Connect with us

ರಾಜಕೀಯ

 ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆಯಾಗಿದೆ.

Published

on

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆಯಾಗಿದೆ.

ಹುಬ್ಬಳ್ಳಿಯ ದಾಜಿಬಾನಪೇಟೆ ಸಮೀಪದ ವೀರಾಪುರ ಓಣಿಯಲ್ಲಿ ನಿನ್ನೆ ಬುಧವಾರ ಬೆಳಗ್ಗೆ 20 ವರ್ಷದ ಯುವತಿಯನ್ನು 22 ವರ್ಷದ ಯುವಕನೊಬ್ಬ ಕೊಲೆ ಮಾಡಿದ್ದಾನೆ. ಆರೋಪಿ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ್ ಎಂಬಾತ ಅಂಜಲಿ ಅಂಬಿಗರ ಮನೆಯಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿ, ಪದೇ ಪದೇ ಚಾಕುವಿನಿಂದ ಇರಿದು ಕತ್ತು ಸೀಳಿ ಪರಾರಿಯಾಗಿದ್ದಾರೆ. ಇದು ಭಾರೀ ಸುದ್ದಿ ಮಾಡಿದೆ.

ಅಂಜಲಿ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಇರಿಸಲಾಗಿದ್ದು, ನೇಹಾ ಹಿರೇಮಠ್ ತಂದೆ ನಿರಂಜನ ಹಿರೇಮಠ ಅವರು ಭೇಟಿ ನೀಡಿದ್ದರು. ನಿರಂಜನ ಹಿರೇಮಠ ಅವರು ವೀರಾಪೂರ ಓಣಿಯ ಕಾಂಗ್ರೆಸ್ ಕಾರ್ಪೊರೇಟರ್‌ ಕೂಡ ಆಗಿದ್ದಾರೆ. ತಮ್ಮ ಏರಿಯಾದಲ್ಲಿನ ಯುವತಿ ಹತ್ಯೆ ಆಗಿರುವುದಕ್ಕೆ ನಿರಂಜನ ಹಿರೇಮಠ, ಹುಬ್ಬಳ್ಳಿ ಪೊಲೀಸರು ಹಾಗೂ ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.

ನನ್ನ ವಾರ್ಡ್‌ನಲ್ಲಿ ಇಂತಹ ಘಟನೆಯಾಗಿರುವುದನ್ನ ನಾನು ಖಂಡಿಸುತ್ತೇನೆ. ನನ್ನ ಮಗಳು ನೇಹಾ ಹತ್ಯೆ ಆಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಈ ರೀತಿ ಘಟನೆ ಮತ್ತೆ ಆಗಿದೆ. ನನ್ನ ಮಗಳು ಹತ್ಯೆಯಾದಾಗಲೇ ಈ ರೀತಿಯ ಮತ್ತೊಂದು ಘಟನೆಯಾಗಬಾರದು ಅಂತ ಹೇಳಿದ್ದೆ. ಆದರೂ ಇಂತಹ ಘಟನೆ ನಡೆದಿದೆ ಇದಕ್ಕೆ ಇಲ್ಲಿನ ಪೊಲೀಸ್ ಕಮೀಷನರ್ ಅವರೇ ಕಾರಣ ಎಂದು ಆರೋಪಿಸಿದರು.

