ದೇಶ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆ
ಮೈಸೂರು, : ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರ ಇದೇ ಜನವರಿ 22ರಂದು ಉದ್ಘಾಟನೆಯಾಗಲಿದೆ. ಇನ್ನು ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಎನ್ನುವರು ಕೆತ್ತನೆ ಮಾಡಿರುವುದು ವಿಶೇಷವಾಗಿದ್ದು, ಇದೀಗ ಅವರು ಕೆತ್ತನೆ ಮಾಡಿದ ಮೂರ್ತಿಯೇ ಫೈನಲ್ ಎಂದು ಹೇಳಿದೆ. ರಾಮಜನ್ಮ ಭೂಮಿ ಟ್ರಸ್ಟ್ ಈ ಬಗ್ಗೆ ಮಾಹಿತಿ ನೀಡಿದೆ. ಮತ ಹಾಕುವ ಮೂಲಕ ರಾಮಲಲ್ಲಾನ ಮೂರ್ತಿಯನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಜನವರಿ 22ರಂದು ಈ ಮೂರ್ತಿಯನ್ನು ಪ್ರಾಣ ಪ್ರತಿಷ್ಠೆ ಮಾಡಲಾಗುವುದು. ಎಂಬಿಎ ಪದವೀಧರರಾಗಿರುವ ಅರುಣ್ ಯೋಗಿರಾಜ್, ಕಾರ್ಪೋರೇಟ್ ನೌಕರಿಯನ್ನು ತೊರೆದು ಕುಟುಂಬ ನಡೆಸಿಕೊಂಡು ಬಂದ ಶಿಲ್ಪ ಕೆತ್ತನೆ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದು, ಇದೀಗ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮ ಲಲ್ಲ ಮೂರ್ತಿಯನ್ನು ಕೆತ್ತನೆ ಮಾಡಿದ್ದಾರೆ.
ಮೈಸೂರಿನ ಅರುಣ್ ಅವರೊಂದಿಗೆ ಬೆಂಗಳೂರಿನ ಜಿ,ಎಲ್,ಭಟ್ ಹಾಗೂ ರಾಜಸ್ಥಾನದ ಸತ್ಯನಾರಾಯಣ ಪಾಂಡೇ ಕೂಡ ಈ ರಾಮ ಲಲ್ಲ ಮೂರ್ತಿ ಕೆತ್ತನೆ ಮಾಡಿದ್ದಾರೆ. ಇನ್ನು 51 ಇಂಚು ಎತ್ತರದ ಮೂರ್ತಿ ಇದಾಗಿದ್ದು, ಒಟ್ಟು ಮೂರ್ತಿಯ ಗ್ರಾತ್ರ 8 ಅಡಿ ಎತ್ತರ ಹಾಗೂ ಮೂರು ಅಡಿ ಅಗಲ ಇದೆ. ಇದರಲ್ಲಿ ಪ್ರಭಾವಳಿಯೂ ಒಳಗೊಂಡಿದೆ. ಈ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಲಿದ್ದಾರೆ.ಜನವರಿ 22ರಂದು ಆಯೋಧ್ಯೆ ರಾಮ ಮಂದರದಲ್ಲಿ ಆಯೋಜನೆಗೊಂಡಿರುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ 2 ಸಾವಿರ ಆಹ್ವಾನಿತರಲ್ಲಿ ಅರುಣ್ ಸಹ ಒಬ್ಬರು. ಎಂಬಿಎ ಪದವೀಧರರಾಗಿರುವ ಅರುಣ್ ಕಾರ್ಪೋರೇಟ್ ನೌಕರಿಯನ್ನು ತೊರೆದು ಕುಟುಂಬ ನಡೆಸಿಕೊಂಡು ಬಂದ ಶಿಲ್ಪ ಕೆತ್ತನೆ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. 2008ರಿಂದ ಈವರೆಗೂ ಸುಮಾರು 1 ಸಾವಿರಕ್ಕೂ ಹೆಚ್ಚು ವಿವಿಧ ಪ್ರತಿಮೆಗಳನ್ನು ಕತ್ತನೆ ಮಾಡಿದ್ದಾರೆ. ಈ ಮೊದಲು ಕೇದರನಾಥ ದೇಗುಲ್ಕೆ ಆದಿ ಶಂಕರಾಚಾರ್ಯರ ಮೂರ್ತಿಯನ್ನು ಅರುಣ್ ಕೆತ್ತಿದ್ದರು. ದೆಹಲಿಯ ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾದ ಸುಭಾಶಚಂದ್ರ ಬೋಸ್ ಅವರ ಪ್ರತಿಮೆಯನ್ನು ಸಹ ಅರುಣ್ ಕೆತ್ತಿದ್ದು, ಇದನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.ಇನ್ನು ದೆಹಲಿಯ ಜೈಸಲ್ಮೇರ್ ಹೌಸ್ನಲ್ಲಿ ಡಾ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಕೆತ್ತನೆಗೆಊ ನ್ಯಾಯಾಂ ಇಲಾಖೆ ಅರುಣ್ ಅವರಿಗೆ ನೀಡಿದ್ದು, ಪ್ರತಿಮೆ ಫೆಬ್ರವರಿ ಅಂತ್ಯದೊಳಗೆ ನೀಡುವಂತೆ ಸೂಚಿಸಿದೆ. ಇದು ಬರುವ ಏಪ್ರಿಲ್ 14ರಂದು ಲೋಕಾರ್ಪಣೆಗೊಳ್ಳಲಿದೆ. ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿರುವ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಅರುಣ್, ರಾಮಲಲ್ಲಾ ಕಲ್ಲಿನ ವಿಗ್ರಹ ಕೆತ್ತನೆಗೆ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಸಂತಸ ಹಂಚಿಕೊಂಡಿದ್ದಾರೆ.
