ದೇಶ
‘Priyanka Gandhi ಗೋಮೂತ್ರ ತಜ್ಞರೆಂದರು; ಅವರು ಗೋಮೂತ್ರ ಸೇವಿಸಲಿ’ – Anurag Thakur ತಿರುಗೇಟು
ನವದೆಹಲಿ: ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆ ಕಾಂಗ್ರೆಸ್ ನಾಯಕಿ Priyanka Gandhi ಮತ್ತು ಬಿಜೆಪಿ ಸಂಸದ Anurag Thakur ನಡುವಿನ ವಾಕ್ಸಮರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಶಿಕ್ಷಣ ಸುಧಾರಣ ಸಮಿತಿಯ ಕುರಿತು ಪ್ರಿಯಾಂಕಾ ಗಾಂಧಿ ಮಾಡಿದ ಟೀಕೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಅನುರಾಗ್ ಠಾಕೂರ್, ಅವರು ಪ್ರತಿಷ್ಠಿತ ಶಿಕ್ಷಣ ತಜ್ಞರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಗಳವಾರ ಲೋಕಸಭೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ಗಂಭೀರ ವಿಷಯಗಳ ಚರ್ಚೆಯಲ್ಲಿಯೂ ಪ್ರಿಯಾಂಕಾ ಗಾಂಧಿ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ ಎಂದು ಟೀಕಿಸಿದರು. ಜೊತೆಗೆ IIT Madras ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರ ಬಗ್ಗೆ ಮಾಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.
“ಭಾರತದ ಶ್ರೇಷ್ಠ ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರಲ್ಲಿ ಒಬ್ಬರಾದ ಪ್ರೊ. ವಿ. ಕಾಮಕೋಟಿ ಅವರ ಬಗ್ಗೆ ಈ ರೀತಿಯ ಹೇಳಿಕೆ ನೀಡಿರುವುದು ಬೇಸರದ ಸಂಗತಿ. ಅವರು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿದ್ದರೂ ಅದರಲ್ಲಿ ಯಾವುದೇ ತಪ್ಪಿಲ್ಲ. ನೀವು ಕೂಡ ಆರ್‌ಎಸ್‌ಎಸ್‌ಗೆ ಸೇರಿ, ದೇಶದ ಬಗ್ಗೆ ಯೋಚಿಸುವ ಮೌಲ್ಯಗಳನ್ನು ಕಲಿಯಿರಿ” ಎಂದು ಅನುರಾಗ್ ಠಾಕೂರ್ ಹೇಳಿದರು.
ಮುಂದುವರಿದು ಮಾತನಾಡಿದ ಅವರು, “ಪ್ರಿಯಾಂಕಾ ಗಾಂಧಿ ರಾಹುಲ್ ಗಾಂಧಿಗಿಂತ ಉತ್ತಮರು ಎಂದು ನಾನು ಭಾವಿಸಿದ್ದೆ. ಆದರೆ ಅವರ ಇತ್ತೀಚಿನ ಹೇಳಿಕೆ ನೋಡಿದರೆ ಇಬ್ಬರೂ ಒಂದೇ ಹಾದಿಯಲ್ಲಿದ್ದಾರೆ ಎನ್ನಿಸುತ್ತದೆ. ಅವರು ಗೋಮೂತ್ರದ ಬಗ್ಗೆ ಮಾತನಾಡುವ ಬದಲು ಅದನ್ನು ಸೇವಿಸಬೇಕು” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಪ್ರಿಯಾಂಕಾ ಗಾಂಧಿ ಹೇಳಿದ್ದೇನು?
ಪರೀಕ್ಷಾ ಅಕ್ರಮ ತಡೆಗೆ ಸಂಬಂಧಿಸಿದ ಹೊಸ ಮಸೂದೆ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದ ಪ್ರಿಯಾಂಕಾ ಗಾಂಧಿ, ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸರ್ಕಾರವು ಮತ್ತೆ ಹೊಸ ಸಮಿತಿಯನ್ನು ರಚಿಸಿರುವುದನ್ನು ಪ್ರಶ್ನಿಸಿದ್ದರು.
