Connect with us

ದೇಶ

ಸೌರ ಶಕ್ತಿ ಉತ್ಪಾದನೆಯಲ್ಲಿ ಹೊಸ ದಾಖಲೆ ನಿರ್ಮಿಸಿಲಿದೆ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ

Published

on

ಸೌರ ಶಕ್ತಿ ಉತ್ಪಾದನೆಯಲ್ಲಿ ಹೊಸ ದಾಖಲೆ ನಿರ್ಮಿಸಿಲಿದೆ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ

ದೆಹಲಿ ಮತ್ತು ಲಕ್ನೋಗೆ ಸಂಪರ್ಕ ಕಲ್ಪಿಸುವ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಹಲವಾರು ವಿಶೇಷತೆಗಳನ್ನು ಒಳಗೊಂಡಿದ್ದು, ಇದೀಗ ಹೊಸ ಹೆದ್ದಾರಿಯಲ್ಲಿ ಉತ್ತರಪ್ರದೇಶ ಸರ್ಕಾರವು ಮಹತ್ವದ ಯೋಜನೆಯೊಂದನ್ನು ಜಾರಿಗೊಳಿಸಿದೆ.ಕೇಂದ್ರ ಸರ್ಕಾರವು ಆರ್ಥಿಕ ಅಭಿವೃದ್ದಿಗಾಗಿ ದೇಶಾದ್ಯಂತ ಪ್ರಮುಖ ನಗರಗಳ ನಡುವಿನ ಸಾರಿಗೆ ಸಂಪರ್ಕವನ್ನು ವಿಶ್ವದರ್ಜೆಗೆ ಪರಿವರ್ತನೆಗೊಳಿಸುತ್ತಿದ್ದು, ಸುಸ್ಥಿರ ಮತ್ತು ಮರುಬಳಕೆ ಮಾಡಬಹುದಾದ ತಂತ್ರಜ್ಞಾನಗಳೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗಿರುವ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಸಹ ಹಲವಾರು ವಿಶೇಷತೆಗಳೊಂದಿಗೆ ಸಾರಿಗೆ ಸಂಪರ್ಕದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಇದು ದೇಶದಲ್ಲಿಯೇ ಮೊದಲ ಸೌರ ಶಕ್ತಿ ಪ್ರೇರಿತ ಹೆದ್ದಾರಿ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ನಲ್ಲಿ ಉತ್ತರ ಪ್ರದೇಶ ಸರ್ಕಾರವು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಯೋಜನೆ ಅಡಿ ಡಿವೈಡರ್ ಮದ್ಯದಲ್ಲಿ ಸೋಲಾರ್ ಪ್ಯಾನೆಲ್ ಗಳನ್ನು ಅಳವಡಿಸಲಾಗುತ್ತಿದ್ದು, ಈ ಮೂಲಕ ಹೆದ್ದಾರಿಯಲ್ಲಿ ಬೆಳಕಿನ ವ್ಯವಸ್ಥೆಯೊಂದಿಗೆ ಎಲೆಕ್ಟ್ರಿಕ್ ವಾಹನಗಳಿಗೂ ವಿದ್ಯುತ್ ಪೂರೈಕೆ ಮಾಡುವ ಯೋಜನೆ ಸಿದ್ದಪಡಿಸಲಾಗುತ್ತಿದೆ.ಹೊಸ ಯೋಜನೆಯೊಂದಿಗೆ 550 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿಹೊಂದಲಾಗಿದ್ದು, ಇದು ಹೆದ್ದಾರಿಯಲ್ಲಿ ಬೆಳಕಿನ ವ್ಯವಸ್ಥೆಯೊಂದಿಗೆ ಭವಿಷ್ಯದಲ್ಲಿ ಹೆಚ್ಚಲಿರುವ ಎಲೆಕ್ಟ್ರಿಕ್ ವಾಹನಗಳಿಗೆ ವಿದ್ಯುತ್ ಪೂರೈಕೆ ಮಾಡಲು ಸಹಕಾರಿಯಾಗಲಿದೆ. ಎಲೆಕ್ಟ್ರಿಕ್ ವಾಹನಗಳು ಹೆಚ್ಚುತ್ತಿರುವುದರಿಂದ ಈಗಾಗಲೇ ವಿದ್ಯುತ್ ಉತ್ಪಾದನೆಗೆ ಬೇಡಿಕೆ ಹೆಚ್ಚುತ್ತಿದ್ದು, ಭವಿಷ್ಯದಲ್ಲಿನ ಇವಿ ವಾಹನಗಳ ಬೇಡಿಕೆ ಪೂರೈಸಲು ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಳ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರವು ಮಹತ್ವದ ಯೋಜನೆಗೆ ಚಾಲನೆ ನೀಡಿದ್ದು, ಶೀಘ್ರದಲ್ಲಿಯೇ ಹೊಸ ಎಕ್ಸ್‌ಪ್ರೆಸ್‌ವೇ ಗಳಲ್ಲಿ ಸೌರ ಶಕ್ತಿ ಉತ್ಪಾದನೆ ಹೆಚ್ಚಳವಾಗುವ ನೀರಿಕ್ಷೆಗಳಿವೆ.ಇನ್ನು ದೆಹಲಿ ಮತ್ತು ಲಕ್ನೋಗೆ ಸೇರ ಸಂಪರ್ಕ ಕಲ್ಪಿಸುವ 296 ಕಿ.ಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಕಳೆದ ವರ್ಷವಷ್ಟೇ ರೂ. 14,850 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಇದು ಡಿಎನ್‌ಡಿ ಫ್ಲೈವೇಯಲ್ಲಿ 9 ಕಿಮೀ, ನೋಯ್ಡಾ-ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ 24 ಕಿಮೀ, ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ 165 ಕಿಮೀ ಮತ್ತು ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ 135 ಕಿಮೀ ಕ್ರಮಿಸುತ್ತದೆ.ಹೊಸ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ದೆಹಲಿ ಸೇರಿದಂತೆ ಇತರೆ ರಾಜ್ಯಗಳಿಗೆ ಜನರನ್ನು ಸುಲಭ ಸಂಪರ್ಕಿಸಲು ಸಹಕಾರಿಯಾಗಿದ್ದು, ಇದು ಚಿತ್ರಕೂಟ, ಬಂದಾ, ಮಹೋಬಾ, ಹಮೀರ್‌ಪುರ, ಜಲೌನ್, ಔರೈಯಾ ಮತ್ತು ಇಟಾವಾ ಜಿಲ್ಲೆಗಳ ಜನರಿಗೆ ಹೆಚ್ಚು ಅನುಕೂಲವಾಗಿದೆ. ಜೊತೆಗೆ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಕೈಗಾರಿಕೆಗಳ ಅಭಿವೃದ್ದಿಗೂ ಸಹಕಾರಿಯಾಗಲಿದ್ದು, ಹೊಸ ಹೆದ್ದಾರಿಯನ್ನು ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಅಥಾರಿಟಿ ನಿರ್ಮಾಣ ಮಾಡಿದೆ.ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಅನ್ನು ಕೇವಲ 28 ತಿಂಗಳುಗಳಲ್ಲಿ ಪೂರ್ಣಗೊಳಿಸಲಾಗಿದ್ದು, ಹಲವಾರು ವಿಶೇಷತೆಗಳೊಂದಿಗೆ ನಿರ್ಮಾಣವಾಗಿದೆ. ಸುಸ್ಥಿರ ಮತ್ತು ಮರುಬಳಕೆ ಮಾಡಬಹುದಾದ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಹೊಸ ಎಕ್ಸ್‌ಪ್ರೆಸ್‌ವೇ ಮಾರ್ಗವು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಪ್ರಯೋಗಗಳಿಗೆ ಸಾಕ್ಷಿಯಾಗಲಿದೆ.

