ರಾಜ್ಯ
ನೀವು ಜನರನ್ನು ಕೊಲ್ಲಲು ಹೋಗಬೇಡಿ’: ನಟ ದರ್ಶನ್ ಬಂಧನದ ಬಗ್ಗೆ ನಟಿ ರಮ್ಯಾ, ಪೊಲೀಸರ ಕೆಲಸಕ್ಕೆ ಮೆಚ್ಚುಗೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರನ್ನು ಬಂಧಿಸಿರುವುದು ಕನ್ನಡ ಚಿತ್ರರಂಗದ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಚರಂಡಿಯಲ್ಲಿ 33 ವರ್ಷದ ರೇಣುಕಾ ಸ್ವಾಮಿ ಎಂಬುವವರ ಶವ ಪತ್ತೆಯಾದ ಬಳಿಕ ದರ್ಶನ್ ಸೇರಿದಂತೆ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ರಾಜಕಾರಣಿ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ರಮ್ಯಾ, ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ಯಾವುದೇ ಕಾರಣಕ್ಕೂ ನೀವು ಜನರನ್ನು ಹೊಡೆಯಲು ಅಥವಾ ಕೊಲ್ಲಲು ಮುಂದಾಗಬೇಡಿ. ನ್ಯಾಯ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿಮಗೆ ಗೊಂದಲವಿದ್ದರೂ ಕೂಡ ಒಂದು ದೂರು ನೀಡಿದರೆ ಸಾಕು’ ಎಂದಿದ್ದಾರೆ.
ಅದೇ ಪೋಸ್ಟ್‌ನಲ್ಲಿ, ಅವರು ಕರ್ನಾಟಕ ಪೊಲೀಸ್ ಅಧಿಕಾರಿಗಳ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ‘ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ಮತ್ತು ಗೌರವದ ಮಾತು. ಇದು ಕೃತಜ್ಞತೆಯಿಲ್ಲದ ಕೆಲಸ ಮತ್ತು ಅವರು ತಮ್ಮ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತಿದ್ದಾರೆ. ಅವರು ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯುವುದಿಲ್ಲ ಮತ್ತು ಕಾನೂನು ಮತ್ತು ಮತ್ತು ನ್ಯಾಯದಲ್ಲಿ ಜನರು ನಂಬಿಕೆ ಇಡುವಂತೆ ಮಾಡುತ್ತಿದ್ದಾರೆ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ’ ಎಂದಿದ್ದಾರೆ.
#JusticeforRenukaswamy #Darshan #Yedyurappa #PrajwalRevanna’ ಎಂದು ನಟಿ ಪೋಸ್ಟ್ ಅನ್ನು ಕೊನೆಗೊಳಿಸಿದ್ದಾರೆ.
ಲೈಂಗಿಕ ಕಿರುಕುಳದ ಆರೋಪದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿರುವ ಬಗ್ಗೆ ನಟಿ ಎಕ್ಸ್‌ನಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.
ರಾಜ್ಯ
Bakrid ವೇಳೆ ಗೋಹತ್ಯೆ ತಡೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ; ತಮಿಳುನಾಡು ಸರ್ಕಾರಕ್ಕೆ ಸದ್ಯದ ನೆಮ್ಮದಿ
ಚೆನ್ನೈ, ಜು.13: Bakrid ಹಬ್ಬದ ಸಂದರ್ಭದಲ್ಲಿ ರಾಜ್ಯದಲ್ಲಿ ಗೋಹತ್ಯೆ ನಡೆಯದಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಮದ್ರಾಸ್ ಹೈಕೋರ್ಟ್ ಮೇ 27ರಂದು ನೀಡಿದ್ದ ಆದೇಶದಲ್ಲಿ, ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ಪ್ರಾಣಿವಧೆ ನಡೆಸಬೇಕು ಎಂದು ತಿಳಿಸುವುದರ ಜೊತೆಗೆ, ಬಕ್ರೀದ್ ಹಬ್ಬದಂದು ಅಥವಾ ಇತರ ಯಾವುದೇ ದಿನ ಹಸು ಹಾಗೂ ಕರುಗಳ ಹತ್ಯೆ ನಡೆಯದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಈ ಆದೇಶವನ್ನು ರಾಜ್ಯಾದ್ಯಂತ ಜಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.
ಆದರೆ, ತಮಿಳುನಾಡು ಸರ್ಕಾರ ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ, 1958ರ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ನಿಗದಿತ ಷರತ್ತುಗಳನ್ನು ಪೂರೈಸಿದ ಕೆಲವು ಸಂದರ್ಭಗಳಲ್ಲಿ ಗೋಹತ್ಯೆಗೆ ಅವಕಾಶವಿದೆ ಎಂದು ವಾದಿಸಿತು. ಜಾನುವಾರು 10 ವರ್ಷಕ್ಕಿಂತ ಹೆಚ್ಚು ವಯಸ್ಸಾಗಿದ್ದರೆ ಅಥವಾ ಕೃಷಿ ಹಾಗೂ ಸಂತಾನೋತ್ಪತ್ತಿಗೆ ಯೋಗ್ಯವಿಲ್ಲವೆಂದು ಪ್ರಮಾಣೀಕರಿಸಿದರೆ ಮಾತ್ರ ವಧೆಗೆ ಅನುಮತಿ ಇದೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ತಿಳಿಸಿದೆ.
