ಅಪರಾಧ
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡ ಜೈಲು ಪಾಲು
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಸೇರಿ ಒಟ್ಟು 13 ಆರೋಪಿಗಳನ್ನು 24 ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎಕಾನಾಮಿಕ್ ಆಫೇನ್ಸ್ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು.
ಇದೀಗ ಈ ಕೊಲೆ ಕೇಸ್ ಸಂಬಂಧ ಎ1 ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ. ಆತನಿಗೆ ಪಾಠ ಕಲಿಸಲು ದರ್ಶನ್ ಮತ್ತು ಸಹಚರರು ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಪವಿತ್ರ ಗೌಡ ಎ1 ದರ್ಶನ್ ಎ2 ಆಗಿದ್ದರು. ಹೀಗಾಗಿ ಈ ಕೊಲೆಯಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ದಿನ ಕಳೆದಂತೆ ಸಾಕ್ಷಿಗಳನ್ನು ಪತ್ತೆ ಹಚ್ಚಿದ್ದರು.
ದೀಗ 24 ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎಕಾನಾಮಿಕ್ ಆಫೇನ್ಸ್ ಕೋರ್ಟ್ನಲ್ಲಿ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡಗೆ ಹಾಗೂ ಆಕೆಯ ಪಿಎ ಪವನ್ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಅಪರಾಧ
Gangajal ಹಿಡಿದು ಲಂಚ ಹಂಚಿಕೊಳ್ಳುವ ಪ್ರಮಾಣ! Corporators ಗಳ ವಿಡಿಯೋ ವೈರಲ್, ತನಿಖೆಗೆ ಆದೇಶ
ಲಖನೌ: ಉತ್ತರ ಪ್ರದೇಶದ ಶಹಜಹಾನ್‌ಪುರ ಮಹಾನಗರ ಪಾಲಿಕೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಹಲವು Corporators ಗಳು Gangajal ಹಿಡಿದುಕೊಂಡು, ಪಾಲಿಕೆಗೆ ಬರುವ ಲಂಚದ ಹಣವನ್ನು ಪರಸ್ಪರ ಸಮಾನವಾಗಿ ಹಂಚಿಕೊಳ್ಳುವುದಾಗಿ ಪ್ರಮಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಕಾರ್ಪೊರೇಟರ್‌ವೊಬ್ಬರು ಗಂಗಾಜಲವಿರುವ ಪಾತ್ರೆಯನ್ನು ಕೈಯಲ್ಲಿ ಹಿಡಿದು ಪ್ರಮಾಣ ಮಾಡುತ್ತಿರುವುದು ಕಂಡುಬಂದಿದೆ. ಪಾಲಿಕೆಗೆ ಬರುವ ಲಂಚದ ಹಣವನ್ನು ಎಲ್ಲ 60 ಕಾರ್ಪೊರೇಟರ್‌ಗಳು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಅವರು ಹೇಳುತ್ತಿರುವುದು ವಿಡಿಯೋದಲ್ಲಿದೆ. ಅವರ ಮಾತುಗಳನ್ನು ಇತರ ಕಾರ್ಪೊರೇಟರ್‌ಗಳು ಪುನರುಚ್ಚರಿಸುತ್ತಿರುವ ದೃಶ್ಯವೂ ಸೆರೆಯಾಗಿದೆ.
ಗಂಗಾಜಲ ಹಿಡಿದು ಏನು ಪ್ರಮಾಣ ಮಾಡಿದರು?
ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಾಹಿತಿಯ ಪ್ರಕಾರ, ಪಾಲಿಕೆಯಲ್ಲಿ ಲಂಚದ ರೂಪದಲ್ಲಿ ಬರುವ ಹಣವನ್ನು ಎಲ್ಲ ಕಾರ್ಪೊರೇಟರ್‌ಗಳ ನಡುವೆ ಸಮಾನವಾಗಿ ಹಂಚಿಕೊಳ್ಳಬೇಕು ಎಂಬ ರೀತಿಯಲ್ಲಿ ಪ್ರಮಾಣ ಮಾಡಲಾಗಿದೆ ಎನ್ನಲಾಗಿದೆ. ಇದೇ ವೇಳೆ, ಈ ವ್ಯವಸ್ಥೆಯಲ್ಲಿ ಯಾರಾದರೂ ಸಂಕಷ್ಟಕ್ಕೆ ಸಿಲುಕಿದರೆ ಎಲ್ಲರೂ ಒಗ್ಗಟ್ಟಿನಿಂದ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಹೇಳಲಾಗಿದೆ.
ಅಷ್ಟೇ ಅಲ್ಲದೆ, ಈ ಪ್ರಮಾಣವನ್ನು ಯಾರಾದರೂ ಮುರಿದರೆ ಅವರನ್ನು ದ್ರೋಹಿ ಎಂದು ಪರಿಗಣಿಸಲಾಗುವುದು ಎಂಬ ಮಾತುಗಳೂ ವಿಡಿಯೋದಲ್ಲಿ ಕೇಳಿಬರುತ್ತವೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಮಹಾನಗರ ಪಾಲಿಕೆಯ ಕಾರ್ಯವೈಖರಿ ಹಾಗೂ ಭ್ರಷ್ಟಾಚಾರದ ಆರೋಪಗಳ ಕುರಿತು ತೀವ್ರ ಚರ್ಚೆ ಆರಂಭವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ
ವಿಡಿಯೋ ವೈರಲ್ ಆದ ಬಳಿಕ ನೆಟ್ಟಿಗರು ಹಲವು ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಮಹಾನಗರ ಪಾಲಿಕೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ.
ಕೆಲವರು ಕಾರ್ಪೊರೇಟರ್‌ಗಳ ಆಸ್ತಿ ಮತ್ತು ಜೀವನಶೈಲಿಯಲ್ಲಿನ ಬದಲಾವಣೆಗಳ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದಾರೆ. ಸಾಮಾಜಿಕ ಜಾಲತಾಣದ ಕಾಮೆಂಟ್‌ವೊಂದರಲ್ಲಿ, ಮೂರು ವರ್ಷಗಳ ಹಿಂದೆ ಕೇವಲ ಒಂದು ಮನೆ ಹೊಂದಿದ್ದ ಕಾರ್ಪೊರೇಟರ್‌ವೊಬ್ಬರು ಈಗ ಹಲವು ಮನೆಗಳು ಮತ್ತು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.
ಆದರೆ, ಇಂತಹ ಸಾಮಾಜಿಕ ಜಾಲತಾಣದ ಆರೋಪಗಳು ಸ್ವತಂತ್ರವಾಗಿ ಸಾಬೀತಾಗಿಲ್ಲ ಎಂಬುದನ್ನೂ ಗಮನಿಸಬೇಕಿದೆ. ವೈರಲ್ ವಿಡಿಯೋದಲ್ಲಿರುವ ಆರೋಪಗಳ ನೈಜತೆ ಹಾಗೂ ಅದರಲ್ಲಿರುವ ವ್ಯಕ್ತಿಗಳ ಗುರುತನ್ನು ಅಧಿಕೃತ ತನಿಖೆಯ ಬಳಿಕವೇ ಖಚಿತಪಡಿಸಬೇಕಾಗಿದೆ.
ವಿಡಿಯೋ 2025ರದ್ದಂತೆ; ತನಿಖೆಗೆ ಆದೇಶ
ಈ ನಡುವೆ ಪ್ರಕರಣದ ಕುರಿತು ಶಹಜಹಾನ್‌ಪುರ ಮಹಾನಗರ ಪಾಲಿಕೆ ಆಯುಕ್ತೆ ಸೌಮ್ಯಾ ಗುರುರಾಣಿ ಪ್ರತಿಕ್ರಿಯಿಸಿದ್ದಾರೆ. ವೈರಲ್ ಆಗಿರುವ ವಿಡಿಯೋ 2025ರ ನವೆಂಬರ್ ತಿಂಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.
ಆ ಸಂದರ್ಭದಲ್ಲಿ ಪಾಲಿಕೆಯ ಆಯುಕ್ತರಾಗಿ ಬೇರೊಬ್ಬರು ಕಾರ್ಯನಿರ್ವಹಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ. ಆದರೂ, ವಿಡಿಯೋದಲ್ಲಿರುವ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿರುವ ಆಯುಕ್ತೆ, ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ತನಿಖಾ ವರದಿ ಆಧರಿಸಿ ತಪ್ಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೌಮ್ಯಾ ಗುರುರಾಣಿ ತಿಳಿಸಿದ್ದಾರೆ.
