ಬೆಂಗಳೂರು
Bengaluru ಟ್ರಾಫಿಕ್ ಪೊಲೀಸರನ್ನೇ ಕಂಗಾಲು ಮಾಡಿದ ಸ್ಕೂಟರ್ ಸವಾರ ಯಾರು? 170 ಉಲ್ಲಂಘನೆಗಳ ಹಿಂದಿನ ಕಥೆ ಏನು?
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಒಂದೇ ಸ್ಕೂಟರ್ ಸವಾರ ಮಾಡಿದ ದಾಖಲೆ ಮಟ್ಟದ ಟ್ರಾಫಿಕ್ ಉಲ್ಲಂಘನೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಸವಾರನ ವಿರುದ್ಧ ಬರೋಬ್ಬರಿ 170ಕ್ಕೂ ಹೆಚ್ಚು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ₹96,000ಕ್ಕೂ ಅಧಿಕ ದಂಡ ಬಾಕಿ ಉಳಿದಿರುವುದು ಪೊಲೀಸರ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.
ಸಂಚಾರ ಪೊಲೀಸರ ಮಾಹಿತಿ ಪ್ರಕಾರ, ಈ ಸ್ಕೂಟರ್ ಸವಾರ ನಗರದ ವಿವಿಧ ಭಾಗಗಳಲ್ಲಿ ನಿರಂತರವಾಗಿ ನಿಯಮ ಉಲ್ಲಂಘಿಸಿದ್ದಾನೆ. ಅದರಲ್ಲೂ ಆಶ್ಚರ್ಯಕರ ಸಂಗತಿಯೆಂದರೆ, ಒಂದೇ ಟ್ರಾಫಿಕ್ ಸಿಗ್ನಲ್ನಲ್ಲಿ 102 ಬಾರಿ ಕ್ಯಾಮೆರಾಗೆ ಸಿಕ್ಕಿಬಿದ್ದು ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ.
ಪರಿಶೀಲನೆ ವೇಳೆ ಈ ವಾಹನದ ವಿರುದ್ಧ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದ್ದಕ್ಕಾಗಿ 141 ಪ್ರಕರಣಗಳು, ಸಿಗ್ನಲ್ ಜಂಪ್ ಮಾಡಿದ 30 ಪ್ರಕರಣಗಳು, ರಾಂಗ್ ರೂಟ್ನಲ್ಲಿ ಸಂಚರಿಸಿದ್ದು, ಅನಧಿಕೃತ ಪಾರ್ಕಿಂಗ್ ಹಾಗೂ ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದ ಪ್ರಕರಣಗಳೂ ದಾಖಲಾಗಿವೆ.
ಈ ಎಲ್ಲಾ ಉಲ್ಲಂಘನೆಗಳ ಒಟ್ಟು ದಂಡದ ಮೊತ್ತ ₹96 ಸಾವಿರ ದಾಟಿದ್ದು, ಇದುವರೆಗೂ ಯಾವುದೇ ದಂಡ ಪಾವತಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ರಸ್ತೆ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದು, ಇಂತಹ ನಿರಂತರ ಉಲ್ಲಂಘನೆ ಮಾಡುವ ಚಾಲಕರ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಅಗತ್ಯವಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಸದ್ಯ ಈ ವಾಹನ ಹಾಗೂ ಸವಾರನ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ.
