Connect with us

ರಾಜಕೀಯ

ನಿಮ್ಮ ‘ಸುಲಿಗೆಪುತ್ರ’ನಿಂದ ಕಾಸಿಗಾಗಿ ಹುದ್ದೆ ವ್ಯವಹಾರ ಬಟಾಬಯಲು: ಡೋಂಗಿ ಹರಿಕಾರನ ಅಸಲಿ ಮುಖ ಮಗನಿಂದಲೇ ಬೆತ್ತಲು!

Published

on

ನಿಮ್ಮ 'ಸುಲಿಗೆಪುತ್ರ'ನಿಂದ ಕಾಸಿಗಾಗಿ ಹುದ್ದೆ ವ್ಯವಹಾರ ಬಟಾಬಯಲು: ಡೋಂಗಿ ಹರಿಕಾರನ ಅಸಲಿ ಮುಖ ಮಗನಿಂದಲೇ ಬೆತ್ತಲು!
ನಿಮ್ಮ 'ಸುಲಿಗೆಪುತ್ರ'ನಿಂದ ಕಾಸಿಗಾಗಿ ಹುದ್ದೆ ವ್ಯವಹಾರ ಬಟಾಬಯಲು: ಡೋಂಗಿ ಹರಿಕಾರನ ಅಸಲಿ ಮುಖ ಮಗನಿಂದಲೇ ಬೆತ್ತಲು!

ಬೆಂಗಳೂರು: ಕಾಸಿಗಾಗಿ ಹುದ್ದೆ ಉರುಫ್  ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ಕರ್ನಾಟಕ  ಕಾಂಗ್ರೆಸ್  ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.  ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು? ಎಂದು ಪ್ರಶ್ನಿಸಿದ್ದಾರೆ.  ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, “ನಾನು ಹೇಳಿದವರಷ್ಟನ್ನೇ ಮಾಡಿ” ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ?? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್  ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ ‘ಒಳ ವಸೂಲಿ ಸಚಿವಾಲಯ’ದ ಸಚಿವರಾ?   ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ? ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈಗ ಹೇಳಿ ಸಿದ್ದರಾಮಯ್ಯನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು?

ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ ‘ಸುಲಿಗೆಪುತ್ರ’ ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ!! ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು ಎಂದು ಸವಾಲು ಹಾಕಿದ್ದಾರೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜಕೀಯ

B Nagendra ರಾಜೀನಾಮೆ: ಕಾಂಗ್ರೆಸ್‌ನಲ್ಲಿ ಬಿಗ್ ಟ್ವಿಸ್ಟ್, ಹೈಕಮಾಂಡ್ ಮುಂದಿದೆ ಮಹತ್ವದ ನಿರ್ಧಾರ!

Published

on

By

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಸಚಿವ B Nagendra ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರವೇ ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎನ್ನಲಾಗಿದೆ. ಆದರೆ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಿ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸಬೇಕೇ ಎಂಬ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ರಾಜ್ಯ ನಾಯಕತ್ವದ ನಡುವೆ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜೀನಾಮೆ ಅಂಗೀಕಾರದ ಬಗ್ಗೆ ಕುತೂಹಲ

ನಾಗೇಂದ್ರ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ನಾಯಕತ್ವದ ಮುಂದಿಟ್ಟಿದ್ದು, ಸರ್ಕಾರಕ್ಕೆ ಮತ್ತಷ್ಟು ಮುಜುಗರವಾಗದಂತೆ ರಾಜಕೀಯವಾಗಿ ಮುನ್ನೆಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರ ವಿರುದ್ಧ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ನಿರಂತರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಇದೀಗ ನಾಗೇಂದ್ರ ಅವರ ರಾಜೀನಾಮೆ ಸಲ್ಲಿಕೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಆದರೆ ರಾಜೀನಾಮೆ ಸಲ್ಲಿಸಿರುವುದು ಮಾತ್ರ ಖಚಿತವಾಗಿದ್ದು, ಅದನ್ನು ಅಂಗೀಕರಿಸುವ ಕುರಿತು ಅಂತಿಮ ನಿರ್ಧಾರ ಇನ್ನೂ ಹೊರಬಿದ್ದಿಲ್ಲ ಎನ್ನಲಾಗಿದೆ.