ತನಿಖೆಯ ವರದಿ ಮೇಲೆ ಎಲ್ಲರ ಕಣ್ಣು
ಗಂಗಾಜಲ ಹಿಡಿದು ಲಂಚದ ಹಣ ಹಂಚಿಕೊಳ್ಳುವ ಬಗ್ಗೆ ಪ್ರಮಾಣ ಮಾಡಿದ್ದಾರೆ ಎನ್ನಲಾದ ವಿಡಿಯೋ ಇದೀಗ ಉತ್ತರ ಪ್ರದೇಶದ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಚರ್ಚೆಯ ವಿಷಯವಾಗಿದೆ. ವಿಡಿಯೋ ಯಾವ ಸಂದರ್ಭದಲ್ಲಿತ್ತು, ಯಾರು ಭಾಗವಹಿಸಿದ್ದರು ಮತ್ತು ನಿಜವಾಗಿಯೂ ಲಂಚದ ಹಣ ಹಂಚಿಕೆಯ ಯಾವುದೇ ವ್ಯವಸ್ಥೆ ಇತ್ತೇ ಎಂಬ ಪ್ರಮುಖ ಪ್ರಶ್ನೆಗಳಿಗೆ ತನಿಖೆಯಿಂದ ಉತ್ತರ ಸಿಗಬೇಕಿದೆ.
ಮಹಾನಗರ ಪಾಲಿಕೆ ಆಯುಕ್ತರು ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಹೊರಬರುವ ನಿರೀಕ್ಷೆಯಿದೆ.
ರಾಜ್ಯ
Vinay Kulkarni ಗೆ ಬಿಗ್ ರಿಲೀಫ್; ಧಾರವಾಡ ಪ್ರವೇಶಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್, ಆದರೆ ಕಠಿಣ ಷರತ್ತು!
ಬೆಂಗಳೂರು: ಜಿ.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ Vinay Kulkarni ಅವರಿಗೆ ಧಾರವಾಡ ಜಿಲ್ಲೆ ಪ್ರವೇಶಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಷರತ್ತುಬದ್ಧ ಅನುಮತಿ ನೀಡಿದೆ.
ಧಾರವಾಡ ಜಿಲ್ಲೆಗೆ ಪ್ರವೇಶಿಸಲು ಅನುಮತಿ ಕೋರಿ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಕೆಲವು ಕಠಿಣ ಷರತ್ತುಗಳನ್ನು ವಿಧಿಸಿ ಜಿಲ್ಲೆಗೆ ತೆರಳಲು ಅನುಮತಿ ನೀಡಿದೆ.
ಧಾರವಾಡ ಪ್ರವೇಶಕ್ಕೆ ಕೋರ್ಟ್ ಅನುಮತಿ
ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಗೆ ಯಾವುದೇ ರೀತಿಯ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಿದೆ. ಧಾರವಾಡ ಜಿಲ್ಲೆಗೆ ಪ್ರವೇಶಿಸಿದ ಸಂದರ್ಭದಲ್ಲಿ ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.
ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನ ಮಾಡಬಾರದು ಎಂಬುದನ್ನು ನ್ಯಾಯಾಲಯ ಪ್ರಮುಖವಾಗಿ ತಿಳಿಸಿದೆ.
ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ
ಧಾರವಾಡ ಪ್ರವೇಶಿಸಿದ ಬಳಿಕ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿಗಳನ್ನು ಸಂಪರ್ಕಿಸುವಂತಿಲ್ಲ ಎಂದು ಕೋರ್ಟ್ ಸೂಚಿಸಿದೆ.
ಅಲ್ಲದೆ ಸಾಕ್ಷಿಗಳಿಗೆ ಬೆದರಿಕೆ ಹಾಕುವುದು, ಒತ್ತಡ ಹೇರುವುದು ಅಥವಾ ವಿಚಾರಣೆಯ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನ ನಡೆಸುವಂತಿಲ್ಲ. ಪ್ರಕರಣದ ಸಾಕ್ಷಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರದಂತೆ ವರ್ತಿಸಬೇಕು ಎಂದು ಷರತ್ತು ವಿಧಿಸಲಾಗಿದೆ.
