ಚುನಾವಣೆ
ಜೆಡಿಎಸ್ಗೆ 3 ಕ್ಷೇತ್ರ 3 ಟೆನ್ಶನ್; ಪ್ರಜ್ವಲ್ ರೇವಣ್ಣಗೆಇಕ್ಕಟ್ಟು ತಂದ ನೆಗೆಟಿವ್ ರಿಪೋರ್ಟ್!
ಬೆಂಗಳೂರು: ಲೋಕಸಭಾ ಚುನಾವಣೆ 2024 ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲೋಕಸಭಾ ಅಖಾಡ ರಂಗೇರುತ್ತಿದೆ. ಕಾಂಗ್ರೆಸ್ ರ್ಸಸ್ ಬಿಜೆಪಿ – ಜೆಡಿಎಸ್ ಮೈತ್ರಿ ಎಂಬ ನಿಟ್ಟಿನಲ್ಲಿ ರಾಜಕೀಯ ಕಣ ಸಿದ್ಧಗೊಂಡಿದೆ. ಇನ್ನು ಬಿಜೆಪಿ – ಜೆಡಿಎಸ್ ನಡುವೆ ಸೀಟ್ ಹಂಚಿಕೆ ಫೈನಲ್ ಆಗಿದ್ದು, ಜೆಡಿಎಸ್ಗೆ 3 ಬಿಜೆಪಿಗೆ 25 ಸ್ಥಾನ ಬಹುತೇಕ ಫಿಕ್ಸ್ ಆಗಿದೆ. ಈಗ ಜೆಡಿಎಸ್ಗೆ ಅಭ್ರ್ಥಿಗಳ ಆಯ್ಕೆ ತಲೆನೋವು ತಂದಿದೆ. ಮೂರು ಕ್ಷೇತ್ರ ಮೂರು ಟೆನ್ಶನ್ ಎಂಬಂತೆ ದಳದ ಪರಿಸ್ಥಿತಿಯಾಗಿದೆ. ಇದೇ ವೇಳೆ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ನೆಗೆಟಿವ್ ರಿಪರ್ಟ್ ಬಂದಿದ್ದು, ಇದು ಮತ್ತೊಂದು ತಲೆಬಿಸಿಗೆ ಕಾರಣವಾಗಿದೆ. ಇದಕ್ಕೆ ಒಪ್ಪದ ಎಚ್.ಡಿ. ರೇವಣ್ಣ ಅವರು ಪುತ್ರನನ್ನೇ ಕಣಕ್ಕಿಳಿಸುವಂತೆ ಪಟ್ಟು ಹಿಡಿದಿದ್ದಾರೆ ಇದೂ ಸಹ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
28 ಲೋಕಸಭಾ ಕ್ಷೇತ್ರದಲ್ಲಿ ಸ್ರ್ಧೆ ಮಾಡಲು ಜೆಡಿಎಸ್ಗೆ ಸಿಕ್ಕಿರುವುದೇ ಮೂರು ಕ್ಷೇತ್ರವಾಗಿದೆ. ಹೀಗಾಗಿ ಮೂರಕ್ಕೆ ಮೂರರಲ್ಲೂ ಗೆಲ್ಲುವ ಅನಿವರ್ಯತೆ ಹಾಗೂ ಪಕ್ಷದ ಅಸ್ತಿತ್ವವನ್ನು ಸಾಬೀತು ಮಾಡಬೇಕಾದ ಪರಿಸ್ಥಿತಿ ಜೆಡಿಎಸ್ಗೆ ಇದೆ. ಈ ಹಿನ್ನೆಲೆಯುಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಈ ಮೊದಲೇ ಅವರು ಜೆಡಿಎಸ್ ಸ್ರ್ಧೆ ಮಾಡಲಿರುವ ಕ್ಷೇತ್ರಗಳಿಗೆ ಭೇಟಿ ನೀಡಿ ಅಲ್ಲಿನ ನಾಯಕರ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಮಾಡಿದ್ದಾರೆ. ಅಭ್ರ್ಥಿ ಯಾರೇ ಇದ್ದರೂ ಅವರ ಗೆಲುವಿಗೆ ಶ್ರಮ ವಹಿಸಿ ಎಂದು ಕರೆ ನೀಡಿದ್ದಾರೆ. ಹಾಗಾಗಿ ಮೂರು ಕ್ಷೇತ್ರಗಳ ಅಭ್ರ್ಥಿ ಆಯ್ಕೆ ಜತೆಗೆ ಜನರ ಮನಗೆಲ್ಲಲು ಸಮಾವೇಶವನ್ನು ನಡೆಸಲು ಜೆಡಿಎಸ್ ಪ್ಲ್ಯಾನ್ ಮಾಡಿಕೊಂಡಿದೆ.
