ಬೆಂಗಳೂರು
ನಕಲಿ ನೋಂದಣಿ ಮಾಡಿಸಿಕೊಂಡ ಕೆಂಗೇರಿ ಬಿಡಿಎ ಅಪಾರ್ಟ್ಮೆಂಟ್ ಮಾಲೀಕರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು: ಫ್ಲ್ಯಾಟ್ ಗಳ ನಕಲಿ ನೋಂದಣಿ ಮಾಡಿಸಿಕೊಂಡ ಆರೋಪದ ಮೇಲೆ ಕೆಂಗೇರಿಯಲ್ಲಿರುವ ಬಿಡಿಎ ವಸತಿ ಅಪಾರ್ಟ್‌ಮೆಂಟ್ ಸಮುಚ್ಚಯದ ಕೆಲವು ಫ್ಲ್ಯಾಟ್ ಮಾಲೀಕರ ವಿರುದ್ಧ ಮತ್ತು ‘ಕೈಲಾಶ್ ಪ್ರಾಪರ್ಟೀಸ್’ ವಿರುದ್ಧ ಕೆಂಗೇರಿ ಸಬ್ ರಿಜಿಸ್ಟ್ರಾರ್ ಕಚೇರಿಯ ಉನ್ನತ ಅಧಿಕಾರಿಯೊಬ್ಬರು ಕೇಸ್ ದಾಖಲಿಸಿದ್ದಾರೆ. ಲೋಕಾಯುಕ್ತರನ್ನು ಸಂಪರ್ಕಿಸುವುದು ಸೇರಿದಂತೆ ಮತ್ತೊಬ್ಬ ಫ್ಲ್ಯಾಟ್ ಮಾಲೀಕ ಕೆಎಸ್ ರವಿಕುಮಾರ್ ಎಂಬ ವಕೀಲರ ಸತತ ಎಂಟು ವರ್ಷಗಳ ಹೋರಾಟದ ನಂತರ ವಂಚಕರ ವಿರುದ್ಧ ಕೊನೆಗೂ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಕರ್ನಾಟಕ ನೋಂದಣಿ ಕಾಯಿದೆ 1908 (ಸೆಕ್ಷನ್ 82 ಮತ್ತು 83) ಅಡಿಯಲ್ಲಿ 2024 ರ ಜನವರಿ 2 ರಂದು ಹಿರಿಯ ಅಧಿಕಾರಿ ವೈ.ಎಚ್.ವೆಂಕಟೇಶ್ ಅವರು ಪ್ರಕರಣ ದಾಖಲಿಸಿದ್ದಾರೆ. ಫ್ಲಾಟ್ ಮಾಲೀಕ ಗಣಪತಿ ಹೆಗಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ.
ರವಿಕುಮಾರ್, “ಹೆಗ್ಡೆ ಅವರು ಅಕ್ಟೋಬರ್ 16, 2015 ರಂದು ಅಪಾರ್ಟ್‌ಮೆಂಟ್‌ಗೆ ಡಿಕ್ಲರೇಶನ್ ಡೀಡ್ ಅನ್ನು ನೋಂದಾಯಿಸಿಕೊಂಡಿದ್ದಾರೆ. ಈ ಡೀಡ್ ನಿರ್ದಿಷ್ಟ ಆಸ್ತಿಯಲ್ಲಿರುವ ಎಲ್ಲಾ ಆಸ್ತಿಗಳನ್ನು ನಿರ್ದಿಷ್ಟಪಡಿಸುತ್ತದೆ ಮತ್ತು ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಕಾಯಿದೆ, 1972 ರ ಸೆಕ್ಷನ್ 13 (2) ರ ಪ್ರಕಾರ ಮಾಲೀಕರು ಅಥವಾ ಪ್ರವರ್ತಕರು ನೋಂದಣಿ ಮಾಡಬಹುದು. ಆದರೆ ಫ್ಲಾಟ್ ಖರೀದಿದಾರರು ಇದನ್ನು ಮಾಡುವುದು ಕಾನೂನುಬಾಹಿರವಾಗಿದೆ ಎಂದು ಹೇಳಿದ್ದಾರೆ. ಬಿಡಿಎ ಕಾಂಪ್ಲೆಕ್ಸ್‌ನಲ್ಲಿ 300 ಫ್ಲ್ಯಾಟ್‌ಗಳಿದ್ದು, ಬಿಡಿಎ ಇದನ್ನು ನೋಂದಣಿ ಮಾಡಬೇಕಿತ್ತು. ಆದರೆ ಬಿಡಿಎ ಆ ಕೆಲಸ ಮಾಡಲಿಲ್ಲ ಎಂದು ರವಿ ಕುಮಾರ್ ಅವರು ಹೇಳಿದ್ದಾರೆ.
