB ತೆರಿಗೆ ನೀತಿಯ ಉದ್ದೇಶ ಹೆಚ್ಚಿನ ಆಲ್ಕೋಹಾಲ್ ಹೊಂದಿರುವ ಪಾನೀಯಗಳ ಬಳಕೆಯನ್ನು ಕಡಿಮೆ ಮಾಡಿ, ಕಡಿಮೆ ಆಲ್ಕೋಹಾಲ್ ಹೊಂದಿರುವ ಪಾನೀಯಗಳ ಬಳಕೆಗೆ ಉತ್ತೇಜನ ನೀಡುವುದಾಗಿದೆ.
ಅಪರಾಧ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮತ್ತೆ ರೌಡಿಗಳ ದಾಳಿ: ಫ್ಲೈ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಹಾಗೂ ಸರ್ವಿಸ್ ರಸ್ತೆಗಳಲ್ಲಿ ಪುಂಡರ ಅಟ್ಟಹಾಸ ಮುಂದುವರಿದಿದ್ದು, ಕೆಎಸ್ಆರ್ಟಿಸಿಯ ಪ್ರತಿಷ್ಠಿತ ಫ್ಲೈ ಬಸ್ (Fly Bus) ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಒಂದೇ ವಾರದಲ್ಲಿ ಇದೇ ಹೆದ್ದಾರಿಯಲ್ಲಿ ನಡೆದ ಮೂರನೇ ದಾಳಿಯ ಪ್ರಕರಣ ಇದಾಗಿದ್ದು, ಪ್ರಯಾಣಿಕರ ಸುರಕ್ಷತೆ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ.
ಪೊಲೀಸ್ ಮಾಹಿತಿಯ ಪ್ರಕಾರ, ಎರಡು ದಿನಗಳ ಹಿಂದೆ ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳುತ್ತಿದ್ದ ಫ್ಲೈ ಬಸ್ ಮಂಡ್ಯ ನಗರದಲ್ಲಿ ಪ್ರಯಾಣಿಕರನ್ನು ಇಳಿಸಿ ಸರ್ವಿಸ್ ರಸ್ತೆಯಲ್ಲಿ ಸಂಚರಿಸುತ್ತಿತ್ತು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ಕೆಲವರು ನಿಯಮ ಉಲ್ಲಂಘಿಸಿ ಒನ್ವೇ ರಸ್ತೆಯಲ್ಲಿ ವಾಹನ ಚಲಾಯಿಸಿಕೊಂಡು ಬಂದು ಬಸ್ಗೆ ಅಡ್ಡಗಟ್ಟಿದ್ದಾರೆ.
ಬಸ್ ಚಾಲಕ ವಿನೋದ್ ಹಾಗೂ ನಿರ್ವಾಹಕ ಈರಣ್ಣ ಪ್ರಶ್ನಿಸಿದಾಗ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಳಿಕ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸರಿಗೆ ದೂರು ನೀಡುವುದಾಗಿ ತಿಳಿಸಿದರೂ ಆರೋಪಿಗಳು ಬೆದರಿಕೆ ಹಾಕಿ ಹಲ್ಲೆ ಮುಂದುವರಿಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಮನಾರ್ಹವಾಗಿ, ಕಳೆದ ಒಂದು ವಾರದಲ್ಲೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ವ್ಯಾಪ್ತಿಯಲ್ಲಿ ಇದು ಮೂರನೇ ಹಲ್ಲೆ ಪ್ರಕರಣವಾಗಿದೆ. ಈ ಹಿಂದೆ ಮಂಡ್ಯ ಸಮೀಪ ಮೆಡಿಸನ್ ಟ್ರಕ್ ಮೇಲೆ ಗುಂಡಿನ ದಾಳಿ ಹಾಗೂ ಮದ್ದೂರು ಬಳಿ ಕಾರು ತಡೆದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ ಘಟನೆಗಳು ವರದಿಯಾಗಿದ್ದವು.
ಸರಣಿ ಘಟನೆಗಳಿಂದ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ ಆತಂಕ ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಹೆದ್ದಾರಿಯಲ್ಲಿ ಭದ್ರತೆಯನ್ನು ಇನ್ನಷ್ಟು ಬಲಪಡಿಸಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ದೇಶ
ರಸ್ತೆ ಮಧ್ಯೆ ಹೆಡೆ ಎತ್ತಿ ನಿಂತ ನಾಗರಹಾವು: ಪ್ಯಾಲೇಸ್ ರಸ್ತೆಯಲ್ಲಿ ಅರ್ಧ ಗಂಟೆ ಸಂಚಾರ ಅಸ್ತವ್ಯಸ್ತ
ಬೆಂಗಳೂರು: ನಗರದ ಪ್ಯಾಲೇಸ್ ರಸ್ತೆಯಲ್ಲಿ ನಾಗರಹಾವು ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ರಸ್ತೆಯ ಮಧ್ಯಭಾಗಕ್ಕೆ ಬಂದ ನಾಗರಹಾವು ಇದ್ದಕ್ಕಿದ್ದಂತೆ ಹೆಡೆ ಬಿಚ್ಚಿ ನಿಂತಿದ್ದು, ಇದನ್ನು ಕಂಡ ವಾಹನ ಸವಾರರು ಹಾಗೂ ಸ್ಥಳೀಯರು ಬೆಚ್ಚಿಬಿದ್ದರು.