Continue Reading

ಕ್ರೀಡೆ

ದೇವಾಂಗ ಯೂನಿಯನ್ ಶತಮಾನೋತ್ಸವ ಬ್ಯಾಸ್ಕೆಟ್‌ಬಾಲ್ ಟೂರ್ನಿಯಲ್ಲಿ ಯಂಗ್ ಓರಿಯನ್ಸ್ ಚಾಂಪಿಯನ್

Published

on

ಬೆಂಗಳೂರು: ದೇವಾಂಗ ಯೂನಿಯನ್ ಶತಮಾನೋತ್ಸವ ಹಾಗೂ ಪ್ರೊ. ಎನ್.ಸಿ. ಪರಪ್ಪ ಅವರ ಸ್ಮರಣಾರ್ಥ ಆಯೋಜಿಸಿದ್ದ ರಾಜ್ಯಮಟ್ಟದ ಆಹ್ವಾನಿತ ಪುರುಷರ ಫ್ಲಡ್‌ಲೈಟ್ ಬ್ಯಾಸ್ಕೆಟ್‌ಬಾಲ್ ಟೂರ್ನಿ-2026 ರೋಚಕ ಪಂದ್ಯಗಳೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಜೂನ್ 7ರಂದು ದೇವಾಂಗ ಯೂನಿಯನ್ ಕೋರ್ಟ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ Young Orion’s SC ತಂಡವು GST & Customs ತಂಡವನ್ನು 84-71 ಅಂಕಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.

ಸೆಮಿಫೈನಲ್ ಫಲಿತಾಂಶ

ಮೊದಲ ಸೆಮಿಫೈನಲ್‌ನಲ್ಲಿ Young Orion’s SC ತಂಡವು DYES ಬೆಂಗಳೂರು ವಿರುದ್ಧ 80-72 ಅಂಕಗಳ ಗೆಲುವು ಸಾಧಿಸಿತು. ಯಂಗ್ ಓರಿಯನ್ಸ್ ಪರ ಅರ್ಜುನ್ ಯಾದವ್ 22 ಹಾಗೂ ಶಶಾಂಕ್ 14 ಅಂಕಗಳನ್ನು ಗಳಿಸಿದರೆ, DYES ಪರ ಮನೋಜ್ 24 ಹಾಗೂ ಬತೇಶ್ 16 ಅಂಕಗಳನ್ನು ದಾಖಲಿಸಿದರು. ಅರ್ಧಾವಧಿಯಲ್ಲಿ ಯಂಗ್ ಓರಿಯನ್ಸ್ 41-40 ಅಂಕಗಳಿಂದ ಮುನ್ನಡೆಯಲ್ಲಿತ್ತು.

ಎರಡನೇ ಸೆಮಿಫೈನಲ್‌ನಲ್ಲಿ GST & Customs ತಂಡವು Bank of Baroda ವಿರುದ್ಧ 71-63 ಅಂಕಗಳಿಂದ ಗೆಲುವು ದಾಖಲಿಸಿತು. GST & Customs ಪರ ಧೀರಜ್ ರೆಡ್ಡಿ 25 ಹಾಗೂ ಪ್ರತ್ಯಾಂಶು ತೋಮರ್ 12 ಅಂಕಗಳನ್ನು ಗಳಿಸಿದರು.

