Connect with us

ಕ್ರೀಡೆ

ವಿರಾಟ್ ಆಟಗಾರನಿಗೆ ಸಚಿನ್ ತೆಂಡೂಲ್ಕರ್ ಭಾವನಾತ್ಮಕ ಸಂದೇಶ

ವಿರಾಟ್ ಆಟಗಾರನಿಗೆ ಸಚಿನ್ ತೆಂಡೂಲ್ಕರ್ ಭಾವನಾತ್ಮಕ ಸಂದೇಶ
ವಿರಾಟ್ ಆಟಗಾರನಿಗೆ ಸಚಿನ್ ತೆಂಡೂಲ್ಕರ್ ಭಾವನಾತ್ಮಕ ಸಂದೇಶ

ಮುಂಬೈ: ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ತೋರಿದ್ದಾರೆ,
ಕ್ರಿಕೆಟ್ ದೇವರು ಎಂದೇ ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಅವರ ಎರಡು ದಾಖಲೆಗಳನ್ನು ಮುರಿಯುವ ಕಿಂಗ್ ಕೊಹ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಿ ಕ್ರಿಕೆಟ್ ಅಭಿಮಾನಿಗಳ ಮಾತ್ರವಲ್ಲ ಕ್ರಿಕೆಟ್ ದೇವರ ಮನವನ್ನು ಗೆದ್ದಿದ್ದಾರೆ,
ಮೊದಲ ಬಾರಿ ನಿನ್ನನ್ನು ಡ್ರೆಸ್ಸಿಂಗ್ ರೂಂನಲ್ಲಿ ನೋಡಿದ್ದೆ ಆಗ ನೀನು ನಮ್ಮ ಕಾಲನ್ನು ನಮಸ್ಕರಿಸಿದ್ದೆ ಈಗ ನೀನು ನಿನ್ನ ಅದ್ಭುತ ಛಲ, ಕೌಶಲ್ಯದ ಮೂಲಕ ನನ್ನ ಹೃದಯವನ್ನು ಮುಟ್ಟಿದ್ದೀಯಾ, ಸಣ್ಣ ಹುಡುಗನೊಬ್ಬ ವಿರಾಟ್ ಆಟಗಾರನಾಗಿ ಹೊರಹೊಮ್ಮಿರುವುದು ನನಗೆ ಹೆಮ್ಮೆ ಅನಿಸಿದೆ ಎಂದು ಬರೆದು ಕೊಂಡಿದ್ದಾರೆ,

ಕ್ರೀಡೆ

RCB ಮಾರಾಟ ಪ್ರಕ್ರಿಯೆ ಆರಂಭ: ಜೈಲಿನಿಂದಲೇ ಸುಕೇಶ್ ₹8,300 ಕೋಟಿ ಬಿಡ್?

ಬೆಂಗಳೂರು, ಫೆ.12: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾರಾಟ ಪ್ರಕ್ರಿಯೆಯ ಮೊದಲ ಹಂತ ಅಧಿಕೃತವಾಗಿ ಆರಂಭವಾಗಿದೆ. ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವ ಡಿಯಾಜಿಯೋ (Diageo) ಕಂಪನಿಯು ಆಸಕ್ತ ಖರೀದಿದಾರರಿಗೆ ಮಾಹಿತಿ ಪತ್ರಗಳನ್ನು ವಿತರಿಸಿದೆ. ಈ ನಡುವೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಅವರು RCB ಖರೀದಿಗೆ ಬಿಡ್ ಸಲ್ಲಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಕೇಂದ್ರ ಕಾನೂನು ಸಚಿವಾಲಯದ ಅಧಿಕಾರಿ ಎಂದು ಬಿಂಬಿಸಿಕೊಂಡು ವಂಚನೆ ಆರೋಪದಡಿ ಬಂಧನದಲ್ಲಿರುವ ಸುಕೇಶ್, ತಮ್ಮ ಎಲ್‌ಎಸ್ ಹೋಲ್ಡಿಂಗ್ಸ್ (LS Holdings) ಸಂಸ್ಥೆ ಮೂಲಕ ಡಿಯಾಜಿಯೋಗೆ ಪತ್ರ ಬರೆದು 1 ಬಿಲಿಯನ್ ಯುಎಸ್ ಡಾಲರ್ (ಸುಮಾರು ₹8,300 ಕೋಟಿ) ಮೊತ್ತದ ಸಂಪೂರ್ಣ ನಗದು ಬಿಡ್ ನೀಡಲು ಸಿದ್ಧ ಎಂದು ತಿಳಿಸಿದ್ದಾರೆ. 48 ಗಂಟೆಗಳೊಳಗೆ ಪಾವತಿ ಪೂರ್ಣಗೊಳಿಸಲು ಸಿದ್ಧತೆ ಇದೆ ಎಂದು ಕೂಡ ಹೇಳಿದ್ದಾರೆ.