ಬಳ್ಳಾರಿ ಚಲೋಗೂ ಮುನ್ನವೇ ಬಿಗ್ ಟ್ವಿಸ್ಟ್

ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆಪ್ಟೆಂಬರ್ 1ರಿಂದ 10 ದಿನಗಳ ‘ಬಳ್ಳಾರಿ ಚಲೋ ಪಾದಯಾತ್ರೆ’ ನಡೆಸಲು ಘೋಷಿಸಿದೆ. ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲು ಬಿಜೆಪಿ ಸಜ್ಜಾಗಿದೆ.

ಆದರೆ ಬಿಜೆಪಿ ಪಾದಯಾತ್ರೆ ಆರಂಭಕ್ಕೂ ಮುನ್ನವೇ ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಈ ಬೆಳವಣಿಗೆಯ ನಂತರ ಬಿಜೆಪಿ ತನ್ನ ಹೋರಾಟದ ಮುಂದಿನ ಕಾರ್ಯತಂತ್ರವನ್ನು ಹೇಗೆ ರೂಪಿಸಲಿದೆ ಎಂಬುದೂ ಗಮನ ಸೆಳೆದಿದೆ.

ಸಿಎಂ ಡಿಕೆಶಿ ಮತ್ತು ಹೈಕಮಾಂಡ್ ನಿರ್ಧಾರವೇನು?

ನಾಗೇಂದ್ರ ಅವರ ರಾಜೀನಾಮೆ ಪತ್ರ ಇದೀಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಂದಿದ್ದು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಮುಂದಿನ ನಿರ್ಧಾರ ಕೈಗೊಳ್ಳಬೇಕಿದೆ.

ರಾಜೀನಾಮೆಯನ್ನು ಅಂಗೀಕರಿಸಿದರೆ, ಹಗರಣದ ವಿಚಾರದಲ್ಲಿ ಸರ್ಕಾರ ಕೈಗೊಂಡ ಕ್ರಮವೆಂದು ಕಾಂಗ್ರೆಸ್ ಇದನ್ನು ಬಿಂಬಿಸುವ ಸಾಧ್ಯತೆಯಿದೆ. ಮತ್ತೊಂದೆಡೆ, ರಾಜೀನಾಮೆಯನ್ನು ತಿರಸ್ಕರಿಸಿ ನಾಗೇಂದ್ರ ಅವರನ್ನು ಮುಂದುವರಿಸುವ ನಿರ್ಧಾರ ಕೈಗೊಂಡರೆ ಪ್ರತಿಪಕ್ಷಗಳಿಂದ ಮತ್ತಷ್ಟು ರಾಜಕೀಯ ಒತ್ತಡ ಎದುರಾಗುವ ಸಾಧ್ಯತೆಯಿದೆ.

ಹೀಗಾಗಿ ಬಿ. ನಾಗೇಂದ್ರ ಅವರ ರಾಜೀನಾಮೆ ಅಂಗೀಕಾರವಾಗುತ್ತದೆಯೇ ಅಥವಾ ಅವರು ಸಚಿವರಾಗಿ ಮುಂದುವರಿಯುತ್ತಾರೆಯೇ ಎಂಬುದು ಇದೀಗ ರಾಜ್ಯ ರಾಜಕೀಯದ ಪ್ರಮುಖ ಪ್ರಶ್ನೆಯಾಗಿದೆ.