ಫೈನಲ್‌ನಲ್ಲಿ ಯಂಗ್ ಓರಿಯನ್ಸ್ ಪ್ರಾಬಲ್ಯ

ಅಂತಿಮ ಪಂದ್ಯದಲ್ಲಿ ಯಂಗ್ ಓರಿಯನ್ಸ್ ಆರಂಭದಿಂದಲೇ ಉತ್ತಮ ಆಟ ಪ್ರದರ್ಶಿಸಿತು. ಸುಮಂತ್ 20 ಹಾಗೂ ಅಭಿಷೇಕ್ ಗೌಡ 16 ಅಂಕಗಳನ್ನು ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. GST & Customs ಪರ ಧೀರಜ್ ರೆಡ್ಡಿ 23 ಹಾಗೂ ಪ್ರತ್ಯಾಂಶು ತೋಮರ್ 22 ಅಂಕಗಳನ್ನು ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಅರ್ಧಾವಧಿಯಲ್ಲಿ 46-35 ಅಂಕಗಳ ಮುನ್ನಡೆ ಸಾಧಿಸಿದ್ದ ಯಂಗ್ ಓರಿಯನ್ಸ್, ಅಂತಿಮವಾಗಿ 84-71 ಅಂಕಗಳ ಅಂತರದಿಂದ ಜಯ ಸಾಧಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಬಹುಮಾನ ವಿತರಣೆ

ಚಾಂಪಿಯನ್ ಆಗಿ ಹೊರಹೊಮ್ಮಿದ Young Orion’s SC ತಂಡಕ್ಕೆ ₹75,000 ನಗದು ಬಹುಮಾನ ಹಾಗೂ ಟ್ರೋಫಿ ಪ್ರದಾನ ಮಾಡಲಾಯಿತು. ರನ್ನರ್-ಅಪ್ GST & Customs ತಂಡಕ್ಕೆ ₹50,000 ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಯುವ ಆಟಗಾರರಿಗೆ ಕೆ. ಗೋವಿಂದರಾಜ್ ಪ್ರೋತ್ಸಾಹ

ಪಂದ್ಯಾವಳಿ ಬಳಿಕ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ K. Govindaraj ಅವರು ಯುವ ಆಟಗಾರರನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆಯಲ್ಲಿ ಶಿಸ್ತು, ಸಮರ್ಪಣೆ ಮತ್ತು ನಿರಂತರ ಪರಿಶ್ರಮದ ಮಹತ್ವವನ್ನು ವಿವರಿಸಿದರು. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಯುವ ಕ್ರೀಡಾಪಟುಗಳು ಕಠಿಣ ಪರಿಶ್ರಮದೊಂದಿಗೆ ಮುಂದುವರಿಯಬೇಕು ಎಂದು ಪ್ರೋತ್ಸಾಹದ ಮಾತುಗಳನ್ನಾಡಿದರು.

ಸಮಾರಂಭದಲ್ಲಿ ದೇವಾಂಗ ಯೂನಿಯನ್ ಅಧ್ಯಕ್ಷ Jayaram, ಕಾರ್ಯದರ್ಶಿ Vardharaju ಹಾಗೂ ದೇವಾಂಗ ಯೂನಿಯನ್‌ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ತಂಡಗಳ ಭಾಗವಹಿಸುವಿಕೆಯಿಂದ ಈ ಟೂರ್ನಿ ಯಶಸ್ವಿಯಾಗಿ ನೆರವೇರಿದ್ದು, ಯುವ ಬ್ಯಾಸ್ಕೆಟ್‌ಬಾಲ್ ಆಟಗಾರರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿತ್ತು.

Continue Reading

ದೇಶ

ಕಾಂಗ್ರೆಸ್‌ನಲ್ಲಿ ಮಂತ್ರಿಗಿರಿ ಮಹಾಯುದ್ಧ: 20 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು!

Published

on

ಬೆಂಗಳೂರು: ಮುಖ್ಯಮಂತ್ರಿ D. K. Shivakumar ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಮೊದಲ ಹಂತದಲ್ಲಿ 13 ಸಚಿವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಮಂತ್ರಿಗಿರಿ ಪೈಪೋಟಿ ತೀವ್ರಗೊಂಡಿದೆ. ಸಂಪುಟದಲ್ಲಿ ಇನ್ನೂ ಖಾಲಿ ಇರುವ 20 ಸಚಿವ ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರು ಆಕಾಂಕ್ಷಿಗಳಾಗಿರುವುದು ಹೈಕಮಾಂಡ್‌ಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಮೊದಲ ಪಟ್ಟಿಯಲ್ಲಿ ಸ್ಥಾನ ಸಿಗದ ಹಲವು ಹಿರಿಯ ನಾಯಕರು, ಮಾಜಿ ಸಚಿವರು ಮತ್ತು ಪ್ರಭಾವಿ ಶಾಸಕರು ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಪಡೆಯಲು ದೆಹಲಿ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ. ಸಚಿವ ಸ್ಥಾನ ಸಿಗದೇ ಹೋದದ್ದು ತಮ್ಮ ರಾಜಕೀಯ ಅನುಭವಕ್ಕೆ ಮಾಡಿದ ಅಗೌರವ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.

