Connect with us

ರಾಜ್ಯ

Tamil Nadu LPG Scheme: ತಮಿಳುನಾಡು ಜನರಿಗೆ ವರ್ಷಕ್ಕೆ 3 LPG ಸಿಲಿಂಡರ್ ಉಚಿತ; 1.30 ಕೋಟಿ ಕುಟುಂಬಗಳಿಗೆ ಲಾಭ!

Published

on

ಚೆನ್ನೈ: Tamil Nadu ಸರ್ಕಾರವು ರಾಜ್ಯದ ಜನರಿಗೆ ಮಹತ್ವದ ಸಿಹಿಸುದ್ದಿ ನೀಡಿದೆ. ವಾರ್ಷಿಕ ₹2.5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳಿಗೆ ವರ್ಷಕ್ಕೆ ಮೂರು ಎಲ್‌ಪಿಜಿ ಸಿಲಿಂಡರ್‌ಗಳ ವೆಚ್ಚವನ್ನು ಮರುಪಾವತಿಸುವ ‘ಅನ್ನಪೂರ್ಣಿ ಸೂಪರ್ ಸಿಕ್ಸ್’ (Annapooranai Super Six) ಯೋಜನೆಯನ್ನು ಮುಖ್ಯಮಂತ್ರಿ ವಿಜಯ್ ಘೋಷಿಸಿದ್ದಾರೆ.

ಈ ಯೋಜನೆಯಿಂದ ರಾಜ್ಯದ ಸುಮಾರು 1.30 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದ್ದು, ಸರ್ಕಾರಕ್ಕೆ ಅಂದಾಜು ₹4,000 ಕೋಟಿ ವೆಚ್ಚವಾಗಲಿದೆ.

ಯಾರಿಗೆ ಸಿಗಲಿದೆ LPG ಸಿಲಿಂಡರ್ ಸೌಲಭ್ಯ?

ವಿಧಾನಸಭೆಯಲ್ಲಿ ಯೋಜನೆಯ ವಿವರಗಳನ್ನು ನೀಡಿದ ಮುಖ್ಯಮಂತ್ರಿ ವಿಜಯ್, ವಾರ್ಷಿಕ ಆದಾಯ ₹2.5 ಲಕ್ಷ ಮೀರದ ಕುಟುಂಬಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿವೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಆರ್ಥಿಕವಾಗಿ ದುರ್ಬಲ ವರ್ಗಗಳು, ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳು ಹಾಗೂ ಅಂಗವಿಕಲ ವ್ಯಕ್ತಿಗಳಿರುವ ಕುಟುಂಬಗಳಿಗೂ ಯೋಜನೆಯ ಪ್ರಯೋಜನ ದೊರೆಯಲಿದೆ.

ಅಡುಗೆ ಅನಿಲ ಸಿಲಿಂಡರ್ ಖರೀದಿಸಿದ ಬಳಿಕ ಅದರ ವೆಚ್ಚವನ್ನು ಸರ್ಕಾರ ಮರುಪಾವತಿ ಮಾಡಲಿದೆ. ಕಂಪನಿಗಳ ಅಧಿಕೃತ ಬಿಲ್ಲಿಂಗ್ ಆಧಾರದ ಮೇಲೆ ಸಿಲಿಂಡರ್ ಬುಕಿಂಗ್ ಮತ್ತು ವಿತರಣೆ ಪೂರ್ಣಗೊಂಡ ನಂತರ, ಯೋಜನೆಯ ಹಣವನ್ನು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

LPG ಬೆಲೆ ಏರಿಕೆ ಹಿನ್ನೆಲೆ ಯೋಜನೆ

ಕೊಲ್ಲಿ ರಾಷ್ಟ್ರಗಳಲ್ಲಿನ ಸಂಘರ್ಷದಿಂದ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಬೆಲೆ ಏರಿಕೆಯ ಒತ್ತಡ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ವಿಜಯ್ ಹೇಳಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ಅಡುಗೆ ಅನಿಲದ ವೆಚ್ಚದಿಂದ ಕುಟುಂಬಗಳ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದ್ದು, ಕೆಲವು ಕುಟುಂಬಗಳು ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತೃತೀಯ ಲಿಂಗಿಗಳಿಗೂ ಉಚಿತ ಬಸ್ ಪ್ರಯಾಣ