ರಾಮಲಲ್ಲಾ ಕಲ್ಲಿನ ವಿಗ್ರಹ
ಅಯೋಧ್ಯೆ ಅಂದ್ರೆ ಥಟ್ಟನೆ ನೆನಪಾಗುವುದು ರಾಮಲಲ್ಲಾ. ಲಲ್ಲಾ ಅಂದರೆ ಮಗು. ಅಂದ್ರೆ ರಾಮನ ಬಾಲ್ಯದ ಮೂರ್ತಿ. ಅಯೋಧ್ಯಾ ರಾಮಮಂದಿರದಲ್ಲಿ ಅತ್ಯಾಕರ್ಷಕವಾದ ರಾಮಲಲ್ಲಾನ ಕಲ್ಲಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ರಾಮ ಬಾಲಕನಿದ್ದಾಗ ಹೇಗಿದ್ದ ಅನ್ನೋ ಪರಿಕಲ್ಪನೆಯಲ್ಲಿ ಈ ವಿಗ್ರಹ ಇರುತ್ತದೆ. 51 ಇಂಚಿನ ಕಲ್ಲಿನ ವಿಗ್ರಹದಲ್ಲಿ ಶ್ರೀ ರಾಮನ ಬಾಲ್ಯದ ಸ್ವರೂಪ, ಶ್ರೀ ರಾಮನ ಮುಗ್ದತೆ, ತುಂಟತನದ ಜೊತೆಗೆ ಗಾಂಭೀರ್ಯತೆ ಸಹಾ ಇರಲಿದೆ. ಪುಟ್ಟ ಬಾಲಕ ಧನುರ್ದಾಯಿಯಾಗಿ ಕಾಣಿಸಿಕೊಳ್ಳಲಿದ್ದಾನೆ. ಇದರ ಜೊತೆಗೆ ಮತ್ತೊಂದು ವಿಶೇಷ ಅಂದ್ರೆ ಇದುವರೆಗೂ ಪುರಾಣಗಳಲ್ಲಿ, ಕಥೆಗಳಲ್ಲಿ, ಧಾರವಾಹಿಗಳಲ್ಲಿ, ಸಿನಿಮಾಗಳಲ್ಲಿ, ಪುಸ್ತಕದ ಪುಟಗಳಲ್ಲಿ ಎಲ್ಲೂ ಸಹಾ ರಾಮಲಲ್ಲಾನನ್ನು ಯಾರು ನೋಡಿಲ್ಲ. ನಮ್ಮಲ್ಲಿ ಏನಿದ್ದರು ಶ್ರೀ ಕೃಷ್ಣನ ಬಾಲಲೀಲೆಯೇ ಹೊರತು ರಾಮನ ಬಾಲ್ಯದ ಬಗ್ಗೆ ಉಲ್ಲೇಖಗಳು ಚಿತ್ರಗಳು ಕಡಿಮೆಯೇ. ಹೀಗಾಗಿ ಇದೊಂದು ವಿಭಿನ್ನವಾದ ಕಲಾಕೃತಿಯಾಗಿ ಮೂಡಿಬರುವುದರಲ್ಲಿ ಯಾವುದೇ ಅನುಮಾನಗಳಿಲ್ಲ.
ಇಂತಹ ವಿಭಿನ್ನ ವಿಶೇಷವಾದ ಮೂರ್ತಿ ಮೂಡಿಬಂದಿರುವುದೇ ರೋಚಕ.
