ಚುನಾವಣೆ
ಬಿಜೆಪಿ ಸಂಸದರು ಗಂಡಸರಲ್ಲ: ದೆಹಲಿಗೆ ಹೋಗಿ ಟಿಎ-ಡಿಎ ತೆಗೆದುಕೊಂಡು ಬರೋದಷ್ಟೇ ಇವರ ಕೆಲಸ; ಬಾಲಕೃಷ್ಣ
ರಾಮನಗರ: ಬಿಜೆಪಿ ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್ಗಳು. ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತೆಗೆದುಕೊಂಡು ಬರೋದು ಅಷ್ಟೇ ಇವರ ಕೆಲಸ ಎಂದು ಮಾಗಡಿ ಶಾಸಕ ಹೆಚ್ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೇಂದ್ರದಿಂದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯಲ್ಲಿ ಹೋರಾಟ ವಿಚಾರ ಕುರಿತು ರಾಮನಗರದ ನಾಗರಕಲ್ಲುದೊಡ್ಡಿ ಗ್ರಾಮದಲ್ಲಿ ಮಾತನಾಡಿದ ಅವರು, ಹೆಚ್ಚು ಟ್ಯಾಕ್ಸ್ ಕಟ್ಟುವ ಎರಡನೇ ರಾಜ್ಯ ನಮ್ಮ ಕರ್ನಾಟಕ. ಆದರೆ ನಮಗೆ ಕೊಡಬೇಕಾದ ಅನುದಾನವನ್ನು ಕೇಂದ್ರ ನಮಗೆ ಕೊಡುತ್ತಿಲ್ಲ.
ಬಿಜೆಪಿಯ ಸಂಸದರು ನರೇಂದ್ರ ಮೋದಿಮುಂದೆ ಕೂರೋದು ಇಲ್ಲ, ಏಳೋದು ಇಲ್ಲ. ಕೇವಲ ಮೋದಿ ಹೆಸರಲ್ಲಿ ಗೆಲ್ಲುತ್ತಾರೆ. ಅವರಿಗೆ ವೈಯಕ್ತಿಕ ವರ್ಚಸ್ಸು ಇಲ್ಲ. ಪಕ್ಕದ ತಮಿಳುನಾಡು ತನ್ನ ಹಕ್ಕಿಗಾಗಿ ಮಾಡುವ ಹೋರಾಟವನ್ನ ನೋಡಿ ಕಲಿಯಲಿ ಎಂದು ಟೀಕೆ ಮಾಡಿದರು.
ಬಿಜೆಪಿ ಎಂಪಿಗಳು, ಮಂತ್ರಿಗಳು ರಾಜ್ಯದ ಪರ ಧ್ವನಿ ಎತ್ತಿಲ್ಲ. ಹಾಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಪಾಪ ನಮ್ಮ ಹೋರಾಟ ನೋಡಿ ಬಿಜೆಪಿಯ ಗಂಡಸರು ಹೋರಾಟ ಮಾಡುತ್ತಾರಾ ಎಂದು ನೋಡೋಣ. ಮಾಡಿಲ್ಲ ಅಂದರೆ ಬಿಜೆಪಿಯಲ್ಲಿ ಯಾರೂ ಗಂಡಸರು ಇಲ್ಲ ಎಂದರ್ಥ. ಈಗಿರುವ ಬಿಜೆಪಿ ಎಂಪಿಗಳು ಯಾರು ಗಂಡಸರಲ್ಲ ಎಂದು ಬಿಜೆಪಿ ಸಂಸದರನ್ನ ಟೀಕಿಸುವ ಭರದಲ್ಲಿ ಮಾಗಡಿ ಶಾಸಕ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಬಿಜೆಪಿ ಸಂಸದರೆಲ್ಲಾ ಶೋ ಪೀಸ್ ಗಳು. ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತಕೊಂಡು ಬರೋದು ಅಷ್ಟೇ ಇವರ ಕೆಲಸ. ಬಿಜೆಪಿ ಎಂಪಿಗಳು, ಮಂತ್ರಿಗಳು ರಾಜ್ಯದ ಧ್ವನಿ ಎತ್ತಿಲ್ಲ. ಹಾಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದರು.