Continue Reading

ರಾಜ್ಯ

B.Nagendra ರಾಜೀನಾಮೆ ಫಿಕ್ಸ್ ಆಯ್ತಾ? ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್‌ನ ‘ಡ್ಯಾಮೇಜ್ ಕಂಟ್ರೋಲ್’

Published

on

By

ಬೆಂಗಳೂರು: ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಇದೀಗ ಮತ್ತೊಮ್ಮೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ B.Nagendra ಅವರ ರಾಜೀನಾಮೆಗೆ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ನಿರಂತರವಾಗಿ ಒತ್ತಾಯಿಸುತ್ತಿರುವ ನಡುವೆಯೇ, ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಇತ್ತೀಚಿನ ಬೆಳವಣಿಗೆಯಲ್ಲಿ ನಾಗೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪರ್ಕಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧತೆ ವ್ಯಕ್ತಪಡಿಸಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸ್ಥಾನದಿಂದ ಕೆಳಗಿಳಿಯಲು ಸಿದ್ಧ ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ. ಆದರೆ, ನಾಗೇಂದ್ರ ಅವರ ಕಚೇರಿ ಈ ವರದಿಗಳನ್ನು ತಳ್ಳಿಹಾಕಿದ್ದು, ರಾಜೀನಾಮೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಈ ನಡುವೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ವಿರುದ್ಧ ತನಿಖೆ ಮುಂದುವರಿಸಲು ಸಿಬಿಐ ಕರ್ನಾಟಕ ರಾಜ್ಯಪಾಲರಿಂದ ಅನುಮತಿ ಕೋರಿದೆ ಎಂದು ವರದಿಯಾಗಿದೆ. ಪ್ರಕರಣದಲ್ಲಿ ಸುಮಾರು 89 ಕೋಟಿ ರೂ. ಅಕ್ರಮಗಳ ಆರೋಪ ಕೇಳಿಬಂದಿದ್ದು, ನಾಗೇಂದ್ರ ವಿರುದ್ಧ ಪ್ರತಿಪಕ್ಷಗಳು ರಾಜಕೀಯವಾಗಿ ಒತ್ತಡ ಹೆಚ್ಚಿಸಿವೆ.

ಆಗಸ್ಟ್ 24ರಂದು ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಈ ವಿಚಾರವಾಗಿ ನಡೆದ ಪ್ರತಿಭಟನೆ ಮತ್ತು ವಿಧಾನಮಂಡಲದ ಗದ್ದಲದಿಂದ ರಾಜ್ಯ ಸರ್ಕಾರದ ಮೇಲಿನ ರಾಜಕೀಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ.

ನಾಗೇಂದ್ರ ಅವರು ಈ ಹಿಂದೆ ಕೂಡ ವಾಲ್ಮೀಕಿ ನಿಗಮದ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ 2026ರ ಆಗಸ್ಟ್‌ನಲ್ಲಿ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಮತ್ತು ಪ್ರತಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅವರ ಸಚಿವ ಸ್ಥಾನ ಮತ್ತೊಮ್ಮೆ ರಾಜಕೀಯ ಚರ್ಚೆಯ ಕೇಂದ್ರವಾಗಿದೆ.

ಹೀಗಾಗಿ ನಾಗೇಂದ್ರ ಅವರ ರಾಜೀನಾಮೆ ಕುರಿತು ಅಂತಿಮ ನಿರ್ಧಾರ ಯಾವಾಗ ಹೊರಬೀಳಲಿದೆ ಎಂಬುದೇ ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್‌ನ ಮುಂದಿನ ನಿರ್ಧಾರ ಮತ್ತು ನಾಗೇಂದ್ರ ಅವರ ಅಧಿಕೃತ ನಿಲುವಿನ ಬಳಿಕವಷ್ಟೇ ಈ ಬೆಳವಣಿಗೆಗೆ ಸ್ಪಷ್ಟತೆ ಸಿಗಲಿದೆ.

Continue Reading

ಬೆಂಗಳೂರು

Bengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್‌ಗೆ ಲಕ್ಷಕ್ಕೂ ಹೆಚ್ಚು!

Published

on

By

ಬೆಂಗಳೂರು: Bengaluru ನಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೆ ಕಸ ಹಾಗೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಹಾಗೆಯೇ ಬಿಟ್ಟಿರುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಗ್ ಶಾಕ್ ನೀಡಿದೆ. ಆಗಸ್ಟ್ 27ರಿಂದ ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತಾ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವ ಮಾಲೀಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ.

ಶಾಂತಿನಗರದಲ್ಲಿ ವಿಶೇಷ ಅಭಿಯಾನಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಉಪಸ್ಥಿತರಿದ್ದರು.