ರಸ್ತೆಯ ನಡುಭಾಗದಲ್ಲೇ ಹಾವು ಕೆಲಕಾಲ ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಕಾರು, ಬೈಕ್ ಹಾಗೂ ಇತರೆ ವಾಹನಗಳು ಮುಂದೆ ಸಾಗಲು ಸಾಧ್ಯವಾಗದೆ, ಪ್ಯಾಲೇಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಹಾವು ಅಲ್ಲೇ ಇದ್ದ ಕಾರಣ ಸ್ಥಳದಲ್ಲಿ ಜನರು ಜಮಾಯಿಸಿ ಕುತೂಹಲದಿಂದ ವೀಕ್ಷಿಸಿದರು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬಳಿಕ ಹಾವು ರಕ್ಷಣೆಯಲ್ಲಿ ಪರಿಣತಿ ಹೊಂದಿದ ಸಿಬ್ಬಂದಿಯ ಸಹಾಯದಿಂದ ನಾಗರಹಾವನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಹಿಡಿದು ಸ್ಥಳಾಂತರಿಸಲಾಯಿತು. ಈ ವೇಳೆ ಸಾರ್ವಜನಿಕರು ಹಾವಿನ ಸಮೀಪ ಹೋಗದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದರು.
ಹಾವು ರಕ್ಷಣೆಯಾದ ನಂತರ ಪ್ಯಾಲೇಸ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಪುನಃ ಆರಂಭಿಸಲಾಯಿತು. ಕೆಲಕಾಲ ಉಂಟಾಗಿದ್ದ ಟ್ರಾಫಿಕ್ ಜಾಮ್ ನಿವಾರಣೆಯಾಗಿದ್ದು, ಸಂಚಾರ ಎಂದಿನಂತೆ ಸುಗಮವಾಯಿತು.
ಮಳೆಗಾಲದ ಸಮಯದಲ್ಲಿ ಹಾವುಗಳು ತಮ್ಮ ವಾಸಸ್ಥಳಗಳಿಂದ ಹೊರಬಂದು ನಗರ ಪ್ರದೇಶಗಳಿಗೆ ಪ್ರವೇಶಿಸುವ ಘಟನೆಗಳು ಹೆಚ್ಚಾಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾವು ಕಂಡುಬಂದರೆ ಅದನ್ನು ಹಿಡಿಯಲು ಅಥವಾ ಹತ್ತಿರ ಹೋಗಲು ಪ್ರಯತ್ನಿಸದೆ ತಕ್ಷಣ ಅರಣ್ಯ ಇಲಾಖೆ, ಹಾವು ರಕ್ಷಣಾ ಸಿಬ್ಬಂದಿ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
-
ದೇಶ22 hours agoಅಂಜನಾದ್ರಿ ಹುಂಡಿ ಎಣಿಕೆ ಬಳಿಕ 4 ದಿನ ಮೌನ! ಈಗ ಪ್ರಕಟಣೆ ಹೊರಬಿದ್ದಿದ್ದು ಏಕೆ?
-
ದೇಶ8 hours agoಬ್ಯಾಂಕ್ ಅಕೌಂಟ್ ಕ್ಲೋಸ್ ಮಾಡಿದರೆ ಕ್ರೆಡಿಟ್ ಕಾರ್ಡ್ ಬಂದ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
-
ದೇಶ3 hours agoರಸ್ತೆ ಮಧ್ಯೆ ಹೆಡೆ ಎತ್ತಿ ನಿಂತ ನಾಗರಹಾವು: ಪ್ಯಾಲೇಸ್ ರಸ್ತೆಯಲ್ಲಿ ಅರ್ಧ ಗಂಟೆ ಸಂಚಾರ ಅಸ್ತವ್ಯಸ್ತ
-
ದೇಶ22 hours ago‘ಕಿಂಗ್100’ನಲ್ಲಿ ಟಬು ವಿಲನ್! ನಾಗಾರ್ಜುನ ವಿರುದ್ಧ ಹೊಸ ಅವತಾರ
-
ಅಪರಾಧ3 hours agoಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮತ್ತೆ ರೌಡಿಗಳ ದಾಳಿ: ಫ್ಲೈ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ
-
ದೇಶ3 hours ago‘ಮೋದಿ ಒಂದೂವರೆ ಗಂಟೆ ನನಗೆ ಬುದ್ಧಿ ಹೇಳಿದರು’ : ಎಚ್.ಡಿ.ಕುಮಾರಸ್ವಾಮಿ
-
ಆರೋಗ್ಯ8 hours agoಥೈರಾಯ್ಡ್ಗೆ ಕೊತ್ತಂಬರಿ ಬೀಜ ಮತ್ತು ತ್ರಿಕಾಟು ಚೂರ್ಣ: ಆಯುರ್ವೇದದ ಪರಿಣಾಮಕಾರಿ ಮನೆಮದ್ದು
-
ದೇಶ4 hours agoಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್: ಬಾಡಿಗೆ ಒಪ್ಪಂದ ಇಲ್ಲದಿದ್ದರೂ ಉಚಿತ ವಿದ್ಯುತ್ ಪಡೆಯಬಹುದು!
