ಅಪರಾಧ
ನಟ ದರ್ಶನ್ ಜೊತೆ ಮಾತಾಡಿಕೊಂಡು ಬಂದ್ವಿ -ಜಾಮೀನು ಬಗ್ಗೆ ವಕೀಲರು ಹೇಳಿದ್ದೇನು..?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ತೀವ್ರ ವಿಚಾರಣೆಗೆ ಎದುರಿಸುತ್ತಿದ್ದಾರೆ. ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯ ಕಸ್ಟಡಿಯಲ್ಲಿರುವ ದರ್ಶನ್ ಅವರನ್ನು ಇವತ್ತು ವಕೀಲರು ಭೇಟಿಯಾದರು.
ಇಂದು ಬೆಳಗ್ಗೆ ದರ್ಶನ್ ಪರ ವಕೀಲರು ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ಮುಂದಿನ ಕಾನೂನು ಹೋರಾಟಗಳ ಬಗ್ಗೆ ಚರ್ಚೆ ಮಾಡಿದ್ದಾರೆ ವಕೀಲರು ತಿಳಿಸಿದ್ದಾರೆ. ವಕೀಲ ಅನಿಲ್ ಬಾಬು ಮಾತನಾಡಿ.. ಕೋರ್ಟ್ ನಿರ್ದೇಶನದ ಪ್ರಕಾರ ಇವತ್ತು ಸಂಜೆ ಐದು ಗಂಟೆಯೊಳಗೆ ಆರೋಪಿಗಳನ್ನು ಹಾಜರುಪಡಿಸಬೇಕು. ನಮ್ಮ ಪ್ರಕಾರ ಇವತ್ತು ಮಧ್ಯಾಹ್ನ ಹಾಜರು ಮಾಡಿಯೇ ಮಾಡುತ್ತಾರೆ. ಅವರು ಇನ್ನೂ ಕಸ್ಟಡಿಗೆ ಕೇಳ್ತಾರೋ? ಇಲ್ಲವೋ ಅನ್ನೋದ್ರ ಬಗ್ಗೆ ನಮಗೆ ಗೊತ್ತಿಲ್ಲ. ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ನಿರ್ಧಾರವನ್ನು ನೋಡಿ ನಾವು ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧಾರ ಮಾಡ್ತೇವೆ ಎಂದರು.
ಬಹುತೇಕ ತನಿಖೆ ಮುಗಿದಿರಬಹುದು. ಬೇಲ್ ಹಾಕಬೇಕೋ? ಬೇಡವೋ ಅನ್ನೋದು ಈಗ ನಿರ್ಧಾರ ಮಾಡಿಲ್ಲ. ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಳಗಾದ ನಂತರ ಚರ್ಚೆ ಮಾಡಿ ಬೇಲ್ಗೆ ಅರ್ಜಿ ಹಾಕ್ತೇವೆ. ಇದಕ್ಕೆ ಒಂದು ವಾರಗಳ ಸಮಯ ಬೇಕಾಗುತ್ತದೆ. ದರ್ಶನ್ ಜೊತೆ ಮಾತುಕತೆ ಮಾಡಿಕೊಂಡು ಬಂದಿದ್ದೇವೆ ಅಷ್ಟೇ. ಅವರ ಆರೋಗ್ಯ ಚೆನ್ನಾಗಿದೆ ಎಂದು ವಕೀಲ ಅನೀಲ್ ಬಾಬು ತಿಳಿಸಿದ್ದಾರೆ.
ನಿನ್ನೆ ಆರೋಪಿಗಳಿಗೆ ಡಿಎನ್ಎ ಟೆಸ್ಟ್ ಮಾಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ವಕೀಲ ರಂಗನಾಥ್ ರೆಡ್ಡಿ ಪ್ರತಿಕ್ರಿಯಿಸಿ.. ಪರೀಕ್ಷೆಗೆ ಕೋರ್ಟ್ ಅನುಮತಿ ಬೇಕು, ಸ್ಯಾಂಪಲ್ ಪಡೆಯಲು ಬೇಕಾಗುತ್ತದೆ. ಆದ್ರೆ ಪೊಲೀಸರು ತಗೊಂಡಿದ್ದಾರಾ ಇಲ್ವೊ ಗೊತ್ತಿಲ್ಲ. ಡಿಎನ್ಎ ಟೆಸ್ಟ್ ಮಾಡಿದ್ರಾ ಇಲ್ವೊ ಅನ್ನೋದು ನಮಗೆ ಗೊತ್ತಿಲ್ಲ. ಅದೆಲ್ಲಾ ಚಾರ್ಜ್ ಶೀಟ್ ನಲ್ಲಿರುತ್ತದೆ. ಅಲ್ಲಿ ನಮಗೆ ಗೊತ್ತಾಗುತ್ತದೆ ಎಂದಿದ್ದಾರೆ.