ಈ ಸಂಬಂಧ ವಕೀಲರು ಆಗಿರುವ ರವಿಕುಮಾರ್ ಅವರು, 2022 ರ ಡಿಸೆಂಬರ್‌ನಲ್ಲಿ ಜಯನಗರದ ಜಿಲ್ಲಾ ನೋಂದಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಿದರು ಮತ್ತು ಈ ಕುರಿತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಆದರೆ ಅವರು ಕ್ರಮ ಕೈಗೊಂಡಿಲ್ಲ. ಹೀಗಾಗಿ ಕಳೆದ ಜೂನ್ 2023 ರಲ್ಲಿ ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಶನ್(ಐಜಿಆರ್) ಅವರನ್ನು ಸಂಪರ್ಕಿಸಿದ್ದಾರೆ. ಐಜಿಆರ್ ಕೂಡ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅಂತಿಮವಾಗಿ ನಾನು ಲೋಕಾಯುಕ್ತರನ್ನು ಸಂಪರ್ಕಿಸಿ ದೂರು ದಾಖಲಿಸಿದೆ ಎಂದಿದ್ದಾರೆ. ಬಳಿಕ ಐಜಿಆರ್ ಜಿಲ್ಲಾ ನೋಂದಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಿದ್ದು, ನಂತರ ಸ್ಥಳೀಯ ಕೆಂಗೇರಿ ಕಚೇರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಂತಿಮವಾಗಿ, ಜನವರಿ 2 ರಂದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಕೆಲವು ಫ್ಲಾಟ್ ಮಾಲೀಕರು ಗುಂಪುಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ರವಿಕುಮಾರ್, ಈ ಕಾನೂನುಬಾಹಿರ ಚಟುವಟಿಕೆಯನ್ನು ಪ್ರಶ್ನಿಸಿದ್ದಕ್ಕೆ ತನ್ನ ಮನೆಗೆ ವಿದ್ಯುತ್ ಮತ್ತು ನೀರಿನ ಪೂರೈಕೆಯನ್ನು ಹಲವು ಬಾರಿ ಕಡಿತಗೊಳಿಸಲಾಯಿತು ಮತ್ತು ನಿರ್ವಹಣೆ ಶುಲ್ಕವನ್ನು ಅಗತ್ಯಕ್ಕಿಂತ ಹೆಚ್ಚು ವಿಧಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.
ದೇಶ
ಕಾಂಗ್ರೆಸ್‌ನಲ್ಲಿ ಭೂಕಂಪ: ನಜೀರ್ ಅಹ್ಮದ್‌ಗೆ ಸುರ್ಜೇವಾಲಾ ಅಲ್ಟಿಮೇಟಂ
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಳಅಸಮಾಧಾನ ತೀವ್ರಗೊಂಡಿರುವ ನಡುವೆಯೇ, ರಾಜ್ಯ ಉಸ್ತುವಾರಿ Randeep Singh Surjewala ಅವರು ಸಿಎಂ ರಾಜಕೀಯ ಕಾರ್ಯದರ್ಶಿ Naseer Ahmed ಅವರಿಗೆ ಕಠಿಣ ಡೆಡ್‌ಲೈನ್ ನೀಡಿದ್ದಾರೆ.