ಸುಕೇಶ್, RCB ಅನ್ನು ತಮ್ಮ ತವರು ತಂಡ ಎಂದು ಬಣ್ಣಿಸಿ, ಫ್ರಾಂಚೈಸಿಯನ್ನು ಸ್ವಾಧೀನಪಡಿಸಿಕೊಂಡರೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಉಡುಗೊರೆಯಾಗಿ ನೀಡುವುದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಇದೇವರೆಗೆ 9 ಬಿಡ್‌ಗಳು ಸಲ್ಲಿಕೆಯಾಗಿವೆ ಎಂದು ವರದಿಗಳು ಸೂಚಿಸುತ್ತವೆ. ಸೀರಂ ಇನ್‌ಸ್ಟಿಟ್ಯೂಟ್‌ನ ಅದಾರ್ ಪೂನಾವಾಲಾ ಹಾಗೂ ಮ್ಯಾಂಚೆಸ್ಟರ್ ಯುನೈಟೆಡ್ ಸಹ ಮಾಲೀಕತ್ವ ಹೊಂದಿರುವ ಗ್ಲೇಝರ್ಸ್ ಕಂಪನಿಗಳು ಪೈಪೋಟಿಯಲ್ಲಿ ಇದ್ದಾರೆ. ಗ್ಲೇಝರ್ಸ್ ಸಂಸ್ಥೆ ಸುಮಾರು ₹16,300 ಕೋಟಿ ಮೊತ್ತದ ಬಿಡ್ ಸಲ್ಲಿಸಿದೆ ಎನ್ನಲಾಗಿದೆ.

RCB ಮಾರಾಟ ಪ್ರಕ್ರಿಯೆ ಈಗ ಕ್ರಿಕೆಟ್ ಮತ್ತು ಉದ್ಯಮ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ.

Continue Reading

ಕ್ರೀಡೆ

ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್‌ಗೆ ಜನ್ಮದಿನ ಸಂಭ್ರಮ: ವಿಶಿಯ ಕಲಾತ್ಮಕ ಬ್ಯಾಟಿಂಗ್‌ಗೆ 77ನೇ ವಸಂತ

ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಕಲಾತ್ಮಕ ಬ್ಯಾಟ್ಸ್‌ಮನ್‌ಗಳಲ್ಲಿ ಅಗ್ರಸ್ಥಾನ ಪಡೆದಿರುವ ಗುಂಡಪ್ಪ ರಂಗನಾಥ್ ವಿಶ್ವನಾಥ್ (GR Vishwanath) ಅವರಿಗೆ ಫೆಬ್ರವರಿ 12ರಂದು ಜನ್ಮದಿನ ಸಂಭ್ರಮ. ವಿಶಿ ಕ್ರೀಸಿಗೆ ಬಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಶತಕ ಸಿಡಿಸಿದ ಯಾವುದೇ ಪಂದ್ಯದಲ್ಲಿ ಭಾರತ ಸೋತ ಉದಾಹರಣೆ ಇಲ್ಲ — ಒಂದೋ ಗೆಲುವು, ಇಲ್ಲವೇ ಡ್ರಾ!

