ಚುನಾವಣೆ
ಅಭಿವೃದ್ದಿಯೇ ಬಿಜೆಪಿಗೆ ಶ್ರೀರಕ್ಷೆ- ಶೋಭಕ್ಕನ ಗೆಲುವು ನೂರಕ್ಕೆ ನೂರು ಖಚಿತ : ರಮೇಶ್
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಗೆಲ್ಲುವುದು ಖಚಿತ ಎಂದು ಬೆಂಗಳೂರು ಉತ್ತರ ಜಿಲ್ಲಾ ಒಬಿಸಿ ಉಪಾಧ್ಯಕ್ಷ ಜಂಗಮ್ ರಮೇಶ್ ಹೇಳಿದರು. ಹೊಸ ಸುದ್ಧಿಯ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತ, ಶ್ರೀ ರಾಮ ಮಂದಿರ ನಿರ್ಮಾಣ ಹಾಗೂ ಅವರು ಬಿಜೆಪಿಯ ಅಭಿವೃದ್ಧಿ ಕಾರ್ಯಗಳು ಮುಂಬರುವ ಚುನಾವಣೆಯಲ್ಲಿ ನಮಗೆ ಶ್ರೀರಕ್ಷೆಯಾಗಲಿವೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಅಡಳಿತದಲ್ಲಿ ಭಾರತ ದೇಶ ಆರ್ಥಿಕವಾಗಿ ಬೆಳದಿರುವುದು ಪ್ರತಿಯೊಬ್ಬ ಭಾರತೀಯ ಹೆಮ್ಮೆ ಪಡುವ ವಿಷಯ. ಅವರ ಅಭಿವೃದ್ಧಿ ಕೆಲಸಗಳನ್ನು ನೋಡಿ ಇಂದು ಭಾರತ ದೇಶದ ಪ್ರಜೆಗಳು ಚುನಾವಣೆಯಲ್ಲಿ ಪುನಃ ಮೋದಿಯನ್ನು ಆಯ್ಕೆ ಮಾಡಲು ತುದಿಗಾಲಿನಲ್ಲಿ ನಿಂತಿರುವುದು ಬಿಜೆಪಿ ಕಾರ್ಯಕರ್ತರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಜಂಗಮಾ ರಮೇಶ್ ಹೇಳಿದರು. ಬೆಂಗಳೂರು ಉತ್ತರ ಲೋಕಾಸಭಾ ಕ್ಷೇತ್ರಕ್ಕೆ ನಮ್ಮ ನೆಚ್ಚಿನ ನಾಯಕಿ ಹಾಗೂ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರು ಆಯ್ಕೆಯಾಗಿರುವುದು ನಮಗೆ ಅತ್ಯಂತ ಸಂತಸದ ವಿಷಯ ಎಂದರು.
2008ರಲ್ಲಿ ಶೋಭಾ ಕರಂದ್ಲಾಜೆಯವರು ಯಶವಂತಪುರ ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದ್ದಾರೆ. ಅವರು ಅಂದು ಮಾಡಿರುವ ಕೆಲಸ ಇಂದಿಗೂ ಕ್ಷೇತ್ರದ ಸಾರ್ವಜನಿಕರ ಮನದಲ್ಲಿದೆ. ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತರು ಯಾವುದೇ ಆಸೆ ಆಕಾಂಕ್ಷೆಯಿಲ್ಲದೇ ಕೆಲಸ ಮಾಡುವ ಮನೋಭಾವದವರಾಗಿದ್ದು, ನಮ್ಮ ಕಾರ್ಯಕರ್ತರೆ ನಮ್ಮ ಬಿಜೆಪಿ ಪಕ್ಷದ ಶಕ್ತಿಯಾಗಿದ್ದಾರೆ ಎಂದು ಜಂಗಮ್ ರಮೇಶ್ ಹೇಳಿದರು. ಕಾರ್ಯಕರ್ತರಿಂದಲೇ ಬಿಜೆಪಿ ಇಂದು ಪ್ರಪಂಚದಲ್ಲೇ ಅತೀ ದೊಡ್ಡ ರಾಜಕೀಯ ಪಕ್ಷವೆಂಬ ಹೆಗ್ಗಳಿಗೆ ಪಡೆದಿದೆ. ಪಕ್ಷದಲ್ಲಿ ದೇಶ ಮೊದಲು , ಧರ್ಮಕ್ಕೆ ಮೊದಲ ಆದ್ಯತೆ ಎಂಬ ಸಿದ್ದಾಂತ ಇರುವುದರಿಂದ ನಮ್ಮ ಕಾರ್ಯಕರ್ತರು ಯಾವ ವ್ಯಕ್ತಿಯ ಹಿಂದೆ ನಿಲ್ಲುವುದಿಲ್ಲ. ಪಕ್ಷದ ನಿರ್ಧಾರ , ಪಕ್ಷದ ಸೂಚನೆ ಜೊತೆಗೆ ನಿಲ್ಲುವುದು ಬಿಜೆಪಿ ಪಕ್ಷದ ಸಂಸ್ಕೃತಿಯಾಗಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ನಾವು 400 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಮೋದಿ ಅವರ ಕೈ ಬಲ ಪಡಿಸಬೇಕೆಂಬುದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಏಕೈಕ ಆಕಾಂಕ್ಷೆಯಾಗಿದೆ ಎಂದು ನುಡಿದ ಜಂಗಮ್ ರಮೇಶ್, ಬಿಜೆಪಿ ಕಾರ್ಯಕರ್ತರು ಯಾರಿಗೂ ಹೆದರುವುದಿಲ್ಲ ಹಾಗೂ ಯಾರಿಗೂ ತೊಂದರೆ ಕೊಡುವುದಿಲ್ಲ. ಬೆಂಗಳೂರು ಉತ್ತರ ಕ್ಷೇತ್ರದ ಕಾರ್ಯಕರ್ತರ ಮನೋಭಾವವನ್ನು ಬಹಳ ಸೂಕ್ಷವಾಗಿ ಪರಿಗಣಿಸಿ ಕೇಂದ್ರದ ನಾಯಕರು ಶೋಭಾ ಅವರನ್ನು ಅಭ್ಯಾರ್ಥಿಯಾಗಿ ಆಯ್ಕೆ ಮಾಡಿರುವುದು ಸಂತಸದ ಸಂಗತಿಯಾಗಿದೆ ಎಂದರು.
ನಮ್ಮ ಪಕ್ಷದ ಮುಖಂಡರು ಭಾಷೆ ಮತ್ತು ಪ್ರಾಂತ್ಯಕ್ಕಾಗಿ ಮಾತ್ರವಲ್ಲ ದೇಶದ ಹಿತಕ್ಕಾಗಿ ಕೆಲಸ ಮಾಡುತ್ತಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಸೋಲಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಸಾಧ್ಯವಾಗುತ್ತಿಲ್ಲ. ಇದ್ದು ಕಾಂಗ್ರೆಸ್ ಪಕ್ಷದ ಪರಿಸ್ಧಿತಿ ಎಂದು ಲೇವಡಿ ಮಾಡಿದ ಜಂಗಮ್ ರಮೇಶ್, ಮೋದಿಯವರ ಜನಪ್ರಿಯತೆಯಿಂದಾಗಿ ಕಾಂಗ್ರೆಸ್ ಪಕ್ಷ ಈ ಹೀನಾಯ ಸ್ಥಿತಿ ತಲುಪಿದೆ ಎಂದರು.
ಯಶವಂತಪುರ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್ ಅವರು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳಿಗೆ ನಮ್ಮ ಗೌರವ ಇದ್ದೇ ಇದೆ. ಅವರಿಗೆ ನಮ್ಮ ಪಕ್ಷ ಸಚಿವ ಸ್ಥಾನ ಸೇರಿದಂತೆ ಎಲ್ಲವನ್ನೂ ನೀಡಿತ್ತು.ಮೋದಿ ಮತ್ತು ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಳ್ಳುವ ಭಾಗ್ಯವೂ ಕೂಡ ಸಿಕ್ಕಿತ್ತು. ಎಸ್‌ಟಿಎಸ್ ಅವರ ಕಾರ್ಯ ವೈಖರಿಯ ಬಗ್ಗೆ ನಮಗೆ ಯಾವುದೇ ಅನುಮಾನವಿಲ್ಲ. ಆದರೆ ಅವರ ಪಕ್ಷ ವಿರೋಧಿ ಧೋರಣೆ ಸರಿಯಲ್ಲ ಎಂದರು.
