ಬೆಂಗಳೂರು
GBA ಮೇಲೆ ನಂಬಿಕೆ ಇಲ್ಲವೇ? ರಸ್ತೆ ಕಾಮಗಾರಿ ವಿಳಂಬ ಭೀತಿಯಿಂದ WFH ತಿರಸ್ಕರಿಸಿದ ಕಂಪನಿಗಳು
ಬೆಂಗಳೂರು: ನಗರದ ಔಟರ್ ರಿಂಗ್‌ರೋಡ್ (Outer Ring Road) ವ್ಯಾಪ್ತಿಯಲ್ಲಿ ನಡೆಯಲಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗೆ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು 50:50 ಅನುಪಾತದಲ್ಲಿ ವರ್ಕ್ ಫ್ರಮ್ ಹೋಂ (Work From Home) ಜಾರಿಗೆ ತರಬೇಕೆಂಬ ಜಿಬಿಎ (GBA) ಮನವಿಗೆ ಐಟಿ ಸಂಸ್ಥೆಗಳು ಒಪ್ಪಿಗೆ ನೀಡಿಲ್ಲ. ಸದ್ಯ ವರ್ಕ್ ಫ್ರಮ್ ಹೋಂ ಸಾಧ್ಯವಿಲ್ಲ ಎಂಬ ನಿರ್ಧಾರಕ್ಕೆ ಕಂಪನಿಗಳ ಅಸೋಸಿಯೇಷನ್ ಬಂದಿದೆ.
ಔಟರ್ ರಿಂಗ್‌ರೋಡ್‌ನ ಸುಮಾರು 20 ಕಿಲೋಮೀಟರ್ ರಸ್ತೆಯಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಯನ್ನು ಇದೇ ಅಕ್ಟೋಬರ್‌ನಿಂದ ಆರಂಭಿಸಲು ಜಿಬಿಎ ಸಿದ್ಧತೆ ನಡೆಸಿದೆ. ಕಾಮಗಾರಿ ವೇಗವಾಗಿ ಪೂರ್ಣಗೊಳಿಸುವ ಹಾಗೂ ಈ ಭಾಗದ ಟ್ರಾಫಿಕ್ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಶೇಕಡಾ 50ರಷ್ಟು ವರ್ಕ್ ಫ್ರಮ್ ಹೋಂ ಅವಕಾಶ ನೀಡುವಂತೆ ಮನವಿ ಮಾಡಲಾಗಿತ್ತು.
ಆದರೆ ಕಂಪನಿಗಳ ಮುಖ್ಯಸ್ಥರು ಮತ್ತು ಅಸೋಸಿಯೇಷನ್ ಸಭೆಯಲ್ಲಿ ಈ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ವರ್ಕ್ ಫ್ರಮ್ ಹೋಂ ಜಾರಿಯಿಂದ ಸಂಸ್ಥೆಗಳ ಕಾರ್ಯಕ್ಷಮತೆ ಮತ್ತು ಕೆಲಸದ ವೇಗದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
GBA ಮೇಲೆ ಕಂಪನಿಗಳಿಗೆ ನಂಬಿಕೆ ಇಲ್ಲವೇ?
ಜಿಬಿಎ ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ ಕಂಪನಿಗಳಿಗೆ ಅನುಮಾನವಿದೆ ಎನ್ನಲಾಗಿದೆ. ಹಿಂದೆ ಹಲವು ಯೋಜನೆಗಳು ವಿಳಂಬವಾಗಿರುವ ಹಿನ್ನೆಲೆಯಲ್ಲಿ, ORR ವೈಟ್ ಟ್ಯಾಪಿಂಗ್ ಕಾಮಗಾರಿಯೂ ನಿಗದಿತ ಅವಧಿಯಲ್ಲಿ ಮುಗಿಯದಿದ್ದರೆ ದೀರ್ಘಕಾಲ ವರ್ಕ್ ಫ್ರಮ್ ಹೋಂ ಮುಂದುವರಿಸಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.
