ಆರೋಗ್ಯ
ಕಿಮ್ಸ್ಗೆ ವೈರಾಣು ಸಂಶೋಧನಾ ಮತ್ತು ರೋಗ ನಿರ್ಣಯ ಪ್ರಯೋಗಾಲಯ ಮಂಜೂರು: ಒಡಂಬಡಿಕೆಗೆ ಸಹಿ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಗೆ ಕೇಂದ್ರ ಸರ್ಕಾರ ಅತ್ಯಾಧುನಿಕ ‘ವೈರಾಣು ಸಂಶೋಧನಾ ಮತ್ತು ರೋಗ ನಿರ್ಣಯ ಪ್ರಯೋಗಾಲಯ’ಕ್ಕೆ ಮಂಜೂರಾತಿ ನೀಡಿದೆ. ಉತ್ತರ ಕರ್ನಾಟಕದ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಈ ಪ್ರಯೋಗಾಲಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಇದೀಗ ಅಸ್ತು ಎಂದಿದೆ.
ಕಿಮ್ಸ್ನಲ್ಲಿ ಅತ್ಯಾಧುನಿಕ ವೈರಾಣು ಸಂಶೋಧನಾ ಮತ್ತು ರೋಗ ನಿರ್ಣಯ ಪ್ರಯೋಗಾಲಯ ಸ್ಥಾಪನೆಗಾಗಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನವದೆಹಲಿ (NCDC) ಮತ್ತು ಕಿಮ್ಸ್ ನಿರ್ದೇಶಕರ ನಡುವೆ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದ್ದಾರೆ.
ಸಚಿವ ಪ್ರಹ್ಲಾದ್ ಜೋಶಿ ಪ್ರಯತ್ನಕ್ಕೆ ಲಭಿಸಿದ ಫಲ: ಹುಬ್ಬಳ್ಳಿಯಲ್ಲಿ ಈ ಪ್ರಯೋಗಾಲಯ ನಿರ್ಮಾಣಕ್ಕಾಗಿ ಜೆ.ಪಿ. ನಡ್ಡಾ ಅವರು ಆರೋಗ್ಯ ಸಚಿವರಾಗಿದ್ದಾಗಲೇ ಧಾರವಾಡ ಸಂಸದರು ಆಗಿರುವ ಸಚಿವ ಪ್ರಹ್ಲಾದ್ ಜೋಶಿ ಅವರು ಮನವಿ ಮಾಡಿದ್ದರು. ಅವರ ಸತತ ಪ್ರಯತ್ನದ ಫಲವಾಗಿ ಇಂದು ಪ್ರಯೋಗಾಲಯ ಸ್ಥಾಪನೆ ಸಾಕಾರಗೊಂಡಿದೆ.
ದೇಶದ 8 ಕಡೆ ಶಾಖೆ: ಪ್ರಸ್ತುತ, ದೇಶದ 8 ಕಡೆಗಳಲ್ಲಿ ಶಾಖೆಗಳನ್ನು ಹೊಂದಿರುವ ಈ ಸಂಶೋಧನಾ ಮತ್ತು ರೋಗ ನಿಯಂತ್ರಣ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಯಲ್ಲಿ ಸ್ಥಾಪನೆಗೂ ಇದೀಗ ಹಸಿರು ನಿಶಾನೆ ತೋರಿದ್ದಾರೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ತಮ್ಮ ಪ್ರಸ್ತಾಪ, ಮನವಿಯನ್ನು ಪುರಸ್ಕರಿಸಿ ಪ್ರಧಾನಿ ಮೋದಿ ಅವರು, ಪ್ರಸ್ತುತ ಪ್ರಾದೇಶಿಕ ಪ್ರಯೋಗಾಲಯವನ್ನು ಮಂಜೂರು ಮಾಡಿದ್ದಾರೆ. ಇದಕ್ಕಾಗಿ ಕಿಮ್ಸ್ ಅವರಣದಲ್ಲಿ 27 ಗುಂಟೆ ಪ್ರತ್ಯೇಕ ಜಾಗವನ್ನೂ ಮೀಸಲಿರಿಸಲಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಮಾಹಿತಿ ನೀಡಿದ್ದಾರೆ.
₹16 ಕೋಟಿ ವೆಚ್ಚದಲ್ಲಿ ಪ್ರಯೋಗಾಲಯ ನಿರ್ಮಾಣ: ಸಂಪೂರ್ಣ ಕೇಂದ್ರ ಸರ್ಕಾರದ ಪ್ರಾಯೋಜಿತವಾದ ಈ ಪ್ರಯೋಗಾಲಯದ ಶಾಖೆಗೆ ಅಂದಾಜು 16 ಕೋಟಿ ರೂಪಾಯಿ ವೆಚ್ಚವಾಗಲಿದೆ . ಇದಕ್ಕಾಗಿ 27 ಗುಂಟೆ ಜಾಗ ಮೀಸಲಿಡಲಾಗಿದೆ. ಎಚ್ 1 ಎನ್ I (H1N1), ಕೊರೋನಾ, ಚಿಕನ್ ಗುನ್ಯಾ, ನಿಫಾದಂತಹ ಸಾಂಕ್ರಾಮಿಕ ರೋಗಗಳು ಬದಲಾದ ರೂಪದಲ್ಲಿ ಮತ್ತೆ ಮತ್ತೆ ಹರಡುತ್ತಿರುವ ಕಾರಣ ಉತ್ತರ ಕರ್ನಾಟಕ ಭಾಗದಲ್ಲಿ ಈ ಪ್ರಯೋಗಾಲಯದ ಅಗತ್ಯತೆ ಇತ್ತೆಂದು ಜೋಶಿ ಪ್ರತಿಪಾದಿಸಿದ್ದಾರೆ.
”ವೈರಾಣು ಸಂಶೋಧನೆ ಮತ್ತು ರೋಗ ನಿರ್ಣಯಕ್ಕಾಗಿ ದೂರದ ಪ್ರದೇಶಗಳಿಗೆ ಅಲೆಯುವುದರಿಂದ ರೋಗ ಪೀಡಿತರ ಪರಿಸ್ಥಿತಿ ಬಿಗಡಾಯಿಸುತ್ತಿತ್ತು. ಅಲ್ಲದೇ, ಕೆಲವೊಮ್ಮೆ ಪ್ರಾಣ ಹಾನಿ ಸಂಭವವನ್ನೂ ತಳ್ಳಿ ಹಾಕುವಂತಿರಲಿಲ್ಲ. ಹೀಗಾಗಿ ಈ ಅಂಶಗಳನ್ನು ಆರೋಗ್ಯ ಸಚಿವರಾಗಿದ್ದ ನಡ್ಡಾ ಮತ್ತು ಪ್ರಧಾನಿ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರ ಪರಿಣಾಮ ಇಂದು ಪ್ರಯೋಗಾಲಯ ಸ್ಥಾಪನೆ ಒಡಂಬಡಿಕೆ ಸಾಫಲ್ಯ ಕಂಡಿದೆ” ಎಂದು ಜೋಶಿ ತಿಳಿಸಿದ್ದಾರೆ.
”ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಸಾಸ್ಟಕ್ಟರ್ ಮಿಶನ್ ಅಡಿ BSL3 ಫೆಸಿಲಿಟಿಸ್ ಮಾದರಿಯ ಒಟ್ಟು 13 ಹೊಸ (4 ಮೊಬೈಲ್ ಮತ್ತು 9 ಸಾಂಸ್ಥಿಕ) ಪ್ರಯೋಗಾಲಯಗಳನ್ನು ಆಯ್ದ ಆರೋಗ್ಯ ಸಂಸ್ಥೆಗಳಲ್ಲಿ ಸ್ಥಾಪಿಸಲಾಗುತ್ತಿದ್ದು, ಈ ಪೈಕಿ ಹುಬ್ಬಳ್ಳಿಯ ಕಿಮ್ಸ್ ಕೂಡಾ ಸೇರಿದೆ” ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
ಶೀಘ್ರವೇ ಭೂಮಿಪೂಜೆ: ಹುಬ್ಬಳ್ಳಿಯಲ್ಲಿ ಶೀಘ್ರದಲ್ಲೇ ಪ್ರಾದೇಶಿಕ ವೈರಾಣು ಸಂಶೋಧನಾ ಮತ್ತು ರೋಗ ನಿರ್ಣಯ ಪ್ರಯೋಗಾಲಯ ಶಾಖೆ ನಿರ್ಮಾಣಕ್ಕೆ ಭೂಮಿ ಪೂಜೆ ಸಹ ನೆರವೇರಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಹುಬ್ಬಳ್ಳಿಗೆ ಈ ಸಂಶೋಧನಾ ಕೇಂದ್ರವನ್ನು ಮಂಜೂರು ಮಾಡಿದ ಪ್ರಯುಕ್ತ ಪ್ರಹ್ಲಾದ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಆರೋಗ್ಯ ಸಚಿವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಆರೋಗ್ಯ
ಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
ಬೆಂಗಳೂರು: ಮೂತ್ರಪಿಂಡದ ಕಲ್ಲು (Kidney Stone) ಮೂತ್ರಕೋಶಕ್ಕೆ ತಲುಪಿದ ಬಳಿಕ ಸುಲಭವಾಗಿ ಹೊರಹೋಗುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವೊಮ್ಮೆ ಈ ಕಲ್ಲುಗಳು ಮೂತ್ರಕೋಶದಲ್ಲೇ ಸಿಲುಕಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.