ಜಮೀರ್, ರಾಮಲಿಂಗಾ ರೆಡ್ಡಿ ಅಸಮಾಧಾನದ ಬಳಿಕ ಹೊಸ ಸವಾಲು

ಖಾತೆ ಹಂಚಿಕೆ ವಿಚಾರದಲ್ಲಿ ಉಂಟಾದ ಅಸಮಾಧಾನದಿಂದ Ramalinga Reddy ರಾಜೀನಾಮೆ ನೀಡಿ ಬಳಿಕ ವಾಪಸ್ ಪಡೆದ ಬೆಳವಣಿಗೆ ಹಾಗೂ Zameer Ahmed Khan ಬೆಂಬಲಿಗರ ಪ್ರತಿಭಟನೆ ಪಕ್ಷದೊಳಗಿನ ಅಸಮಾಧಾನವನ್ನು ಬಹಿರಂಗಪಡಿಸಿತ್ತು. ಇದೀಗ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯ ವಿಚಾರ ಕಾಂಗ್ರೆಸ್ ನಾಯಕತ್ವಕ್ಕೆ ಮತ್ತಷ್ಟು ಸವಾಲು ತಂದಿದೆ.

ಜಾತಿ, ಜಿಲ್ಲಾ ಕೋಟಾ ಲೆಕ್ಕಾಚಾರ

ಸಚಿವ ಸ್ಥಾನ ಬಯಸಿರುವ ನಾಯಕರು ಜಾತಿ ಸಮೀಕರಣ, ಜಿಲ್ಲಾ ಪ್ರತಿನಿಧಿತ್ವ ಹಾಗೂ ಸಮುದಾಯದ ಪ್ರಾಬಲ್ಯದ ಅಂಶಗಳನ್ನು ಮುಂದಿಟ್ಟು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಸಚಿವರಾಗದ ನಾಯಕರು Mallikarjun Kharge ಅವರ ಮೂಲಕ ಅವಕಾಶ ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ.

ಇನ್ನೊಂದೆಡೆ, ಡಿ.ಕೆ. ಶಿವಕುಮಾರ್ ಆಪ್ತ ವಲಯದ ಶಾಸಕರು ತಮ್ಮ ಅವಕಾಶದ ಬಗ್ಗೆ ವಿಶ್ವಾಸ ಹೊಂದಿದ್ದರೆ, ಮಾಜಿ ಮುಖ್ಯಮಂತ್ರಿ Siddaramaiah ಬೆಂಬಲಿಗರೂ ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿದ್ದಾರೆ.

ಪರಿಷತ್ ಚುನಾವಣೆ ಬಳಿಕವೇ ಸಂಪುಟ ವಿಸ್ತರಣೆ?

ಪ್ರಸ್ತುತ ಲೆಕ್ಕಾಚಾರದ ಪ್ರಕಾರ, ಒಂದು ಸಚಿವ ಸ್ಥಾನಕ್ಕೆ ಕನಿಷ್ಠ ಮೂರರಿಂದ ನಾಲ್ಕು ಮಂದಿ ಆಕಾಂಕ್ಷಿಗಳಿದ್ದು, ಅಂತಿಮ ಪಟ್ಟಿ ಸಿದ್ಧಪಡಿಸುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಮಾಡದಿರಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯ ಉಸ್ತುವಾರಿ Randeep Singh Surjewala ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಸಚಿವರ ಖಾತೆ ಹಂಚಿಕೆ ಅಸಮಾಧಾನವನ್ನು ಶಮನಗೊಳಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇದರ ನಡುವೆ ಉಳಿದ 20 ಸಚಿವ ಸ್ಥಾನಗಳನ್ನು ಸಮತೋಲನದಿಂದ ಭರ್ತಿ ಮಾಡುವುದು ಕಾಂಗ್ರೆಸ್ ನಾಯಕತ್ವಕ್ಕೆ ಅತ್ಯಂತ ಕಠಿಣ ಪರೀಕ್ಷೆಯಾಗಿ ಪರಿಣಮಿಸಿದೆ.