1969ರಲ್ಲಿ ಕಾನ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದ ವಿಶಿ, ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟ್ ಆದರೂ, ಎರಡನೇ ಇನ್ನಿಂಗ್ಸ್‌ನಲ್ಲಿ 25 ಬೌಂಡರಿಗಳೊಂದಿಗೆ 137 ರನ್ ಸಿಡಿಸಿ ಕ್ರಿಕೆಟ್ ಲೋಕದ ಗಮನ ಸೆಳೆದರು. ಅವರ ಸ್ಕ್ವೇರ್ ಕಟ್ ಶಾಟ್ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆದ್ದಿತ್ತು.

ಗವಾಸ್ಕರ್ ಪ್ರಶಂಸೆ, ಹೆಲ್ಮೆಟ್ ಇಲ್ಲದೆ ವೇಗದ ಬೌಲರ್ ಎದುರಿಸಿದ ಧೈರ್ಯ

“ನನ್ನಂತಹ ನೂರು ಗವಾಸ್ಕರ್ ಬರಬಹುದು, ಆದರೆ ವಿಶಿಯಂತವರು ಬರಲಾರರು” ಎಂಬ ಸುನಿಲ್ ಗವಾಸ್ಕರ್ ಮಾತುಗಳು ವಿಶಿಯ ಮಹತ್ವ ಸಾರುತ್ತವೆ. ಆಂಡಿ ರಾಬರ್ಟ್ಸ್, ಜೆಫ್ ಥಾಂಪ್ಸನ್‌ಂತಹ ವೇಗದ ಬೌಲರ್‌ಗಳನ್ನು ಹೆಲ್ಮೆಟ್ ಇಲ್ಲದೆ ಎದುರಿಸಿದ ಧೈರ್ಯವೂ ವಿಶಿಯ ವಿಶೇಷ.

ಕ್ರೀಡಾಸ್ಪೂರ್ತಿಗೆ ಮಾದರಿ

1980ರ ಸುವರ್ಣ ಮಹೋತ್ಸವ ಟೆಸ್ಟ್‌ನಲ್ಲಿ ಅಂಪೈರ್ ತಪ್ಪು ತೀರ್ಪು ನೀಡಿದಾಗ ಬಾಬ್ ಟೇಲರ್ ಅವರನ್ನು ಮರು ಕ್ರೀಸಿಗೆ ಕರೆಸಿದ ವಿಶಿಯ ಕ್ರೀಡಾಸ್ಫೂರ್ತಿ ಕ್ರಿಕೆಟ್ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ.

ರಣಜಿ ಫೈನಲ್‌ಗೂ ಮದುವೆಯೂ ಒಂದೇ ಸಮಯ

1978ರಲ್ಲಿ ಗವಾಸ್ಕರ್ ಸಹೋದರಿ ಕವಿತಾ ಅವರನ್ನು ಮದುವೆಯಾದ ವಿಶಿ, ಮದುವೆಯ ಬಳಿಕ ನೇರವಾಗಿ ಮೈದಾನಕ್ಕಿಳಿದು ರಣಜಿ ಫೈನಲ್‌ನಲ್ಲಿ 247 ರನ್ ಸಿಡಿಸಿ ಕರ್ನಾಟಕಕ್ಕೆ ಕಿರೀಟ ತಂದುಕೊಟ್ಟರು.

ವಿಶಿಯ ಮೂರು ಸ್ಮರಣೀಯ ಇನ್ನಿಂಗ್ಸ್

  • 1975, ಮದ್ರಾಸ್: ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್
  • 1969, ಕಾನ್ಪುರ: ಪಾದಾರ್ಪಣೆ ಪಂದ್ಯದಲ್ಲೇ 137 ರನ್
  • 1981, ಎಂಸಿಜಿ: ಆಸ್ಟ್ರೇಲಿಯಾ ವಿರುದ್ಧ 114 ರನ್

77ನೇ ವಸಂತಕ್ಕೆ ಕಾಲಿಡುತ್ತಿರುವ ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ ಅವರಿಗೆ ಹಾರ್ದಿಕ ಶುಭಾಶಯಗಳು.