ಅಪರಾಧ
ಹಸಿ–ಒಣ ಕಸ ಬೇರ್ಪಡಿಸಲು ಸೂಚನೆ: ದಾವಣಗೆರೆಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ
ದಾವಣಗೆರೆ: ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ನೀಡಲು ತಿಳಿಸಿದ್ದ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮೆಹಬೂಬ್ ನಗರದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಕಾರ್ಮಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲ್ಲೆಗೊಳಗಾದವರು ಕರಿಬಸಪ್ಪ ಎಂಬ ಪೌರ ಕಾರ್ಮಿಕ ಹಾಗೂ ವಾಹನ ಚಾಲಕ ಎಂದು ತಿಳಿದುಬಂದಿದೆ. ಪ್ರತಿದಿನ ಮನೆಮನೆಗೆ ತೆರಳಿ ತ್ಯಾಜ್ಯ ಸಂಗ್ರಹಣೆ ಮಾಡುವ ವೇಳೆ ಸ್ಥಳೀಯ ನಿವಾಸಿಯೊಬ್ಬರೊಂದಿಗೆ ವಾಗ್ವಾದ ಉಂಟಾಗಿ, ಅದು ಹಲ್ಲೆಗೆ ತಿರುಗಿದೆ.
ಘಟನೆ ಹೇಗೆ ನಡೆದಿದೆ?
ಪೌರ ಕಾರ್ಮಿಕರು ಬೆಳಗ್ಗೆ ಕಸ ಸಂಗ್ರಹಣೆಗೆ ಮೆಹಬೂಬ್ ನಗರಕ್ಕೆ ತೆರಳಿದ್ದರು. ಈ ವೇಳೆ ಒಬ್ಬ ನಿವಾಸಿ ಹಸಿ ಕಸ ಮತ್ತು ಒಣ ಕಸವನ್ನು ಒಂದೇ ಬಕೆಟ್‌ನಲ್ಲಿ ನೀಡಿದ್ದಾನೆ. ಜೊತೆಗೆ ಮಗುವಿನ ಡೈಪರ್ ಕೂಡ ಸೇರಿಸಿದ್ದಾನೆ.
“ಡೈಪರ್ ಅನ್ನು ಪ್ರತ್ಯೇಕವಾಗಿ ಕೊಡಿ” ಎಂದು ಪೌರ ಕಾರ್ಮಿಕರು ತಿಳಿಸಿದಾಗ ಮಾತಿನ ಚಕಮಕಿ ಉಂಟಾಗಿದೆ. ಮಾತಿಗೆ ಮಾತು ಬೆಳೆದು ಸ್ಥಳೀಯರು ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಘಟನೆ ಖಂಡಿಸಿ ಪೌರ ಕಾರ್ಮಿಕರು ಮತ್ತು ಕಸ ಸಂಗ್ರಹಿಸುವ ವಾಹನ ಚಾಲಕರು Azad Nagar Police Station ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು. ಹಲ್ಲೆ ಮಾಡಿದವರನ್ನು ಬಂಧಿಸುವವರೆಗೂ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.
“ನಮ್ಮ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದೆ. ಕೆಲಸ ಮಾಡಲು ಭಯವಾಗುತ್ತಿದೆ. ನಮಗೆ ಭದ್ರತೆ ಒದಗಿಸಬೇಕು” ಎಂದು ಕಾರ್ಮಿಕರು ಆಗ್ರಹಿಸಿದರು.
