ರಾಜ್ಯ
ಕಾಂಗ್ರೆಸ್ ಗೆ ವೋಟ್ ಹಾಕಿದ್ದಕ್ಕೆ ಕಿರಿಕ್!
ಹಾಸನ: ಹಾಸನದಲ್ಲಿ ಜೆಡಿಎಸ್ ಹಿಡಿತದಲ್ಲಿರುವ ಹಾಲಿನ ಡೈರಿಯಲ್ಲಿ ಕಿರಿಕ್ ಉಂಟಾಗಿದೆ, ಕಾಂಗ್ರೆಸ್ ಪರ ಕೆಲಸ ಮಾಡಿದವರಿಂದ ಹಾಲು ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಧರು ಆಕ್ರೋಶ ಹೊರಹಾಕಿದ್ದಾರೆ,
ಹಾಸನದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ಸಾಧಿಸಿರುವ ಬೆನ್ನಲ್ಲೇ ಇದೀಗ ಜೆಡಿಎಸ್ ಹಿಡಿತದಲ್ಲಿರುವ ಡೈರಿಯಲ್ಲಿ ಇಂತಹದ್ದೊAದು ಆರೋಪ ಕೇಳಿಬರುತ್ತಿದೆ, ಹಾಲನ್ನು ಹಾಕಿಸಿಕೊಳ್ಳಲು ಡೈರಿ ನಿರಾಕರಿಸುತ್ತಿರುವ ಹಿನ್ನಲೆ ಕಾಂಗ್ರೆಸ್ ಪರ ಮತ ಹಾಕಿದ್ದೇ ತಪ್ಪಾಯ್ತಾ ಎಂದು ಗ್ರಾಮಸ್ಧರು ಪ್ರಶ್ನಿಸಿದ್ದಾರೆ,
ಡೈರಿಗೆ ಹಾಲು ಹಾಕಿಸಿಕೊಳ್ಳಲು ನಿರಾಕರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಧರು ಡಿಸಿ ಕಚೇರಿ ಬಳಿ ಹಾಲಿನ ಕ್ಯಾನ್ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜು, ಯೋಗಣ್ಣ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ,
ಅಪರಾಧ
ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.
ನಿನ್ನೆ ಮಾತ್ರ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.
ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.
ಇದೀಗ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಅಪರಾಧ
BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.
ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.
ದೇಶ
638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ
ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.
ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.
-
ದೇಶ18 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ17 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ17 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ16 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ಅಪರಾಧ17 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ15 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ18 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
-
ದೇಶ17 hours agoಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