ಸಾಮಾನ್ಯವಾಗಿ 4–5 ಮಿಮೀ ಗಾತ್ರದ ಕಲ್ಲುಗಳು ಸಹಜವಾಗಿ ಮೂತ್ರದ ಮೂಲಕ ಹೊರಹೋಗುತ್ತವೆ. ಆದರೆ 7 ಮಿಮೀಗಿಂತ ದೊಡ್ಡದಾದ ಅಥವಾ ಅಸಮ ಆಕಾರ ಹೊಂದಿರುವ ಕಲ್ಲುಗಳು ಮೂತ್ರನಾಳದಲ್ಲಿ ಸಿಲುಕಿಕೊಳ್ಳಬಹುದು. ಇದರಿಂದ ಕೆಳ ಹೊಟ್ಟೆ ನೋವು, ಮೂತ್ರ ವಿಸರ್ಜನೆ ವೇಳೆ ಉರಿ, ಮೂತ್ರದಲ್ಲಿ ರಕ್ತ ಹಾಗೂ ದುರ್ವಾಸನೆ ಕಾಣಿಸಬಹುದು.
ಮೂತ್ರಕೋಶ ಸರಿಯಾಗಿ ಖಾಲಿಯಾಗದಿರುವುದು ಕೂಡ ಪ್ರಮುಖ ಕಾರಣ. ಮೂತ್ರದ ಹರಿವು ಕಡಿಮೆಯಾಗುವ ಸ್ಥಿತಿ ಅಥವಾ ವೃದ್ಧರಾದ ಪುರುಷರಲ್ಲಿ ಕಾಣಿಸುವ ಪ್ರಾಸ್ಟೇಟ್ ವಿಸ್ತರಣೆ (BPH) ಸಮಸ್ಯೆಯಿಂದ ಕಲ್ಲುಗಳು ಸಿಲುಕಿಕೊಳ್ಳಬಹುದು. ಜೊತೆಗೆ ಮಧುಮೇಹ ಅಥವಾ ನರ ಸಮಸ್ಯೆಗಳೂ ಪರಿಣಾಮ ಬೀರುತ್ತವೆ.
ಕಲ್ಲುಗಳು ಹೆಚ್ಚು ಕಾಲ ಸಿಲುಕಿಕೊಂಡಿದ್ದರೆ ಸೋಂಕು (UTI), ಮೂತ್ರ ಧಾರಣ ತೊಂದರೆ ಹಾಗೂ ಮೂತ್ರಕೋಶದ ಉರಿಯೂತದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜ್ವರ, ತೀವ್ರ ನೋವು, ಮೂತ್ರವಿಸರ್ಜನೆ ಅಸಾಧ್ಯತೆ ಕಂಡುಬಂದರೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಅಗತ್ಯ.
ತಜ್ಞರ ಪ್ರಕಾರ, ಸಾಕಷ್ಟು ನೀರು ಕುಡಿಯುವುದು, ಮೂತ್ರಕೋಶವನ್ನು ಸಂಪೂರ್ಣ ಖಾಲಿ ಮಾಡುವುದು ಹಾಗೂ ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಈ ಸಮಸ್ಯೆಯನ್ನು ತಪ್ಪಿಸಬಹುದು. “ಡಬಲ್ ವಾಯ್ಡ್” ಎಂಬ ವಿಧಾನವು ಮೂತ್ರಕೋಶ ಸಂಪೂರ್ಣ ಖಾಲಿಯಾಗಲು ಸಹಕಾರಿಯಾಗುತ್ತದೆ.
ಒಟ್ಟಿನಲ್ಲಿ, ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ನಿರ್ಲಕ್ಷಿಸದೇ ಆರಂಭಿಕ ಲಕ್ಷಣಗಳಲ್ಲೇ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ.