ಪಾಪ, ನಮ್ಮ ಹೋರಾಟ ನೋಡಿಯಾದರೂ ಬಿಜೆಪಿಯ ಗಂಡಸರು ಹೋರಾಟ ಮಾಡ್ತಾರಾ ನೋಡೋಣ. ಇದರ ಅರ್ಥ ಬಿಜೆಪಿಯಲ್ಲಿ ಯಾರು ಗಂಡಸರು ಇಲ್ಲ ಅಂತ.! ಈಗಿರುವ ಬಿಜೆಪಿ ಎಂಪಿಗಳು ಯಾರು ಗಂಡಸರಲ್ಲ ಎಂದು ಅರ್ಥ ಎಂದು ಬಿಜೆಪಿ ಸಂಸದರ ವಿರುದ್ಧ ಬಾಲಕೃಷ್ಣ ವಾಗ್ದಾಳಿ ನಡೆಸಿದ್ದರು.
ಚುನಾವಣೆ
TN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
ಚೆನ್ನೈ: ಮುಂದಿನ ವಾರ ಬಿಡುಗಡೆಯಾಗಲಿರುವ ತಮಿಳು ಸಿನಿಮಾ TN 2026 – ತಂಗೈ ನಚ್ಚಥಿರಂ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾದ ಬಳಿಕ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟೀಸರ್ನಲ್ಲಿ ನಟ Nataraj (Natti) ಅಭಿನಯಿಸಿರುವ “ಗೋಲ್ಡನ್ ಸ್ಟಾರ್ ಗುಲ್ಕಂದ್ ಕುಮಾರ್” ಎಂಬ ಪಾತ್ರ ರಾಜಕೀಯಕ್ಕೆ ಪ್ರವೇಶಿಸುವುದನ್ನು ತೋರಿಸಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.
ಟೀಸರ್ ವೈರಲ್ ಆದ ತಕ್ಷಣ, Tamilaga Vettri Kazhagam (ಟಿವಿಕೆ) ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ Vijay ಅವರನ್ನು ಗುರಿಯಾಗಿಸಿಕೊಂಡು ಟೀಸರ್ ರೂಪಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.
ಟೀಸರ್ನಲ್ಲಿ ಗುಲ್ಕಂದ್ ಕುಮಾರ್ ಪಾತ್ರವು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ, ವಿಜಯ್ ಅವರಂತೆಯೇ ‘ಸಾಲ್ಟ್ ಅಂಡ್ ಪೆಪ್ಪರ್’ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಅವರ ನಡಿಗೆ ಮತ್ತು ಜನರತ್ತ ಕೈ ಬೀಸುವ ಶೈಲಿಯನ್ನು ಅನುಕರಿಸಿರುವುದು ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೆ, ನಟ Redin Kingsley ಅವರ ಪಾತ್ರವೊಂದು ವೇದಿಕೆಯಲ್ಲಿ “ಹೇ ಮೂವಿ-ಬಾಯ್…” ಎಂದು ಗೇಲಿ ಮಾಡುವ ಸಂಭಾಷಣೆ ಕೂಡ ಟೀಕೆಗೆ ಗುರಿಯಾಗಿದೆ.
ಟೀಸರ್ ಕೊನೆಯಲ್ಲಿ ಕೇಳಿಬರುವ “ಓಂ ಶಕ್ತಿ ಪರಾಶಕ್ತಿ” ಘೋಷಣೆ ಕೂಡ ವಿಜಯ್ ಇತ್ತೀಚೆಗೆ ರಾಜಕೀಯ ವೇದಿಕೆಯಲ್ಲಿ ಬಳಸಿದ ನುಡಿಗಟ್ಟನ್ನು ಹೋಲುತ್ತದೆ ಎನ್ನಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ Aadhav Arjun, “ಇದು ವಿಜಯ್ ವರ್ಚಸ್ಸಿಗೆ ಧಕ್ಕೆ ತರಲು Dravida Munnetra Kazhagam (ಡಿಎಂಕೆ) ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಪಿತೂರಿ” ಎಂದು ಆರೋಪಿಸಿದ್ದಾರೆ. ಜನರು ಇಂತಹ ಚಿತ್ರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.