ಮೆಹಬೂಬ್ ನಗರ, ಅಜಾದ್ ನಗರ, ಶಿವನಗರ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಕೆಲಸ ಮಾಡಲು ಆತಂಕವಿದೆ ಎಂದು ತಿಳಿಸಿದ್ದಾರೆ. ಕೂಡಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಅಪರಾಧ
KANPUR ಲ್ಯಾಂಬೋರ್ಗಿನಿ ಅಪಘಾತ: ಕೆಕೆ ಮಿಶ್ರಾ ಪುತ್ರ ಶಿವಂ ಬಂಧನ
ಲಕ್ನೋ: ಕಾನ್ಪುರದಲ್ಲಿ ಇತ್ತೀಚೆಗೆ ನಡೆದ ಲ್ಯಾಂಬೋರ್ಗಿನಿ (Lamborghini Revuelto) ಕಾರು ಅಪಘಾತ ಪ್ರಕರಣದಲ್ಲಿ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್ಪುರದ ವಿಐಪಿ ರಸ್ತೆಯಲ್ಲಿ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಶಿವಂ ಮಿಶ್ರಾ ಕುಡಿದ ಮತ್ತಿನಲ್ಲಿ ಅತಿ ವೇಗದಲ್ಲಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.
ವೇಗವಾಗಿ ಬಂದ ಕಾರು ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಗುದ್ದಿತ್ತು. ಬೈಕ್ ಕಾರಿನ ಕೆಳಗೆ ಸಿಲುಕಿ ಕೆಲ ಅಂತರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು. ಗಾಯಗೊಂಡವರಲ್ಲಿ ತೌಫಿಕ್ ಅಹ್ಮದ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಮೂಳೆ ಮುರಿತ ಉಂಟಾಗಿದೆ.
ಪ್ರಾರಂಭದಲ್ಲಿ ಕುಟುಂಬದ ವಕೀಲರು ಡ್ರೈವರ್ ಮೋಹನ್ ಕಾರು ಚಲಾಯಿಸುತ್ತಿದ್ದರೆಂದು ಹೇಳಿದ್ದರೂ, ಸಿಸಿಟಿವಿ ದೃಶ್ಯಾವಳಿ ಚಾಲಕನ ಸೀಟಿನಲ್ಲಿ ಶಿವಂ ಮಿಶ್ರಾ ಇದ್ದುದನ್ನು ಸ್ಪಷ್ಟಪಡಿಸಿದೆ. ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
-
ಚುನಾವಣೆ8 hours agoGBA ವಾರ್ಡ್ಗಳಲ್ಲಿ ಬೂತ್ ಹಂಚಿಕೆ ಗೊಂದಲ: ತಿದ್ದುಪಡಿಸದಿದ್ದರೆ ಸುಪ್ರೀಂ ಕೋರ್ಟ್ಗೆ ಮನವಿ – ಸಿ.ಎಂ. ಸತ್ಯನಾರಾಯಣ ಎಚ್ಚರಿಕೆ
-
ದೇಶ13 hours agoಫುಟ್ಪಾತ್ನಲ್ಲಿ ಬೈಕ್‌ಗೆ ಮಹಿಳೆಯ ಅಡ್ಡಿ: ಕೇರಳದಲ್ಲಿ ವೈರಲ್ ವಿಡಿಯೋ
-
ದೇಶ12 hours agoRBI : ಸಾಲ ವಸೂಲಿಗೆ ಹೊಸ ನಿಯಮಗಳು: ಆರ್ಬಿಐ ಕಟ್ಟುನಿಟ್ಟಿನ ಮಾರ್ಗಸೂಚಿ
-
ದೇಶ14 hours agoSHAKTI SCHEME : ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್: ಸಚಿವ ಸಂಪುಟದ ಮಹತ್ವದ ನಿರ್ಧಾರ
-
ದೇಶ14 hours agoBangladesh Election 2026: ಬಿಎನ್ಪಿ ಭರ್ಜರಿ ಗೆಲುವು, ತಾರಿಖ್ ರೆಹಮಾನ್ ಮುಂದಿನ ಪ್ರಧಾನಿ
-
ಕ್ರೀಡೆ11 hours agoBENGALURU : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ಗೆ ಒಪ್ಪಿಗೆ: 35 ಸಾವಿರ ಜನ ಮಿತಿ, ಭದ್ರತೆಗೆ ಸಮಿತಿ
-
ದೇಶ9 hours agoBENGALURU : ಮಹಾಶಿವರಾತ್ರಿ ಪ್ರಯುಕ್ತ ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ನಿಷೇಧ
-
ದೇಶ14 hours agoದೇವನಹಳ್ಳಿ ಸಮೀಪ ಭೀಕರ ರಸ್ತೆ ಅಪಘಾತ: 7 ಮಂದಿ ದುರ್ಮರಣ