ರಾಜ್ಯ
Voter List ಯಲ್ಲಿ ನಿಮ್ಮ ಹೆಸರು ASDDO ಪಟ್ಟಿಯಲ್ಲಿದೆಯೇ? ಹೀಗೆ ಆನ್ಲೈನ್ನಲ್ಲಿ ಪರಿಶೀಲಿಸಿ, ತಪ್ಪಿದ್ದರೆ ತಕ್ಷಣ ಸರಿಪಡಿಸಿ
ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ Voter List ಯ ವಿಶೇಷ ಸಾಂದ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ಭಾಗವಾಗಿ, ಸಾರ್ವಜನಿಕರು ತಮ್ಮ ಹೆಸರು ASDDO (Absent, Shifted, Dead, Duplicate and Others) ಪಟ್ಟಿಯಲ್ಲಿ ಸೇರಿಸಲಾಗಿದೆಯೇ ಎಂಬುದನ್ನು ಈಗ ಆನ್ಲೈನ್ ಮೂಲಕವೇ ಪರಿಶೀಲಿಸಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ಕಚೇರಿ ತಿಳಿಸಿದೆ.
ರಾಜ್ಯದ 5.54 ಕೋಟಿ ನೋಂದಾಯಿತ ಮತದಾರರಲ್ಲಿ 1.11 ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ASDDO ಪಟ್ಟಿಯಲ್ಲಿ ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ.
ಸಾರ್ವಜನಿಕರು ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕೃತ ವೆಬ್ಸೈಟ್ ಮೂಲಕ ಜಿಲ್ಲಾವಾರು ಪ್ರಕಟಿಸಿರುವ ASDDO ಪಟ್ಟಿಯನ್ನು ಪರಿಶೀಲಿಸಿ ತಮ್ಮ ಹೆಸರು ಹಾಗೂ ಅದರ ಸ್ಥಿತಿಗತಿಯನ್ನು ತಿಳಿದುಕೊಳ್ಳಬಹುದು.
ತಪ್ಪಾಗಿ ಹೆಸರು ಸೇರಿದ್ದರೆ ಏನು ಮಾಡಬೇಕು?
ನೀವು ಇನ್ನೂ ಅದೇ ವಿಳಾಸದಲ್ಲಿ ವಾಸವಾಗಿದ್ದರೂ, ನಿಮ್ಮ ಹೆಸರನ್ನು ‘ಸ್ಥಳಾಂತರಗೊಂಡವರು’, ‘ಗೈರುಹಾಜರಾದವರು’ ಅಥವಾ ಇತರೆ ASDDO ವರ್ಗಗಳಲ್ಲಿ ತಪ್ಪಾಗಿ ಸೇರಿಸಿದ್ದರೆ ಆತಂಕಪಡುವ ಅಗತ್ಯವಿಲ್ಲ.
ಅಂತಹ ಸಂದರ್ಭಗಳಲ್ಲಿ ತಕ್ಷಣವೇ ನಿಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿ (BLO) ಅವರನ್ನು ಸಂಪರ್ಕಿಸಿ, ನೀವು ಅದೇ ವಿಳಾಸದಲ್ಲಿ ವಾಸಿಸುತ್ತಿರುವುದನ್ನು ದೃಢೀಕರಿಸಬೇಕು. ಬಿಎಲ್ಒ ನೀಡುವ ಸ್ವಯಂ ಘೋಷಣಾ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದ ಬಳಿಕ ಪರಿಶೀಲನೆ ನಡೆಸಿ ಅಗತ್ಯ ತಿದ್ದುಪಡಿ ಮಾಡಲಾಗುತ್ತದೆ.
ಆಗಸ್ಟ್ 17ರೊಳಗೆ ಕ್ರಮ ಕೈಗೊಳ್ಳಿ
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ASDDO ಪಟ್ಟಿಯಲ್ಲಿಯೇ ಉಳಿಯುವ ಮತದಾರರ ಹೆಸರುಗಳನ್ನು ಆಗಸ್ಟ್ 17ರಂದು ಪ್ರಕಟವಾಗಲಿರುವ ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬ ಮತದಾರರೂ ತಮ್ಮ ಹೆಸರು ಪರಿಶೀಲಿಸಿಕೊಂಡು, ತಪ್ಪಿದ್ದರೆ ಕೂಡಲೇ ಬಿಎಲ್ಒ ಮೂಲಕ ತಿದ್ದುಪಡಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕು ಕಳೆದುಕೊಳ್ಳದಿರಲು ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದೆ.