ಇದೇ ವೇಳೆ ‘ವೆಟ್ರಿ ಪಯಣಂ’ ಉಚಿತ ಬಸ್ ಪ್ರಯಾಣ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸುವುದಾಗಿ ಸರ್ಕಾರ ಘೋಷಿಸಿದೆ. ಈವರೆಗೆ ಮಹಿಳೆಯರಿಗೆ ಸೀಮಿತವಾಗಿದ್ದ ಯೋಜನೆಯ ಪ್ರಯೋಜನವನ್ನು ಇನ್ನು ಮುಂದೆ ತೃತೀಯ ಲಿಂಗಿಗಳಿಗೂ ವಿಸ್ತರಿಸಲಾಗುತ್ತದೆ.

ಅಕ್ಟೋಬರ್ 2ರಿಂದ ವಿಸ್ತರಿತ ಯೋಜನೆ ಜಾರಿಗೆ ಬರಲಿದ್ದು, ಎಕ್ಸ್‌ಪ್ರೆಸ್, ಎಲ್‌ಎಸ್‌ಎಸ್, ಡಿಲಕ್ಸ್ ಹಾಗೂ ಅಂತರ್ ಜಿಲ್ಲಾ ಬಸ್‌ಗಳಲ್ಲೂ ಉಚಿತ ಪ್ರಯಾಣದ ಸೌಲಭ್ಯ ದೊರೆಯಲಿದೆ. ಈ ಯೋಜನೆಗೆ ಆದಾಯ ಮಿತಿ ಅಥವಾ ಪ್ರಯಾಣಗಳ ಸಂಖ್ಯೆಯ ಮಿತಿ ಇರುವುದಿಲ್ಲ. ಸರ್ಕಾರಕ್ಕೆ ವಾರ್ಷಿಕ ಸುಮಾರು ₹6,000 ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಲಾಗಿದೆ.

J S Vasudev is the Founder and Editor of Hosasuddi.in, a Kannada digital news platform established in 2023. He is actively involved in news writing, editing, content development, and digital publishing. With a focus on timely and informative journalism, he works on developing news stories covering Karnataka, India, and significant national and international developments. His role includes researching news, preparing and editing articles, managing digital content, and continuously developing Hosasuddi.in as a credible Kannada news platform. Through Hosasuddi.in, J S Vasudev aims to provide readers with accessible, relevant, and timely news while maintaining professional standards in digital journalism.

ರಾಜ್ಯ

Indo-Arab: ಅರಬ್ ರಾಷ್ಟ್ರಗಳ ರೋಗಿಗಳನ್ನು ಕರ್ನಾಟಕದತ್ತ ಸೆಳೆಯಲು ಇಂಡೋ-ಅರಬ್ ಕನೆಕ್ಟ್ ಯೋಜನೆ

Published

on

Karnataka medical tourism plan to attract Arab patients through advanced hospitals and healthcare services

ಬೆಂಗಳೂರು: ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸುವ ಅರಬ್ ರಾಷ್ಟ್ರಗಳ(Indo-Arab) ಪ್ರವಾಸಿಗರನ್ನು ಕರ್ನಾಟಕದತ್ತ ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲು ರಾಜ್ಯ ಸರ್ಕಾರ ಹೊಸ ಯೋಜನೆ ರೂಪಿಸುತ್ತಿದೆ. ವೈದ್ಯಕೀಯ ಸೇವೆ, ಆರೋಗ್ಯ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರಗಳನ್ನು ಒಂದೇ ವ್ಯವಸ್ಥೆಯಡಿ ತರುವ ಮೂಲಕ ಕರ್ನಾಟಕವನ್ನು ಪ್ರಮುಖ ವೈದ್ಯಕೀಯ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

Indo-Arab ಅರಬ್ ರಾಷ್ಟ್ರಗಳಿಂದ ಭಾರತಕ್ಕೆ ವೈದ್ಯಕೀಯ ಚಿಕಿತ್ಸೆಗಾಗಿ ಬರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿರುವ ಅತ್ಯಾಧುನಿಕ ಆಸ್ಪತ್ರೆಗಳು, ಪರಿಣತ ವೈದ್ಯರು ಹಾಗೂ ಸುಧಾರಿತ ಚಿಕಿತ್ಸಾ ಸೌಲಭ್ಯಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ಪ್ರಯತ್ನ ನಡೆಯಲಿದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಲು ಮುಂದಾಗಿವೆ.

ಇಂಡೋ-ಅರಬ್ ಕನೆಕ್ಟ್ ಯೋಜನೆಯ ಮೂಲಕ ಕರ್ನಾಟಕದ ಪ್ರಮುಖ ಆಸ್ಪತ್ರೆಗಳು, ನುರಿತ ವೈದ್ಯರು, ಆಧುನಿಕ ಚಿಕಿತ್ಸಾ ಸೌಲಭ್ಯಗಳು, ಆರೋಗ್ಯ ಸೇವೆಗಳು ಮತ್ತು ಆತಿಥ್ಯ ಕ್ಷೇತ್ರವನ್ನು ಒಂದೇ ವೇದಿಕೆಗೆ ತರುವ ಉದ್ದೇಶ ಹೊಂದಲಾಗಿದೆ. ಇದರಿಂದ ಅರಬ್ ರಾಷ್ಟ್ರಗಳಿಂದ ಬರುವ ರೋಗಿಗಳಿಗೆ ಚಿಕಿತ್ಸೆ ಪಡೆಯುವುದರ ಜೊತೆಗೆ ವಸತಿ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುವಂತಹ ಸಮಗ್ರ ವ್ಯವಸ್ಥೆ ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ವೈದ್ಯಕೀಯ ಪ್ರವಾಸೋದ್ಯಮದಲ್ಲಿ ಚಿಕಿತ್ಸೆ ಮಾತ್ರ ಪ್ರಮುಖವಾಗಿರುವುದಿಲ್ಲ. ರೋಗಿಗಳು ಮತ್ತು ಅವರೊಂದಿಗೆ ಬರುವ ಕುಟುಂಬ ಸದಸ್ಯರಿಗೆ ಸೂಕ್ತ ವಸತಿ, ವಿಮಾನ ನಿಲ್ದಾಣದಿಂದ ಆಸ್ಪತ್ರೆಗಳಿಗೆ ಸಾರಿಗೆ, ಭಾಷಾ ಸಹಾಯ, ಆಸ್ಪತ್ರೆಗಳಲ್ಲಿ ಅಗತ್ಯ ಮಾರ್ಗದರ್ಶನ ಹಾಗೂ ಚಿಕಿತ್ಸೆಯ ನಂತರದ ಆರೈಕೆಯಂತಹ ಸೇವೆಗಳೂ ಅಗತ್ಯವಾಗುತ್ತವೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಸಮನ್ವಯ ವ್ಯವಸ್ಥೆ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ.

ಯೋಜನೆಯ ಮುಂದಿನ ಹಂತದ ರೂಪುರೇಷೆ ಸಿದ್ಧಪಡಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಆರೋಗ್ಯ ಸೇವೆ, ವೈದ್ಯಕೀಯ ಚಿಕಿತ್ಸೆ, ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರಗಳ ನಡುವೆ ಉತ್ತಮ ಸಮನ್ವಯ ಸಾಧಿಸುವ ಮೂಲಕ ಅರಬ್ ರಾಷ್ಟ್ರಗಳ ರೋಗಿಗಳಿಗೆ ಅನುಕೂಲವಾಗುವ ವ್ಯವಸ್ಥೆ ನಿರ್ಮಿಸುವ ಉದ್ದೇಶ ಹೊಂದಲಾಗಿದೆ.