Umapathy Ramaiah ನಿರ್ದೇಶನದ ಈ ಚಿತ್ರದಲ್ಲಿ Thambi Ramaiah, M. S. Bhaskar, Ilavarasu, Yashika Aannand ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಲಿರುವ ಈ ಚಿತ್ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.
ಚುನಾವಣೆ
“ನಾಲ್ಕು ಮದುವೆಗೆ ಬ್ರೇಕ್” – ಶಾ ಘೋಷಣೆ ಸಂಚಲನ
ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯ ಕಾವು ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಗೃಹ ಸಚಿವ Amit Shah ಮಹತ್ವದ ಘೋಷಣೆ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಗೋಲ್ಪಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾ, “ಅಕ್ರಮ ನುಸುಳುಕೋರರು ನಾಲ್ಕು ಮದುವೆಯಾಗುವುದನ್ನು ತಡೆಯಲು ಯುಸಿಸಿ ಅಗತ್ಯ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು. ಪ್ರಧಾನಿ Narendra Modi ಮತ್ತು ಅಸ್ಸಾಂ ಮುಖ್ಯಮಂತ್ರಿ Himanta Biswa Sarma ಬುಡಕಟ್ಟು ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿದ್ದಾರೆ ಎಂದರು.
ಬುಡಕಟ್ಟು ಪ್ರದೇಶಗಳಲ್ಲಿ ಯುಸಿಸಿ ಜಾರಿಯಾಗುವುದಿಲ್ಲ ಎಂಬುದನ್ನು ಶಾ ಸ್ಪಷ್ಟಪಡಿಸಿ, ಕಾಂಗ್ರೆಸ್ ಹರಡುತ್ತಿರುವ ಗಾಳಿಸುದ್ದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಬುಡಕಟ್ಟು ಪ್ರದೇಶಗಳನ್ನು ಯುಸಿಸಿಯಿಂದ ಹೊರಗಿಡಲಾಗುತ್ತದೆ” ಎಂದು ಹೇಳಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “70 ವರ್ಷ ಆಡಳಿತ ನಡೆಸಿದರೂ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿಯಾಗಿಸಲು ಸಾಧ್ಯವಾಗಲಿಲ್ಲ. ಆದರೆ ಮೋದಿ ನಾಯಕತ್ವದಲ್ಲಿ ಅದು ಸಾಧ್ಯವಾಯಿತು” ಎಂದು ಟೀಕಿಸಿದರು.
Assam ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಎರಡು ಅವಧಿಗೆ ಮುಖ್ಯಮಂತ್ರಿ ಆಗಿರುವ ಹಿಮಂತ ಬಿಸ್ವಾ ಶರ್ಮಾ ಮತ್ತೆ ಅಧಿಕಾರಕ್ಕೇರಲು ಯತ್ನಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರ ಮರುಪಡೆಯಲು ಹೋರಾಟ ನಡೆಸುತ್ತಿದೆ.
ಒಟ್ಟಿನಲ್ಲಿ, ಯುಸಿಸಿ ವಿಚಾರ ಚುನಾವಣೆಯಲ್ಲಿ ಪ್ರಮುಖ ಅಸ್ತ್ರವಾಗಿದ್ದು, ಅಸ್ಸಾಂ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಚುನಾವಣೆ
‘ಸಿಂಗಂ’ ಅಣ್ಣಾಮಲೈ ನಡೆಗೆ ಅಭಿಮಾನಿಗಳ ಸಲಾಂ
ಕಣ್ಣೂರು: ತಮಿಳುನಾಡಿನಲ್ಲಿ ಬಿಜೆಪಿ ಪ್ರಚಾರಕ್ಕೆ ಸಂಪೂರ್ಣ ಶಕ್ತಿ ಹಾಕುವುದಾಗಿ K. Annamalai ಘೋಷಿಸಿದ್ದು, ಅವರ ಪಕ್ಷನಿಷ್ಠೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡ್ ನೀಡಿದ ಜವಾಬ್ದಾರಿಯಂತೆ ರಾಜ್ಯದ ಮೂಲೆಮೂಲೆಗೂ ತೆರಳಿ ಬಿಜೆಪಿ ಮತ್ತು ಎನ್ಡಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಕೇರಳದ ಕಣ್ಣೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, “ಪಕ್ಷ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದು ನನ್ನ ಕರ್ತವ್ಯ. 7ರಿಂದ 23ರವರೆಗೆ ತಮಿಳುನಾಡಿನಾದ್ಯಂತ ಪ್ರಚಾರ ನಡೆಸುತ್ತೇನೆ” ಎಂದು ಸ್ಪಷ್ಟಪಡಿಸಿದರು. ಪುದುಚೇರಿ ಮತ್ತು ಕೇರಳದಲ್ಲಿಯೂ ಪ್ರಚಾರದ ಹೊಣೆಗಾರಿಕೆ ನೀಡಲಾಗಿದೆ ಎಂದೂ ಹೇಳಿದರು.
