ಚುನಾವಣೆ
20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎನ್ನುತ್ತಿದ್ದ ಸಿಎಂ, ಡಿಸಿಎಂ: ಗುಪ್ತಚರ ವರದಿಯ ನಂತರ ವಿಶ್ವಾಸ ಕಳೆದುಕೊಂಡರೇ?
ಬೆಂಗಳೂರು : ಸಾರ್ವತ್ರಿಕ ಚುನಾವಣೆಯಲ್ಲಿ ಇನ್ನು ಎರಡು ಹಂತದ ಮತದಾನ ಬಾಕಿ ಉಳಿದಿದೆ. ಮೇ 25 ಮತ್ತು ಜೂನ್ 1ನೇ ತಾರೀಕಿಗೆ ಆರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಬಿಹಾರ, ಹರ್ಯಾಣ, ದೆಹಲಿ, ಹಿಮಾಚಲ ಪ್ರದೇಶ, ಜಾರ್ಖಂಡ್, ಒಡಿಶಾ, ಪಂಜಾಬ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಚಂಡೀಗಢದಲ್ಲಿ ಚುನಾವಣೆ ನಡೆಯಲಿದೆ. ಕೆಲವು ದಿನಗಳ ಹಿಂದೆ, ಗುಪ್ತಚರ ವರದಿ ಮುಖ್ಯಮಂತ್ರಿಗಳ ಕೈಸೇರಿದೆ, ಆ ವರದಿಯಿಂದ ಸಿಎಂ ಸಂತುಷ್ಟರಾಗಿದ್ದಾರೆ ಎನ್ನುವ ಅನಧಿಕೃತ ಮೂಲಗಳ ಸುದ್ದಿಗಳು ಸಾಕಷ್ಟು ವೈರಲ್ ಆಗಿದ್ದವು. ಬಿಜೆಪಿ ಎರಡಂಕಿ ದಾಟುವುದಿಲ್ಲ, ಕಾಂಗ್ರೆಸ್ಸಿಗೆ ಅರ್ಥ, ಬಿಜೆಪಿಗೆ ಅರ್ಥ ಎಂದೆಲ್ಲಾ ವರದಿಯಾಗಿದ್ದವು. ಸಾಮಾನ್ಯವಾಗಿ ಯಾವುದೇ ಚುನಾವಣೆ ನಡೆದ ನಂತರ, ಬಹುತೇಕ ಮುಖ್ಯಮಂತ್ರಿಗಳ ಸುಪರ್ದಿಯಲ್ಲಿರುವ ಗುಪ್ತಚರ ಇಲಾಖೆ, ವರದಿಯನ್ನು ಸಿಎಂಗೆ ನೀಡುತ್ತದೆ. ಅತ್ಯಂತ ಗೌಪ್ಯವಾಗಿರುವ ಈ ವರದಿಗಳು ಲೀಕ್ ಆದರೆ ಮಾತ್ರ ಸಾರ್ವಜನಿಕವಾಗುತ್ತದೆ. ಹಾಗಾಗಿ, ಇಂಟೆಲಿಜೆನ್ಸ್ ರಿಪೋರ್ಟ್ ನಲ್ಲಿ ಏನಿದೆ ಎನ್ನುವುದು ಅಂತೆಕಂತೆ ಸುದ್ದಿಗಳಾಗಿರುತ್ತವೇ ಹೊರತು, ಖಚಿತ ಸುದ್ದಿಗಳಾಗಿರುವುದಿಲ್ಲ. ಆದರೆ, ನೈಜ ಫಲಿತಾಂಶಕ್ಕೆ ಹತ್ತಿರವಾದ ಉದಾಹರಣೆಗಳೂ ಇವೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಾರ್ಟಿ ಇಷ್ಟೇ ಸ್ಥಾನ ಗೆಲ್ಲುತ್ತದೆ ಎಂದು ಎಕ್ಸಿಟ್ ಪೋಲ್ ನಾಚಿಸುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದರು. 136 ಸ್ಥಾನವನ್ನು (ದರ್ಶನ್ ಪುಟ್ಟಣ್ಣಯ್ಯ ಸೇರಿ ) ಗೆಲ್ಲುತ್ತೇವೆ ಎಂದು ಡಿಕೆಶಿ ಹೇಳಿದ್ದರು. ಅದರಂತೇ, ಕಾಂಗ್ರೆಸ್ 135 ಸ್ಥಾನವನ್ನು ಗೆದ್ದಿತ್ತು, ಬೆಂಗಳೂರು ದಕ್ಷಿಣ ವ್ಯಾಪ್ತಿಯ ಜಯನಗರದಲ್ಲಿ ಕಾಂಗ್ರೆಸ್ ಕೂದಲೆಳೆಯಿಂದ ( 16 ಮತಗಳಿಂದ) ಸೋತಿತ್ತು. 