Connect with us

ರಾಜಕೀಯ

ಶೈಕ್ಷಣಿಕವಾಗಿ ವಿಜಯನಗರ ಜಿಲ್ಲೆ ಕಳಪೆ: ಡಿಡಿಪಿಐ, ಬಿಇಒ ಅಮಾನತಿಗೆ ಸಿಎಂ ಸೂಚನೆ 

ವಿಜಯನಗರ: ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ವಿಜಯನಗರ ಜಿಲ್ಲೆ ಶೈಕ್ಷಣಿಕವಾಗಿ 10ನೇ ಸ್ಥಾನದಿಂದ 27ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಇದಕ್ಕೆ ನಿಮ್ಮನ್ನೇ ಏಕೆ ಹೊಣೆ ಮಾಡಬಾರದು ಎಂದು ಡಿಡಿಪಿಐ ಅವರನ್ನು ಪ್ರಶ್ನಿಸಿದರು.

ಎಸ್ಎಸ್ಎಲ್​ಸಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಪ್ರಮಾಣ ಕುಸಿದಿರುವುದಕ್ಕೆ ನೀವೇ ಕಾರಣ. ನಿಮ್ಮ ಬಿಇಒಗಳು, ಶಿಕ್ಷಕರ ಪ್ರಯತ್ನ ಏನು?. ಯಾವ ದಿಕ್ಕಿನಲ್ಲಿದೆ?. ಈ ಕಳಪೆ ಸಾಧನೆಗೆ ನಿಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ನೀವೇ ಹೇಳಿ ಎಂದು ಡಿಡಿಪಿಐಗೆ ಪ್ರಶ್ನಿಸಿದರು. ಈ ಬಾರಿ ಶೇ.20ರಷ್ಟು ಗ್ರೇಸ್ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದ್ದೀರಿ ಎಂದರೆ ನಿಮ್ಮ ಒಟ್ಟು ಸಾಧನೆ ಬಗ್ಗೆ ನಿಮಗೆ ಸಮಾಧಾನ ಇದೆಯೇ ಎಂದು ಕೇಳಿದರು.

10ರಿಂದ 27ನೇ ಸ್ಥಾನಕ್ಕೆ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಜಾರಿರುವಾಗ ನಿಮಗೆ ನಾಚಿಕೆ ಆಗಬೇಕಲ್ವಾ ಎಂದು ಸಿಇಒ ಅವರನ್ನು ಪ್ರಶ್ನಿಸಿದರು. ಸಭೆ ಮಧ್ಯದಲ್ಲೇ ದೂರವಾಣಿ ಮೂಲಕ ಸರ್ಕಾರದ ಕಾರ್ಯದರ್ಶಿಯನ್ನು ಸಂಪರ್ಕಿಸಿ ಅಮಾನತಿಗೆ ಸೂಚಿಸಿದರು.

ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್ ಅವರಿಗೆ ಸಭೆ ಮಧ್ಯದಲ್ಲೇ ದೂರವಾಣಿ ಕರೆ ಮಾಡಿದ ಸಿಎಂ, ಜಿಲ್ಲೆಯ ಕಳಪೆ ಸಾಧನೆ ಬಗ್ಗೆ ಪ್ರಶ್ನಿಸಿ, ಡಿಡಿಪಿಐ ಮತ್ತು ಬಿಇಒ ಇಬ್ಬರನ್ನೂ ತಕ್ಷಣದಿಂದ ಅಮಾನತ್ತಿನಲ್ಲಿ ಇಡಬೇಕು. ಸಿಇಒಗೆ ನೋಟಿಸ್ ನೀಡಬೇಕು ಎಂದು ಸೂಚಿಸಿ ಜಿಲ್ಲೆಯ ಶೈಕ್ಷಣಿಕ ಪ್ರಗತಿ ಬಗ್ಗೆ ಗಂಭೀರವಾಗಿ ಯೋಜನೆಗಳನ್ನು ರೂಪಿಸುವಂತೆ ತಿಳಿಸಿದರು. ಡಿಡಿಪಿಐ ಅವರನ್ನು ಉಸ್ತುವಾರಿ ಸಚಿವ ಜಮೀರ್ ಅಹಮದ್ ಸಭೆಯಿಂದ ಹೊರನಡೆಯುವಂತೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವರು, ಶಾಸಕರು, ಅಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಿಎಂ, ಶಿಕ್ಷಣದ ವಿಚಾರವಾಗಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ದೇ ವೇಳೆ ನೀರು, ಮೇವು, ನರೇಗಾ ಉದ್ಯೋಗಕ್ಕೆ ಯಾವ ಕಾರಣಕ್ಕೂ ತೊಂದರೆಯಾಗಬಾರದು. ಪಿಡಿ ಖಾತೆಯಲ್ಲಿರುವ ಹಣವನ್ನು ಇದಕ್ಕಾಗಿ ಸರಿಯಾಗಿ ಬಳಸಬೇಕು. ಕೆರೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಸಬೇಕು. ಒತ್ತುವರಿಯಿಂದ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಕೊರತೆಯಾಗುತ್ತದೆ. ನರೇಗಾ ಮೂಲಕ ಕೆರೆ ಹೂಳು ತೆಗೆದು ಕೆರೆಗಳಿಗೆ ಮರುಜೀವ ನೀಡಬೇಕು ಎಂದು ಸೂಚನೆ ನೀಡಿದರು.