ಈ ಮಾರ್ಗದಲ್ಲಿ ಈಗಾಗಲೇ ಮೆಟ್ರೋ ಕಾಮಗಾರಿಯೂ ನಡೆಯುತ್ತಿರುವುದರಿಂದ ವಾಹನ ಸಂಚಾರ ಹಾಗೂ ಉದ್ಯೋಗಿಗಳ ಓಡಾಟಕ್ಕೆ ಮತ್ತಷ್ಟು ಸಮಸ್ಯೆಯಾಗುವ ಸಾಧ್ಯತೆಯಿದೆ. ಹೀಗಾಗಿ ನವೆಂಬರ್ ನಂತರ ಕಾಮಗಾರಿ ಆರಂಭಿಸುವುದು, ಮೊದಲು ಸರ್ವೀಸ್ ರಸ್ತೆಗಳನ್ನು ಸುಗಮಗೊಳಿಸುವುದು ಮತ್ತು ಹಂತ ಹಂತವಾಗಿ ರಸ್ತೆ ಕಾಮಗಾರಿ ಕೈಗೊಳ್ಳುವುದು ಸೂಕ್ತ ಎಂಬ ಸಲಹೆಯನ್ನು ಅಸೋಸಿಯೇಷನ್ ನೀಡಿದೆ.
ಜಿಬಿಎ ಜೊತೆ ಮುಂದಿನ ಸಭೆಯಲ್ಲಿ ಈ ವಿಚಾರಗಳನ್ನು ಚರ್ಚಿಸಿ ಪರ್ಯಾಯ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಕಂಪನಿಗಳ ಅಸೋಸಿಯೇಷನ್ ಮುಂದಾಗಿದೆ.
ಬೆಂಗಳೂರು
Cauvery ರೈತರಿಗೆ ಬಿಗ್ ಶಾಕ್! ಈ ಬಾರಿ ಕೇವಲ 4 ಕಟ್ಟು ನೀರು; ಸರ್ಕಾರದ ಮಹತ್ವದ ನಿರ್ಧಾರ
ಬೆಂಗಳೂರು: ಮುಂಗಾರು ಮಳೆಯ ಕೊರತೆ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ(Kaveri Basin) ನಿರೀಕ್ಷಿತ ಪ್ರಮಾಣದಲ್ಲಿ ಒಳಹರಿವು ಇಲ್ಲದ ಹಿನ್ನೆಲೆಯಲ್ಲಿ, ಕಾವೇರಿ ಕೊಳ್ಳದ ರೈತರ ಬೆಳೆಗಳಿಗೆ ಪ್ರಸಕ್ತ ಸಾಲಿನಲ್ಲಿ ಕೇವಲ 4 ಕಟ್ಟು ನೀರು ಹರಿಸಲು ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಜಲಾಶಯಗಳಲ್ಲಿ ನೀರಿನ ಲಭ್ಯತೆ ನಿರೀಕ್ಷಿತ ಮಟ್ಟದಲ್ಲಿಲ್ಲದ ಕಾರಣ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಜಾನುವಾರು ಹಾಗೂ ಇತರ ಅಗತ್ಯ ಬಳಕೆಗೆ ಸಮಸ್ಯೆ ಎದುರಾಗಬಹುದು ಎಂಬ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಭತ್ತ, ಕಬ್ಬಿಗೆ ಬ್ರೇಕ್; ಅರೆ ಖುಷ್ಕಿ ಬೆಳೆಗಳಿಗೆ ಆದ್ಯತೆ
ನೀರಿನ ಕೊರತೆಯ ಹಿನ್ನೆಲೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ ಹೆಚ್ಚು ನೀರು ಬೇಡುವ ಭತ್ತ ಮತ್ತು ಕಬ್ಬು ಸೇರಿದಂತೆ ಬೆಳೆಗಳ ಬದಲಿಗೆ ಅರೆ ಖುಷ್ಕಿ ಬೆಳೆಗಳಿಗೆ ರೈತರು ಆದ್ಯತೆ ನೀಡಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ.
ಕಡಿಮೆ ನೀರಿನಲ್ಲಿ ಉತ್ತಮ ಇಳುವರಿ ನೀಡುವ ಬೆಳೆಗಳನ್ನು ಬೆಳೆಯುವ ಮೂಲಕ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ರೈತರಿಗೆ ಕೃಷಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ಮಾರ್ಗದರ್ಶನ ನೀಡಲಿದ್ದಾರೆ.
ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ನಿರ್ಧಾರ
ಬೆಳೆಗಳಿಗೆ ನೀರು ಹರಿಸುವುದರ ಜತೆಗೆ ಕಾವೇರಿ ಕೊಳ್ಳದ ವ್ಯಾಪ್ತಿಯ ಕೆರೆ-ಕಟ್ಟೆಗಳನ್ನು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಲು ಕೂಡ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರಿಂದ ಮಳೆ ಕೊರತೆಯ ಸಂದರ್ಭದಲ್ಲಿ ರೈತರಿಗೆ ಪರ್ಯಾಯ ನೀರಿನ ಮೂಲ ದೊರೆಯುವುದರ ಜೊತೆಗೆ ಬೋರ್‌ವೆಲ್‌ಗಳ ಮೇಲಿನ ಒತ್ತಡ ಕಡಿಮೆಯಾಗುವ ನಿರೀಕ್ಷೆ ಇದೆ.
ನೀರಿನ ಪ್ರತಿಯೊಂದು ಹನಿಯನ್ನೂ ಎಚ್ಚರಿಕೆಯಿಂದ ಬಳಸಿ
ಪ್ರಸ್ತುತ ಪರಿಸ್ಥಿತಿಯಲ್ಲಿ ಲಭ್ಯವಿರುವ ನೀರನ್ನು ವೈಜ್ಞಾನಿಕವಾಗಿ ಮತ್ತು ಆದ್ಯತೆಯ ಆಧಾರದ ಮೇಲೆ ಬಳಸಬೇಕಿದೆ. ಕೃಷಿ ಚಟುವಟಿಕೆಗಳ ಜತೆಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಅಗತ್ಯವಿರುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
ಜಲಾಶಯಗಳ ನೀರಿನ ಮಟ್ಟ, ಒಳಹರಿವು ಹಾಗೂ ಮಳೆಯ ಪ್ರಮಾಣವನ್ನು ನಿರಂತರವಾಗಿ ಪರಿಶೀಲಿಸಿ ಪರಿಸ್ಥಿತಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ರೈತರ ಸಹಕಾರಕ್ಕೆ ಸಚಿವರ ಮನವಿ
ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ರೈತರು ಸಹಕಾರ ನೀಡಬೇಕು. ಲಭ್ಯವಾಗುವ ನಾಲ್ಕು ಕಟ್ಟು ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ನೀರು ಉಳಿಸುವ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.
ರೈತರ ಕೃಷಿ ಅಗತ್ಯ, ಕುಡಿಯುವ ನೀರಿನ ಭದ್ರತೆ ಹಾಗೂ ಭವಿಷ್ಯದ ಜಲ ಲಭ್ಯತೆಯನ್ನು ಸಮತೋಲನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.
ಬೆಂಗಳೂರು
Bengaluru ಟ್ರಾಫಿಕ್‌ಗೆ ಬಿಗ್ ರಿಲೀಫ್: 28 ಕಿ.ಮೀ ಎಲಿವೇಟೆಡ್ ಕಾರಿಡಾರ್, 90 ನಿಮಿಷದ ಪ್ರಯಾಣ 30 ನಿಮಿಷಕ್ಕೆ!
ಬೆಂಗಳೂರು: ರಾಜಧಾನಿ ಬೆಂಗಳೂರಿನ(Bengaluru) ಸಂಚಾರ ದಟ್ಟಣೆಗೆ ಪರಿಹಾರ ನೀಡಲು ನಗರದ ಅತಿದೊಡ್ಡ ಎಲಿವೇಟೆಡ್ ಕಾರಿಡಾರ್(Elevated Corridor) ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ತುಮಕೂರು ರಸ್ತೆ(Tumakuru Road)ಯಿಂದ ಹಳೇ ಮದ್ರಾಸ್ ರಸ್ತೆ(Old Madras Road)ಯನ್ನು ಸಂಪರ್ಕಿಸುವ ಸುಮಾರು 28 ಕಿ.ಮೀ ಉದ್ದದ ಶುಲ್ಕ ಸಹಿತ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (B-SMILE) ಮುಂದಾಗಿದೆ.