ಈ ಯೋಜನೆಯ ಸಿದ್ಧತೆಯ ಭಾಗವಾಗಿ ಮುಂದಿನ ಜನವರಿಯಲ್ಲಿ ಬೆಂಗಳೂರಿನಲ್ಲಿ ವಿಶೇಷ ಸಮ್ಮೇಳನ ಆಯೋಜಿಸಲು ಸರ್ಕಾರ ಉದ್ದೇಶಿಸಿದೆ. ಈ ಸಮ್ಮೇಳನದಲ್ಲಿ ರಾಜ್ಯದ ಪ್ರಮುಖ ಆಸ್ಪತ್ರೆಗಳು, ವೈದ್ಯರು ಮತ್ತು ಆರೋಗ್ಯ ಕ್ಷೇತ್ರದ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅರಬ್ ರಾಷ್ಟ್ರಗಳಿಂದ ಕರ್ನಾಟಕಕ್ಕೆ ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳ ಅಗತ್ಯತೆಗಳು ಮತ್ತು ಅವರಿಗೆ ಒದಗಿಸಬೇಕಾದ ಸೇವೆಗಳ ಕುರಿತು ಸಮ್ಮೇಳನದಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ.

ವಿಶೇಷ ಚಿಕಿತ್ಸಾ ಸೌಲಭ್ಯಗಳು, ರೋಗಿಗಳಿಗೆ ಅಗತ್ಯ ನೆರವು, ವಸತಿ ವ್ಯವಸ್ಥೆ, ಸಾರಿಗೆ ಸೌಲಭ್ಯ, ಭಾಷಾ ಸಹಾಯ ಹಾಗೂ ಚಿಕಿತ್ಸೆ ಪೂರ್ಣಗೊಂಡ ಬಳಿಕ ನೀಡಬೇಕಾದ ಆರೈಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಿ ಸಮಗ್ರ ಕಾರ್ಯತಂತ್ರ ರೂಪಿಸುವ ಸಾಧ್ಯತೆ ಇದೆ. ಇದರ ಮೂಲಕ ವೈದ್ಯಕೀಯ ಚಿಕಿತ್ಸೆಗಾಗಿ ಕರ್ನಾಟಕಕ್ಕೆ ಬರುವ ವಿದೇಶಿ ರೋಗಿಗಳಿಗೆ ಆರಂಭದಿಂದ ಅಂತ್ಯದವರೆಗೆ ಸುಗಮ ಸೇವೆ ಒದಗಿಸುವ ವ್ಯವಸ್ಥೆ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ನಗರಗಳಲ್ಲಿ ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ ಹೊಂದಿರುವ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ವಿವಿಧ ಕ್ಷೇತ್ರಗಳಲ್ಲಿ ಅನುಭವ ಹೊಂದಿರುವ ವೈದ್ಯರು ಹಾಗೂ ಉತ್ತಮ ವೈದ್ಯಕೀಯ ಮೂಲಸೌಕರ್ಯವೂ ರಾಜ್ಯದಲ್ಲಿದೆ. ಈ ಸಾಮರ್ಥ್ಯವನ್ನು ಪ್ರವಾಸೋದ್ಯಮದೊಂದಿಗೆ ಜೋಡಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ವೈದ್ಯಕೀಯ ಸೇವೆಗಳಿಗೆ ಹೆಚ್ಚಿನ ಗುರುತಿನೊಂದಿಗೆ ರೋಗಿಗಳನ್ನು ಆಕರ್ಷಿಸಲು ಸರ್ಕಾರ ಮುಂದಾಗಿದೆ.

ಅರಬ್ ರಾಷ್ಟ್ರಗಳೊಂದಿಗೆ ಆರೋಗ್ಯ ಕ್ಷೇತ್ರದ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ಕರ್ನಾಟಕವನ್ನು ವಿಶ್ವಾಸಾರ್ಹ ವೈದ್ಯಕೀಯ ಮತ್ತು ಆರೋಗ್ಯ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವುದು ಇಂಡೋ-ಅರಬ್ ಕನೆಕ್ಟ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಯೋಜನೆ ಜಾರಿಯಾದರೆ ಆಸ್ಪತ್ರೆಗಳು, ವೈದ್ಯರು, ಪ್ರವಾಸೋದ್ಯಮ ಸಂಸ್ಥೆಗಳು ಮತ್ತು ಆತಿಥ್ಯ ಕ್ಷೇತ್ರದ ನಡುವೆ ಹೊಸ ರೀತಿಯ ಸಹಕಾರಕ್ಕೆ ಅವಕಾಶ ಸಿಗುವ ನಿರೀಕ್ಷೆಯಿದೆ.