24 ಅಸೆಂಬ್ಲಿ ಸ್ಥಾನವನ್ನು ಹೊಂದಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಅಷ್ಟು ಕರಾರುವಕ್ಕಾಗಿ ಹೇಳಿದ್ದ ಡಿ ಕೆ ಶಿವಕುಮಾರ್, 28 ಲೋಕಸಭಾ ಕ್ಷೇತ್ರದ ಫಲಿತಾಂಶವನ್ನು ಅದೇ ವಿಶ್ವಾಸದಿಂದ ಹೇಳುತ್ತಿಲ್ಲ. ಮುಖ್ಯಮಂತ್ರಿಗಳಿಗಾಗಲಿ, ಉಪ ಮುಖ್ಯಮಂತ್ರಿಗಳಿಗಾಗಲಿ ಎಷ್ಟು ಸ್ಥಾನ ಗೆಲ್ಲಬಹುದು ಎನ್ನುವ ವಿಚಾರದಲ್ಲಿ ಇಬ್ಬರಿಂದಲೂ ಖಚಿತತೆಯ ಮಾತು ಹೊರಬರುತ್ತಿಲ್ಲ. ಇಪ್ಪತ್ತು ಸ್ಥಾನ ಗೆಲ್ಲುತ್ತೇವೆ ಎಂದು ಮತದಾನಕ್ಕೂ ಮುನ್ನ ಹೇಳುತ್ತಿದ್ದ ಡಿಸಿಎಂ ಡಿ ಕೆ ಶಿವಕುಮಾರ್, “ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ. ಎನ್ ಡಿಎ ಮೈತ್ರಿಕೂಟ ಸುಮಾರು 200 ಆಸುಪಾಸಿನಲ್ಲಿ ಗೆಲ್ಲಲಿದೆ. ರಾಜ್ಯದಲ್ಲಿ 20 ಸ್ಥಾನ ಗೆಲ್ಲಲಿದ್ದೇವೆ, ಸ್ವಲ್ಪ ಆಕಡೆ ಈಕಡೆ ಆಗಬಹುದು” ಎಂದು ಡಿಕೆಶಿ ಹೇಳಿದ್ದಾರೆ.ಇನ್ನು ಇದೇ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ” ಬಿಜೆಪಿಯವರಂತೆ 28 ಗೆಲ್ತೀವಿ ಅಂತ ನಾನು ಹೇಳುವುದಿಲ್ಲ. ರಾಜ್ಯದಲ್ಲಿ ಕನಿಷ್ಠ 15 ಸ್ಥಾನ ಗರಿಷ್ಠ 20 ಸ್ಥಾನ ಗೆಲ್ತೀವಿ” ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಅದೇ ರೀತಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ 28ಕ್ಕೆ 28 ಗೆಲ್ಲುತ್ತೇವೆ ಎನ್ನುತ್ತಿದ್ದರು. ಮತದಾನದ ನಂತರ 24 -25 ಸ್ಥಾನ ಗೆಲ್ಲುತ್ತೇವೆ ಎಂದು ತಮ್ಮ ಹಿಂದಿನ ಹೇಳಿಕೆಯನ್ನು ಬದಲಾಯಿಸಿದ್ದರು. ಇನ್ನು, ಗುಪ್ತಚರ ವರದಿ ಎಂದು ಮಾಧ್ಯಮಗಳು ತಮ್ಮದೇ ಆದ ರೀತಿಯಲ್ಲಿ ಸಂಖ್ಯೆಗಳನ್ನು ವ್ಯಾಖ್ಯಾನಿಸುತ್ತಿವೆ. ಮತದಾನಕ್ಕೆ ಮುನ್ನ ಮತ್ತು ಗುಪ್ತಚರ ವರದಿ ಬಂದ ನಂತರ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಧ್ವನಿಯಲ್ಲಿ ಅದೇ ಹಿಂದಿನ (ಅಸೆಂಬ್ಲಿ ಚುನಾವಣೆ) ವಿಶ್ವಾಸ ಕಾಣುತ್ತಿಲ್ಲ. ಸಾರ್ವತ್ರಿಕ ಚುನಾವಣೆಯು ರಾಷ್ಟ್ರ ಮಟ್ಟದ ವಿಷಯದ ಮೇಲೆ ಸಾಮಾನ್ಯವಾಗಿ ನಡೆಯುವುದರಿಂದ, ಮತಾದಾರರ ನಾಡಿಮಿಡಿತ ಸರಿಯಾಗಿ ಅರಿಯುವಲ್ಲಿ ಹಿಂದೆ ಮುಂದೆ ಆಗಿರಬಹುದು. ಹಾಗಾದರೆ, ಇಂಟೆಲೆಜೆನ್ಸ್ ರಿಪೋರ್ಟ್ ನಲ್ಲಿ ಇರುವುದಾದರೂ ಏನು?