52 ಶುದ್ಧ ನೀರಿನ ಘಟಕಗಳು ಸ್ಥಗಿತಗೊಂಡಿದ್ದು, ಸರಿಯಾದ ಸಮಯಕ್ಕೆ ರಿಪೇರಿ ಮಾಡಿಸಲು ಏನು ಸಮಸ್ಯೆ?. ಇದಕ್ಕೆ ಅಧಿಕಾರಿಗಳು, ಕೆಲವು ಬೋರ್​ಗಳು ಪದೇ ಪದೇ ರಿಪೇರಿಗೆ ಬರುತ್ತಿವೆ ಎಂದರು. ಇದಕ್ಕೆ ಗರಂ ಆದ ಸಿಎಂ, ರಿಪೇರಿ ಮಾಡಿದ್ದು ಇಲಾಖೆಯವರೇ ತಾನೇ?, ಪದೇ ಪದೇ ಕೆಟ್ಟು ಹೋಗುವ ರೀತಿ ರಿಪೇರಿ ಯಾಕೆ ಮಾಡ್ತಾರೆ?. ಅದರಲ್ಲಿ ಏನಾದರೂ ರಿಪೇರಿಯಾಗದ ಸಮಸ್ಯೆ ಇದೆಯಾ ಎಂಬುದನ್ನು ಪರಿಶೀಲಿಸಿ ಎಂದು ತಾಕೀತು ಮಾಡಿದರು.

ಇನ್ನು ಮೋಟಾರ್ ಕಳ್ಳರು ಯಾರು?. ಠಾಣಾಧಿಕಾರಿಗಳಿಗೆ ಅವರ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಕಾನೂನುಬಾಹಿರ ಚಟುವಟಿಕೆಗಳ ಕುರಿತು ಗೊತ್ತಿರುತ್ತದೆ. ಹೀಗಿದ್ದರೂ ಏಕೆ ಕ್ರಮ ಕೈಗೊಳ್ಳುತ್ತಿಲ್ಲ?, ಮಟ್ಕಾ, ಬೆಟ್ಟಿಂಗ್, ಜೂಜು ಹೆಚ್ಚಾಗಿದೆ ಎನ್ನುವ ವರದಿಗಳಿವೆ. ಇವನ್ನೆಲ್ಲಾ ಸಂಪೂರ್ಣವಾಗಿ ನಿಲ್ಲಿಸಲು ಏಕೆ ಸಾಧ್ಯವಾಗಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿಗಳನ್ನು ಪ್ರಶ್ನಿಸಿದರು.

ಇದಕ್ಕೆ ಕೇವಲ ನಿಯಂತ್ರಣ ಸಾಲಲ್ಲ. ಸಂಪೂರ್ಣವಾಗಿ ನಿಲ್ಲಿಸಬೇಕು. ಮುಂದಿನ ಮೂರು ತಿಂಗಳುಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಬಂದ್ ಆಗಬೇಕು. ಇಲ್ಲದಿದ್ದರೆ ನಿಮ್ಮನ್ನೇ ಹೊಣೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಶೌಚಾಲಯಗಳಿಲ್ಲದ ಮನೆಗಳು ಇವೆಯೇ ಎಂದು ಸಿಎಂ ಕೇಳಿದರು. ಇದಕ್ಕೆ ಇದೆ ಎಂದು ಅಧಿಕಾರಿಗಳು ವರದಿ ನೀಡಿದರು. ಹಾಗಿದ್ದರೆ ಜಿಲ್ಲೆಯನ್ನು ಶೌಚಾಲಯಮುಕ್ತ ಜಿಲ್ಲೆ ಎಂದು ಘೋಷಿಸಿದ್ದೇಕೆ ಎಂದ ಮುಖ್ಯಮಂತ್ರಿಗಳು, ನೀವು ಕೊಡುವ ತಪ್ಪು ಮಾಹಿತಿಯನ್ನು ನಾವು ಅಧಿವೇಶನದಲ್ಲಿ ಹೇಳುವುದಕ್ಕೆ ಆಗುತ್ತದೆಯೇ ಎಂದರು. ಸರ್ಕಾರಕ್ಕೆ ಸುಳ್ಳು ಮತ್ತು ತಪ್ಪು ಮಾಹಿತಿ ಕೊಡಬಾರದು ಎಂದು ಎಚ್ಚರಿಕೆ ನೀಡಿದರು.