ಅವರ ಕಾರ್ಯ ವೈಖರಿಯ ಬಗ್ಗೆ ನಮಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ. ಆದರೆ ಅವರ ಪಕ್ಷ ವಿರೋಧಿ ಧೋರಣೆ ಸರಿಯಿಲ್ಲ ಎಂದರು. ಅವರು ನಮ್ಮ ಪಕ್ಷವನ್ನು ಸೇರಿದಾಗ ನಾವು ಅವರು ರಾಜಕೀಯದಲ್ಲಿ ತುಂಬ ಅನಭವಸ್ಥರು ಎಲ್ಲರ ನಾಡಿಮಿಡಿತಗಳನ್ನು ಬಲ್ಲವರು ಎಂದು ಭಾವಿಸಿದ್ದೆವು. ಆದರೆ ಅವರ ಜೊತೆ ಇರುವ ಕೆಲವರ ಮಾತುಗಳನ್ನು ಪರಿಗಣಿಸಿ ನಿರ್ಧಾರಗಳನ್ನು ತೆಗೆದುಕೊಳ್ಳವುದು ಅಸಮಾಧಾನಕ್ಕೆ ಕಾರಣವಿರಬಹುದು ಎಂದು ನನ್ನ ಅಭಿಪ್ರಾಯ,.ಯಾರೋ ಹೇಳುವ ಮಾತನ್ನು ಕೇಳಿ ಅವರು ತಪ್ಪು ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ ಎಂದು ನಾನು ಭಾವಿಸಿದ್ದೇನೆ.
ಅಸಮಾಧಾನದ ಮಾತುಗಳು ಬಂದಾಗ ನಮ್ಮ ಕ್ಷೇತ್ರದ ಶಾಸಕರು ನಮ್ಮ ಪಕ್ಷದ ಮುಖಂಡರಗಳ ಜೊತೆ ಮಾತನಾಡಬೇಕಿತ್ತು ಎಂದರು. ನಮ್ಮ ಶಾಸಕರು ಕೆಲವೇ ದಿನಗಳಲ್ಲಿ ಬಿಜೆಪಿಯಲ್ಲಿ ಉಸಿರು ಕಟ್ಟಿದ ವಾತಾವರಣ ಎಂದಿರುವುದು ಸರಿಯೇ ಎಂದು ಪ್ರಶ್ನಿಸಿದರು. ಜನರು ದಡ್ಡರು ಎಂದು ಯಾವ ನಾಯಕರುಗಳು ಭಾವಿಸಬಾರದು. ಶೋಭಾ ಅವರಿಗೆ ಚಿಕ್ಕಮಂಗಳೂರಿನಲ್ಲಿ ಗೋ ಬ್ಯಾಕ್ ಘೋಷಣೆ ಬರಲು ಮುಖ್ಯ ಕಾರಣ ನಮ್ಮ ಪಕ್ಷದ ಆಂತರಿಕ ಸಮಸ್ಯೆಯೇ ಹೊರತು ಬೇರೆ ಕಾರಣ ಆ ಕ್ಷೇತ್ರದಲ್ಲಿ ಅಲ್ಲ. ನಮ್ಮ ಮುಖಂಡರಗಳೇ ಮಾಡಿಸಿದ್ದಾರೆ ಎಂದು ಎಲ್ಲರಿಗೂ ತಿಳಿದಿರುವ ವಿಷಯ. ಶೋಭಾ ಕರಂದ್ಲಾಜೆ ಅವರ ಕಾರ್ಯ ವೈಖರಿ ಸರಿಯಿಲ್ಲ ಎಂದಿದ್ದರೆ ಯಾವುದೇ ಕಾರಣಕ್ಕೂ ಹೈಕಮಾಂಡ್ ಅವರಿಗೆ ಟಿಕೆಟ್ ಘೋಷಣೆ ಮಾಡುತ್ತಿರಲಿಲ್ಲ. ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 10 ರಿಂದ 15 ಲಕ್ಷ ಮತಗಳನ್ನು ಶೋಭಾ ಪಡೆಯುತ್ತಾರೆ.