ಚುನಾವಣೆ
“ಟ್ರಂಪ್ ಅನುಮತಿ ಇಲ್ಲದೆ ತೈಲ ಖರೀದಿ ಸಾಧ್ಯವಿಲ್ಲ”: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಅಸ್ಸಾಂ ರಾಜ್ಯದ ಗೋಲಾಘಾಟ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಉಲ್ಲೇಖಿಸಿದ ಅವರು, “ಟ್ರಂಪ್ ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.
ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಟ್ರಂಪ್ ಬಹಿರಂಗವಾಗಿ ಮೋದಿ ಬಗ್ಗೆ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಭಾರತದ ಇಂಧನ ಭದ್ರತೆ ಮತ್ತು ಪ್ರಮುಖ ಮಾಹಿತಿಯನ್ನು ಅಮೆರಿಕದ ಕೈಗೆ ಒಪ್ಪಿಸಿದ್ದಾರೆ,” ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ ಅವರು ಎಪ್ಸ್ಟೀನ್ ಫೈಲ್ ಕುರಿತು ಉಲ್ಲೇಖಿಸಿ, ಟ್ರಂಪ್ ಬಳಿ ಮೋದಿ ಬಗ್ಗೆ ಮಾಹಿತಿಯಿದೆ ಎಂದು ಹೇಳಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ, ಉದ್ಯಮಿ ಅದಾನಿ ವಿರುದ್ಧ ಅಮೆರಿಕದಲ್ಲಿ ಪ್ರಕರಣ ದಾಖಲಾಗಿರುವುದನ್ನೂ ಅವರು ಪ್ರಸ್ತಾಪಿಸಿದರು.
ಈ ನಡುವೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ ಸನ್ನಾಹಗಳು ಜೋರಾಗಿದ್ದು, ಅಸ್ಸಾಂ ಸೇರಿದಂತೆ ಹಲವೆಡೆ ರಾಜಕೀಯ ತಾಪಮಾನ ಏರಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಪ್ರಚಾರ ತೀವ್ರಗೊಳಿಸಿದ್ದು, ಬಿಜೆಪಿ ಕೂಡ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ತೀವ್ರ ಪ್ರಚಾರ ನಡೆಸುತ್ತಿದೆ.
ಒಟ್ಟಿನಲ್ಲಿ, ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ಮಾತಿನ ಸಮರ ಮತ್ತಷ್ಟು ತೀವ್ರಗೊಳ್ಳುವ ಸೂಚನೆ ನೀಡಿದೆ.
ಚುನಾವಣೆ
TN 2026 ಟೀಸರ್‌ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
ಚೆನ್ನೈ: ಮುಂದಿನ ವಾರ ಬಿಡುಗಡೆಯಾಗಲಿರುವ ತಮಿಳು ಸಿನಿಮಾ TN 2026 – ತಂಗೈ ನಚ್ಚಥಿರಂ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾದ ಬಳಿಕ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟೀಸರ್‌ನಲ್ಲಿ ನಟ Nataraj (Natti) ಅಭಿನಯಿಸಿರುವ “ಗೋಲ್ಡನ್ ಸ್ಟಾರ್ ಗುಲ್ಕಂದ್ ಕುಮಾರ್” ಎಂಬ ಪಾತ್ರ ರಾಜಕೀಯಕ್ಕೆ ಪ್ರವೇಶಿಸುವುದನ್ನು ತೋರಿಸಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.
ಟೀಸರ್ ವೈರಲ್ ಆದ ತಕ್ಷಣ, Tamilaga Vettri Kazhagam (ಟಿವಿಕೆ) ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ Vijay ಅವರನ್ನು ಗುರಿಯಾಗಿಸಿಕೊಂಡು ಟೀಸರ್ ರೂಪಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.
ಟೀಸರ್‌ನಲ್ಲಿ ಗುಲ್ಕಂದ್ ಕುಮಾರ್ ಪಾತ್ರವು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ, ವಿಜಯ್ ಅವರಂತೆಯೇ ‘ಸಾಲ್ಟ್ ಅಂಡ್ ಪೆಪ್ಪರ್’ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಅವರ ನಡಿಗೆ ಮತ್ತು ಜನರತ್ತ ಕೈ ಬೀಸುವ ಶೈಲಿಯನ್ನು ಅನುಕರಿಸಿರುವುದು ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೆ, ನಟ Redin Kingsley ಅವರ ಪಾತ್ರವೊಂದು ವೇದಿಕೆಯಲ್ಲಿ “ಹೇ ಮೂವಿ-ಬಾಯ್…” ಎಂದು ಗೇಲಿ ಮಾಡುವ ಸಂಭಾಷಣೆ ಕೂಡ ಟೀಕೆಗೆ ಗುರಿಯಾಗಿದೆ.