ಈ ವೇಳೆ, ಹಿಂದಿನ ರಾಧಾಕೃಷ್ಣ ಸಮಿತಿ ಶಿಫಾರಸುಗಳನ್ನು ಜಾರಿಗೆ ತರದ ಸರ್ಕಾರ ಮತ್ತೊಂದು ಸಮಿತಿ ರಚಿಸಿರುವುದರಿಂದ ಪ್ರಯೋಜನವಿಲ್ಲ ಎಂದು ಟೀಕಿಸಿದ ಅವರು, ಹೊಸ ಸಮಿತಿಯಲ್ಲಿ ಮಾಜಿ ಐಬಿ ಮುಖ್ಯಸ್ಥರು, ಐಟಿ ಕಂಪನಿಯ ಪ್ರತಿನಿಧಿ ಹಾಗೂ ‘ಗೋಮೂತ್ರ ತಜ್ಞ’ ಇದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರನ್ನು ಉಲ್ಲೇಖಿಸಿದ್ದರು.
ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಶಿಕ್ಷಣ ತಜ್ಞರ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆ ಎಂದು ಆರೋಪಿಸಿದೆ. ಲೋಕಸಭೆಯಲ್ಲಿ ನಡೆದ ಈ ವಾಕ್ಸಮರ ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ದೇಶ
ಕೇಂದ್ರ ಸರ್ಕಾರಕ್ಕೆ CJP ಡೆಡ್‌ಲೈನ್! FIR ಹಿಂಪಡೆಯದಿದ್ದರೆ ದೇಶಾದ್ಯಂತ ಮತ್ತೆ ಬೃಹತ್ ಪ್ರತಿಭಟನೆ
ನವದೆಹಲಿ: ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ಗಳನ್ನು (FIR) ಹಿಂಪಡೆಯುವ ಕುರಿತು ಕೇಂದ್ರ ಸರ್ಕಾರ ಇನ್ನೂ ಲಿಖಿತ ಭರವಸೆ ನೀಡಿಲ್ಲ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (CJP), ಭರವಸೆ ಈಡೇರಿಸದಿದ್ದರೆ ದೇಶಾದ್ಯಂತ ಮತ್ತೆ ಬೃಹತ್ ಶಾಂತಿಯುತ ಪ್ರತಿಭಟನೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದೆ.
ಸಿಜೆಪಿ ಮುಖ್ಯ ವಕ್ತಾರ Sourav Das ಮಂಗಳವಾರ ಸಂಜೆ ಸರ್ಕಾರದ ಪ್ರತಿನಿಧಿಗಳನ್ನು ಭೇಟಿಯಾದ ಬಳಿಕ ಈ ವಿಷಯವನ್ನು ಬಹಿರಂಗಪಡಿಸಿದರು. ಸರ್ಕಾರದ ಆಹ್ವಾನದ ಮೇರೆಗೆ ನಡೆದ ಸಭೆಯಲ್ಲಿ, ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸಂಬಂಧಿಸಿದ ಎಫ್‌ಐಆರ್‌ಗಳ ತನಿಖೆ ಮುಂದುವರಿಸಲು ಅವಕಾಶ ನೀಡಿರುವ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ ಉಲ್ಲೇಖವನ್ನು ಸರ್ಕಾರ ಮಾಡಿದೆ ಎಂದು ಅವರು ತಿಳಿಸಿದರು.
‘ಲಿಖಿತ ಭರವಸೆ ಇನ್ನೂ ಸಿಕ್ಕಿಲ್ಲ’
“ಎಫ್‌ಐಆರ್‌ಗಳನ್ನು ಹಿಂಪಡೆಯುವ ಹಾಗೂ ಭವಿಷ್ಯದಲ್ಲಿ ಯಾವುದೇ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಯನ್ನು ಲಿಖಿತ ರೂಪದಲ್ಲಿ ನೀಡುತ್ತೀರಾ ಎಂದು ನಾವು ನೇರವಾಗಿ ಕೇಳಿದ್ದೇವೆ. ಆದರೆ ಈವರೆಗೆ ಯಾವುದೇ ಉತ್ತರ ಬಂದಿಲ್ಲ” ಎಂದು ಸೌರವ್ ದಾಸ್ ಹೇಳಿದ್ದಾರೆ.
ಸರ್ಕಾರ ನೀಡಿದ್ದ ಭರವಸೆ ಕೇವಲ ದೆಹಲಿಗೆ ಮಾತ್ರವಲ್ಲದೆ, ಬಿಜೆಪಿ ಅಥವಾ ಎನ್‌ಡಿಎ ಆಡಳಿತದ ರಾಜ್ಯಗಳಿಗೂ ಅನ್ವಯಿಸುತ್ತದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ಅದರ ಬಗ್ಗೆ ಅಧಿಕೃತ ಲಿಖಿತ ಭರವಸೆ ಇನ್ನೂ ಸಿಕ್ಕಿಲ್ಲ ಎಂದು ಅವರು ಆರೋಪಿಸಿದರು.