ಅರುಣ್ ಯೋಗಿರಾಜ್
ಅರುಣ್ ಯೋಗಿರಾಜ್ ಮೈಸೂರು ಮಣ್ಣಿನ ಅಪ್ಪಟ ಪ್ರತಿಭೆ. ಇವರದ್ದು ಕಲ್ಲಿನ ವಿಗ್ರಹ ಶಿಲ್ಪದಲ್ಲಿ 200 ವರ್ಷಗಳ ತಲೆಮಾರಿನ ಪರಂಪರೆ. ಇವರ ತಂದೆ, ತಾತಾ, ಮುತ್ತಾತ, ಅವರ ತಂದೆ ತಾತಾ ಅಂದರೆ ಬರೋಬ್ಬರಿ ಐದು ತಲೆ ಮಾರಿನಿಂದ ಕಲ್ಲಿನ ಶಿಲ್ಪ ಕಲೆಯಲ್ಲಿ ಇವರ ವಂಶಸ್ಥರು ತೊಡಗಿಕೊಂಡಿದ್ದಾರೆ. ಅರುಣ್ ತಂದೆ ಯೋಗಿರಾಜ್ ಕೂಡ ನುರಿತ ಶಿಲ್ಪಿ. ಅವರ ಅಜ್ಜ ಬಸವಣ್ಣ ಶಿಲ್ಪಿ ಮೈಸೂರು ರಾಜರ ಆಸ್ತಾನದಲ್ಲಿದ್ದರು. ತಾತಾ ಮುತ್ತಾತ ಕೂಡ ಶಿಲ್ಪಿಗಳಾಗಿದ್ದರು. ಸುಮಾರು 200 ವರ್ಷದ ಹಿಂದಿನವರ ಕಲೆ ಅರುಣ್ ಅವರಿಗೆ ಸಿದ್ದಿಯಾಗಿದೆ. ಅರುಣ್ ಯೋಗಿರಾಜ್ ಅವರು ಬಾಲ್ಯದಿಂದಲೂ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಎಂಬಿಎ ಮುಗಿಸಿದ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಕಾಲ ಕೆಲಸ ಮಾಡುತ್ತಿದ್ದರು. ಆದರೆ ಅವರಿಗೆ ಆ ಕೆಲದ ತೃಪ್ತಿ ನೀಡಲಿಲ್ಲ. ಆಗ ಅವರಿಗೆ ಅನಿಸಿದ್ದು ತಮ್ಮ ಪೂರ್ವಜರ ಕಲೆಯನ್ನು ಮುಂದುವರಿಸಬೇಕು ಅಂತಾ. ಮತ್ತೆ ವಾಪಸ್ಸು ಕಲೆಯ ಕಡೆಗೆ ಬಂದರು. ತಂದೆಗೆ ವಿಚಾರ ತಿಳಿಸಿದರು. ಮೊದ ಮೊದಲು ತಂದೆ ಇದಕ್ಕೆ ಒಪ್ಪದಿದ್ದರು ಮಗನ ಆಸಕ್ತಿ ಮುಂದೆ ಅವರು ಸೋಲಲೇಬೇಕಾಯಿತು. ಆದರೆ ಅವರು ಒಂದು ಷರತ್ತನ್ನು ಹಾಕಿ ಮಗನಿಗೆ ಅನುಮತಿ ನೀಡಿದರು. ನೀನು ಎಂಬಿಎ ಪದವೀಧರ. ಮಾರ್ಕೆಟಿಂಗ್ ನಿನ್ನ ತಲೆಯಲ್ಲಿ ಹಾಸು ಹೊಕ್ಕಿರುತ್ತದೆ. ಆದರೆ ಇದು ಶ್ರದ್ದಾ ಭಕ್ತಿಯ ಕೆಲಸ ಇಲ್ಲಿ ನೀನು ಮಾರ್ಕೆಟಿಂಗ್ ಮಾಡುವುದಾದರೆ ಸುತಾರಾಂ ನೀನು ಬರಬೇಡು. ಕಲ್ಲಿನ ವಿಗ್ರಹಗಳ ಖರೀದಿ ಮಾರಾಟಕ್ಕೆ ಇಲ್ಲಿ ಅವಕಾಶವಿಲ್ಲ. ಇಲ್ಲೇನಿದ್ದರು ಕಲಾಸೇವೆ ಅಷ್ಟೇ ಅಂತಾ ಕಡ್ಡಿ ತುಂಡಾದ ರೀತಿ ಷರತ್ತು ವಿಧಿಸಿದ್ದರು. ಅದಕ್ಕೆ ಒಪ್ಪಿದ ಅರುಣ್ ಯೋಗಿರಾಜ್ 2008ರಿಂದ ಮತ್ತೆ ಶಿಲ್ಪ ಕೆತ್ತನೆ ವೃತ್ತಿ ಮುಂದುವರಿಸಿದರು.
ಎರಡನೇ ಇನಿಂಗ್ಸ್‌ನಲ್ಲಿ ಭರ್ಜರಿ ಯಶಸ್ಸು – ಸಾಂಸ್ಕೃತಿಕ ರಾಜಧಾನಿಯಿಂದ ದೇಶದ ರಾಜಧಾನಿಗೆ……..!