ಟೀಸರ್ ಕೊನೆಯಲ್ಲಿ ಕೇಳಿಬರುವ “ಓಂ ಶಕ್ತಿ ಪರಾಶಕ್ತಿ” ಘೋಷಣೆ ಕೂಡ ವಿಜಯ್ ಇತ್ತೀಚೆಗೆ ರಾಜಕೀಯ ವೇದಿಕೆಯಲ್ಲಿ ಬಳಸಿದ ನುಡಿಗಟ್ಟನ್ನು ಹೋಲುತ್ತದೆ ಎನ್ನಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ Aadhav Arjun, “ಇದು ವಿಜಯ್ ವರ್ಚಸ್ಸಿಗೆ ಧಕ್ಕೆ ತರಲು Dravida Munnetra Kazhagam (ಡಿಎಂಕೆ) ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಪಿತೂರಿ” ಎಂದು ಆರೋಪಿಸಿದ್ದಾರೆ. ಜನರು ಇಂತಹ ಚಿತ್ರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.
Umapathy Ramaiah ನಿರ್ದೇಶನದ ಈ ಚಿತ್ರದಲ್ಲಿ Thambi Ramaiah, M. S. Bhaskar, Ilavarasu, Yashika Aannand ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಲಿರುವ ಈ ಚಿತ್ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.
ಚುನಾವಣೆ
“ನಾಲ್ಕು ಮದುವೆಗೆ ಬ್ರೇಕ್” – ಶಾ ಘೋಷಣೆ ಸಂಚಲನ
ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯ ಕಾವು ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಗೃಹ ಸಚಿವ Amit Shah ಮಹತ್ವದ ಘೋಷಣೆ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಗೋಲ್ಪಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾ, “ಅಕ್ರಮ ನುಸುಳುಕೋರರು ನಾಲ್ಕು ಮದುವೆಯಾಗುವುದನ್ನು ತಡೆಯಲು ಯುಸಿಸಿ ಅಗತ್ಯ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು. ಪ್ರಧಾನಿ Narendra Modi ಮತ್ತು ಅಸ್ಸಾಂ ಮುಖ್ಯಮಂತ್ರಿ Himanta Biswa Sarma ಬುಡಕಟ್ಟು ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿದ್ದಾರೆ ಎಂದರು.
ಬುಡಕಟ್ಟು ಪ್ರದೇಶಗಳಲ್ಲಿ ಯುಸಿಸಿ ಜಾರಿಯಾಗುವುದಿಲ್ಲ ಎಂಬುದನ್ನು ಶಾ ಸ್ಪಷ್ಟಪಡಿಸಿ, ಕಾಂಗ್ರೆಸ್ ಹರಡುತ್ತಿರುವ ಗಾಳಿಸುದ್ದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಬುಡಕಟ್ಟು ಪ್ರದೇಶಗಳನ್ನು ಯುಸಿಸಿಯಿಂದ ಹೊರಗಿಡಲಾಗುತ್ತದೆ” ಎಂದು ಹೇಳಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “70 ವರ್ಷ ಆಡಳಿತ ನಡೆಸಿದರೂ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿಯಾಗಿಸಲು ಸಾಧ್ಯವಾಗಲಿಲ್ಲ. ಆದರೆ ಮೋದಿ ನಾಯಕತ್ವದಲ್ಲಿ ಅದು ಸಾಧ್ಯವಾಯಿತು” ಎಂದು ಟೀಕಿಸಿದರು.
Assam ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಎರಡು ಅವಧಿಗೆ ಮುಖ್ಯಮಂತ್ರಿ ಆಗಿರುವ ಹಿಮಂತ ಬಿಸ್ವಾ ಶರ್ಮಾ ಮತ್ತೆ ಅಧಿಕಾರಕ್ಕೇರಲು ಯತ್ನಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರ ಮರುಪಡೆಯಲು ಹೋರಾಟ ನಡೆಸುತ್ತಿದೆ.
ಒಟ್ಟಿನಲ್ಲಿ, ಯುಸಿಸಿ ವಿಚಾರ ಚುನಾವಣೆಯಲ್ಲಿ ಪ್ರಮುಖ ಅಸ್ತ್ರವಾಗಿದ್ದು, ಅಸ್ಸಾಂ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
-
ದೇಶ1 hour ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ1 hour agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ41 minutes agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ1 hour ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ1 hour agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ದೇಶ1 hour agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
-
ಚುನಾವಣೆ3 minutes ago“ಟ್ರಂಪ್ ಅನುಮತಿ ಇಲ್ಲದೆ ತೈಲ ಖರೀದಿ ಸಾಧ್ಯವಿಲ್ಲ”: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
-
ಕ್ರೀಡೆ27 minutes agoಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!