ಪಿಡಿಒಗಳ ಮೂಲಕ ಮನೆ ಮನೆ ಸಮೀಕ್ಷೆ ಮಾಡಿ. ಎಷ್ಟು ಮನೆಗಳಲ್ಲಿ ಶೌಚಾಲಯಗಳಿಲ್ಲ, ಶೌಚಾಲಯಗಳಿದ್ದಿದ್ದರೂ ಅವರೇಕೆ ಶೌಚಾಲಯಗಳಿಗಾಗಿ ಅರ್ಜಿ ಸಲ್ಲಿಸುತ್ತಿಲ್ಲ?. ಎಷ್ಟು ಶೌಚಾಲಯಗಳ ಅಗತ್ಯವಿದೆ. ಎಷ್ಟು ಅರ್ಜಿಗಳು ಬಂದಿವೆ ಎನ್ನುವ ಸಂಪೂರ್ಣ ವಿವರವನ್ನು ಸಿಎಂ ಕೇಳಿದರು. ಮುಂದಿನ ಸಭೆಯೊಳಗೆ ಸಮೀಕ್ಷೆ ಮುಗಿದು ಶೌಚಾಲಯಗಳ ನಿರ್ಮಾಣ ಆಗಿರಬೇಕು ಎಂದು ಸೂಚಿಸಿದರು.

ಊರಿನ ಹೊರಗಿರುವ ಬೋರ್​ಗಳ ಮೋಟಾರ್​ಗಳನ್ನು ಕದಿಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಹಾಗಿದ್ದರೆ ಏಕೆ ಇದುವರೆಗೂ ದೂರು ದಾಖಲಿಸಿಲ್ಲ?. ಕಳ್ಳರ ಮೇಲೆ ನೀವು ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ?. ಇದರಿಂದ ಸರ್ಕಾರಕ್ಕೆ ನಷ್ಟವಾತ್ತಿದೆ. ಈ ನಷ್ಟಕ್ಕೆ ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ದೇಶ

ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಅನುಮತಿ ನಿರೀಕ್ಷೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರ ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ ಎಂದು ಡಿಸಿಎಂ D. K. Shivakumar ವಿಶ್ವಾಸ ವ್ಯಕ್ತಪಡಿಸಿದರು.

ಭಾರತೀಯ ವಿಜ್ಞಾನ ಸಂಸ್ಥೆ (IISc)ಯ ಜೆಜೆ ಟಾಟಾ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ (ICDS) ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಸಹಕಾರ ಸಿಗುವ ಭರವಸೆ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆ ಜಾರಿಗೆ ಸಿದ್ಧತೆ

Mekedatu ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಯೋಜನೆ ಪರವಾಗಿದೆ. ಕೇಂದ್ರ ಅನುಮತಿ ದೊರೆತ ಕೂಡಲೇ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದರು. ಈ ಯೋಜನೆಯಿಂದ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ ಸುಮಾರು 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ – ರೈತರಿಗೆ ಪರಿಹಾರ

Krishna River ಮೇಲ್ದಂಡೆ ಯೋಜನೆ ವಿಚಾರದಲ್ಲಿ 2013ರ ಕಾಯ್ದೆಯಂತೆ ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುತ್ತದೆ. 2025ರ ಡಿಸೆಂಬರ್ ವೇಳೆಗೆ 1.72 ಲಕ್ಷ ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಅಣೆಕಟ್ಟು ಸುರಕ್ಷತೆ ರಾಷ್ಟ್ರದ ಆದ್ಯತೆ

ಅಣೆಕಟ್ಟುಗಳು ದೇಶದ ಶಕ್ತಿ ಹಾಗೂ ಪ್ರಗತಿಯ ಪ್ರತೀಕವಾಗಿದ್ದು, ಭಾರತದಲ್ಲಿ ಸುಮಾರು 6,500 ಅಣೆಕಟ್ಟುಗಳಿವೆ. ವಿಶ್ವದಲ್ಲಿ ಅತಿ ಹೆಚ್ಚು ಅಣೆಕಟ್ಟುಗಳಿರುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 232 ಅಣೆಕಟ್ಟುಗಳಿದ್ದು, ಅವುಗಳಲ್ಲಿ ಬಹುಪಾಲು 25 ವರ್ಷಕ್ಕಿಂತ ಹಳೆಯದಾಗಿದೆ.