ಇಂದು (ಏಪ್ರಿಲ್ 13) ಸಂಜೆಯೊಳಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿರುವ ಸುರ್ಜೇವಾಲಾ, ಸಮಯಕ್ಕೆ ರಾಜೀನಾಮೆ ನೀಡದಿದ್ದರೆ ಅವರನ್ನು ಸ್ಥಾನದಿಂದ ವಜಾಗೊಳಿಸಲು ಮುಖ್ಯಮಂತ್ರಿ Siddaramaiah ಅವರಿಗೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, “ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ನೀಡಿಲ್ಲ. ಮುಂದಿನ ದಿನಗಳಲ್ಲಿ ಕೊಡಬಹುದು. ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಕೆಲವು ನಾಯಕರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ನಸೀರ್ ಅಹ್ಮದ್ ಅವರು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆಂದು ಸಿಎಂ ಹೇಳಿದ್ದಾರೆ.
ಇದಕ್ಕೂ ಮೊದಲು ಸುರ್ಜೇವಾಲಾ ಅವರು ಸಚಿವ Zameer Ahmed Khan, Abdul Jabbar ಹಾಗೂ ನಸೀರ್ ಅಹ್ಮದ್ ವಿರುದ್ಧ ವರದಿ ಸಲ್ಲಿಸಿದ್ದರು. ಈಗಾಗಲೇ ಅಬ್ದುಲ್ ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದನ್ನು D. K. Shivakumar ಅಂಗೀಕರಿಸಿದ್ದಾರೆ.
ಈ ಬೆಳವಣಿಗೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ದೇಶ
ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ G. Parameshwara ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅದೇನು ಗ್ಯಾಂಬ್ಲಿಂಗ್ ಅಲ್ಲ, ಶಾಸಕರು ತಮ್ಮ ಅರ್ಹತೆಯ ಆಧಾರದಲ್ಲಿ ಕೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.
ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನಕ್ಕಾಗಿ ಕೇಳುವುದು ಸಹಜ. ಆದರೆ ಅಂತಿಮ ನಿರ್ಧಾರ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಕೈಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಪಕ್ಷ ಪುನಾರಚನೆ ಕುರಿತು ಮಾತನಾಡಿದ ಪರಮೇಶ್ವರ್, “ನಾಯಕತ್ವ ವಿಚಾರವಾಗಲಿ, ಸಚಿವ ಸಂಪುಟ ಪುನಾರಚನೆ ಆಗಲಿ, ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈಗ ಪುನಾರಚನೆ ಚರ್ಚೆ ನಡೆಯುತ್ತಿದೆ. ಅಧ್ಯಕ್ಷ ಸ್ಥಾನ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇವೆ” ಎಂದು ಹೇಳಿದರು.
ಇನ್ನೂ ದಾವಣಗೆರೆ ಕ್ಷೇತ್ರದಲ್ಲಿ Abdul Jabbar ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಅವರು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಉಲ್ಲೇಖಿಸಿದರು. D. K. Shivakumar ಹೊಸ ಸಮಿತಿ ರಚನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಪುನಾರಚನೆ ನಡೆದರೆ ಹಿರಿಯರು ಸ್ಥಾನ ಬಿಟ್ಟುಕೊಡಬೇಕಾದರೆ ನಾವು ಒಪ್ಪಲೇಬೇಕು. ಹೈಕಮಾಂಡ್ ತೀರ್ಮಾನಕ್ಕೆ ಯಾರೂ ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ದೇಶ
ಬೆಂಗಳೂರು ಬಿಸಿ ಏರಿಕೆ: 38 ಡಿಗ್ರಿ ತಲುಪುವ ಸಾಧ್ಯತೆ
ಬೆಂಗಳೂರು: ಬೇಸಿಗೆ ಆರಂಭವಾಗುತ್ತಿದ್ದಂತೆ Bengaluru ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ ಏರಿಕೆ ಕಂಡುಬರುತ್ತಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಬಿಸಿಲಬ್ಬರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು India Meteorological Department (IMD) ಎಚ್ಚರಿಕೆ ನೀಡಿದೆ.
ಈಗಾಗಲೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸನಿಹ ತಲುಪಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಸದ್ಯ ತಾಪಮಾನ 35 ಡಿಗ್ರಿ ಸುತ್ತಮುತ್ತ ದಾಖಲಾಗುತ್ತಿದ್ದು, ಮುಂದಿನ ಐದು ದಿನಗಳಲ್ಲಿ 37 ರಿಂದ 38 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ತೀವ್ರ ಬಿಸಿಲು ಇರುವುದರಿಂದ ಅನಗತ್ಯ ಹೊರಗಡೆ ಓಡಾಟವನ್ನು ತಪ್ಪಿಸಿ ಆರೋಗ್ಯದ ಕಡೆ ಹೆಚ್ಚು ಗಮನಹರಿಸಲು ಸೂಚಿಸಲಾಗಿದೆ.
ಇನ್ನೂ ಉತ್ತರ ಒಳನಾಡಿನ ಬೀದರ್, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ತಾಪಮಾನ 42 ರಿಂದ 44 ಡಿಗ್ರಿವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲೂ 2 ಡಿಗ್ರಿ ಏರಿಕೆ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲೂ 2 ರಿಂದ 3 ಡಿಗ್ರಿವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು IMD ತಿಳಿಸಿದೆ.
-
ದೇಶ21 hours agoಡಿಕೆ ಶಿವಕುಮಾರ್ ದೊಡ್ಡ ನಿರ್ಧಾರ: ಸಮಿತಿ ಡಿಸ್ಮಿಸ್!
-
ದೇಶ21 hours agoಸೌದಿ ರಕ್ಷಣೆಗೆ ಪಾಕ್ ಸೇನೆ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಹೆಚ್ಚಳ
-
ದೇಶ21 hours agoAmarnath Yatra 2026: ಬಾಬಾ ಬರ್ಫಾನಿ ದರ್ಶನಕ್ಕೆ ಸಜ್ಜಾಗಿ: ಅಮರನಾಥ ಯಾತ್ರೆ ಸಂಪೂರ್ಣ ಮಾಹಿತಿ
-
ಚುನಾವಣೆ21 hours agoದಾವಣಗೆರೆ ಟಿಕೆಟ್ ವಿವಾದ: ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೇ?
-
ದೇಶ4 hours agoಅಲದಾಳ ಸಭೆ: ದಡ್ಡಿ ಗ್ರಾಮದ ಸಮಸ್ಯೆ ಫೋಕಸ್ನಲ್ಲಿ
-
ಚುನಾವಣೆ3 hours agoಸೈಕಲ್ ರೈಡ್ ವೇಳೆ ಶಾಕ್: ಬಾಂಬ್ ಅನ್ನಿಸಿ ಓಡಿದ ದಳಪತಿ ವಿಜಯ್
-
ದೇಶ22 hours ago8 ದಶಕಗಳ ಗಾನಯಾನ ಅಂತ್ಯ: ಆಶಾ ಭೋಸ್ಲೆ ಇನ್ನು ಇಲ್ಲ
-
ಕ್ರೀಡೆ4 hours agoIPL 2026: ಮುಂಬೈ ಇಂಡಿಯನ್ಸ್ ಸಂಕಷ್ಟದಲ್ಲಿ! ಹಾರ್ದಿಕ್ ಪಾಂಡ್ಯ ಆತ್ಮಾವಲೋಕನದ ಮಾತು