Continue Reading

ಕ್ರೀಡೆ

ಭಾರತ–ಪಾಕಿಸ್ತಾನ ಟಿ20 ವಿಶ್ವಕಪ್ ಮುಖಾಮುಖಿ: ‘ನಾವು ಸಿದ್ಧ’ ಎಂದ ತಿಲಕ್ ವರ್ಮಾ

ನವದೆಹಲಿ, ಫೆ.11: ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ (T20 World Cup) ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಸಂಪೂರ್ಣ ಸಿದ್ಧವಾಗಿದೆ ಎಂದು ತಿಲಕ್ ವರ್ಮಾ (Tilak Varma) ತಿಳಿಸಿದ್ದಾರೆ.

ನಮೀಬಿಯಾ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ನಾವು ಈಗಾಗಲೇ ಸಿದ್ಧರಾಗಿದ್ದೇವೆ. ಆ ಪಂದ್ಯಕ್ಕಾಗಿ ತಂಡ ಉತ್ಸುಕವಾಗಿದೆ” ಎಂದು ಹೇಳಿದರು.

ಅನಿಶ್ಚಿತತೆಗೆ ತೆರೆ

ಸರ್ಕಾರದ ನಿರ್ದೇಶನಗಳ ಹಿನ್ನೆಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಆರಂಭದಲ್ಲಿ ಪಂದ್ಯದಿಂದ ಹಿಂದೆ ಸರಿಯುವುದಾಗಿ ಸೂಚಿಸಿತ್ತು. ಆದರೆ ನಂತರ ಎಲ್ಲಾ ನಿಗದಿತ ಪಂದ್ಯಗಳಲ್ಲಿ ಭಾಗವಹಿಸುವುದಾಗಿ ಐಸಿಸಿಗೆ ತಿಳಿಸಿದ್ದರಿಂದ ಹೈ-ವೋಲ್ಟೇಜ್ ಪಂದ್ಯ ಸುತ್ತಲಿನ ಗೊಂದಲ ಅಂತ್ಯಗೊಂಡಿದೆ.

ಗಾಯದಿಂದ ಮರಳಿದ ತಿಲಕ್

ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ತಿಲಕ್ ವರ್ಮಾ ವಿಶ್ವಕಪ್ ತಂಡಕ್ಕೆ ಮರಳಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. “ವಿಶ್ವಕಪ್ ಗೆಲ್ಲುವುದೇ ನಮ್ಮ ಗುರಿ. ತಂಡಕ್ಕಾಗಿ ಯಾವಾಗಲೂ ಕೊಡುಗೆ ನೀಡಲು ಸಿದ್ಧನಿದ್ದೇನೆ” ಎಂದರು.

ಅಭ್ಯಾಸ ಪಂದ್ಯದಲ್ಲಿ ಭಾರತ ‘ಎ’ ತಂಡ ನಮೀಬಿಯಾವನ್ನು 100 ರನ್‌ಗಳೊಳಗೆ ಆಲೌಟ್ ಮಾಡಿರುವುದರಿಂದ ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ ಫೇವರಿಟ್ ಎನ್ನಲಾಗುತ್ತಿದೆ.

ಅಭಿಷೇಕ್ ಶರ್ಮಾ ಸ್ಥಿತಿ

ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಅಭಿಷೇಕ್ ಶರ್ಮಾ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಆದರೆ ಮುಂದಿನ ಪಂದ್ಯದಲ್ಲಿ ಅವರು ಹಾಗೂ ಜಸ್ಪ್ರೀತ್ ಬುಮ್ರಾ ಆಡಲಿರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ತಿಲಕ್ ತಿಳಿಸಿದರು.

ಟಿ20 ಸ್ವರೂಪದಲ್ಲಿ ಯಾವುದೇ ತಂಡವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದರು.

Continue Reading

Trending