Connect with us

ದೇಶ

CJP ಮತ್ತೆ ದೇಶವ್ಯಾಪಿ ಶಾಂತಿಯುತ ಪ್ರತಿಭಟನೆ?; ಅಭಿಜೀತ್ ದೀಪ್ಕೆ ಎಚ್ಚರಿಕೆ

Published

on

ನವದೆಹಲಿ: ವಿದ್ಯಾರ್ಥಿಗಳು ಮತ್ತು ಯುವಕರ ವಿರುದ್ಧ ಪೊಲೀಸರು ನಡೆಸುತ್ತಿರುವ ಕ್ರಮಗಳ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ Abhijeet Dipke ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕಿರುಕುಳ ಮುಂದುವರಿದರೆ ದೇಶವ್ಯಾಪಿ ಶಾಂತಿಯುತ ಪ್ರತಿಭಟನೆ ಆರಂಭಿಸುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರಕಟಿಸಿರುವ ಪೋಸ್ಟ್‌ನಲ್ಲಿ ಮಾತನಾಡಿರುವ ಅವರು, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಅನಗತ್ಯವಾಗಿ ಗುರಿಯಾಗಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕಿದ್ದು, ಅವರ ಧ್ವನಿಯನ್ನು ಹತ್ತಿಕ್ಕುವ ಬದಲು ಸಮಸ್ಯೆಗಳನ್ನು ಆಲಿಸಿ ಮಾತುಕತೆಯ ಮೂಲಕ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

“ವಿದ್ಯಾರ್ಥಿಗಳು ದೇಶದ ಭವಿಷ್ಯ. ಶಾಂತಿಯುತವಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟವರನ್ನು ಬೆದರಿಸುವುದು ಅಥವಾ ಒತ್ತಡ ಹೇರುವುದು ಸರಿಯಲ್ಲ. ಪೊಲೀಸ್ ಕಿರುಕುಳ ಮುಂದುವರಿದರೆ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಕರ ಸಹಯೋಗದೊಂದಿಗೆ ಕಾಕ್ರೋಚ್ ಜನತಾ ಪಾರ್ಟಿ ಮತ್ತೊಮ್ಮೆ ಬೃಹತ್ ಶಾಂತಿಯುತ ಚಳುವಳಿ ಆರಂಭಿಸಲಿದೆ” ಎಂದು ಅಭಿಜೀತ್ ದೀಪ್ಕೆ ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದೆಡೆ, ಪಕ್ಷದ ವಕ್ತಾರ ಸೌರವ್ ದಾಸ್ ಕೂಡ ಎಕ್ಸ್ ಪೋಸ್ಟ್ ಮೂಲಕ ಕೇಂದ್ರ ಸರ್ಕಾರಕ್ಕೆ ತನ್ನ ಹಿಂದಿನ ಭರವಸೆಗಳನ್ನು ನೆನಪಿಸಿದ್ದಾರೆ. ಜುಲೈ 25ರಂದು ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಲ್ಲಾ ಎಫ್‌ಐಆರ್‌ಗಳನ್ನು ಹಿಂಪಡೆಯುವುದಾಗಿ ಹಾಗೂ ಪ್ರತಿಭಟನಾಕಾರರನ್ನು ಗುರಿಯಾಗಿಸುವುದಿಲ್ಲ ಎಂದು ಭರವಸೆ ನೀಡಿತ್ತು. ಇದೇ ಭರವಸೆಯ ಮೇರೆಗೆ ಪಕ್ಷ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತ್ತು ಎಂದು ಅವರು ತಿಳಿಸಿದ್ದಾರೆ.

ಆದರೆ, ಈಗ ಸುಪ್ರೀಂ ಕೋರ್ಟ್ ಆದೇಶವನ್ನು ಆಧಾರವಾಗಿಸಿಕೊಂಡು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಆಡಳಿತದ ರಾಜ್ಯಗಳು ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸೌರವ್ ದಾಸ್ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ನ್ಯಾಯಾಲಯದ ಮುಂದೆ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಪಾಲಿಸಬೇಕು, ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಹಾಗೂ ಪ್ರತಿಭಟನಾಕಾರರ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರ ತನ್ನ ಭರವಸೆಗಳನ್ನು ಉಲ್ಲಂಘಿಸಿ ವಿದ್ಯಾರ್ಥಿಗಳ ಮೇಲಿನ ಕ್ರಮ ಮುಂದುವರಿಸಿದರೆ, ಕಾಕ್ರೋಚ್ ಜನತಾ ಪಾರ್ಟಿ ದೇಶಾದ್ಯಂತ ಮತ್ತೊಮ್ಮೆ ಶಾಂತಿಯುತ ಪ್ರತಿಭಟನೆಗಳನ್ನು ಆರಂಭಿಸಲಿದೆ ಎಂದು ಪಕ್ಷ ಎಚ್ಚರಿಕೆ ನೀಡಿದೆ.