ಮೂರು ಕ್ಷೇತ್ರಗಳ ಅಭ್ರ್ಥಿ ಆಯ್ಕೆ ಮತ್ತು ಚುನಾವಣಾ ತಂತ್ರಗಾರಿಕೆ ಸಂಬಂಧ ಎಚ್.ಡಿ. ಕುಮಾರಸ್ವಾಮಿ ಈಗಾಗಲೇ ಸಭೆ ಮೇಲೆ ಸಭೆಗಳನ್ನು ನಡೆಸುತ್ತಿದ್ದಾರೆ. ತಮ್ಮ ಬಿಡದಿ ಮನೆಯಲ್ಲಿ ಗೇಮ್ ಪ್ಲ್ಯಾನ್ ಶುರು ಮಾಡಿದ್ದಾರೆ. ಮೂರು ಕ್ಷೇತ್ರಗಳ ನಾಯಕರ ಜತೆ ಪ್ರತ್ಯೇಕ ಮಾತುಕತೆ ನಡೆಸಲಾಗಿದೆ. ಹೀಗಾಗಿ ಮೂರು ಕ್ಷೇತ್ರ, ಮೂರು ಟೆನ್ಶನ್ ಎಂಬಂತಹ ಸ್ಥಿತಿ ದಳ ಪಕ್ಷಕ್ಕೆ ನರ್ಮಾಣವಾಗಿದೆ.
ಎಚ್ಡಿಕೆ ಪ್ಲ್ಯಾನ್
ಆ ಮೂರು ಕ್ಷೇತ್ರಗಳ ಟೆನ್ಶನ್ನಿಂದ ಹೊರಬರಲು ಎಚ್.ಡಿ. ಕುಮಾರಸ್ವಾಮಿ ಪ್ಲ್ಯಾನ್ ಮಾಡಿದ್ದಾರೆ. ಮಂಡ್ಯದಲ್ಲಿ ಅಭ್ರ್ಥಿ ಆಯ್ಕೆಯೇ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಅಲ್ಲಿಗೆ ಭೇಟಿ ನೀಡಿದ್ದ ಎಚ್ಡಿಕೆ ಸ್ಥಳೀಯರ ನಾಯಕರ ಜತೆ ಸಭೆ ಮಾಡಿದ್ದಾರೆ. ಮಾಜಿ ಶಾಸಕರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಲು ಪ್ರಯತ್ನಿಸಿದ್ದಾರೆ.
ಮಂಡ್ಯಕ್ಕೆ ಲೋಕಸಭಾ ಅಭ್ರ್ಥಿಯಾಗಿ ಸಿ.ಎಸ್ ಪುಟ್ಟರಾಜು ಅವರನ್ನು ಕಣಕ್ಕಿಳಿಸಬೇಕು ಎಂಬುದು ಎಚ್ಡಿಕೆ ಒಲವಾಗಿದೆ. ಆದರೆ, ಸ್ಥಳೀಯ ನಾಯಕರು ಇದಕ್ಕೆ ವಿರೋಧ ಮಾಡುತ್ತಿದ್ದಾರೆ. ದೇವೇಗೌಡರ ಕುಟುಂಬದಿಂದಲೇ ಅಭ್ರ್ಥಿ ಆಗಬೇಕು ಎಂದು ಮನವಿ ಮಾಡುತ್ತಿದ್ದಾರೆ. ಸಮಾಧಾನ ಮಾಡಲು ಮುಂದಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರಿಗೆ, “ನೀವೇ ಸ್ರ್ಧೆ ಮಾಡಿ, ನಾವು ಗೆಲ್ಲಿಸಿಕೊಂಡು ಬರುತ್ತೇವೆ” ಎಂದು ಹೇಳಿದ್ದಾರೆ. ಅದಾಗದಿದ್ದರೆ ನಿಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನಾದರೂ ಕಣಕ್ಕೆ ಇಳಿಸಿ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ದೇವೇಗೌಡರ ಕುಟುಂಬದಿಂದ ಸ್ರ್ಧೆ ಮಾಡಿದರೆ ಮಂಡ್ಯದಲ್ಲಿ ಹೊರಗಿನಿಂದ ಬಂದು ಸ್ರ್ಧೆ ಮಾಡುತ್ತಿದ್ದಾರೆ. ಸ್ಥಳೀಯರಿಗೆ ಇಲ್ಲಿ ಬೆಲೆಯೇ ಇಲ್ಲವೇ? ಸ್ಥಳೀಯ ನಾಯಕರನ್ನು ಏಕೆ ಬೆಳೆಸುವುದಿಲ್ಲ ಎಂದು ಕಾಂಗ್ರೆಸ್ನವರು ಪ್ರಶ್ನೆ ಮಾಡುತ್ತಾರೆ ಎಂಬ ಆತಂಕ ಎಚ್.ಡಿ. ಕುಮಾರಸ್ವಾಮಿ ಅವರದ್ದಾಗಿದೆ. ಹೀಗಾಗಿ ಇನ್ನೂ ಗೊಂದಲದಲ್ಲಿಯೇ ಎಚ್ಡಿಕೆ ಇದ್ದಾರೆ.