ಬೆಂಗಳೂರು
Bike Taxi ಸೇವೆ ತಕ್ಷಣ ನಿಷೇಧಿಸಿ: ಸಾರಿಗೆ ಆಯುಕ್ತರ ಕಚೇರಿ ಮುಂದೆ ಆಟೋ ಚಾಲಕರ ಬೃಹತ್ ಪ್ರತಿಭಟನೆ
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಬೈಕ್ ಟ್ಯಾಕ್ಸಿ (Bike Taxi) ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಒತ್ತಾಯಿಸಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಒಕ್ಕೂಟ ಸಾರಿಗೆ ಆಯುಕ್ತರ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದೆ. ಸರ್ಕಾರ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ನಗರಾದ್ಯಂತ Bengaluru Bandh ನಡೆಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಸಾರಿಗೆ ಆಯುಕ್ತರ ಕಚೇರಿ ಆವರಣದಲ್ಲಿ ನೂರಾರು ಆಟೋ ಹಾಗೂ ಕ್ಯಾಬ್ ಚಾಲಕರು ಸೇರಿ ಪ್ರತಿಭಟನೆ ನಡೆಸಿ, ಆ್ಯಪ್ ಆಧಾರಿತ ಕಂಪನಿಗಳು ನಿಯಮಬಾಹಿರವಾಗಿ ವೈಟ್ಬೋರ್ಡ್ ದ್ವಿಚಕ್ರ ವಾಹನಗಳನ್ನು ಪ್ರಯಾಣಿಕರ ಸಾರಿಗೆಗೆ ಬಳಸುತ್ತಿರುವುದರಿಂದ ತಮ್ಮ ಜೀವನೋಪಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಆರೋಪಿಸಿದರು.
ಚಾಲಕರ ಸಂಘಟನೆಯ ಮುಖಂಡರು ಮಾತನಾಡಿ, ತಾವು ಸರ್ಕಾರದ ನಿಯಮಗಳಂತೆ ಪರವಾನಗಿ ಪಡೆದು ತೆರಿಗೆ ಪಾವತಿಸಿ ವಾಹನ ಚಲಾಯಿಸುತ್ತಿದ್ದರೂ, ಯಾವುದೇ ಕಾನೂನುಬದ್ಧ ಅನುಮತಿ ಇಲ್ಲದೆ ಬೈಕ್ ಟ್ಯಾಕ್ಸಿಗಳು ರಸ್ತೆಗಿಳಿಯುತ್ತಿರುವುದರಿಂದ ಆಟೋ ಹಾಗೂ ಕ್ಯಾಬ್ಗಳಿಗೆ ಬಾಡಿಗೆ ಕಡಿಮೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದ ಸಾವಿರಾರು ಚಾಲಕರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಅವರು ಹೇಳಿದರು.
ಪ್ರತಿಭಟನೆ ವೇಳೆ ಮನವಿ ಸ್ವೀಕರಿಸಿದ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಬೈಕ್ ಟ್ಯಾಕ್ಸಿಗಳ ವಿರುದ್ಧ ಶೀಘ್ರವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೆ ಈ ಭರವಸೆಯಿಂದ ತೃಪ್ತರಾಗದ ಚಾಲಕರು, ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ನಗರ ಬಂದ್ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದರು.