ಹುಬ್ಬಳ್ಳಿ ಪೊಲೀಸ್ ಕಮೀಷನರ್‌ ಸರಿಯಾದ ಏನು ಕ್ರಮ ಕೈಗೊಳ್ಳುತ್ತಿಲ್ಲ. ಸರಿಯಾಗಿ ಕೆಲಸ ಮಾಡಲು ಇಷ್ಟ ಇಲ್ಲದಿದ್ದರೇ ರಾಜೀನಾಮೆ ಕೊಟ್ಟು ಹೋಗಿ. ಅಂಜಲಿ ಕೂಡ ನನ್ನ ಮಗಳು ಇದ್ದ ಹಾಗೆ. ನನ್ನ ಮಗಳು ನೇಹಾಳ ಹತ್ಯೆ ವಿಚಾರವಾಗಿ ಯಾವ ರೀತಿ ಹೋರಾಟ ನಡೆದಿತ್ತು ಅದೇ ರೀತಿ ಇವಳ ಹತ್ಯೆಯನ್ನ ಖಂಡಿಸಬೇಕು ಎಂದು ನಿರಂಜನ ಹಿರೇಮಠ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಎಲ್ಲಾ ಕಡೆ ಯುವಕರು ಗಾಂಜಾ ಅಫೀಮು ಅಂತ ದಾರಿ ತಪ್ಪುತ್ತಿದ್ದಾರೆ.ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್‌ ಮಾದರಿಯಲ್ಲೇ ಎನ್‌ಕೌಂಟರ್‌ ಆಗಬೇಕು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ನಮ್ಮ ರಾಜ್ಯಕ್ಕೂ ಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣೆ

ದಾವಣಗೆರೆ ಟಿಕೆಟ್ ವಿವಾದ: ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೇ?

Published

on

By

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಒಳಜಗಳ ಮತ್ತೆ ಭುಗಿಲೆದ್ದಿದೆ. ಈ ನಡುವೆ Rizwan Arshad ನೀಡಿದ ಹೇಳಿಕೆ ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳನ್ನು ಬಹಿರಂಗಪಡಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿ, ವಾಸ್ತವದಲ್ಲಿ ಕೆಲ ನಾಯಕರು ಕೇವಲ ಒಬ್ಬ ಅಭ್ಯರ್ಥಿಯ ಪರ ಮಾತ್ರ ಒತ್ತಾಯ ಮಾಡಿದ ಕಾರಣದಿಂದ ಟಿಕೆಟ್ ಕೈತಪ್ಪಿದೆ ಎಂದು ಹೇಳಿದ್ದಾರೆ. ವಿಶೇಷವಾಗಿ Abdul Jabbar ಅವರ ಹೆಸರನ್ನೇ ಮುಂದಿಟ್ಟು, ಪರ್ಯಾಯ ಹೆಸರುಗಳನ್ನು ಸೂಚಿಸದಿರುವುದೇ ಪ್ರಮುಖ ಕಾರಣ ಎಂದರು.

“ಅಲ್ಪಸಂಖ್ಯಾತರಿಗೆ ಟಿಕೆಟ್ ಕೇಳಿದಾಗ ಮೂರ್ನಾಲ್ಕು ಹೆಸರುಗಳನ್ನು ನೀಡಬೇಕಿತ್ತು. ಆದರೆ, ಒಂದೇ ಹೆಸರಿಗಾಗಿ ಹಠ ಹಿಡಿದ ಪರಿಣಾಮ ಅವಕಾಶ ಕಳೆದುಕೊಂಡೆವು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ನಡುವೆ ಸಚಿವ Zameer Ahmed Khan ಅವರ ನಡೆಗೂ ಪರೋಕ್ಷವಾಗಿ ಟೀಕೆ ವ್ಯಕ್ತಪಡಿಸಿದ ರಿಜ್ವಾನ್ ಅರ್ಷದ್, ಸಮುದಾಯದ ಹಿತಕ್ಕಾಗಿ ಅಲ್ಲ, ವ್ಯಕ್ತಿಗಾಗಿಯೇ ಕೆಲವರು ರಾಜಕೀಯ ನಡೆಸಿದ್ದಾರೆ ಎಂದು ಆರೋಪಿಸಿದರು.