ಸುಮಾರು ₹3,500 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಸರ್ಕಾರ-ಖಾಸಗಿ ಸಹಭಾಗಿತ್ವದ(PPP) ಮೂಲಕ BOOT ಮಾದರಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಯೋಜನಾ ವೆಚ್ಚದ ಶೇ.40ರಷ್ಟನ್ನು ರಾಜ್ಯ ಸರ್ಕಾರ ಭರಿಸಲಿದ್ದು, ಉಳಿದ ಶೇ.60ರಷ್ಟು ಮೊತ್ತವನ್ನು ಗುತ್ತಿಗೆದಾರ ಸಂಸ್ಥೆ ಹೂಡಿಕೆ ಮಾಡಲಿದೆ.
30 ವರ್ಷ ಟೋಲ್ ಸಂಗ್ರಹಕ್ಕೆ ಅವಕಾಶ
ಕಾರಿಡಾರ್ ನಿರ್ಮಾಣ ಪೂರ್ಣಗೊಂಡ ಬಳಿಕ ಗುತ್ತಿಗೆದಾರ ಸಂಸ್ಥೆಗೆ 30 ವರ್ಷಗಳ ಕಾಲ ವಾಹನಗಳಿಂದ ಬಳಕೆದಾರರ ಶುಲ್ಕ ಸಂಗ್ರಹಿಸಲು ಅವಕಾಶ ನೀಡಲಾಗುತ್ತದೆ. ಆದರೆ, ವಾಹನಗಳಿಗೆ ವಿಧಿಸುವ ಶುಲ್ಕದ ಪ್ರಮಾಣವನ್ನು ಸರ್ಕಾರವೇ ಅಂತಿಮಗೊಳಿಸಲಿದೆ.
30 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ
ಯೋಜನೆಯ ಪ್ರಕಾರ ಕಾಮಗಾರಿಯನ್ನು 30 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಯಶವಂತಪುರ ಫ್ಲೈಓವರ್ ಬಳಿಯಿಂದ ಆರಂಭವಾಗುವ ನಾಲ್ಕು ಪಥಗಳ ಕಾರಿಡಾರ್‌ನಲ್ಲಿ ಒಟ್ಟು 12 ಕಡೆ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆ ಇರಲಿದೆ. ಕಾರಿಡಾರ್‌ನಲ್ಲಿ ವಾಹನಗಳು ಗರಿಷ್ಠ 60ರಿಂದ 80 ಕಿ.ಮೀ ವೇಗದಲ್ಲಿ ಸಂಚರಿಸುವಂತೆ ವಿನ್ಯಾಸಗೊಳಿಸಲಾಗುತ್ತದೆ.
90 ನಿಮಿಷದ ಪ್ರಯಾಣ ಕೇವಲ 30 ನಿಮಿಷಕ್ಕೆ?
ಪ್ರಸ್ತುತ ಯಶವಂತಪುರದಿಂದ ಕೆ.ಆರ್.ಪುರ ಸಿಗ್ನಲ್ ಬಳಿಯ ಹೂವಿನ ಮಾರುಕಟ್ಟೆ ಪ್ರದೇಶಕ್ಕೆ ಪೀಕ್ ಅವಧಿಯಲ್ಲಿ ಸುಮಾರು 90 ನಿಮಿಷಗಳವರೆಗೆ ಪ್ರಯಾಣ ಸಮಯ ಬೇಕಾಗುತ್ತದೆ. ಎಲಿವೇಟೆಡ್ ಕಾರಿಡಾರ್ ನಿರ್ಮಾಣವಾದರೆ ಇದೇ ಪ್ರಯಾಣವನ್ನು ಸುಮಾರು 28ರಿಂದ 30 ನಿಮಿಷಗಳಲ್ಲಿ ಪೂರ್ಣಗೊಳಿಸಬಹುದು ಎಂಬ ನಿರೀಕ್ಷೆ ಇದೆ.
ಯಾವ ಮಾರ್ಗದಲ್ಲಿ ಎಲಿವೇಟೆಡ್ ಕಾರಿಡಾರ್?