ಅರುಣ್ ಯೋಗಿರಾಜ್ ಅವರು ತಮ್ಮ ಕಲೆಯಲ್ಲಿ ತೊಡಗಿಸಿಕೊಂಡಿದ್ದೇ ತಡ ಅವರು ಅಂದುಕೊಂಡಿದ್ದು ದಿಟವಾಯ್ತು. ಕಲೆ ಅನ್ನೋದು ಅವರ ರಕ್ತದಲ್ಲೇ ಇದೆ ಅನ್ನೋದು ಸಾಬೀತಾಯಿತು. ಹುಳಿ ಹಿಡಿದ ಕೈಗಳಲ್ಲಿ ಅದ್ಬುತಗಳು ಮೂಡಿದವು. ಆರಂಭದಲ್ಲಿ ಸಣ್ಣ ಪುಟ್ಟ ಮಂಟಪಗಳ ಕೆತ್ತನೆಯೊಂದಿಗೆ ಹೊಸ ಇನಿಂಗ್ಸ್‌ನ್ನು ಆರಂಭಿಸಿದರು. ನಂತರ ದೇಗುಲಗಳಿಗೆ ಭಗವಾನ್ ಪಂಚಮುಖಿ ಗಣಪತಿ, ಭಗವಾನ್ ಮಹಾವಿಷ್ಣು, ದೇವರು ಬುದ್ಧ, ನಂದಿ, ಸ್ವಾಮಿ ಶಿವಬಾಲ ಯೋಗಿ, ಸ್ವಾಮಿ ಶಿವಕುಮಾರ ಮತ್ತು ಬನಶಂಕರಿ ದೇವಿಯ ವಿಗ್ರಹಗಳನ್ನು ಕೆತ್ತನೆ ಮಾಡಿ ನೀಡಿದರು. ಇದಾದ ನಂತರ ಮೈಸೂರಿನಲ್ಲಿ 5 ಅಡಿಯ ಗರುಡ ದೇವರ ವಿಗ್ರಹ. ಕೆಆರ್ ನಗರದಲ್ಲಿ 7 ಅಡಿ ಎತ್ತರದ ಯೋಗಾನರಸಿಂಹ ಸ್ವಾಮಿ ದೇವರ ವಿಗ್ರಹ, ಭಾರತದ ಅತಿ ದೊಡ್ಡ 10 ಅಡಿ ಏಕಶಿಲೆಯ ಬಿಳಿ ಅಮೃತಶಿಲೆಯ ಶ್ರೀ ರಾಮಕೃಷ್ಣ ಪರಮಹಂಸರ ಶಿಲ್ಪ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ “ಕ್ರಿಯೇಶನ್ ಆಫ್ ಕ್ರಿಯೇಶನ್” ಪರಿಕಲ್ಪನೆಯಲ್ಲಿ 11 ಅಡಿ ಏಕಶಿಲೆಯ ಆಧುನಿಕ ಕಲಾ ಕಲ್ಲಿನ ಶಿಲ್ಪ, 15 ಅಡಿ ಏಕಶಿಲೆಯ ಬಿಳಿ ಅಮೃತಶಿಲೆಯ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಅವರ ಪೀಠದೊಂದಿಗೆ ಮೈಸೂರಿನ ಶಿಲ್ಪ, 15 ಅಡಿ ಏಕಶಿಲೆಯ ಬಿಳಿ ಅಮೃತಶಿಲೆಯ ಡಾ.ಬಿ.ಆರ್. ಅಂಬೇಡ್ಕರ್ ಅವರ ಪೀಠದೊಂದಿಗಿನ ಶಿಲ್ಪ. ಕೆ.ಆರ್.ನಗರದ ಚುಂಚಕಟ್ಟೆಯಲ್ಲಿ 21 ಅಡಿ ಏಕಶಿಲೆಯ ಹನುಮಾನ್ ಹೊಯ್ಸಳ ಶೈಲಿ ಶಿಲ್ಪ ಇವರ ಕೈ ಚಳಕದಲ್ಲಿ ಅದ್ಬುತವಾಗಿ ಮೂಡಿಬಂದವು. ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದ ಅರುಣ್ ಯೋಗಿರಾಜ್ ಅವರನ್ನು ರಾಷ್ಟ್ರಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದು ಉತ್ತರಾಖಂಡದ ಕೇದಾರನಾಥದಲ್ಲಿ 12 ಅಡಿಯ ಆದಿ ಶಂಕರಾಚಾರ್ಯರ ವಿಗ್ರಹ ಹಾಗೂ 28 ಅಡಿ ಏಕಶಿಲೆಯ ಕಪ್ಪು ಗ್ರಾನೈಟ್ ಕಲ್ಲಿನಲ್ಲಿ ಅರಳಿ ಇಂಡಿಯಾ ಗೇಟ್‌ನಲ್ಲಿ ರಾರಾಜಿಸುತ್ತಿರುವ ಸುಭಾಷ್ ಚಂದ್ರ ಬೋಸ್ ಅವರ ಕಲಾಕೃತಿಗಳು. ಈ ಕಲಾಕೃತಿಗಳನ್ನು ಖುದ್ದು ದೇಶದ ಪ್ರಧಾನಿ ಮೆಚ್ಚಿ ಅನಾವರಣಗೊಳಿಸಿದರು. ಇದೀಗ ರಾಮಲಲ್ಲಾ ಅರುಣ್ ಅವರ ಹ್ಯಾಟ್ರಿಕ್ ಕಲಾಕೃತಿಯಾಗಲಿದೆ.