ಇದೇ ವೇಳೆ ಆಟೋ ಹಾಗೂ ಕ್ಯಾಬ್ ಚಾಲಕರು ಸ್ವತಃ ಅಕ್ರಮ ಬೈಕ್ ಟ್ಯಾಕ್ಸಿಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಗಳೂರು ನಗರದ 11 ಆರ್ಟಿಒ ಕಚೇರಿಗಳ ವ್ಯಾಪ್ತಿಯಲ್ಲಿ ವಿಶೇಷ ದಾಳಿ ನಡೆಯುತ್ತಿದ್ದು, ನಿಯಮ ಉಲ್ಲಂಘಿಸಿರುವ ಬೈಕ್ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಈ ಕಾರ್ಯಾಚರಣೆ ಒಂದು ವಾರ ಮುಂದುವರಿಯಲಿದ್ದು, ಅಗತ್ಯವಿದ್ದರೆ ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕುವುದಾಗಿಯೂ ಸಂಘಟನೆಗಳು ಘೋಷಿಸಿವೆ.
ಬೆಂಗಳೂರು
KR Market ಫ್ಲೈಓವರ್ ರಸ್ತೆ 3 ತಿಂಗಳು ಬಂದ್; ವಾಹನ ಸವಾರರಿಗೆ ಟ್ರಾಫಿಕ್ ಎಚ್ಚರಿಕೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ (Bengaluru) ಪ್ರಮುಖ ಸಂಚಾರ ಕೇಂದ್ರವಾಗಿರುವ ಕೆ.ಆರ್. ಮಾರ್ಕೆಟ್ (KR Market) ಮೇಲ್ಸೇತುವೆಯ ಚಾಮರಾಜಪೇಟೆ ತಿರುವಿನ ರಸ್ತೆ ಮುಂದಿನ ಮೂರು ತಿಂಗಳ ಕಾಲ ಬಂದ್ ಆಗಲಿದೆ. ಸುಲ್ತಾನ್ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಈ ಮೇಲ್ಸೇತುವೆ ಮೂಲಕ ಪ್ರತಿದಿನ ವಿಕ್ಟೋರಿಯಾ ಆಸ್ಪತ್ರೆ, ಮಿಂಟೋ ಆಸ್ಪತ್ರೆ, ವಾಣಿವಿಲಾಸ ಆಸ್ಪತ್ರೆ, ಚಾಮರಾಜಪೇಟೆ, ಬಸವನಗುಡಿ ಸೇರಿದಂತೆ ಹಲವು ಪ್ರದೇಶಗಳಿಗೆ ಸಾವಿರಾರು ವಾಹನಗಳು ಸಂಚರಿಸುತ್ತಿದ್ದವು. ಇದೀಗ ರಸ್ತೆ ಬಂದ್ ಆಗಿರುವುದರಿಂದ ವಾಹನಗಳು ಮಧ್ಯದಲ್ಲೇ ಹಿಂದಿರುಗಿ ಬೇರೆ ಮಾರ್ಗ ಬಳಸಬೇಕಾದ ಪರಿಸ್ಥಿತಿ ಉಂಟಾಗಿದೆ. ಇದರಿಂದ ಮುಂದಿನ ಕೆಲವು ತಿಂಗಳು ಈ ಭಾಗದಲ್ಲಿ ಟ್ರಾಫಿಕ್ ದಟ್ಟಣೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇದರ ಜೊತೆಗೆ ಕೆ.ಆರ್. ಮಾರ್ಕೆಟ್ ಪ್ರದೇಶದಲ್ಲಿ ಬೃಹತ್ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಕೂಡ ಆರಂಭವಾಗಿದೆ. ಜಿಬಿಎ (GBA) ಅಧಿಕಾರಿಗಳು ಮೂರು ಜೆಸಿಬಿಗಳ ಸಹಾಯದಿಂದ ಫ್ಲೈಓವರ್ ಕೆಳಭಾಗದಲ್ಲಿ ನಿರ್ಮಿಸಲಾಗಿದ್ದ ಸುಮಾರು 20 ರಿಂದ 25 ಅಂಗಡಿಗಳನ್ನು ತೆರವುಗೊಳಿಸುತ್ತಿದ್ದಾರೆ.