ಪ್ರಜ್ವಲ್ ರೇವಣ್ಣ ಬಗ್ಗೆ ನೆಗೆಟಿವ್ ರಿಪರ್ಟ್
ಹಾಸನದಲ್ಲಿ ಹಾಲಿ ಸಂಸ ಪ್ರಜ್ವಲ್ ರೇವಣ್ಣ ಅವರನ್ನೇ ಕಣಕ್ಕೆ ಇಳಿಸಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಶತಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ಮಾಡಿರುವ ರಿಪರ್ಟ್ನಲ್ಲಿ ಪ್ರಜ್ವಲ್ ಬಗ್ಗೆ ನೆಗೆಟಿವ್ ಅಂಶಗಳು ದಾಖಲಾಗಿವೆ. ಇದರಿಂದ ಬದಲಿ ಅಭ್ರ್ಥಿಗಳನ್ನು ಕಣಕ್ಕಿಳಿಸಿದರೆ ಉತ್ತಮ ಎಂಬ ಅಭಿಪ್ರಾಯ ಎಚ್ಡಿಕೆ ಹಾಗೂ ಬಿಜೆಪಿ ಹೈಕಮಾಂಡ್ನದ್ದಾಗಿದೆ. ಆದರೆ, ಇದಕ್ಕೆ ಸೊಪ್ಪು ಹಾಕದ ಎಚ್.ಡಿ. ರೇವಣ್ಣ, ತಮ್ಮ ಮಗನಿಗೇ ಟಿಕೆಟ್ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ.
ಕೋಲಾರ ಕ್ಷೇತ್ರದಿಂದ ನಿರ್ಗ ನಾರಾಯಣ ಸ್ವಾಮಿ ಅವರನ್ನು ಅಭ್ರ್ಥಿ ಮಾಡುವ ಬಗ್ಗೆ ಚಿಂತನೆಯನ್ನು ನಡೆಸಲಾಗಿದೆ. ಆದರೆ, ಜಿಲ್ಲಾ ಜೆಡಿಎಸ್ ನಾಯಕರು ಇದಕ್ಕೆ ತೀವ್ರ ವಿರೋಧ ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿ ಕೋಲಾರ ಜಿಲ್ಲೆಯ ಮುಖಂಡರಿಗೆ ಟಿಕೆಟ್ ಕೊಡಿ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಇದು ಸಹ ಕುಮಾರಸ್ವಾಮಿಗೆ ತಲೆನೋವು ತಂದಿಟ್ಟಿದೆ.
ದೇಶ
ಪಂಜಾಬ್ ಚುನಾವಣೆಗೆ Waris Punjab De ಮೊದಲ ಅಭ್ಯರ್ಥಿ; ಸತ್ವಂತ್ ಸಿಂಗ್ ಕಣಕ್ಕೆ
ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ, ಅಕಾಲಿ ದಳ್ Waris Punjab De ತನ್ನ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಕೆಹರ್ ಸಿಂಗ್ ಅವರ ಪುತ್ರ ಸತ್ವಂತ್ ಸಿಂಗ್ ಅವರನ್ನು ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.