ಕಲೆಗೆ ಒಲಿದು ಬಂತು ಅವಕಾಶ – ಶ್ರದ್ದಾ ಭಕ್ತಿಯಲ್ಲಿ ಮೂಡಿದ ರಾಮಲಲ್ಲಾ ಮೂರ್ತಿ
ಅರುಣ್ ಯೋಗಿರಾಜ್ ಪ್ರತಿಭೆ ನೋಡಿದ ಪ್ರಧಾನಿ ಮೋದಿ ಮತ್ತೊಮ್ಮೆ ರಾಮಲಲ್ಲಾ ವಿಗ್ರಹ ಕೆತ್ತನೆಯ ಅವಕಾಶ ನೀಡಿದ್ದಾರೆ. ಇವರ ಜೊತೆಗೆ ಬೆಂಗಳೂರು ಹಾಗೈ ರಾಜಸ್ಥಾನದ ಇಬ್ಬರು ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಲಿದ್ದಾರೆ. ಮೂವರಲ್ಲಿ ಯಾರ ಮೂರ್ತಿ ಆಕರ್ಷಕ ಅರ್ಥಪೂರ್ಣವಾಗಲಿದೆ ಆ ಮೂರ್ತಿಯನ್ನು ಮುಖ್ಯ ಪೀಠಿಕೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಉಳಿದ ಎರಡು ಮೂರ್ತಿಗಳು ಅಯೋಧ್ಯಾ ರಾಮಮಂದಿರಲ್ಲೇ ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಅರುಣ್ ರಾಮಲಲ್ಲಾ ವಿಗ್ರಹ ಕೆತ್ತನೆ ಮಾಡಿದ ರೀತಿ ರೋಚಕ. ಅರುಣ್ ಕೆತ್ತನೆಗೆ ಆಯ್ಕೆಯಾಗುತ್ತಿದ್ದಂತೆ ಅವರಿಗೆ ಕಂಕಣಧಾರಣೆ ಮಾಡಲಾಗಿದೆ. ಕೆಲಸ ಆರಂಭಕ್ಕೂ ಮುನ್ನ ನಂತರ ಶ್ರೀ ರಾಮ ಸ್ತೋತ್ರ ಪಠನೆ. ಸಂಪೂರ್ಣ ಶ್ರದ್ದಾ ಭಕ್ತಿಯಿಂದ ಕೆಲಸ ಮಾಡಿದ್ದಾರೆ. ಇನ್ನು ಅರುಣ್ ಅವರು ಈ ಕಾರ್ಯದಲ್ಲಿ ಎಷ್ಟು ಮುಳುಗಿ ಹೋಗಿದ್ದರು ಅಂದ್ರೆ ವಿಗ್ರಹ ಕೆತ್ತನೆ ಪರಿಪೂರ್ಣವಾಗಿರಲಿ ಅನ್ನೋ ಕಾರಣಕ್ಕೆ ಸದಾ ಕಾಲ ಮಕ್ಕಳ ಒಡನಾಟದಲ್ಲೇ ಕಾಲ ಕಳೆದಿದ್ದಾರೆ. ಚಿಣ್ಣರ ಮೇಳ, ಮಕ್ಕಳಿರುವ ಕಡೆ ಗಂಟೆಗಟ್ಟಲೇ ಕುಳಿತು ಮಕ್ಕಳ ಹಾವಭಾವವನ್ನು ಕಣ್ತುಂಬಿಕೊಂಡಿದ್ದಾರೆ. ಇದರ ಪ್ರತಿಫಲವಾಗಿ ಶ್ರೀ ರಾಮಲಲ್ಲಾ ವಿಗ್ರಹ ಮೂಡಿಬಂದಿದೆ.
ಬೆಂಗಳೂರು
Liver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ
ಬೆಂಗಳೂರು: ಯಕೃತ್ತಿನಲ್ಲಿ ಕಂಡುಬರುವ ಗಂಟು, ಗೆಡ್ಡೆ ಹಾಗೂ ಅಸಹಜ ಬೆಳವಣಿಗೆಗಳಿಗೆ ಸಮನ್ವಯದ ತಪಾಸಣೆ, ನಿಖರ ರೋಗನಿರ್ಣಯ ಮತ್ತು ಸಮಗ್ರ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಫೋರ್ಟಿಸ್ ಹೆಲ್ತ್‌ಕೇರ್ ಜಾಲದ ಭಾಗವಾಗಿರುವ ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯಲ್ಲಿ ಕರ್ನಾಟಕದ ಮೊದಲ ಪ್ರತ್ಯೇಕ ಲಿವರ್ ನೊಡ್ಯೂಲ್ ಕ್ಲಿನಿಕ್ ಆರಂಭಿಸಲಾಗಿದೆ.