ಯಶವಂತಪುರ ಫ್ಲೈಓವರ್ ಸರ್ಕಲ್‌ನಿಂದ ಆರಂಭವಾಗುವ ಕಾರಿಡಾರ್ ಐಐಎಸ್ಸಿ, ಮೇಕ್ರಿ ಸರ್ಕಲ್, ಜಯಮಹಲ್, ಸೇಂಟ್ ಜಾನ್ಸ್ ಚರ್ಚ್ ರಸ್ತೆ ಹಾಗೂ ಹಲಸೂರು ಕೆರೆ ಮಾರ್ಗವಾಗಿ ಸಾಗಲಿದೆ. ಬಳಿಕ ಹಳೇ ಮದ್ರಾಸ್ ರಸ್ತೆಯನ್ನು ಸಂಪರ್ಕಿಸಿ ಕೆ.ಆರ್.ಪುರ ಸಿಗ್ನಲ್ ನಂತರ ಮುಕ್ತಾಯಗೊಳ್ಳಲಿದೆ.
ಎಲಿವೇಟೆಡ್ ಕಾರಿಡಾರ್ ಬಳಸಲು ಇಚ್ಛಿಸದ ವಾಹನ ಸವಾರರಿಗೆ ಈಗಿರುವ ಸಾಮಾನ್ಯ ರಸ್ತೆಗಳು ಎಂದಿನಂತೆ ಲಭ್ಯವಿರಲಿವೆ. ಹೀಗಾಗಿ ಯೋಜನೆ ಜಾರಿಯಾದರೆ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರದ ಒತ್ತಡ ಕಡಿಮೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು
Bengaluru Cloudnine ಸೇರಿ ಹಲವು ಆಸ್ಪತ್ರೆಗಳಿಗೆ ಭಾರೀ ದಂಡ! KPME ಉಲ್ಲಂಘನೆಗೆ ಬೆಂಗಳೂರು ಜಿಲ್ಲಾಡಳಿತದ ಕ್ರಮ
ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯಿದೆ (KPME) ನಿಯಮಗಳನ್ನು ಉಲ್ಲಂಘಿಸಿರುವ ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳ ವಿರುದ್ಧ ಬೆಂಗಳೂರು ನಗರ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ KPME ಮತ್ತು ಕುಂದುಕೊರತೆ ಪ್ರಾಧಿಕಾರದ ಸಭೆಯಲ್ಲಿ, ಜಿಲ್ಲಾಧಿಕಾರಿ ಕಾಂತರಾಜು ಅವರು ನಿಯಮ ಉಲ್ಲಂಘಿಸಿದ ವೈದ್ಯಕೀಯ ಸಂಸ್ಥೆಗಳ ಪ್ರತಿನಿಧಿಗಳ ವಿಚಾರಣೆ ನಡೆಸಿ ದಂಡ ಹಾಗೂ ಇತರ ಕ್ರಮಗಳಿಗೆ ಆದೇಶಿಸಿದ್ದಾರೆ.
ನಿಯಮ ಉಲ್ಲಂಘನೆ ಗಂಭೀರವಾಗಿದ್ದ ಮೂರು ವೈದ್ಯಕೀಯ ಸಂಸ್ಥೆಗಳ KPME ಪರವಾನಗಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಟಿ.ದಾಸರಹಳ್ಳಿಯ ಶ್ರೀ ಅಯ್ಯಪ್ಪ ಟೆಂಪಲ್ ಮೆಡಿಕಲ್ ಸೆಂಟರ್‌ಗೆ ₹50,000, ಜಿಗಣಿಯ ಶ್ರೀ ಪದ್ಮಗಿರಿ ಕ್ಲಿನಿಕ್‌ಗೆ ₹1 ಲಕ್ಷ ಹಾಗೂ ಬಿ.ಜಿ. ರಸ್ತೆಯ ಶ್ರೀ ಹರ್ಷವರ್ಧನ್ ಆಸ್ಪತ್ರೆಗೆ ₹20,000 ದಂಡ ವಿಧಿಸಿ ಪರವಾನಗಿ ರದ್ದುಗೊಳಿಸಲಾಗಿದೆ.
ಹಲವು ಆಸ್ಪತ್ರೆಗಳಿಗೆ ದಂಡ
KPME ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಮತ್ತಷ್ಟು ವೈದ್ಯಕೀಯ ಸಂಸ್ಥೆಗಳಿಗೂ ಜಿಲ್ಲಾಡಳಿತ ದಂಡ ವಿಧಿಸಿದೆ. ಎಚ್‌ಎಎಲ್ ರಸ್ತೆಯ Cloudnine Hospital ಆಸ್ಪತ್ರೆಗೆ ₹50,000, ಹುಲ್ಲಹಳ್ಳಿಯ ಆರ್.ವಿ. ಕ್ಲಿನಿಕ್‌ಗೆ ₹1 ಲಕ್ಷ, ಮುನೇಶ್ವರ ಲೇಔಟ್‌ನ ಇಕ್ಷಾ ಕ್ಲಿನಿಕ್‌ಗೆ ₹10,000 ಹಾಗೂ ರಾಜಾಜಿನಗರದ ಎನ್‌ಯು ಹಾಸ್ಪಿಟಲ್ಸ್‌ಗೆ ₹10,000 ದಂಡ ವಿಧಿಸಲಾಗಿದೆ.
ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ನಿಯಮ ಉಲ್ಲಂಘನೆ ಅಥವಾ ನ್ಯೂನತೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ವೈದ್ಯಕೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ಮುಚ್ಚಳಿಕೆ ಪತ್ರವನ್ನೂ ಪಡೆಯಲಾಗಿದೆ.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮದಿನಿ ಸೇರಿದಂತೆ ಹಲವು ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳು KPME ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟ ಸಂದೇಶ ನೀಡಿದೆ.
-
ಬೆಂಗಳೂರು20 ಗಂಟೆಗಳು agoKarnataka Housing Board ಅಧ್ಯಕ್ಷರಾಗಿ MLA Srinivas Mane ಪದಗ್ರಹಣ; ಜನಸೇವೆಗೆ ಮೊದಲ ಆದ್ಯತೆ ಎಂದ ಶಾಸಕ
-
ದೇಶ20 ಗಂಟೆಗಳು agoStrait of Hormuz ಮೇಲೆ ಟ್ರಂಪ್ ಹೊಸ ಘೋಷಣೆ; ಇರಾನ್ಗೆ ಭಾರೀ ಸವಾಲು!
-
ದೇಶ21 ಗಂಟೆಗಳು agoDog Mask Protest ನಾಯಿ ಕಾಟಕ್ಕೆ ಜನ ಹೈರಾಣ! ಜಿಲ್ಲಾಧಿಕಾರಿ ಕಚೇರಿಗೆ ನಾಯಿ ವೇಷದಲ್ಲಿ ಬಂದ ವ್ಯಕ್ತಿ, ವಿಡಿಯೋ ವೈರಲ್
-
ರಾಜ್ಯ21 ಗಂಟೆಗಳು agoTamil Nadu CM ವಿಜಯ್-ತ್ರಿಷಾ ಭೇಟಿಗೆ ರಾಜಕೀಯ ಬಣ್ಣ! Murasoli ಸಂಪಾದಕೀಯದಿಂದ ತಮಿಳುನಾಡಿನಲ್ಲಿ ಹೊಸ ವಿವಾದ
-
ದೇಶ22 ಗಂಟೆಗಳು agoBihar ‘ಸರ್ಕಾರ ತಲೆಬಾಗಲೇಬೇಕು’: ವಾಟರ್ ಕ್ಯಾನನ್ ಪ್ರಯೋಗಕ್ಕೂ ಜಗ್ಗದ Tejashwi Yadav
-
ಸಿನಿಮಾ23 ಗಂಟೆಗಳು ago‘Toxic’ ಅಬ್ಬರ ಶುರು! ವಿಶ್ವದಾದ್ಯಂತ 12,000+ ಸ್ಕ್ರೀನ್ಗಳಲ್ಲಿ Yash ಸಿನಿಮಾ, ಇಲ್ಲಿದೆ ರಿಲೀಸ್ ಡೇಟ್
-
ಬೆಂಗಳೂರು23 ಗಂಟೆಗಳು agoಶ್ರಾವಣ ಶುಕ್ರವಾರ ವಿಶೇಷ ಪೂಜೆ: ಯಶವಂತಪುರ MLA S T Somashekhar ಕಚೇರಿಯಲ್ಲಿ ಭಕ್ತಿಭಾವದ ಸಂಭ್ರಮ
-
ದೇಶ23 ಗಂಟೆಗಳು ago‘ನಾನು ಯಾರೆಂದು ಅವರಿಗೆ ಗೊತ್ತಿರಲಿಲ್ಲ…’: ಕನ್ನಡಿಗರ ಮಾನವೀಯತೆ ಬಗ್ಗೆ Akkineni Nagarjuna ಮಾತು ವೈರಲ್