Continue Reading

ಬೆಂಗಳೂರು

Bengaluru: ಬೆಂಗಳೂರಿನ ರಸ್ತೆ ಮರಗಳ ಮೇಲಿನ ಕೇಬಲ್ ಅವ್ಯವಸ್ಥೆಗೆ ಬ್ರೇಕ್ ಸಚಿವರ ಖಡಕ್ ಸೂಚನೆ

Published

on

Illegal OFC cables hanging on trees and roads in Bengaluru

ಬೆಂಗಳೂರು: ನಗರದ(Bengaluru) ರಸ್ತೆಗಳು, ಮರಗಳು ಹಾಗೂ ಕಟ್ಟಡಗಳ ಮೇಲೆ ಎಲ್ಲೆಂದರಲ್ಲಿ ಹರಡಿಕೊಂಡಿರುವ ಆಪ್ಟಿಕಲ್ ಫೈಬರ್ ಕೇಬಲ್‌ಗಳ ಅವ್ಯವಸ್ಥೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಅನುಮತಿ ಪಡೆಯದೆ ಅಳವಡಿಸಿರುವ ಕೇಬಲ್‌ಗಳನ್ನು ನಿಯಮಬದ್ಧಗೊಳಿಸಲು ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾ ಸಂಸ್ಥೆಗಳಿಗೆ ಒಂದು ಬಾರಿ ಶುಲ್ಕ ಪಾವತಿಸಿ ಸಕ್ರಮ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಜಿಬಿಎ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಡೆದ ಒಎಫ್‌ಸಿ ಕೇಬಲ್‌ಗಳ ನಿರ್ವಹಣೆ ಮತ್ತು ನಿಯಂತ್ರಣ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಸಚಿವರು ಮಾತನಾಡಿದರು. ನಗರದಲ್ಲಿ ಹೆಚ್ಚುತ್ತಿರುವ ಅನಧಿಕೃತ ಕೇಬಲ್ ಅಳವಡಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೇಬಲ್ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಸರಿಪಡಿಸಿ ಇಡೀ ನಗರಕ್ಕೆ ಏಕರೂಪದ ನಿಯಮ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಐದು ಲಕ್ಷಕ್ಕೂ ಹೆಚ್ಚು ಅನಧಿಕೃತ ಓವರ್‌ಹೆಡ್ ಕೇಬಲ್‌ಗಳಿದ್ದು, ಸುಮಾರು 12 ಸಾವಿರ ಕಿಲೋಮೀಟರ್ ಉದ್ದದ ಅಕ್ರಮ ಭೂಗತ ಕೇಬಲ್‌ಗಳಿವೆ ಎಂಬ ಮಾಹಿತಿ ಸಭೆಯಲ್ಲಿ ಚರ್ಚೆಯಾಯಿತು. ಇದರ ಜತೆಗೆ ಸುಮಾರು 3,460 ಕಿಲೋಮೀಟರ್ ವ್ಯಾಪ್ತಿಯಲ್ಲಿ ಓವರ್‌ಹೆಡ್ ಕೇಬಲ್‌ಗಳನ್ನು ಅಳವಡಿಸಲಾಗಿದೆ.