ರೋಗಿಗಳು ವಿವಿಧ ವೈದ್ಯರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಒಂದೇ ರೀತಿಯ ಪರೀಕ್ಷೆಗಳನ್ನು ಪುನರಾವರ್ತಿಸುವ ಅಗತ್ಯವನ್ನು ಕಡಿಮೆ ಮಾಡುವುದು ಕ್ಲಿನಿಕ್‌ನ ಪ್ರಮುಖ ಉದ್ದೇಶವಾಗಿದೆ. ಯಕೃತ್ತಿನ ತಜ್ಞರು, ಲಿವರ್ ಟ್ರಾನ್ಸ್‌ಪ್ಲಾಂಟ್ ಮತ್ತು ಎಚ್‌ಪಿಬಿ ಸರ್ಜರಿ ತಜ್ಞರು, ಜಠರ-ಕರುಳಿನ ತಜ್ಞರು, ರೇಡಿಯಾಲಜಿಸ್ಟ್‌ಗಳು, ಕ್ಯಾನ್ಸರ್ ತಜ್ಞರು, ರೋಗಶಾಸ್ತ್ರ ತಜ್ಞರು ಹಾಗೂ ಪೌಷ್ಟಿಕ ಆಹಾರ ತಜ್ಞರು ಒಂದೇ ತಂಡವಾಗಿ ರೋಗಿಯ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.
ವೈದ್ಯಕೀಯ ಜಠರರೋಗ ಶಾಸ್ತ್ರ, ಹೆಪಟಾಲಜಿ ಮತ್ತು ಸುಧಾರಿತ ಎಂಡೋಸ್ಕೋಪಿ ವಿಭಾಗದ ಮುಖ್ಯಸ್ಥ ಹಾಗೂ ಹಿರಿಯ ಸಲಹೆಗಾರ ಡಾ. ಆದರ್ಶ್ ಸಿ.ಕೆ. ಮಾತನಾಡಿ, ನಿಯಮಿತ ತಪಾಸಣೆ ವೇಳೆ ಯಕೃತ್ತಿನ ಗೆಡ್ಡೆಗಳು ಮತ್ತು ದ್ರವ ತುಂಬಿದ ಚೀಲಗಳು ಆಕಸ್ಮಿಕವಾಗಿ ಪತ್ತೆಯಾಗುತ್ತಿರುವುದು ಹೆಚ್ಚಾಗಿದೆ. ಇವುಗಳಲ್ಲಿ ಅನೇಕವು ಅಪಾಯಕಾರಿಯಲ್ಲದಿದ್ದರೂ, ಕೆಲವು ಯಕೃತ್ತಿನ ಕಾಯಿಲೆ ಅಥವಾ ಆರಂಭಿಕ ಹಂತದ ಕ್ಯಾನ್ಸರ್‌ನ ಸೂಚನೆಯಾಗಿರಬಹುದು. ಹೀಗಾಗಿ ಯಾವ ಗೆಡ್ಡೆಗೆ ಚಿಕಿತ್ಸೆ ಬೇಕು ಮತ್ತು ಯಾವುದನ್ನು ಮೇಲ್ವಿಚಾರಣೆ ಮಾಡಿದರೆ ಸಾಕು ಎಂಬುದನ್ನು ಗುರುತಿಸುವುದು ಪ್ರಮುಖ ಸವಾಲಾಗಿದೆ ಎಂದು ಹೇಳಿದ್ದಾರೆ.
ಲಿವರ್ ಟ್ರಾನ್ಸ್‌ಪ್ಲಾಂಟ್ ಮತ್ತು ಎಚ್‌ಪಿಬಿ ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಮಹೇಶ್ ಗೋಪಸೆಟ್ಟಿ, ಚಿಕಿತ್ಸೆಯ ನಿರ್ಧಾರವು ಗೆಡ್ಡೆಯ ಗಾತ್ರ ಮತ್ತು ಸ್ಥಳಕ್ಕೆ ಮಾತ್ರ ಸೀಮಿತವಾಗಿರದೆ ಯಕೃತ್ತಿನ ಕಾರ್ಯಕ್ಷಮತೆ ಹಾಗೂ ರೋಗಿಯ ಒಟ್ಟಾರೆ ಆರೋಗ್ಯವನ್ನೂ ಆಧರಿಸಿರಬೇಕು ಎಂದು ತಿಳಿಸಿದ್ದಾರೆ. ಸಮಗ್ರ ಮೌಲ್ಯಮಾಪನದಿಂದ ಸೂಕ್ತ ಚಿಕಿತ್ಸೆಯನ್ನು ಆಯ್ಕೆ ಮಾಡುವುದರ ಜೊತೆಗೆ, ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಯನ್ನು ತಪ್ಪಿಸಬಹುದು ಎಂದಿದ್ದಾರೆ.
ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಬಗಲಿ ಮಾತನಾಡಿ, ಕರ್ನಾಟಕದ ಮೊದಲ ಪ್ರತ್ಯೇಕ ಲಿವರ್ ನೊಡ್ಯೂಲ್ ಕ್ಲಿನಿಕ್ ಆರಂಭಿಸಿರುವುದು ರೋಗಿ ಕೇಂದ್ರಿತ ಹಾಗೂ ವಿವಿಧ ವೈದ್ಯಕೀಯ ವಿಭಾಗಗಳ ಸಮನ್ವಯದ ಆರೋಗ್ಯ ಸೇವೆ ಒದಗಿಸುವ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಅತ್ಯಾಧುನಿಕ ವೈದ್ಯಕೀಯ ಪರಿಣತಿಯನ್ನು ಒಂದೇ ವ್ಯವಸ್ಥೆಯಲ್ಲಿ ಒದಗಿಸುವ ಮೂಲಕ ಚಿಕಿತ್ಸಾ ಫಲಿತಾಂಶ ಮತ್ತು ರೋಗಿಗಳ ಅನುಭವ ಸುಧಾರಿಸುವುದು ಕ್ಲಿನಿಕ್‌ನ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಯಕೃತ್ತಿನ ಚೀಲಗಳು, ರಕ್ತನಾಳದ ಗೆಡ್ಡೆಗಳು, ಫೋಕಲ್ ನೊಡ್ಯುಲರ್ ಹೈಪರ್‌ಪ್ಲಾಸಿಯಾ, ಯಕೃತ್ತಿನ ಕ್ಯಾನ್ಸರ್, ದೇಹದ ಇತರ ಭಾಗಗಳಿಂದ ಯಕೃತ್ತಿಗೆ ಹರಡಿದ ಕ್ಯಾನ್ಸರ್ ಹಾಗೂ ಸಂಕೀರ್ಣ ಯಕೃತ್ತಿನ ಗೆಡ್ಡೆಗಳಿಗೆ ಇಲ್ಲಿ ಸಮಗ್ರ ಮೌಲ್ಯಮಾಪನ ಮತ್ತು ಚಿಕಿತ್ಸಾ ಸಲಹೆ ದೊರೆಯಲಿದೆ. ರೋಗನಿರ್ಣಯದ ನಿಖರತೆ ಹೆಚ್ಚಿಸುವುದು ಮತ್ತು ಚಿಕಿತ್ಸೆಯಲ್ಲಿನ ವಿಳಂಬ ಕಡಿಮೆ ಮಾಡುವುದು ಕ್ಲಿನಿಕ್‌ನ ಪ್ರಮುಖ ಗುರಿಯಾಗಿದೆ.
ದೇಶ
Nepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
ಬಹ್ರೈಚ್: Nepal flood ದಲ್ಲಿ ಉಂಟಾದ ಭೀಕರ ಜಲಪ್ರಳಯದ ರಭಸಕ್ಕೆ ಸಿಲುಕಿದ್ದ 5 ಕಾಡಾನೆಗಳ ಹಿಂಡು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಟರ್ನಿಯಾಘಾಟ್ ಬಳಿಯ ಗಿರ್ಜಾಪುರಿ ಬ್ಯಾರೇಜ್ ಸಮೀಪ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿದೆ. ಆಗಸ್ಟ್ 25ರಂದು ನಡೆದ ಈ ಘಟನೆಯಲ್ಲಿ ಮೂರು ವಯಸ್ಕ ಆನೆಗಳು ಹಾಗೂ ಎರಡು ಮರಿಗಳು ಪ್ರವಾಹದ ಸುಳಿಗೆ ಸಿಲುಕಿದ್ದವು.
ಕೌಡಿಯಾಲ ನದಿಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಆನೆಗಳ ಹಿಂಡು ಸಂಕಷ್ಟಕ್ಕೆ ಸಿಲುಕಿತ್ತು. ನೀರಿನ ರಭಸ ಹೆಚ್ಚಿದ್ದರಿಂದ ಆನೆ ಮರಿಗಳಿಗೆ ತೇಲುವುದು ಕಷ್ಟವಾಗಿತ್ತು. ಈ ವೇಳೆ ವಯಸ್ಕ ಆನೆಗಳು ಮರಿಗಳನ್ನು ಸುತ್ತುವರಿದು ನಿಂತು, ಅವುಗಳನ್ನು ಪ್ರವಾಹದ ರಭಸದಿಂದ ರಕ್ಷಿಸಲು ಪ್ರಯತ್ನಿಸಿರುವುದು ಗಮನ ಸೆಳೆದಿದೆ.
ಮರಿಗಳನ್ನು ಬಿಟ್ಟು ಕದಲದ ದೊಡ್ಡ ಆನೆಗಳು
ಪ್ರವಾಹದ ನೀರು ಅಪಾಯಕಾರಿಯಾಗಿ ಹರಿಯುತ್ತಿದ್ದರೂ ವಯಸ್ಕ ಆನೆಗಳು ಮರಿಗಳನ್ನು ಏಕಾಂಗಿಯಾಗಿ ಬಿಡಲಿಲ್ಲ. ಅವುಗಳ ಸುತ್ತಲೂ ನಿಂತು ಮರಿಗಳಿಗೆ ರಕ್ಷಣೆ ನೀಡುವ ಮೂಲಕ ಸುರಕ್ಷಿತವಾಗಿ ದಡ ಸೇರುವಂತೆ ನೆರವಾದವು.