ಸಭೆ, ಮೆರವಣಿಗೆಗೆ ನಿರ್ಬಂಧ
ವಿನಯ್ ಕುಲಕರ್ಣಿ ಧಾರವಾಡದಲ್ಲಿರುವ ಸಂದರ್ಭದಲ್ಲಿ ಅವರ ಬೆಂಬಲಿಗರಿಂದ ಯಾವುದೇ ರೀತಿಯ ಸಭೆ, ಸಮಾರಂಭ ಅಥವಾ ಮೆರವಣಿಗೆ ಆಯೋಜಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಅವರ ಧಾರವಾಡ ಪ್ರವೇಶದ ಸಂದರ್ಭದಲ್ಲಿ ಸಾರ್ವಜನಿಕವಾಗಿ ಯಾವುದೇ ರೀತಿಯ ಶಕ್ತಿ ಪ್ರದರ್ಶನ ಅಥವಾ ಕಾನೂನು ಸುವ್ಯವಸ್ಥೆಗೆ ಸಮಸ್ಯೆ ಉಂಟುಮಾಡುವ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಶಾಂತಿ ಕಾಪಾಡಲು ಸೂಚನೆ
ಧಾರವಾಡ ಜಿಲ್ಲೆಯಲ್ಲಿ ಇರುವ ಅವಧಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ನಡೆದುಕೊಳ್ಳಬೇಕು. ಸಂಚಾರ ವ್ಯವಸ್ಥೆ ಹಾಗೂ ಜನಜೀವನಕ್ಕೆ ಅಡ್ಡಿಯಾಗುವಂತಹ ಯಾವುದೇ ಚಟುವಟಿಕೆ ನಡೆಸಬಾರದು ಎಂದು ಕೋರ್ಟ್ ಸೂಚಿಸಿದೆ.
ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದು?
ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸಿದರೆ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದುಪಡಿಸುವಂತೆ ಅರ್ಜಿ ಸಲ್ಲಿಸಲು ಪ್ರಾಸಿಕ್ಯೂಷನ್‌ಗೆ ಅವಕಾಶವಿದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಹೀಗಾಗಿ ಧಾರವಾಡ ಜಿಲ್ಲೆ ಪ್ರವೇಶಿಸಲು ಅನುಮತಿ ದೊರೆತಿದ್ದರೂ, ಯೋಗೀಶ್ ಗೌಡ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಪಾಲಿಸುವುದು ವಿನಯ್ ಕುಲಕರ್ಣಿ ಅವರಿಗೆ ಅನಿವಾರ್ಯವಾಗಿದೆ.
ಈ ಮೂಲಕ ಧಾರವಾಡ ಪ್ರವೇಶಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಪ್ರಕರಣದ ವಿಚಾರಣೆಯ ನಡುವೆ ಈ ಆದೇಶ ಮಹತ್ವ ಪಡೆದುಕೊಂಡಿದೆ.
ಅಪರಾಧ
Renukaswamy Murder Case ನಲ್ಲಿ ಮಹತ್ವದ ಬೆಳವಣಿಗೆ: ಮಾಫಿ ಸಾಕ್ಷಿಯಾದ ಪ್ರದೋಷ್, ಮುಂದೆ ಏನಾಗಲಿದೆ?
ಬೆಂಗಳೂರು: ಚಿತ್ರದುರ್ಗ ಮೂಲದ Renukaswamy Murder Case ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ಪುರಸ್ಕರಿಸಿದ್ದು, ಇದೀಗ ಅವರು ಪ್ರಕರಣದಲ್ಲಿ ಸರ್ಕಾರದ ಪರ ಸಾಕ್ಷಿ ನುಡಿಯಲು ಅವಕಾಶ ದೊರೆತಿದೆ.
ನಗರದ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರದೋಷ್ ರಾವ್ ಸಲ್ಲಿಸಿದ್ದ ಅರ್ಜಿಯ ಕುರಿತು ಸುದೀರ್ಘ ವಿಚಾರಣೆ ನಡೆದಿತ್ತು. ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶೆ ಸುಜಾತ ಎಂ. ಸಮಭ್ರಾಣಿ ಅವರು ಮಂಗಳವಾರ ಮಹತ್ವದ ಆದೇಶ ಹೊರಡಿಸಿದ್ದಾರೆ.