ಇನ್ನೂ, ಪಕ್ಷದ ಅಧಿಕೃತ ಅಭ್ಯರ್ಥಿ ಘೋಷಣೆಯಾದ ಬಳಿಕ, ಬೆಂಬಲ ನೀಡಿದವರನ್ನು ‘ಸಮುದಾಯ ದ್ರೋಹಿಗಳು’ ಎಂದು ಕರೆಯುವುದು ಸರಿಯಲ್ಲ ಎಂದು ಪ್ರಶ್ನಿಸಿದರು. ಯಾಸಿರ್ ಪಠಾಣ್ ಸೇರಿದಂತೆ ಕೆಲವರು ಪರ್ಯಾಯ ಅಭ್ಯರ್ಥಿಗಳಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದರೂ ಅದಕ್ಕೆ ಮಹತ್ವ ನೀಡಲಾಗಿಲ್ಲ ಎಂದು ಹೇಳಿದರು.

ಒಟ್ಟಿನಲ್ಲಿ, ಕಾಂಗ್ರೆಸ್ ಪಕ್ಷದ ಒಳಜಗಳವೇ ದಾವಣಗೆರೆ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೈತಪ್ಪಲು ಕಾರಣವಾಗಿದೆ ಎಂಬುದು ಈ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಇದು ಮುಂದಿನ ದಿನಗಳಲ್ಲಿ ಪಕ್ಷದ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

Continue Reading

ದೇಶ

ಸಂಸತ್ ಸಂಕೀರ್ಣದಲ್ಲಿ ಅಪರೂಪದ ದೃಶ್ಯ: ಮೋದಿ-ರಾಹುಲ್ ಮಾತುಕತೆ ವಿಡಿಯೋ ಸದ್ದು

Published

on

By

ನವದೆಹಲಿ: ಪ್ರಧಾನಿ Narendra Modi ಮತ್ತು ಲೋಕಸಭೆಯ ವಿಪಕ್ಷ ನಾಯಕ Rahul Gandhi ನಡುವಿನ ಅಪರೂಪದ ಸೌಹಾರ್ದಯುತ ಸಂಭಾಷಣೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಸಮಾಜ ಸುಧಾರಕ Jyotirao Phule ಅವರ 200ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸಂಸತ್ ಸಂಕೀರ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ವಿವಿಧ ರಾಷ್ಟ್ರೀಯ ಪಕ್ಷಗಳ ನಾಯಕರು ಭಾಗವಹಿಸಿದ್ದ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಸ್ವಾಗತಿಸಿದರು.

ಈ ವೇಳೆ ಮೋದಿ ಮತ್ತು ರಾಹುಲ್ ಗಾಂಧಿ ಕೆಲ ಕ್ಷಣಗಳು ಮುಖಾಮುಖಿಯಾಗಿ ಮಾತುಕತೆ ನಡೆಸಿದರು. ಅವರ ನಡುವಿನ ಈ ಸ್ನೇಹಪೂರ್ಣ ಸಂಭಾಷಣೆ ನೆಟ್ಟಿಗರ ಗಮನ ಸೆಳೆದಿದ್ದು, ರಾಜಕೀಯ ವೈಮನಸ್ಯದ ನಡುವೆಯೂ ಇಂತಹ ಕ್ಷಣಗಳು ಅಪರೂಪ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.

ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ Om Birla, ಕೇಂದ್ರ ಸಚಿವರಾದ J. P. Nadda ಮತ್ತು Arjun Ram Meghwal ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಅಸ್ವಸ್ಥತೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ನಾಯಕಿ Sonia Gandhi ಅವರ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ಅವರು ರಾಹುಲ್ ಗಾಂಧಿ ಬಳಿ ವಿಚಾರಿಸಿದ್ದರು. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವುದು ರಾಜಕೀಯದಾಚೆಯ ಮಾನವೀಯತೆಯನ್ನು ತೋರಿಸಿದೆ.