‘ಯುವಕರಿಗೆ ದ್ರೋಹ ಮಾಡಬೇಡಿ’
ಸರ್ಕಾರ ತನ್ನ ಮಾತು ಉಳಿಸದಿದ್ದರೆ ಅದು ದೇಶದ ಯುವಕರಿಗೆ ಮಾಡುವ ದೊಡ್ಡ ದ್ರೋಹವಾಗಲಿದೆ ಎಂದು ಸಿಜೆಪಿ ಎಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ಭರವಸೆಯನ್ನು ಸರ್ಕಾರ ಪಾಲಿಸಲೇಬೇಕು ಎಂದು ಪಕ್ಷ ಒತ್ತಾಯಿಸಿದೆ.
ಮತ್ತೆ ದೇಶವ್ಯಾಪಿ ಹೋರಾಟದ ಎಚ್ಚರಿಕೆ
ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡದಿದ್ದರೆ ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಬೃಹತ್ ಶಾಂತಿಯುತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಸೌರವ್ ದಾಸ್ ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮುನ್ನ ಸಿಜೆಪಿ ವಕ್ತಾರ ಆಶುತೋಷ್ ರಾಂಕಾ ಹಾಗೂ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಕೂಡ ವಿದ್ಯಾರ್ಥಿಗಳ ವಿರುದ್ಧದ ಎಫ್‌ಐಆರ್‌ಗಳನ್ನು ತಕ್ಷಣ ಹಿಂಪಡೆಯಬೇಕು ಮತ್ತು ಪೊಲೀಸ್ ಕಿರುಕುಳ ಮುಂದುವರಿದರೆ ದೇಶವ್ಯಾಪಿ ಹೊಸ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ರಾಜ್ಯ
Cauvery ನೀರು ಬಿಡುಗಡೆ ಆದೇಶಕ್ಕೆ ಡಿಕೆಶಿ ಮಾಸ್ಟರ್ ಪ್ಲಾನ್; ಇಂದು ದೆಹಲಿಯಲ್ಲಿ ತುರ್ತು ಸಭೆ
ನವದೆಹಲಿ: ತಮಿಳುನಾಡಿಗೆ Cauvery ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಶಿಫಾರಸಿನ ಬೆನ್ನಲ್ಲೇ, CM D K Shivkumar ಅವರು ಇಂದು (ಜುಲೈ 29) ದೆಹಲಿಯಲ್ಲಿ ರಾಜ್ಯದ ಪರ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಬೆಳಿಗ್ಗೆ 11.30 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರದ ಪರ ವಕೀಲ ಮೋಹನ್ ಕಾತರಕಿ ಸೇರಿದಂತೆ ಹಲವು ಕಾನೂನು ತಜ್ಞರು ಭಾಗವಹಿಸಲಿದ್ದು, ರಾಜ್ಯದ ಮುಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಯಲಿದೆ.
ರೈತರ ಹಿತ ರಕ್ಷಣೆಗೆ ಮುಂದಿನ ಕ್ರಮ ಚರ್ಚೆ
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ರೈತರು ಹಾಗೂ ರಾಜ್ಯದ ಹಿತಾಸಕ್ತಿ ಕಾಪಾಡಲು ಯಾವ ರೀತಿಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
3,500 ಕ್ಯೂಸೆಕ್ ನೀರು ಬಿಡುಗಡೆಗೆ CWRC ಶಿಫಾರಸು
ಮಂಗಳವಾರ ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC), ಕರ್ನಾಟಕವು ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕು ಎಂದು ಶಿಫಾರಸು ಮಾಡಿತ್ತು. ಈ ತೀರ್ಮಾನ ರಾಜ್ಯ ಸರ್ಕಾರಕ್ಕೆ ಆಘಾತ ಉಂಟುಮಾಡಿದ್ದು, ರೈತ ಸಂಘಟನೆಗಳಲ್ಲೂ ಅಸಮಾಧಾನ ವ್ಯಕ್ತವಾಗಿದೆ.
ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಜ್ಜು
ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಎರಡು ತಿಂಗಳು ಕಳೆದರೂ ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಪ್ರಮುಖ ಜಲಾಶಯಗಳು ಅರ್ಧದಷ್ಟೂ ಭರ್ತಿಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.
ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ CWRC ಶಿಫಾರಸಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ದೆಹಲಿಯಲ್ಲಿ ನಡೆಯುವ ಇಂದಿನ ಸಭೆಯ ಬಳಿಕ ಮುಂದಿನ ಕಾನೂನು ಹೋರಾಟದ ರೂಪುರೇಷೆ ಅಂತಿಮಗೊಳ್ಳುವ ಸಾಧ್ಯತೆ ಇದೆ.
ರಾಜ್ಯ
Congress ದೂರಿನ ಮೇರೆಗೆ ಯಶ್‌ಪಾಲ್ ಸುವರ್ಣ ವಿರುದ್ಧ FIR; ದ್ವೇಷ ಭಾಷಣ ಆರೋಪ
ಉಡುಪಿ: Congress ಮತ್ತುCockroach Janata Party ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ MLA Yashpal Suvarna ಸುವರ್ಣ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಮಂಗಳವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯ ವೇಳೆ ಶಾಸಕ ಯಶ್‌ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅದು ದ್ವೇಷ ಭಾಷಣಕ್ಕೆ ಒಳಪಡುವಂತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪ್ರತಿಭಟನೆ ಸಂದರ್ಭದಲ್ಲಿ ಮಾಡಿದ ಭಾಷಣದ ವಿಡಿಯೋ ಮತ್ತು ಸಾರ್ವಜನಿಕ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈಗ ಪೊಲೀಸರು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.
ಈ ಬೆಳವಣಿಗೆ ಉಡುಪಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
-
ರಾಜ್ಯ19 hours agoDK Shivkumar-Usha ದಂಪತಿಗೆ 33ನೇ ವಿವಾಹ ವಾರ್ಷಿಕೋತ್ಸವ; ಹಳೆಯ ಆಮಂತ್ರಣ ಪತ್ರ ವೈರಲ್
-
ದೇಶ20 hours ago16 Crores ವೆಚ್ಚದ ಸಂಪರ್ಕ ರಸ್ತೆ 16 ದಿನದಲ್ಲೇ ಕುಸಿತ; ಉತ್ತರಾಖಂಡದಲ್ಲಿ ಕಾಂಗ್ರೆಸ್ ಆಕ್ರೋಶ
-
ದೇಶ19 hours agoGoogle Pay, PhonePe, Paytm ಬಳಕೆದಾರರಿಗೆ ಹೊಸ ಅಪ್ಡೇಟ್; UPIನಲ್ಲಿ ಬದಲಾಗಲಿದೆ ಈ ನಿಯಮ
-
ರಾಜ್ಯ20 hours agoMandya ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಆಕ್ರೋಶ; ಜಿಲ್ಲಾಧ್ಯಕ್ಷರ ಬದಲಾವಣೆಗೆ ಒತ್ತಾಯ
-
ದೇಶ20 hours agoCJP ಸಂಭ್ರಮಾಚರಣೆ ಕುರಿತು ಸೋನಮ್ ವಾಂಗ್ಚುಕ್ ಪ್ರತಿಕ್ರಿಯೆ; ಹೇಳಿದ್ದೇನು?
-
ರಾಜ್ಯ20 hours agoCongress ಹೈಕಮಾಂಡ್ಗೆ ಜಮೀರ್ ಅಹ್ಮದ್ ಕ್ಷಮೆ; ‘ನನ್ನ ವಿರುದ್ಧ ಪಿತೂರಿ ನಡೆದಿದೆ’
-
ದೇಶ20 hours agoJantar Mantar ಪ್ರತಿಭಟನೆಯಿಂದ ವೈರಲ್ ಆದ ಮೊಹಮ್ಮದ್ ಇರ್ಫಾನ್; ಮೋದಿ, ಅಮಿತ್ ಶಾ, ರಾಹುಲ್ ಕುರಿತು ಹೇಳಿಕೆ
-
ಸಿನಿಮಾ22 hours agoRamayana: Shri Rama ನ ಪಾತ್ರದ ಬಗ್ಗೆ ಅನುಮಾನವೇ ಇತ್ತು! ಭಾವನಾತ್ಮಕ ಒಪ್ಪಿಗೆಯೊಂದಿಗೆ Ranbir Kapoor ಪ್ರತಿಕ್ರಿಯೆ