ದೇಶ

ಕೇಂದ್ರ ಸರ್ಕಾರಕ್ಕೆ CJP ಡೆಡ್‌ಲೈನ್! FIR ಹಿಂಪಡೆಯದಿದ್ದರೆ ದೇಶಾದ್ಯಂತ ಮತ್ತೆ ಬೃಹತ್ ಪ್ರತಿಭಟನೆ

Published

on

ನವದೆಹಲಿ: ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ಗಳನ್ನು (FIR) ಹಿಂಪಡೆಯುವ ಕುರಿತು ಕೇಂದ್ರ ಸರ್ಕಾರ ಇನ್ನೂ ಲಿಖಿತ ಭರವಸೆ ನೀಡಿಲ್ಲ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (CJP), ಭರವಸೆ ಈಡೇರಿಸದಿದ್ದರೆ ದೇಶಾದ್ಯಂತ ಮತ್ತೆ ಬೃಹತ್ ಶಾಂತಿಯುತ ಪ್ರತಿಭಟನೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದೆ.

ಸಿಜೆಪಿ ಮುಖ್ಯ ವಕ್ತಾರ Sourav Das ಮಂಗಳವಾರ ಸಂಜೆ ಸರ್ಕಾರದ ಪ್ರತಿನಿಧಿಗಳನ್ನು ಭೇಟಿಯಾದ ಬಳಿಕ ಈ ವಿಷಯವನ್ನು ಬಹಿರಂಗಪಡಿಸಿದರು. ಸರ್ಕಾರದ ಆಹ್ವಾನದ ಮೇರೆಗೆ ನಡೆದ ಸಭೆಯಲ್ಲಿ, ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸಂಬಂಧಿಸಿದ ಎಫ್‌ಐಆರ್‌ಗಳ ತನಿಖೆ ಮುಂದುವರಿಸಲು ಅವಕಾಶ ನೀಡಿರುವ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ ಉಲ್ಲೇಖವನ್ನು ಸರ್ಕಾರ ಮಾಡಿದೆ ಎಂದು ಅವರು ತಿಳಿಸಿದರು.

‘ಲಿಖಿತ ಭರವಸೆ ಇನ್ನೂ ಸಿಕ್ಕಿಲ್ಲ’

“ಎಫ್‌ಐಆರ್‌ಗಳನ್ನು ಹಿಂಪಡೆಯುವ ಹಾಗೂ ಭವಿಷ್ಯದಲ್ಲಿ ಯಾವುದೇ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಯನ್ನು ಲಿಖಿತ ರೂಪದಲ್ಲಿ ನೀಡುತ್ತೀರಾ ಎಂದು ನಾವು ನೇರವಾಗಿ ಕೇಳಿದ್ದೇವೆ. ಆದರೆ ಈವರೆಗೆ ಯಾವುದೇ ಉತ್ತರ ಬಂದಿಲ್ಲ” ಎಂದು ಸೌರವ್ ದಾಸ್ ಹೇಳಿದ್ದಾರೆ.

ಸರ್ಕಾರ ನೀಡಿದ್ದ ಭರವಸೆ ಕೇವಲ ದೆಹಲಿಗೆ ಮಾತ್ರವಲ್ಲದೆ, ಬಿಜೆಪಿ ಅಥವಾ ಎನ್‌ಡಿಎ ಆಡಳಿತದ ರಾಜ್ಯಗಳಿಗೂ ಅನ್ವಯಿಸುತ್ತದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ಅದರ ಬಗ್ಗೆ ಅಧಿಕೃತ ಲಿಖಿತ ಭರವಸೆ ಇನ್ನೂ ಸಿಕ್ಕಿಲ್ಲ ಎಂದು ಅವರು ಆರೋಪಿಸಿದರು.

‘ಯುವಕರಿಗೆ ದ್ರೋಹ ಮಾಡಬೇಡಿ’

ಸರ್ಕಾರ ತನ್ನ ಮಾತು ಉಳಿಸದಿದ್ದರೆ ಅದು ದೇಶದ ಯುವಕರಿಗೆ ಮಾಡುವ ದೊಡ್ಡ ದ್ರೋಹವಾಗಲಿದೆ ಎಂದು ಸಿಜೆಪಿ ಎಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ಭರವಸೆಯನ್ನು ಸರ್ಕಾರ ಪಾಲಿಸಲೇಬೇಕು ಎಂದು ಪಕ್ಷ ಒತ್ತಾಯಿಸಿದೆ.