ಈ ಘೋಷಣೆ ಪಂಜಾಬ್ನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂದಿರಾ ಗಾಂಧಿ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಕೆಹರ್ ಸಿಂಗ್ ದೋಷಿಯಾಗಿದ್ದರು. ಪ್ರಕರಣದಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು. ಇದೀಗ ಅವರ ಪುತ್ರನಿಗೆ 2027 Punjab Assembly Election ಟಿಕೆಟ್ ನೀಡಿರುವುದು ಪಂಥಿಕ್ ರಾಜಕೀಯದಲ್ಲಿ ಗಮನ ಸೆಳೆದಿದೆ.
ತ್ಯಾಗ ಮಾಡಿದ ಕುಟುಂಬಗಳಿಗೆ ಗೌರವ: ತರ್ಸೆಮ್ ಸಿಂಗ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರ್ಸೆಮ್ ಸಿಂಗ್, ಪಕ್ಷದ ರಾಜಕೀಯ ಕೇವಲ ಅಧಿಕಾರ ಹಿಡಿಯುವುದಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ. ಪಂಥಿಕ್ ತತ್ವಗಳು, ಪಂಜಾಬ್ನ ಹಕ್ಕುಗಳು ಹಾಗೂ ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳ ಗೌರವವನ್ನು ಎತ್ತಿಹಿಡಿಯುವುದು ಪಕ್ಷದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಪಂಥ್ ಮತ್ತು ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳನ್ನು ಪಕ್ಷ ಕಡೆಗಣಿಸುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಆದರೆ, ಮೊದಲ ಅಭ್ಯರ್ಥಿಯಾಗಿಯೇ ಅಂತಹ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತರ್ಸೆಮ್ ಸಿಂಗ್ ಹೇಳಿದ್ದಾರೆ.
ಬಸ್ಸಿ ಪಠಾನಾದಲ್ಲಿ ಪಂಥಿಕ್ ಮತಗಳ ಲೆಕ್ಕಾಚಾರ
ಸತ್ವಂತ್ ಸಿಂಗ್ ಅವರ ಅಭ್ಯರ್ಥಿತನವು ಬಸ್ಸಿ ಪಠಾನಾ ಕ್ಷೇತ್ರದಲ್ಲಿ Panthic Politics in Punjab ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅವರ ಕುಟುಂಬದ ಹಿನ್ನೆಲೆ ಮತದಾರರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.
2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್ 18 ಸ್ಥಾನಗಳಿಗೆ ಸೀಮಿತವಾಗಿತ್ತು. ಇದೀಗ 2027ರ ಚುನಾವಣೆಯಲ್ಲಿ ಪಂಥಿಕ್ ರಾಜಕೀಯದ ಪ್ರಭಾವ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು
SIR ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಡಿ.ಜೆ.ಹಳ್ಳಿಯಲ್ಲಿ ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯಾಚರಣೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಜೀವನಹಳ್ಳಿ (D J Halli) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಯಾರಬ್ ಮತ್ತು ದಸ್ತಗೀರ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್ಮೆಂಟ್ ಬೋರ್ಡ್ ಅಧಿಕಾರಿಗಳ ತಂಡವು ಡಿ.ಜೆ.ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಸಮೀಪ SIR ಸಮೀಕ್ಷೆ ನಡೆಸುತ್ತಿತ್ತು.
ಈ ವೇಳೆ ಸ್ಥಳಕ್ಕೆ ಬಂದ ದಸ್ತಗೀರ್, ತನಗೂ SIR ಫಾರ್ಮ್ ನೀಡುವಂತೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆ ಪ್ರದೇಶದಲ್ಲಿ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.