Bengaluru

ಮರಗಳ ಮೇಲೆ ಹಲವು ನಿರುಪಯುಕ್ತ ಕೇಬಲ್‌ಗಳು ನೇತಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ಮರಗಳ ಕೊಂಬೆಗಳ ನಡುವೆ ಕೇಬಲ್‌ಗಳು ಸಿಕ್ಕಿಕೊಂಡಿರುವುದು ಮಾತ್ರವಲ್ಲದೆ, ರಸ್ತೆ ಬದಿಯಲ್ಲಿ ಅಸ್ತವ್ಯಸ್ತವಾಗಿ ಹರಡಿಕೊಂಡಿರುವ ತಂತಿಗಳು ಸಂಚಾರ ಮತ್ತು ಸಾರ್ವಜನಿಕ ಸುರಕ್ಷತೆಗೂ ಸಮಸ್ಯೆಯಾಗಿವೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಅನುಮತಿ ಇಲ್ಲದೆ ಕೇಬಲ್ ಅಳವಡಿಸಿರುವ ಸಂಸ್ಥೆಗಳಿಗೆ ಅವುಗಳನ್ನು ಸ್ವಯಂ ಘೋಷಿಸಿಕೊಂಡು, ನಿಗದಿತ ಶುಲ್ಕ ಪಾವತಿಸುವ ಮೂಲಕ ಸಕ್ರಮ ಮಾಡಿಕೊಳ್ಳಲು ಅವಕಾಶ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ನಿರ್ದಿಷ್ಟ ಕಾಲಾವಕಾಶ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನಿಗದಿತ ಗಡುವಿನೊಳಗೆ ಕೇಬಲ್‌ಗಳನ್ನು ನಿಯಮಬದ್ಧಗೊಳಿಸದಿದ್ದರೆ ಅಂತಹ ಕೇಬಲ್‌ಗಳನ್ನು ತೆರವುಗೊಳಿಸಲಾಗುವುದು. ಅಪಾಯಕಾರಿಯಾಗಿ ನೇತಾಡುತ್ತಿರುವ ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ತಂತಿಗಳನ್ನು ಯಾವುದೇ ಮುಲಾಜಿಲ್ಲದೆ ಕತ್ತರಿಸಿ ತೆರವುಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

also read: https://hosasuddi.in/vijay-sangeetha-anirudh-kavya-reception/

Vijay: ವಿಜಯ್ ಹೋದ ಬಳಿಕ ವೇದಿಕೆಗೆ ಬಂದ ಸಂಗೀತಾ ರಿಸೆಪ್ಶನ್‌ನಲ್ಲಿ ಏನಿದು ವಿಶೇಷ?

ಇನ್ನು ಮುಂದೆ ಹೊಸದಾಗಿ ಕೇಬಲ್ ಅಳವಡಿಸಲು ಅನುಮತಿ ಪಡೆಯುವ ಪ್ರಕ್ರಿಯೆಯನ್ನೂ ಸರಳಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ನಗರ ಪಾಲಿಕೆಗಳ ಸಾಫ್ಟ್‌ವೇರ್ ಮೂಲಕವೇ ಅರ್ಜಿ ಸಲ್ಲಿಸಿ, ನಿಗದಿತ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸುವ ವ್ಯವಸ್ಥೆ ಕಲ್ಪಿಸುವಂತೆ ಸಚಿವರು ಸೂಚಿಸಿದರು.

ಹೊಸದಾಗಿ ನಿರ್ಮಿಸಿರುವ ರಸ್ತೆಗಳನ್ನು ಕೇಬಲ್ ಅಳವಡಿಕೆಗಾಗಿ ಮತ್ತೆ ಅಗೆಯಲು ಅವಕಾಶ ನೀಡಬಾರದು ಎಂದು ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ. ವೈಟ್‌ಟಾಪಿಂಗ್ ಮತ್ತು ಟೆಂಡರ್‌ಶ್ಯೂರ್ ರಸ್ತೆಗಳ ನಿರ್ಮಾಣದ ವೇಳೆ ಈಗಾಗಲೇ ಅಳವಡಿಸಿರುವ ಡಕ್ಟ್‌ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕೃಷ್ಣ ಬೈರೇಗೌಡ ಹೇಳಿದರು.

ಜಂಕ್ಷನ್ ಬಾಕ್ಸ್‌ಗಳನ್ನು ಆಸ್ತಿಯ ಅಂಚಿನಲ್ಲಿ ಹಾಗೂ ಏಳು ಅಡಿ ಎತ್ತರದಲ್ಲಿ ಅಳವಡಿಸಬೇಕು. ಅಗತ್ಯವಿದ್ದಲ್ಲಿ ಕೇಬಲ್ ಅಳವಡಿಕೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ಬೈಲಾ ರೂಪಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಭೆಯಲ್ಲಿ ಬೆಂಗಳೂರಿನ 75 ಪ್ರಮುಖ ಜಂಕ್ಷನ್‌ಗಳ ಅಭಿವೃದ್ಧಿ ಕುರಿತೂ ಚರ್ಚೆ ನಡೆಯಿತು. ಜಂಕ್ಷನ್‌ಗಳ ವಿನ್ಯಾಸವನ್ನು ವೈಜ್ಞಾನಿಕವಾಗಿ ರೂಪಿಸಿ, ಯಾವುದೇ ಕಾಮಗಾರಿ ಆರಂಭಿಸುವ ಮೊದಲು ಗುಡ್ ಫಾರ್ ಕನ್‌ಸ್ಟ್ರಕ್ಷನ್ ವಿನ್ಯಾಸವನ್ನು ಅಂತಿಮಗೊಳಿಸಬೇಕು ಎಂದು ಸಚಿವರು ತಿಳಿಸಿದರು.