Continue Reading

ದೇಶ

ಭೂಮಿಯತ್ತ ಧಾವಿಸುತ್ತಿದೆ ಭಾರಿ ಸೌರ ಬಿರುಗಾಳಿ; NASA ಹೈ ಅಲರ್ಟ್

Published

on

ನವದೆಹಲಿ: ಸೂರ್ಯನ ಮೇಲ್ಮೈಯಲ್ಲಿ ಸಂಭವಿಸಿದ ಅತ್ಯಂತ ಶಕ್ತಿಶಾಲಿ ಸೌರ ಸ್ಫೋಟದ ಪರಿಣಾಮವಾಗಿ ಉಂಟಾಗಿರುವ ಭಾರಿ ಸೌರ ಬಿರುಗಾಳಿಯು ಸೋಮವಾರ ಭೂಮಿಗೆ ಅಪ್ಪಳಿಸುವ ಸಾಧ್ಯತೆಯಿದ್ದು, ಜಾಗತಿಕ ಮಟ್ಟದಲ್ಲಿ ವಿಜ್ಞಾನಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಅಮೆರಿಕದ ಬಾಹ್ಯಾಕಾಶ ಸಂಸ್ಥೆ NASA ಹಾಗೂ ಬಾಹ್ಯಾಕಾಶ ಹವಾಮಾನ ಮೇಲ್ವಿಚಾರಣಾ ಸಂಸ್ಥೆಗಳು ಭೂಕಾಂತೀಯ ಚಂಡಮಾರುತದ ಬಗ್ಗೆ ಮುನ್ನೆಚ್ಚರಿಕೆ ನೀಡಿವೆ.

ಸೂರ್ಯನ ಮೇಲ್ಮೈಯಲ್ಲಿ ಭೀಕರ ಸ್ಫೋಟ

ಜೂನ್ 6ರಂದು ಸೂರ್ಯನ ಸಕ್ರಿಯ ವಲಯ “Active Region 4461” ನಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಿಂದ ದಟ್ಟವಾದ ಮತ್ತು ಅತ್ಯಂತ ಬಿಸಿಯಾದ ಅನಿಲದ ದ್ರವ್ಯರಾಶಿ ಬಾಹ್ಯಾಕಾಶಕ್ಕೆ ಚಿಮ್ಮಿದೆ. ಈ ಸೌರ ಮೇಘವು ಸೆಕೆಂಡಿಗೆ ಸುಮಾರು 1,400 ಕಿಲೋಮೀಟರ್ ವೇಗದಲ್ಲಿ ಭೂಮಿಯತ್ತ ಚಲಿಸುತ್ತಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

G3 ಮಟ್ಟದ ಭೂಕಾಂತೀಯ ಚಂಡಮಾರುತದ ಎಚ್ಚರಿಕೆ

ತಜ್ಞರ ಪ್ರಕಾರ, ಈ ಸೌರ ಶಕ್ತಿಯು ಭೂಮಿಯ ಕಾಂತಕ್ಷೇತ್ರಕ್ಕೆ ಅಪ್ಪಳಿಸಿದಾಗ G3 ಮಟ್ಟದ ಭೂಕಾಂತೀಯ ಚಂಡಮಾರುತ ಉಂಟಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡರೆ ಅದು G4 ಮಟ್ಟ ತಲುಪುವ ಸಾಧ್ಯತೆಯನ್ನೂ ತಳ್ಳಿಹಾಕಲಾಗುವುದಿಲ್ಲ.