ಆದರೆ, ಈ ಕಾರ್ಯಾಚರಣೆಗೆ ಕೆಲ ಅಂಗಡಿ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಸಾರ್ವಜನಿಕರ ಸುರಕ್ಷತೆ, ರಸ್ತೆ ವಿಸ್ತರಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗಾಗಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ರಸ್ತೆ ಬಂದ್ ಹಾಗೂ ತೆರವು ಕಾರ್ಯಾಚರಣೆ ಒಂದೇ ವೇಳೆ ನಡೆಯುತ್ತಿರುವ ಕಾರಣ ಕೆ.ಆರ್. ಮಾರ್ಕೆಟ್ ಸುತ್ತಮುತ್ತ ವಾಹನ ದಟ್ಟಣೆ ಹೆಚ್ಚಾಗಿದ್ದು, ಈ ಭಾಗದಲ್ಲಿ ಸಂಚರಿಸುವವರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.
-
ಬೆಂಗಳೂರು24 ಗಂಟೆಗಳು agoAkshaya Vipra Mahasabha ಬ್ರಾಹ್ಮಣರು ಸಂಘಟಿತರಾಗಬೇಕು: ಶ್ರೀ ಸುಜಯನಿಧಿ ತೀರ್ಥರ ಕರೆ
-
ರಾಜ್ಯ24 ಗಂಟೆಗಳು agoCabinet ನಲ್ಲಿ ಬ್ರಾಹ್ಮಣರಿಗೆ ಅವಕಾಶ ನೀಡದಿದ್ದಕ್ಕೆ ಡಿಕೆ ಶಿವಕುಮಾರ್ಗೆ ಪತ್ರ!
-
ದೇಶ23 ಗಂಟೆಗಳು ago‘Congress ಗೆ ವಾಕ್ ಸ್ವಾತಂತ್ರ್ಯ ಬೇಕಾದಾಗ ಮಾತ್ರ ನೆನಪಾಗುತ್ತದೆ’; ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ ಕಿಡಿ
-
ದೇಶ24 ಗಂಟೆಗಳು ago‘ಇತಿಹಾಸದ ಅತಿದೊಡ್ಡ ಹಗರಣ ಬಯಲು ಮಾಡುತ್ತೇನೆ’ : Pakisthan ಗೃಹ ಸಚಿವ ಮೊಹ್ಸಿನ್ ನಖ್ವಿ
-
ದೇಶ5 ಗಂಟೆಗಳು agoಬೆಳಗಿನ ಉಪಾಹಾರ ಸಭೆಯಲ್ಲಿ ಹೊಸ ಸಂಸದರಿಗೆ PM Narendra Modi ಕ್ಲಾಸ್: ಪತ್ರದಿಂದ ಫೋನ್ವರೆಗೆ ಮಹತ್ವದ ಸಲಹೆಗಳು
-
ದೇಶ4 ಗಂಟೆಗಳು agoCJP ಸಂಸ್ಥಾಪಕ Abhijeet Dipke ಗೆ ಕರಾಳ ಭವಿಷ್ಯ? ಜ್ಯೋತಿಷಿಯ ಹೇಳಿಕೆ ವೈರಲ್
-
ದೇಶ7 ಗಂಟೆಗಳು agoInsurance ಇಲ್ಲದ ವಾಹನಗಳಿಗೆ ಶಾಕ್! ಸುಪ್ರೀಂ ಕೋರ್ಟ್ನಿಂದ ಮಹತ್ವದ ಆದೇಶ
-
ರಾಜ್ಯ4 ಗಂಟೆಗಳು agoVoter List ಯಲ್ಲಿ ನಿಮ್ಮ ಹೆಸರು ASDDO ಪಟ್ಟಿಯಲ್ಲಿದೆಯೇ? ಹೀಗೆ ಆನ್ಲೈನ್ನಲ್ಲಿ ಪರಿಶೀಲಿಸಿ, ತಪ್ಪಿದ್ದರೆ ತಕ್ಷಣ ಸರಿಪಡಿಸಿ