ರಸ್ತೆಗಳಲ್ಲಿ ಲೇನ್ ಮಾರ್ಕಿಂಗ್, ದಿಕ್ಕು ಸೂಚಕ ಫಲಕಗಳು, ಜೀಬ್ರಾ ಕ್ರಾಸಿಂಗ್, ಫ್ರೀ ಲೆಫ್ಟ್ ರಿಫ್ಲೆಕ್ಟರ್ ಹಾಗೂ ರಸ್ತೆ ಸ್ಟಡ್‌ಗಳನ್ನು ಸಮರ್ಪಕವಾಗಿ ಅಳವಡಿಸಬೇಕು. ಸಂಚಾರ ದಟ್ಟಣೆ ಮತ್ತು ರಸ್ತೆ ಸುರಕ್ಷತೆ ಸಮಸ್ಯೆಗಳನ್ನು ಕಡಿಮೆ ಮಾಡಲು ಸಂಚಾರ ಪೊಲೀಸರೊಂದಿಗೆ ಸಮನ್ವಯ ಸಾಧಿಸಿ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

https://bpas.bbmpgov.in/

Continue Reading

ಬೆಂಗಳೂರು

Basava Mantapa book: ಬಸವ ಮಂಟಪ ಪುಸ್ತಕ ಮುಟ್ಟುಗೋಲು ಸರ್ಕಾರದಿಂದ ಅಧಿಕೃತ ಆದೇಶ

Published

on

Karnataka government order to seize Basava Mantapa book written by Ravi Hanj

ಬೆಂಗಳೂರು: ಲೇಖಕ ರವಿ ಹಂಜ್ ಬರೆದಿರುವ  ಬಸವ ಮಂಟಪ ಪುಸ್ತಕವನ್ನು(Basava Mantapa book) ಮುಟ್ಟುಗೋಲು ಹಾಕಿಕೊಂಡು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಚನಕಾರ ಬಸವಣ್ಣನವರ ಕುರಿತು ಪುಸ್ತಕದಲ್ಲಿ ಆಕ್ಷೇಪಾರ್ಹವಾಗಿ ಉಲ್ಲೇಖಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸವ ಮಂಟಪ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು. ಇದೀಗ ಆ ನಿರ್ಧಾರದಂತೆ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಕಲಂ 98ರ ಅಡಿಯಲ್ಲಿ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಆದೇಶದ ಪ್ರಕಾರ ‘ಬಸವ ಮಂಟಪ’ ಪುಸ್ತಕದ ಮುದ್ರಿತ ಹಾಗೂ ಡಿಜಿಟಲ್ ಪ್ರತಿಗಳು ದೇಶದ ಯಾವುದೇ ಭಾಗದಲ್ಲಿ ಕಂಡುಬಂದರೂ ಅವುಗಳನ್ನು ಜಪ್ತಿ ಮಾಡಿ ಮುಟ್ಟುಗೋಲು ಹಾಕಿಕೊಳ್ಳಲು ಸೂಚಿಸಲಾಗಿದೆ. ಇದರ ಜೊತೆಗೆ ಪುಸ್ತಕದ ವಿತರಣೆಯನ್ನೂ ತಡೆಯುವಂತೆ ನಿರ್ದೇಶನ ನೀಡಲಾಗಿದೆ ಎಂದು ಒಳಾಡಳಿತ ಇಲಾಖೆಯ ಜಂಟಿ ಕಾರ್ಯದರ್ಶಿ ಅರ್ಚನ ಎಂ.ಎಸ್. ತಿಳಿಸಿದ್ದಾರೆ.

https://hosasuddi.in/sadhguru-live-in-relationship-vs-marriage/

Sadhguru: ಲಿವ್-ಇನ್ ಅಥವಾ ಮದುವೆ? ಸಂಬಂಧದ ಬಗ್ಗೆ ಸದ್ಗುರು ಹೇಳಿದ್ದೇನು ಗೊತ್ತಾ?