ಭಾರತದಲ್ಲೂ ಅರೋರಾ ಕಾಣಿಸಬಹುದೇ?

ಸೌರ ಬಿರುಗಾಳಿಯ ಪರಿಣಾಮವಾಗಿ ಭೂಮಿಯ ವಾತಾವರಣದಲ್ಲಿರುವ ಅನಿಲ ಕಣಗಳು ಸೌರ ಕಣಗಳೊಂದಿಗೆ ಘರ್ಷಿಸಿದಾಗ ಆಕಾಶದಲ್ಲಿ ಹಸಿರು, ಕೆಂಪು ಮತ್ತು ನೇರಳೆ ಬಣ್ಣದ ಬೆಳಕಿನ ಅಲೆಗಳು ಮೂಡುತ್ತವೆ. ಇದನ್ನೇ Aurora ಅಥವಾ ಧ್ರುವ ಜ್ಯೋತಿ ಎಂದು ಕರೆಯಲಾಗುತ್ತದೆ.

ಸಾಮಾನ್ಯವಾಗಿ ಧ್ರುವ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುವ ಈ ಪ್ರಕೃತಿ ವಿಸ್ಮಯ, ಈ ಬಾರಿ ಬಿರುಗಾಳಿಯ ತೀವ್ರತೆಯಿಂದಾಗಿ ಭಾರತದ ಉತ್ತರ ಭಾಗಗಳಾದ Uttarakhand, Himachal Pradesh ಸೇರಿದಂತೆ ಕೆಲವು ಎತ್ತರದ ಪ್ರದೇಶಗಳಲ್ಲಿ ಗೋಚರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.

2024ರ ಘಟನೆ ನೆನಪು

2024ರ ಮೇ ತಿಂಗಳಲ್ಲಿ ಸಂಭವಿಸಿದ್ದ ಪ್ರಬಲ ಸೌರ ಚಂಡಮಾರುತದ ವೇಳೆ Ladakh ಪ್ರದೇಶದಲ್ಲಿ ಅರೋರಾ ಗೋಚರಿಸಿ ಗಮನ ಸೆಳೆದಿತ್ತು. ಇದೇ ರೀತಿಯ ಅಪರೂಪದ ದೃಶ್ಯ ಈ ಬಾರಿಯೂ ಕಂಡುಬರಬಹುದು ಎಂಬ ನಿರೀಕ್ಷೆ ಮೂಡಿದೆ.

ಉಪಗ್ರಹ ಮತ್ತು ವಿದ್ಯುತ್ ಜಾಲದ ಮೇಲೆ ಪರಿಣಾಮ ಸಾಧ್ಯ

ಸೌರ ಬಿರುಗಾಳಿಯ ಪರಿಣಾಮವಾಗಿ ಕೆಲವು ಪ್ರದೇಶಗಳಲ್ಲಿ ರೇಡಿಯೋ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಜೊತೆಗೆ ಉಪಗ್ರಹ ಸಂವಹನ ವ್ಯವಸ್ಥೆಗಳು, ಜಿಪಿಎಸ್ ಸೇವೆಗಳು ಹಾಗೂ ವಿದ್ಯುತ್ ವಿತರಣಾ ಜಾಲಗಳ ಮೇಲೂ ಸಣ್ಣ ಪ್ರಮಾಣದ ಪರಿಣಾಮ ಉಂಟಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ವಿಜ್ಞಾನಿಗಳು ಸತತವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಆಕಾಶ ಸ್ಪಷ್ಟವಾಗಿದ್ದರೆ ಇಂದು ರಾತ್ರಿ ವಿಶ್ವದ ಹಲವೆಡೆ ಅಪರೂಪದ ಅರೋರಾ ದೃಶ್ಯವನ್ನು ಜನರು ಕಣ್ತುಂಬಿಕೊಳ್ಳುವ ಸಾಧ್ಯತೆ ಇದೆ.

Continue Reading

Trending