ಒಟ್ಟಿನಲ್ಲಿ, ರಾಜಕೀಯ ಪೈಪೋಟಿಯ ನಡುವೆಯೂ ನಾಯಕರು ಸೌಹಾರ್ದಯುತವಾಗಿ ಮಾತುಕತೆ ನಡೆಸಿದ ಈ ಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಜಮೀರ್ ವಿರುದ್ಧ ಮುಸ್ಲಿಂ ನಾಯಕರ ಅಸಮಾಧಾನ: ಕಾಂಗ್ರೆಸ್‌ಗೆ ಹೊಸ ತಲೆನೋವು

Published

on

By

ಬೆಂಗಳೂರು: ದಾವಣಗೆರೆ ಉಪಚುನಾವಣೆ ಮುಗಿದರೂ ಕಾಂಗ್ರೆಸ್ ಪಕ್ಷದ ಒಳಜಗಳ ಮಾತ್ರ ಇನ್ನೂ ಶಮನವಾಗಿಲ್ಲ. Indian National Congress ಒಳಗೆ ಬಂಡಾಯ, ಅಸಮಾಧಾನ ಮತ್ತಷ್ಟು ತೀವ್ರವಾಗುತ್ತಿದೆ. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡದ ವಿಚಾರವಾಗಿ ಆರಂಭವಾದ ಅಸಮಾಧಾನ ಈಗ ಚುನಾವಣೆಯ ಬಳಿಕವೂ ಮುಂದುವರಿದಿದೆ.

ಸಚಿವ Zameer Ahmed Khan ವಿರುದ್ಧ ಸ್ವಪಕ್ಷದವರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡದಿರುವುದು ಹಾಗೂ ಮುಸ್ಲಿಂ ನಾಯಕರನ್ನು ಮನವೊಲಿಸಲು ವಿಫಲವಾದ ಕಾರಣ, ಅವರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬರುತ್ತಿದೆ. ಈ ವಿಚಾರವಾಗಿ ಹೈಕಮಾಂಡ್‌ಗೆ ವರದಿ ಕೂಡ ಸಲ್ಲಿಕೆಯಾಗಿದೆ ಎನ್ನಲಾಗಿದೆ.

ಇನ್ನೊಂದೆಡೆ, ಡಿಸಿಎಂ D. K. Shivakumar ಪ್ರತಿಕ್ರಿಯಿಸಿ, ಈ ಸಂಬಂಧ ವರದಿಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಆರೋಪ-ಪ್ರತ್ಯಾರೋಪಗಳು ಸಹಜವಾದರೂ, ಪಕ್ಷವು ಎಲ್ಲವನ್ನೂ ಗಮನಿಸುತ್ತಿದೆ ಎಂದಿದ್ದಾರೆ.

ಈ ನಡುವೆ ಸಂಪುಟ ಪುನಾರಚನೆ ವಿಚಾರವೂ ಕಾಂಗ್ರೆಸ್‌ನಲ್ಲಿ ಮತ್ತೆ ಚರ್ಚೆಗೆ ಬಂದಿದೆ. ಸುಮಾರು 40ಕ್ಕೂ ಹೆಚ್ಚು ಹಿರಿಯ ಶಾಸಕರು ದೆಹಲಿಗೆ ತೆರಳಿ, Mallikarjun Kharge ಹಾಗೂ Rahul Gandhi ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಒತ್ತಾಯ ಮಂಡಿಸಲು ತಯಾರಾಗಿದ್ದಾರೆ.

ಇದರ ಜೊತೆಗೆ, ಮುಖ್ಯಮಂತ್ರಿ Siddaramaiah ಐದು ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸಚಿವರು ಸ್ಪಷ್ಟಪಡಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಒಟ್ಟಿನಲ್ಲಿ ದಾವಣಗೆರೆ ಉಪಚುನಾವಣೆ ಕಾಂಗ್ರೆಸ್‌ಗೆ ಒಳಜಗಳದ ಬಾಗಿಲು ತೆರೆದಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆಗಳ ಸಾಧ್ಯತೆ ಹೆಚ್ಚಾಗಿದೆ.

Continue Reading

Trending