Basava Mantapa book ಪುಸ್ತಕದಲ್ಲಿ ವಿಶ್ವಗುರು ಬಸವಣ್ಣನವರನ್ನು ಕಳ್ಳ ಮತ್ತು ಕೊಲೆಗಾರನಂತೆ ಬಿಂಬಿಸಿ ಅವಹೇಳನ ಮಾಡಲಾಗಿದೆ ಎಂಬ ಆರೋಪ ವಿವಾದಕ್ಕೆ ಕಾರಣವಾಗಿತ್ತು. ಕೃತಿಯಲ್ಲಿರುವ ಕೆಲವು ಅಂಶಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದರ ಜೊತೆಗೆ ವಿವಿಧ ಪಂಗಡಗಳ ನಡುವೆ ದ್ವೇಷ ಭಾವನೆ ಮೂಡಿಸುವ ಸಾಧ್ಯತೆಯಿದೆ ಎಂಬ ಆಕ್ಷೇಪ ವ್ಯಕ್ತವಾಗಿತ್ತು.

ಈ ವಿಚಾರದಿಂದ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಪುಸ್ತಕದ ವಿರುದ್ಧ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಅದರ ವಿತರಣೆ ತಡೆಯಬೇಕು ಮತ್ತು ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ರಾಜ್ಯ ಪೊಲೀಸ್ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ ಡಾ. ಎಂ.ಎ. ಸಲೀಂ ಅವರು ಈ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಲೇಖಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಅವರನ್ನು ಬಂಧಿಸಲಾಗಿತ್ತು.

Basava Mantapa book ಈ ನಡುವೆ ಬಸವ ಮಂಟಪ ಕೃತಿಯ ವಿರುದ್ಧ ಮೂರುಸಾವಿರಮಠದ ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಅವರು, ಸಂಶೋಧನೆಯ ಹೆಸರಿನಲ್ಲಿ ಬಸವಣ್ಣನವರ ಚಾರಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಇಂತಹ ಕೃತಿಯನ್ನು ಸಾರಾಸಗಟಾಗಿ ಖಂಡಿಸುವುದಾಗಿ ಹೇಳಿದ್ದ ಅವರು, ಪುಸ್ತಕದಲ್ಲಿ ದಾಖಲಿಸಲಾಗಿರುವ ವಿಚಾರಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದರು. ಇದು ಕೇವಲ ಪುಸ್ತಕವಲ್ಲ, ಗ್ರಂಥ ಎಂದು ಹೇಳಲಾಗುತ್ತಿದೆ. ಆದರೆ ಕೃತಿಯ ಪ್ರತಿಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ಲಭ್ಯವಾಗಿಲ್ಲ. ಹೀಗಾಗಿ ಕೃತಿಯಲ್ಲಿರುವ ವಿಚಾರಗಳ ಕುರಿತು ಪರಿಶೀಲನೆ ನಡೆಯಬೇಕು ಎಂದು ಅವರು ಒತ್ತಾಯಿಸಿದ್ದರು.

ಸರ್ಕಾರದ ಅಧಿಕೃತ ಆದೇಶ ಹೊರಬಂದಿರುವ ಹಿನ್ನೆಲೆಯಲ್ಲಿ ‘ಬಸವ ಮಂಟಪ’ ಪುಸ್ತಕದ ಮುದ್ರಿತ ಪ್ರತಿಗಳ ಜತೆಗೆ ಡಿಜಿಟಲ್ ಪ್ರತಿಗಳ ವಿತರಣೆಗೂ ನಿರ್ಬಂಧ ವಿಧಿಸಲಾಗಿದೆ. ಪುಸ್ತಕದ ವಿರುದ್ಧದ ವಿವಾದ ಇದೀಗ ಸರ್ಕಾರದ ಅಧಿಕೃತ ಕ್ರಮದ ಹಂತಕ್ಕೆ ತಲುಪಿದೆ.

https://karnataka.gov.in/

Continue Reading

Trending