ಮತ್ತೆ ದೇಶವ್ಯಾಪಿ ಹೋರಾಟದ ಎಚ್ಚರಿಕೆ

ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡದಿದ್ದರೆ ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಬೃಹತ್ ಶಾಂತಿಯುತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಸೌರವ್ ದಾಸ್ ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮುನ್ನ ಸಿಜೆಪಿ ವಕ್ತಾರ ಆಶುತೋಷ್ ರಾಂಕಾ ಹಾಗೂ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಕೂಡ ವಿದ್ಯಾರ್ಥಿಗಳ ವಿರುದ್ಧದ ಎಫ್‌ಐಆರ್‌ಗಳನ್ನು ತಕ್ಷಣ ಹಿಂಪಡೆಯಬೇಕು ಮತ್ತು ಪೊಲೀಸ್ ಕಿರುಕುಳ ಮುಂದುವರಿದರೆ ದೇಶವ್ಯಾಪಿ ಹೊಸ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

Continue Reading

ರಾಜ್ಯ

Cauvery ನೀರು ಬಿಡುಗಡೆ ಆದೇಶಕ್ಕೆ ಡಿಕೆಶಿ ಮಾಸ್ಟರ್ ಪ್ಲಾನ್; ಇಂದು ದೆಹಲಿಯಲ್ಲಿ ತುರ್ತು ಸಭೆ

Published

on

ನವದೆಹಲಿ: ತಮಿಳುನಾಡಿಗೆ Cauvery ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಶಿಫಾರಸಿನ ಬೆನ್ನಲ್ಲೇ, CM D K Shivkumar ಅವರು ಇಂದು (ಜುಲೈ 29) ದೆಹಲಿಯಲ್ಲಿ ರಾಜ್ಯದ ಪರ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಬೆಳಿಗ್ಗೆ 11.30 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರದ ಪರ ವಕೀಲ ಮೋಹನ್ ಕಾತರಕಿ ಸೇರಿದಂತೆ ಹಲವು ಕಾನೂನು ತಜ್ಞರು ಭಾಗವಹಿಸಲಿದ್ದು, ರಾಜ್ಯದ ಮುಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಯಲಿದೆ.

ರೈತರ ಹಿತ ರಕ್ಷಣೆಗೆ ಮುಂದಿನ ಕ್ರಮ ಚರ್ಚೆ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ರೈತರು ಹಾಗೂ ರಾಜ್ಯದ ಹಿತಾಸಕ್ತಿ ಕಾಪಾಡಲು ಯಾವ ರೀತಿಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

3,500 ಕ್ಯೂಸೆಕ್ ನೀರು ಬಿಡುಗಡೆಗೆ CWRC ಶಿಫಾರಸು

ಮಂಗಳವಾರ ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC), ಕರ್ನಾಟಕವು ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕು ಎಂದು ಶಿಫಾರಸು ಮಾಡಿತ್ತು. ಈ ತೀರ್ಮಾನ ರಾಜ್ಯ ಸರ್ಕಾರಕ್ಕೆ ಆಘಾತ ಉಂಟುಮಾಡಿದ್ದು, ರೈತ ಸಂಘಟನೆಗಳಲ್ಲೂ ಅಸಮಾಧಾನ ವ್ಯಕ್ತವಾಗಿದೆ.

ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಜ್ಜು

ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಎರಡು ತಿಂಗಳು ಕಳೆದರೂ ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಪ್ರಮುಖ ಜಲಾಶಯಗಳು ಅರ್ಧದಷ್ಟೂ ಭರ್ತಿಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.

ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ CWRC ಶಿಫಾರಸಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ದೆಹಲಿಯಲ್ಲಿ ನಡೆಯುವ ಇಂದಿನ ಸಭೆಯ ಬಳಿಕ ಮುಂದಿನ ಕಾನೂನು ಹೋರಾಟದ ರೂಪುರೇಷೆ ಅಂತಿಮಗೊಳ್ಳುವ ಸಾಧ್ಯತೆ ಇದೆ.

Continue Reading

ರಾಜ್ಯ

Congress ದೂರಿನ ಮೇರೆಗೆ ಯಶ್‌ಪಾಲ್ ಸುವರ್ಣ ವಿರುದ್ಧ FIR; ದ್ವೇಷ ಭಾಷಣ ಆರೋಪ

Published

on

ಉಡುಪಿ: Congress ಮತ್ತುCockroach Janata Party ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ MLA Yashpal Suvarna ಸುವರ್ಣ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಮಂಗಳವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯ ವೇಳೆ ಶಾಸಕ ಯಶ್‌ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅದು ದ್ವೇಷ ಭಾಷಣಕ್ಕೆ ಒಳಪಡುವಂತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರತಿಭಟನೆ ಸಂದರ್ಭದಲ್ಲಿ ಮಾಡಿದ ಭಾಷಣದ ವಿಡಿಯೋ ಮತ್ತು ಸಾರ್ವಜನಿಕ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈಗ ಪೊಲೀಸರು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.

ಈ ಬೆಳವಣಿಗೆ ಉಡುಪಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Continue Reading

Trending