ಟಿಕೆಟ್ ಸಿಗದಿದ್ದರೂ ಯಾವುದೇ ಅಸಮಾಧಾನ ವ್ಯಕ್ತಪಡಿಸದೇ ಪಕ್ಷದ ಪರವಾಗಿ ನಿಂತಿರುವ ಅಣ್ಣಾಮಲೈ ನಡೆ, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. Bharatiya Janata Party ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರು ಇರದಿದ್ದರೂ, ಪ್ರಚಾರಕ್ಕೆ ಸಜ್ಜಾಗಿರುವುದು ಅವರ ಬದ್ಧತೆಯನ್ನು ತೋರಿಸುತ್ತದೆ.
ಅಣ್ಣಾಮಲೈ ಅವರ ಈ ನಿರ್ಧಾರಕ್ಕೆ ಅಭಿಮಾನಿಗಳಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವರು ಅವರನ್ನು “ಸಿಂಗಂ” ಎಂದು ಕೊಂಡಾಡುತ್ತಿದ್ದು, ಪಕ್ಷನಿಷ್ಠೆ ಮತ್ತು ಶಿಸ್ತಿನ ಉದಾಹರಣೆಯಾಗಿ ಗುರುತಿಸಿದ್ದಾರೆ. ಇತ್ತೀಚಿನ ರಾಜಕೀಯದಲ್ಲಿ ಟಿಕೆಟ್ ಸಿಗದಿದ್ದರೆ ಪಕ್ಷಾಂತರ ಮಾಡುವ ಪ್ರವೃತ್ತಿ ಹೆಚ್ಚಿರುವ ನಡುವೆಯೇ, ಅವರ ನಿಲುವು ವಿಭಿನ್ನವಾಗಿ ಕಾಣುತ್ತಿದೆ.
ಒಟ್ಟಿನಲ್ಲಿ, ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದರೂ ಪಕ್ಷವನ್ನು ಬಲಪಡಿಸುವತ್ತ ಅಣ್ಣಾಮಲೈ ಗಮನ ಹರಿಸಿರುವುದು ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
-
ದೇಶ17 hours agoಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
-
ದೇಶ23 hours agoಪ್ರಚಾರ ವೇಳೆ ಕಾರು ತಡೆದು ಹಲ್ಲೆ: ತರೂರ್ ಬೆಂಗಾವಲು ಮೇಲೆ ದಾಂಧಲೆ
-
ಆರೋಗ್ಯ21 hours agoಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
-
ದೇಶ19 hours agoಕಾಂಗ್ರೆಸ್ ಒಳಜಗಳ ಬಯಲು: ರಾಹುಲ್ ನಿಲುವಿಗೆ ಹಿರಿಯರ ವಿರೋಧ
-
ದೇಶ22 hours agoಜಮೀರ್ ಅಹ್ಮದ್ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!
-
ಚುನಾವಣೆ17 hours agoTN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
-
ದೇಶ18 hours agoಇರಾನ್-ಅಮೆರಿಕಾ ಮಾತುಕತೆ ವಿಫಲ: ಪಾಕಿಸ್ತಾನಕ್ಕೆ ಮುಖಭಂಗ!
-
ಅಪರಾಧ18 hours agoಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!