ಈ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಗಮನಕ್ಕೂ ಬಂದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.
ಬ್ಯಾರೇಜ್ ಗೇಟ್‌ಗಳನ್ನು ಬಂದ್ ಮಾಡಿದ ಅಧಿಕಾರಿಗಳು
ಆನೆಗಳ ಹಿಂಡು ಅಪಾಯದಲ್ಲಿರುವುದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಬಳಿಕ ಗಿರ್ಜಾಪುರಿ ಬ್ಯಾರೇಜ್‌ನ ಗೇಟ್‌ಗಳನ್ನು ಮುಚ್ಚಲಾಗಿದ್ದು, ನೀರಿನ ಹರಿವಿನ ವೇಗವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ನೀರಿನ ರಭಸ ಕಡಿಮೆಯಾದ ಬಳಿಕ ವಯಸ್ಕ ಆನೆಗಳು ಚೇತರಿಸಿಕೊಂಡಿವೆ. ನಂತರ ಅವು ಎರಡು ಆನೆ ಮರಿಗಳನ್ನು ಸುರಕ್ಷಿತವಾಗಿ ದಂಡೆಯತ್ತ ಕರೆದೊಯ್ದಿವೆ.
ಸುರಕ್ಷಿತವಾಗಿ ಕಾಡಿಗೆ ಮರಳಿದ ಆನೆಗಳು
ಆನೆಗಳ ಹಿಂಡು ದಡ ತಲುಪಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಬ್ಯಾರೇಜ್ ಪ್ರದೇಶದಿಂದ ದೂರಕ್ಕೆ ಕಳುಹಿಸಿ ಸುರಕ್ಷಿತವಾಗಿ ಕಾಡಿನತ್ತ ಸಾಗುವಂತೆ ಮಾಡಿದ್ದಾರೆ.
ಆಪತ್ತಿನ ಸಮಯದಲ್ಲೂ ಮರಿಗಳನ್ನು ಬಿಟ್ಟು ಹೋಗದೆ ಅವುಗಳನ್ನು ಸುತ್ತುವರಿದು ರಕ್ಷಿಸಿದ ಆನೆಗಳ ವರ್ತನೆ ಸಾರ್ವಜನಿಕರ ಗಮನ ಸೆಳೆದಿದೆ. ಮತ್ತೊಂದೆಡೆ, ಪರಿಸ್ಥಿತಿಯನ್ನು ತ್ವರಿತವಾಗಿ ಅರಿತು ನೀರಾವರಿ ಇಲಾಖೆಯ ಸಹಕಾರದೊಂದಿಗೆ ಬ್ಯಾರೇಜ್ ಗೇಟ್‌ಗಳನ್ನು ಬಂದ್ ಮಾಡಿ ಆನೆಗಳ ಜೀವ ಉಳಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಗೂ ಮೆಚ್ಚುಗೆ ವ್ಯಕ್ತವಾಗಿದೆ.
ರಾಜ್ಯ
Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಫಲವತ್ತಾದ ಜಮೀನು ಕೈಗಾರಿಕೆಗೆ?
ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.
ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?
ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.
165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ
-
ಬೆಂಗಳೂರು8 ಗಂಟೆಗಳು agoBengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್ಗೆ ಲಕ್ಷಕ್ಕೂ ಹೆಚ್ಚು!
-
ಬೆಂಗಳೂರು11 ಗಂಟೆಗಳು agoNalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
-
ದೇಶ11 ಗಂಟೆಗಳು agoMantralaya: ಇಂದಿನಿಂದ ಸಪ್ತರಾತ್ರೋತ್ಸವ ಆರಂಭ; ಮಹಾರಥೋತ್ಸವ, ತೆಪ್ಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ
-
ಬೆಂಗಳೂರು12 ಗಂಟೆಗಳು agoEid Milad ಮೆರವಣಿಗೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಹಲವರ ವಿರುದ್ಧ FIR, 6 ಮಂದಿ ಬಂಧನ
-
ಬೆಂಗಳೂರು10 ಗಂಟೆಗಳು agoBengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
-
ದೇಶ9 ಗಂಟೆಗಳು agoNepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
-
ರಾಜ್ಯ10 ಗಂಟೆಗಳು agoMysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
-
ಬೆಂಗಳೂರು12 ಗಂಟೆಗಳು agoAnand Sweets: ಸಿಹಿ ತಿನ್ನುವಾಗ ನಾಲಿಗೆ, ಹಲ್ಲಿಗೆ ಗಾಯ; ₹2,050 ಖರೀದಿಗೆ ಕಾನೂನು ನೋಟಿಸ್