ಖಾಲಿ ಸೈಟ್‌ ಸ್ವಚ್ಛವಾಗಿಡುವುದು ಕಡ್ಡಾಯ

2020ರ ಘನತ್ಯಾಜ್ಯ ನಿರ್ವಹಣೆ ಉಪನಿಯಮಗಳ ಬೈಲಾ 18(1)(b) ಪ್ರಕಾರ, ಪ್ರತಿಯೊಬ್ಬ ಆಸ್ತಿ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ನೈರ್ಮಲ್ಯಯುತವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.

ಈಗಾಗಲೇ ಆಗಸ್ಟ್ 15ರೊಳಗೆ ಖಾಲಿ ಸೈಟ್‌ಗಳಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಸ್ವತಃ ತೆರವುಗೊಳಿಸುವಂತೆ ಮಾಲೀಕರಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಗಡುವು ಮುಗಿದರೂ ಸ್ವಚ್ಛಗೊಳಿಸದ ನಿವೇಶನಗಳ ವಿರುದ್ಧ ಇದೀಗ ಜಿಬಿಎ ನೇರವಾಗಿ ಕ್ರಮ ಕೈಗೊಳ್ಳಲಿದೆ.

ಕಸ ತೆರವು ಮಾಡದಿದ್ದರೆ ಭಾರಿ ದಂಡ!

ಮಾಲೀಕರು ತಮ್ಮ ಜಾಗವನ್ನು ಸ್ವಚ್ಛಗೊಳಿಸದಿದ್ದರೆ, ಪ್ರಾಧಿಕಾರವೇ ನಿವೇಶನದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಲಿದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ದಂಡದ ರೂಪದಲ್ಲಿ ಆಸ್ತಿ ತೆರಿಗೆಯೊಂದಿಗೆ ಸೇರಿಸಿ ವಸೂಲಿ ಮಾಡಲಾಗುತ್ತದೆ.

ನಿವೇಶನದ ಗಾತ್ರಕ್ಕೆ ಅನುಗುಣವಾಗಿ ದಂಡದ ಮೊತ್ತವೂ ಬದಲಾಗಲಿದೆ.

  • 20×30 ಸೈಟ್‌: ₹19,200ರಿಂದ ದಂಡ
  • 30×40 ಸೈಟ್‌: ₹38,400ರವರೆಗೆ ದಂಡ
  • ದೊಡ್ಡ ನಿವೇಶನಗಳು: ₹1 ಲಕ್ಷಕ್ಕೂ ಅಧಿಕ ದಂಡ ಬೀಳುವ ಸಾಧ್ಯತೆ

ಹೀಗಾಗಿ ಖಾಲಿ ಸೈಟ್‌ ಹೊಂದಿರುವವರು ತಕ್ಷಣವೇ ತಮ್ಮ ನಿವೇಶನದಲ್ಲಿರುವ ಕಸ, ಕಟ್ಟಡ ತ್ಯಾಜ್ಯ ಸೇರಿದಂತೆ ಎಲ್ಲ ರೀತಿಯ ತ್ಯಾಜ್ಯವನ್ನು ತೆರವುಗೊಳಿಸುವುದು ಸೂಕ್ತವಾಗಿದೆ.

ಮಾಲೀಕರೇ ಕಸ ಒಟ್ಟುಗೂಡಿಸಿದರೆ ಹೆಚ್ಚುವರಿ ಶುಲ್ಕವಿಲ್ಲ

ಆಸ್ತಿ ಮಾಲೀಕರು ಸ್ವತಃ ಮುಂದೆ ನಿಂತು ನಿವೇಶನದಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಒಂದೆಡೆ ಒಟ್ಟುಗೂಡಿಸಿದರೆ, ಅದನ್ನು ಪಾಲಿಕೆಯೇ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ವಿಲೇವಾರಿ ಮಾಡಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಂಗಳೂರಿನ ಖಾಲಿ ನಿವೇಶನಗಳು ಕಸ ಹಾಕುವ ಸ್ಥಳಗಳಾಗುವುದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Continue Reading

Trending