ಈ ಉತ್ತರದಿಂದ ಆಕ್ರೋಶಗೊಂಡ ದಸ್ತಗೀರ್ ಹಾಗೂ ಆತನಿಗೆ ಬೆಂಬಲ ನೀಡಿದ ಯಾರಬ್, ಕರ್ತವ್ಯದಲ್ಲಿದ್ದ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಅಧಿಕಾರಿಗೆ ಗಾಯ
ಹಲ್ಲೆಯಲ್ಲಿ ಸ್ಲಂ ಡೆವಲಪ್ಮೆಂಟ್ ಬೋರ್ಡ್ನ ಸೂಪರಿಂಟೆಂಡೆಂಟ್ ಫಕೀರಪ್ಪ ಗಾಯಗೊಂಡಿದ್ದಾರೆ. ಆರೋಪಿಗಳು ಮುಖ ಹಾಗೂ ಕಟಿ ಭಾಗಕ್ಕೆ ಹೊಡೆದಿದ್ದು, ಬೆನ್ನಿನ ಮೇಲೂ ಹಲ್ಲೆ ನಡೆಸಿದ ಪರಿಣಾಮ ಅವರ ತುಟಿಗೆ ಗಾಯವಾಗಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು, ಗಾಯಗೊಂಡ ಅಧಿಕಾರಿಯನ್ನು ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪ್ರಕರಣ ದಾಖಲು, ಇಬ್ಬರ ಬಂಧನ
ಚಿಕಿತ್ಸೆಯ ಬಳಿಕ ಫಕೀರಪ್ಪ ಅವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಂಗಳೂರು
GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ಡಿಸೆಂಬರ್ ಒಳಗೆ; ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನವದೆಹಲಿ: ಬೆಂಗಳೂರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆ ಸೇರಿದಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು (Local Body Elections) ನಿಗದಿತ ಅವಧಿಯೊಳಗೆ ನಡೆಸಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳು ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಚುನಾವಣೆಗಳನ್ನು ಅನಗತ್ಯವಾಗಿ ಮುಂದೂಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರಕಾರ, ಬೆಂಗಳೂರು ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮೊದಲಿಗೆ ಆಗಸ್ಟ್ 31ರೊಳಗೆ ನಡೆಸುವ ಉದ್ದೇಶ ಹೊಂದಲಾಗಿತ್ತು. ಆದರೆ ಎಸ್ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಹಾಗೂ ಕೆಲವು ತಾಂತ್ರಿಕ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ನಲ್ಲಿ ಹೆಚ್ಚಿನ ಕಾಲಾವಕಾಶ ಕೋರಿತ್ತು.
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ, ಚುನಾವಣೆ ಪ್ರಕ್ರಿಯೆಯನ್ನು ವಿಳಂಬ ಮಾಡುವುದು ಸರ್ಕಾರದ ಉದ್ದೇಶವಲ್ಲ ಎಂದು ಪುನರುಚ್ಚರಿಸಿದರು.
ಬೆಂಗಳೂರು ಮಾತ್ರವಲ್ಲದೆ, ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಸಂವಿಧಾನದ 73ನೇ ಮತ್ತು 74ನೇ ತಿದ್ದುಪಡಿ ಆಶಯಕ್ಕೆ ಅನುಗುಣವಾಗಿ ಗ್ರಾಮ ಪಂಚಾಯತ್ನಿಂದ ಮಹಾನಗರ ಪಾಲಿಕೆವರೆಗೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಯುವ ನಾಯಕತ್ವ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಗಡುವಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನು ವೇಗಗೊಳಿಸುವ ಸಾಧ್ಯತೆ ಇದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡ ಬಳಿಕ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ಇದರಿಂದ GBA ಚುನಾವಣೆ ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.
-
ಬೆಂಗಳೂರು19 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ20 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ20 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ರಾಜ್ಯ24 ಗಂಟೆಗಳು agoಸಚಿವ B Nagendra ರಾಜೀನಾಮೆ ನೀಡ್ತಾರಾ?CM D.K.Shiv Kumar ಗೆ ಕರೆ, ‘ಸರ್ಕಾರಕ್ಕೆ ಮುಜುಗರ ಬೇಡ’ ಎಂದ ಸಚಿವ!
-
ದೇಶ18 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ದೇಶ21 ಗಂಟೆಗಳು agoONAM ಸದ್ಯ ಸವಿಯಲು ಸಾಲಿನಲ್ಲಿ ಕುಳಿತ ಕೋತಿಗಳು! 53 ವರ್ಷಗಳ ಅಪರೂಪದ ಸಂಪ್ರದಾಯ
-
ರಾಜ್ಯ20 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ರಾಜ್ಯ23 ಗಂಟೆಗಳು agoB Nagendra Resignation: ರಾಜೀನಾಮೆ ವದಂತಿಗೆ ನಾಗೇಂದ್ರ ಫುಲ್ಸ್ಟಾಪ್; ಕಾಂಗ್ರೆಸ್ನಿಂದಲೂ ಅಧಿಕೃತ ಹೇಳಿಕೆ ಇಲ್ಲ