ಯಶವಂತಪುರ ಕ್ಷೇತ್ರದಲ್ಲಿ ಶಾಸಕರಾದ ಎಸ್ ಟಿ ಸೋಮಶೇಖರ್ ಅವರು ಕ್ಷೇತ್ರದಲ್ಲಿ ನಮ್ಮ ಪಕ್ಷದ ವಿರೋಧವಾಗಿ ಮಾತನಾಡಿದರೂ ಸ್ಧಳೀಯ ಮುಖಂಡರುಗಳು ಹಾಗೂ ಜವಾಬ್ದಾರಿ ಇರುವ ನಾಯಕರುಗಳು ಮಾತನಾಡುವುದಿಲ್ಲ ಇದಕ್ಕೆ ಮುಖ್ಯ ಕಾರಣ ಸ್ಧಳೀಯ ನಾಯಕರುಗಳು ವೈಫಲ್ಯ ಎಂದೇ ಹೇಳಬೇಕು. ಬಿಜೆಪಿ ಕಾರ್ಯಕರ್ತರನ್ನು ಕಾಪಾಡಿಕೊಳ್ಳುವುದು ಕ್ಷೇತ್ರದ ಜವಾಬ್ದಾರಿ ಹೊತ್ತಿರುವ ನಾಯಕರ ಮುಖ್ಯ ಕೆಲಸ ಎಂದರು
ಚುನಾವಣೆ
Bhabanipur Shock: 700 ಮತದಾರರ ಬೂತ್ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್ಗಳ ಪೈಕಿ 207 ಬೂತ್ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.
ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.
ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.
ಇನ್ನು ಹಲವು ಬೂತ್ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.
ಚುನಾವಣೆ
ಜಿಬಿಎ ಚುನಾವಣೆಗೆ ಕೌಂಟ್ಡೌನ್ ಶುರು! ಜೂನ್ನಲ್ಲಿ ಡೇಟ್ ಫಿಕ್ಸ್
ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.
ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.
ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಚುನಾವಣೆ
‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಗುರುವಾರ ಕಾಲಿಘಾಟ್ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.
ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.
ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.
ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
-
ದೇಶ3 hours agoರಾಜ್ಯಸಭೆ ಸ್ಥಾನದಿಂದ ಮೋದಿ ಜೊತೆಗಿನ ಸಂಬಂಧ ಮುಗಿಯಲ್ಲ: ದೇವೇಗೌಡ ಸ್ಪಷ್ಟನೆ
-
ಅಪರಾಧ9 hours agoಕಾರು ಓಡಿಸುವ ವಿಚಾರಕ್ಕೆ ಮಾರಾಮಾರಿ: ಕೃಷ್ಣ ಮಠದಲ್ಲಿ ಗಲಾಟೆ
-
ದೇಶ10 hours ago4,399 ದಿನಗಳ ನಿರಂತರ ಆಡಳಿತ: ಮೋದಿ ಹೊಸ ದಾಖಲೆ ಸ್ಥಾಪನೆ
-
ಕ್ರೀಡೆ10 hours agoಫಿಫಾ ವಿಶ್ವಕಪ್ 2026 ಆರಂಭ: ಜಗತ್ತೆಲ್ಲಾ ಫುಟ್ಬಾಲ್ ಜ್ವರದಲ್ಲಿ
-
ಅಪರಾಧ13 hours agoಬಿಟ್ಕಾಯಿನ್ ಹಗರಣ: ನಲಪಾಡ್ಗೆ ಎಸ್ಐಟಿ ಚಾರ್ಜ್ಶೀಟ್ ಶಾಕ್
-
ದೇಶ13 hours agoಕನಕಪುರದಲ್ಲಿ ಡಿಕೆಶಿ ವರ್ತನೆಗೆ ಬಿಜೆಪಿ ತೀವ್ರ ಆಕ್ರೋಶ
-
ಅಪರಾಧ13 hours agoಆವಲಹಳ್ಳಿ ದಾಳಿ: ಅಕ್ರಮ ಜಿಲೆಟಿನ್ ದಾಸ್ತಾನು ಪತ್ತೆ, 225 ಕಡ್ಡಿ ವಶ
-
ದೇಶ5 hours agoನೆಹರೂ 64 ವರ್ಷದ ದಾಖಲೆ ಹಿಂದಿಕ್ಕಿದ ಮೋದಿ; ಸಂಪುಟ ಸಭೆಯಲ್ಲಿ ಸಂಭ್ರಮ