ಈ ವಾದವನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಿದ್ದುಪಡಿ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದು, ಮುಂದಿನ ಆದೇಶದವರೆಗೆ ಅದರ ಜಾರಿಗೆ ತಡೆ ನೀಡಿದೆ.
ಈ ಪ್ರಕರಣವು ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗೋಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಿಂದ ಆರಂಭವಾಗಿತ್ತು. ಇದೀಗ ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದೊಂದಿಗೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮುಂದಿನ ವಿಚಾರಣೆಯಲ್ಲಿ ಅಂತಿಮ ಕಾನೂನು ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.
ರಾಜ್ಯ
Bidadi Township ವಿರೋಧಕ್ಕೆ ರೈತರ ರಣಕಹಳೆ; JMC ಕಾರಿನ ಮೇಲೆ ಕಲ್ಲು ತೂರಾಟ
ಬೆಂಗಳೂರು ದಕ್ಷಿಣ: Bidadi Township (Bidadi Smart Township) ಯೋಜನೆಗೆ ವಿರೋಧವಾಗಿ ರೈತರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮದಲ್ಲಿ ಜಂಟಿ ಮಾರುಕಟ್ಟೆ ಸಮಿತಿ (JMC) ಅಧಿಕಾರಿಗಳ ಸರ್ವೇ ಕಾರ್ಯವನ್ನು ವಿರೋಧಿಸಿ ನೂರಾರು ರೈತರು ಹಾಗೂ ರೈತ ಮಹಿಳೆಯರು ಸೋಮವಾರ ರಸ್ತೆಗಿಳಿದು ಭಾರೀ ಪ್ರತಿಭಟನೆ ನಡೆಸಿದರು.
ಸರ್ವೇ ನಡೆಸಲು ಬಂದ ಅಧಿಕಾರಿಗಳ ವಾಹನವನ್ನು ತಡೆದ ಪ್ರತಿಭಟನಾಕಾರರು ಕಾರಿನ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಮಹಿಳೆಯರು ಕೈಯಲ್ಲಿ ಪೊರಕೆ ಹಿಡಿದು ವಾಹನದ ಮೇಲೆ ಹೊಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಮಹಿಳೆಯರು, “ನಮ್ಮ ಜೀವ ಹೋದರೂ ತಲತಲಾಂತರಗಳಿಂದ ಬದುಕು ಕಟ್ಟಿಕೊಂಡಿರುವ ಕೃಷಿ ಭೂಮಿಯನ್ನು ಬಿಡುವುದಿಲ್ಲ. ಬಲವಂತದ ಸರ್ವೇ ಒಪ್ಪುವುದಿಲ್ಲ” ಎಂದು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ರೈತರು ಟೌನ್‌ಶಿಪ್ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಕೈಯಲ್ಲಿ ಪೊರಕೆಗಳನ್ನು ಹಿಡಿದು ಬಿಡದಿ–ಹಾರೋಹಳ್ಳಿ ಮುಖ್ಯರಸ್ತೆಯಲ್ಲಿ ಧರಣಿ ನಡೆಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು.
ಪ್ರತಿಭಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದರು. ರೈತರೊಂದಿಗೆ ಮಾತುಕತೆ ನಡೆಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರೂ, ಯೋಜನೆಯನ್ನು ಕೈಬಿಡುವವರೆಗೆ ಹೋರಾಟ ಮುಂದುವರಿಸುವುದಾಗಿ ರೈತರು ಸ್ಪಷ್ಟಪಡಿಸಿದರು.
ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಈ ಬೆಳವಣಿಗೆ ರಾಜ್ಯದ ಗಮನ ಸೆಳೆದಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಹಾಗೂ ರೈತರ ನಡುವಿನ ಮಾತುಕತೆ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು
Yeshwanthpura ದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಬ್ಯಾಡರಹಳ್ಳಿ, ಭಾರತನಗರದಲ್ಲಿ ಹೆಚ್ಚಿದ ಭೀತಿ
ಬೆಂಗಳೂರು, ಜುಲೈ 13: Yeshwanthpura ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿ ಹಾಗೂ ಭಾರತನಗರ ಪ್ರದೇಶಗಳಲ್ಲಿ ಕಳೆದ ಐದು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಗುರುವಾರ ಮತ್ತು ಶುಕ್ರವಾರ ಪಾರ್ಕ್ ಹಾಗೂ ರಸ್ತೆ ಪಕ್ಕದ ಖಾಲಿ ಜಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದರೆ, ಭಾನುವಾರವೂ ಮತ್ತೆ ಪ್ರತ್ಯಕ್ಷವಾಗಿರುವುದು ಜನರ ಭಯವನ್ನು ಮತ್ತಷ್ಟು ಹೆಚ್ಚಿಸಿದೆ.
ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರ ಸೂಚನೆಯಂತೆ ಸಾರ್ವಜನಿಕರ ಮನವಿಯ ಮೇರೆಗೆ ಚಿರತೆ ಅಡಗಿಕೊಳ್ಳುತ್ತಿದ್ದ ಪೊದೆಗಳನ್ನು ತೆರವುಗೊಳಿಸಲಾಗಿತ್ತು. ಆದರೂ ಚಿರತೆ ಮತ್ತೆ ಕಾಣಿಸಿಕೊಂಡಿರುವುದರಿಂದ ಅರಣ್ಯ ಇಲಾಖೆಯ ಮುಂದಿನ ಕ್ರಮದತ್ತ ಜನರ ಗಮನ ನೆಟ್ಟಿದೆ.
ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಒಂದು ಬೋನನ್ನು ಅಳವಡಿಸಿದೆ. ಆದರೆ, ಒಂದು ಬೋನು ಸಾಕಾಗುವುದಿಲ್ಲ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದು, ಕನಿಷ್ಠ ಎರಡು ಅಥವಾ ಮೂರು ಬೋನುಗಳನ್ನು ಅಳವಡಿಸಿ, ಅರಣ್ಯ ಇಲಾಖೆ ಸಿಬ್ಬಂದಿಯಿಂದ ನಿರಂತರ ಗಸ್ತು ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಸಂಜೆಯಾಗುತ್ತಿದ್ದಂತೆ ಈ ಭಾಗದಲ್ಲಿ ಜನರು ಹೊರಗಡೆ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ. ವಾಹನ ಸಂಚಾರವೂ ಕಡಿಮೆಯಾಗಿದ್ದು, ಮಕ್ಕಳು ಹಾಗೂ ವೃದ್ಧರ ಸುರಕ್ಷತೆ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಚಿರತೆಯ ಚಲನವಲನದ ಮೇಲೆ ನಿಗಾ ಇರಿಸಲಾಗಿದೆ. ಸ್ಥಳೀಯರು ಅನಗತ್ಯವಾಗಿ ಹೊರಗೆ ಓಡಾಡದಂತೆ ಹಾಗೂ ಚಿರತೆ ಕಂಡುಬಂದರೆ ತಕ್ಷಣ ಅರಣ್ಯ ಇಲಾಖೆ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
-
ಕ್ರೀಡೆ20 ಗಂಟೆಗಳು agoEngland ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್? ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆ
-
ಅಪರಾಧ19 ಗಂಟೆಗಳು agoTelangana ‘ಇದು ನನ್ನ ಆಯ್ಕೆ’ ಎಂದ ಎಸ್ಐಗೆ ದುಬಾರಿ ಆಯಿತು; ಡಿಜಿಪಿಯಿಂದ ಅಮಾನತು ಸೂಚನೆ
-
ಬೆಂಗಳೂರು20 ಗಂಟೆಗಳು ago₹13 Crores ವೆಚ್ಚ, 2 ವರ್ಷ ಕಾಯುವಿಕೆ! ವಿಜಯನಗರ ಅಂಡರ್ಗ್ರೌಂಡ್ ಮಾರುಕಟ್ಟೆ ಇನ್ನೂ ಬಂದ್; 80ಕ್ಕೂ ಹೆಚ್ಚು ಮಳಿಗೆಗಳು ಖಾಲಿ
-
ದೇಶ17 ಗಂಟೆಗಳು agoPM Narendra Modi ಜಕಾರ್ತಾ ಭೇಟಿ ಐತಿಹಾಸಿಕ; ಭಾರತ-ಇಂಡೋನೇಷ್ಯಾ ನಡುವೆ ಹಲವು ಮಹತ್ವದ ಒಪ್ಪಂದಗಳು
-
ದೇಶ21 ಗಂಟೆಗಳು agoThailand ಪಬ್ನಲ್ಲಿ ಭೀಕರ ಅಗ್ನಿ ಅವಘಡ; 27 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ
-
ರಾಜ್ಯ13 ಗಂಟೆಗಳು agoBakrid ವೇಳೆ ಗೋಹತ್ಯೆ ತಡೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ; ತಮಿಳುನಾಡು ಸರ್ಕಾರಕ್ಕೆ ಸದ್ಯದ ನೆಮ್ಮದಿ
-
ದೇಶ21 ಗಂಟೆಗಳು agoKadapa ದಲ್ಲಿ ಕೋವಿಡ್ ಆತಂಕ; ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ
-
ರಾಜ್ಯ21 ಗಂಟೆಗಳು agoKarnataka SIR ಅಭಿಯಾನಕ್ಕೆ ಭರ್ಜರಿ ವೇಗ; ಶೇ.92.95 ಕೆಲಸ ಪೂರ್ಣ