ದರ್ಶನ್ ಪರ ವಕೀಲರ ಆಕ್ಷೇಪ ತಿರಸ್ಕಾರ
ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಬಾರದು ಎಂದು ನಟ ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸುವಂತೆ ಕೋರ್ಟ್‌ಗೆ ಮನವಿ ಮಾಡಲಾಗಿತ್ತು.
ಆದರೆ, ದರ್ಶನ್ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ನ್ಯಾಯಾಲಯ ಪರಿಗಣಿಸದೆ, ಪ್ರದೋಷ್ ರಾವ್ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ಅಂಗೀಕರಿಸಿದೆ. ಹೀಗಾಗಿ ಪ್ರಕರಣದ ತನಿಖೆ ಹಾಗೂ ಮುಂದಿನ ವಿಚಾರಣೆಯಲ್ಲಿ ಪ್ರದೋಷ್ ನೀಡಲಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಪ್ರಕರಣಕ್ಕೆ ಸಿಗಲಿದೆಯೇ ಮಹತ್ವದ ತಿರುವು?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಇದೀಗ ಸರ್ಕಾರದ ಪರ ಮಾಫಿ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲಿದ್ದಾರೆ. ಪ್ರಕರಣದ ಘಟನೆಗಳು, ಆರೋಪಿಗಳ ಪಾತ್ರ ಹಾಗೂ ಕೃತ್ಯದ ಬಳಿಕ ನಡೆದ ಬೆಳವಣಿಗೆಗಳ ಕುರಿತು ಅವರು ನೀಡಬಹುದಾದ ಮಾಹಿತಿ ತನಿಖೆಗೆ ಪ್ರಮುಖವಾಗುವ ಸಾಧ್ಯತೆಯಿದೆ.
ವಿಶೇಷವಾಗಿ ಕೊಲೆ ನಡೆದ ಸ್ಥಳದಲ್ಲಿನ ಘಟನೆಗಳು ಹಾಗೂ ಬಳಿಕ ಸಾಕ್ಷ್ಯ ನಾಶಕ್ಕೆ ನಡೆದಿತ್ತೆನ್ನಲಾದ ಪ್ರಯತ್ನಗಳ ಕುರಿತು ಪ್ರದೋಷ್ ನೀಡುವ ಹೇಳಿಕೆ ಪ್ರಕರಣದ ದಿಕ್ಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಮಾಫಿ ಸಾಕ್ಷಿಯಾಗಲು ನ್ಯಾಯಾಲಯ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಹಂತದಲ್ಲಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಲಿದೆ. ಅವರ ಹೇಳಿಕೆಯಲ್ಲಿ ಯಾವೆಲ್ಲ ಪ್ರಮುಖ ಅಂಶಗಳು ಹೊರಬರಲಿವೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.
-
ಬೆಂಗಳೂರು18 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ20 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ20 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ರಾಜ್ಯ24 ಗಂಟೆಗಳು agoಸಚಿವ B Nagendra ರಾಜೀನಾಮೆ ನೀಡ್ತಾರಾ?CM D.K.Shiv Kumar ಗೆ ಕರೆ, ‘ಸರ್ಕಾರಕ್ಕೆ ಮುಜುಗರ ಬೇಡ’ ಎಂದ ಸಚಿವ!
-
ದೇಶ18 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ದೇಶ21 ಗಂಟೆಗಳು agoONAM ಸದ್ಯ ಸವಿಯಲು ಸಾಲಿನಲ್ಲಿ ಕುಳಿತ ಕೋತಿಗಳು! 53 ವರ್ಷಗಳ ಅಪರೂಪದ ಸಂಪ್ರದಾಯ
-
ರಾಜ್ಯ20 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ರಾಜ್ಯ23 ಗಂಟೆಗಳು agoB Nagendra Resignation: ರಾಜೀನಾಮೆ ವದಂತಿಗೆ ನಾಗೇಂದ್ರ ಫುಲ್ಸ್ಟಾಪ್; ಕಾಂಗ್ರೆಸ್ನಿಂದಲೂ ಅಧಿಕೃತ ಹೇಳಿಕೆ ಇಲ್ಲ
