ಚುನಾವಣೆ
ಸವಾಲು ಸ್ವೀಕರಿಸದ್ದಕ್ಕೆ ನಾನು ರಾಜೀನಾಮೆ ನೀಡಲ್ಲ: ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ (Congress) ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ (BJP) ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್ (Sudhakar) ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದರು. ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ (Chikkaballapura) ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.
ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಕೆ ಸುಧಾಕರ್ 20,941 ಮತಗಳ ಮುನ್ನಡೆ ಸಿಕ್ಕಿತ್ತು. ಸುಧಾಕರ್ ಜಯಗಳಿಸಿದ ಬೆನ್ನಲ್ಲೇ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿ ಬಂದಿತ್ತು,
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಜಯಗಳಿಸಿದ್ದರು. ಸುಧಾಕರ್ ಅವರಿಗೆ 8,22,619 ಮತಗಳು ಬಂದರೆ ರಕ್ಷಾ ರಾಮಯ್ಯ ಅವರಿಗೆ 6,59,159 ಮತಗಳು ಬಿದ್ದಿದ್ದವು.
ಚುನಾವಣೆ
Bhabanipur Shock: 700 ಮತದಾರರ ಬೂತ್‌ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್‌ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್‌ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್‌ಗಳ ಪೈಕಿ 207 ಬೂತ್‌ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.
ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.
ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.
ಇನ್ನು ಹಲವು ಬೂತ್‌ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.
ಚುನಾವಣೆ
ಜಿಬಿಎ ಚುನಾವಣೆಗೆ ಕೌಂಟ್‌ಡೌನ್ ಶುರು! ಜೂನ್‌ನಲ್ಲಿ ಡೇಟ್ ಫಿಕ್ಸ್
ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.
ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.
ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಚುನಾವಣೆ
‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಗುರುವಾರ ಕಾಲಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.
ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.
ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.
ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
-
ಕ್ರೀಡೆ9 hours agoಹಾಂಗ್ ಕಾಂಗ್ನಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಶಿಪ್ಗೆ ಕರ್ನಾಟಕದ ಇಬ್ಬರು ಆಯ್ಕೆ
-
ದೇಶ13 hours ago59 ವರ್ಷಗಳ ಬಳಿಕ ತಮಿಳುನಾಡು ಸಚಿವ ಸಂಪುಟಕ್ಕೆ ಕಾಂಗ್ರೆಸ್ ಎಂಟ್ರಿ! ಇಂದು ವಿಜಯ್ ಕ್ಯಾಬಿನೆಟ್ ವಿಸ್ತರಣೆ
-
ದೇಶ12 hours agoಬಿಜೆಪಿಗಿಂತ ವೇಗವಾಗಿ ಬೆಳೆದ ‘Cockroach Janta Party’!
-
ದೇಶ7 hours ago“ನಾವು ಯಾರೂ ಸುರಕ್ಷಿತರಲ್ಲ”: ಮುಂದಿನ ಮಹಾಮಾರಿಯ ಬಗ್ಗೆ ಜಾಗತಿಕ ವರದಿ ಆತಂಕ
-
ದೇಶ7 hours agoCockroach Janata Party ಖಾತೆ ತಡೆ: ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ
-
ಅಪರಾಧ11 hours agoLatest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ
-
ದೇಶ11 hours agoಮೆಲೊಡಿ ಟ್ರೆಂಡ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ಜೋಡಿ: ಸೋನಾಕ್ಷಿ ವಿಡಿಯೋ ಸದ್ದು
-
ದೇಶ11 hours ago‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಯಾದರೆ ₹7 ಲಕ್ಷ ಕೋಟಿ ಉಳಿತಾಯ: ಜೆಪಿಸಿ ಸಮಿತಿ