ಕೇಂದ್ರ ಸರ್ಕಾರವು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಜಾರಿಗೊಳಿಸಿರುವ Dam Rehabilitation and Improvement Project (DRIP) ಯೋಜನೆಯಡಿ ರಾಜ್ಯದಲ್ಲಿ 58 ಅಣೆಕಟ್ಟುಗಳ ದುರಸ್ತಿಗೆ ಸುಮಾರು 1,500 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅಣೆಕಟ್ಟುಗಳ ಬಳಿ ಪ್ರವಾಸೋದ್ಯಮಕ್ಕೆ ಮನವಿ

ಅಣೆಕಟ್ಟುಗಳ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

“ಜಲವೇ ಸಂಪತ್ತು, ಜಲವೇ ಇಂಧನ, ಜಲವೇ ಜೀವನ” ಎಂದು ಹೇಳಿದ ಅವರು, ಅಣೆಕಟ್ಟು ಸುರಕ್ಷತೆ ವಿಚಾರದಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಬದ್ಧತೆ ವ್ಯಕ್ತಪಡಿಸಿದರು.

Continue Reading

ದೇಶ

karnataka ಅಧಿಕಾರದಿಂದ ಬಂಧನದವರೆಗೆ: ಜೈಲು ಸೇರಿದ್ದ ಕರ್ನಾಟಕದ ಪ್ರಮುಖ ಜನಪ್ರತಿನಿಧಿಗಳ ಸಂಪೂರ್ಣ ಪಟ್ಟಿ

ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ Bairathi Basavaraj ಬಂಧನಕ್ಕೊಳಗಾಗಿದ್ದಾರೆ. ಸಿಐಡಿ ತಂಡ ಅವರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿದೆ. ವಿಧಾನಸಭೆಯಲ್ಲಿ ಕಾನೂನು ರೂಪಿಸಬೇಕಾದ ಜನಪ್ರತಿನಿಧಿಗಳೇ ಕಾನೂನು ಉಲ್ಲಂಘನೆ ಆರೋಪದಲ್ಲಿ ಜೈಲು ಸೇರಿದ ಹಲವು ಉದಾಹರಣೆಗಳು ಕರ್ನಾಟಕ ರಾಜಕೀಯದಲ್ಲಿ ಕಂಡುಬಂದಿವೆ.


ವಿನಯ್ ಕುಲಕರ್ಣಿಗೂ ಜೈಲು ಅನುಭವ

ಹುಬ್ಬಳ್ಳಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ Vinay Kulkarni ಬಂಧನಕ್ಕೊಳಗಾಗಿದ್ದರು. 2020ರಲ್ಲಿ Central Bureau of Investigation (CBI) ಅವರು ಅವರನ್ನು ಬಂಧಿಸಿತ್ತು. ಸುಪ್ರೀಂ ಕೋರ್ಟ್ 2021ರಲ್ಲಿ ಜಾಮೀನು ನೀಡಿದರೂ, ಸಾಕ್ಷಿಗಳಿಗೆ ಬೆದರಿಕೆ ಆರೋಪ ಹಿನ್ನೆಲೆ 2025ರಲ್ಲಿ ಜಾಮೀನು ರದ್ದುಗೊಂಡಿತ್ತು.


ವೀರೇಂದ್ರ ಪಪ್ಪಿ ವಿರುದ್ಧ ಬೆಟ್ಟಿಂಗ್ ಆರೋಪ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ Veerendra Pappi ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ತಿಂಗಳು ಕಳೆದಿದ್ದರು. ಪ್ರಕರಣವನ್ನು ಪ್ರಶ್ನಿಸಿ Enforcement Directorate (ED) ಹೈಕೋರ್ಟ್ ಮೆಟ್ಟಿಲೇರಿದೆ.


ಮುನಿರತ್ನ ವಿರುದ್ಧ ಗಂಭೀರ ಆರೋಪ

ಬಿಜೆಪಿ ಶಾಸಕ Munirathna ಬೆದರಿಕೆ ಹಾಗೂ ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದರು. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿತ್ತು.


ಗಣಿ ಹಗರಣದಲ್ಲಿ ಜನಾರ್ದನ ರೆಡ್ಡಿ

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ Gali Janardhana Reddy ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿದೆ.


ಸತೀಶ್ ಸೈಲ್‌ಗೆ ಶಿಕ್ಷೆ

ಬೇಲೆಕೇರಿ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ Satish Sail ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಹೈಕೋರ್ಟ್ ತೀರ್ಪು ಅಮಾನತುಗೊಳಿಸಿದೆ.


ಜೀವಾವಧಿ ಶಿಕ್ಷೆ ಪಡೆದ ಪ್ರಜ್ವಲ್ ರೇವಣ್ಣ

ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ Prajwal Revanna ಜೀವಾವಧಿ ಶಿಕ್ಷೆಗೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಪ್ರಕರಣದಲ್ಲಿ H. D. Revanna ಹಾಗೂ Suraj Revanna ಹೆಸರುಗಳು ಕೂಡ ಕೇಳಿಬಂದಿವೆ.

Continue Reading

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

Trending