Note: This information is provided by Dr. Venkatswamy and the Hosasuddi.in health team. Before publishing, Hosasuddi.in follows medical guidelines and expert advice.
ಆರೋಗ್ಯ
ಮಧುಮೇಹ-ಬೊಜ್ಜಿಗೆ GLP-1 ಔಷಧ: ಪ್ರಯೋಜನದ ಜೊತೆ ಅಪಾಯವೂ!
ನವದೆಹಲಿ: ಟೈಪ್ 2 ಮಧುಮೇಹ ಮತ್ತು ಸ್ಥೂಲಕಾಯತೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿರುವ GLP-1 ಔಷಧಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಎಚ್ಚರಿಕೆ ನೀಡಿದೆ. ಈ ಔಷಧಗಳು ಪರಿಣಾಮಕಾರಿ ಆಗಿದ್ದರೂ, ಅವುಗಳನ್ನು ವೈದ್ಯರ ಸಲಹೆಯಿಲ್ಲದೆ ಬಳಸುವುದು ಅಪಾಯಕಾರಿ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಆರೋಗ್ಯ ಇಲಾಖೆ ಹೇಳುವಂತೆ, GLP-1 ಔಷಧಗಳು ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಮತ್ತು ತೂಕ ಇಳಿಕೆಗೆ ಸಹಕಾರಿ. ಆದರೆ ವಾಕರಿಕೆ, ವಾಂತಿ ಮುಂತಾದ ಸಾಮಾನ್ಯ ಅಡ್ಡಪರಿಣಾಮಗಳಿಂದ ಹಿಡಿದು ಮೂತ್ರಪಿಂಡ ಹಾನಿ, ಮೇದೋಜ್ಜೀರಕ ಗ್ರಂಥಿಯ ಉರಿಯೂತ, ಕರುಳಿನ ಅಡಚಣೆಗಳಂತಹ ಗಂಭೀರ ಸಮಸ್ಯೆಗಳಿಗೂ ಕಾರಣವಾಗಬಹುದು.
Type 2 Diabetes ಮತ್ತು Obesity ಹೊಂದಿರುವವರು ಈ ಔಷಧಗಳನ್ನು ಕಡ್ಡಾಯವಾಗಿ ನೋಂದಾಯಿತ ವೈದ್ಯರ ಮೇಲ್ವಿಚಾರಣೆಯಲ್ಲೇ ಬಳಸಬೇಕು ಎಂದು ಸೂಚಿಸಲಾಗಿದೆ. ಅನಧಿಕೃತ ಮಾರಾಟ ಮತ್ತು ಮೇಲ್ವಿಚಾರಣೆಯಿಲ್ಲದ ಬಳಕೆಯನ್ನು ತಡೆಯಲು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಗಿದೆ.
ಸಚಿವಾಲಯದ ಪ್ರಕಾರ, ಹೆಚ್ಚಿನ ತೂಕ, ವ್ಯಾಯಾಮದ ಕೊರತೆ ಮತ್ತು ಹೆಚ್ಚು ಸಕ್ಕರೆ ಸೇವನೆ ಟೈಪ್ 2 ಮಧುಮೇಹದ ಪ್ರಮುಖ ಕಾರಣಗಳಾಗಿವೆ. ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಮೂಲಕ ಈ ರೋಗವನ್ನು ತಡೆಗಟ್ಟಬಹುದು.
ಆರೋಗ್ಯ
ಜಂಕ್ ಫುಡ್ ಬೇಡ! ಹಣ್ಣುಗಳಿಂದ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳಿ
ಬೆಂಗಳೂರು: ಇಂದಿನ ಜೀವನಶೈಲಿಯಲ್ಲಿ ತೂಕ ಇಳಿಸುವುದು ಎಷ್ಟು ಕಷ್ಟವೋ, ಅತಿಯಾಗಿ ಸಪೂರ ಮೈಕಟ್ಟು ಹೊಂದಿರುವವರಿಗೆ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳುವುದು ಕೂಡ ಅಷ್ಟೇ ಸವಾಲಾಗಿದೆ. ತೂಕ ಹೆಚ್ಚಿಸುವುದು ಎಂದರೆ ಕೇವಲ ಕೊಬ್ಬು ಹೆಚ್ಚಿಸುವುದಲ್ಲ; ಬದಲಾಗಿ ದೇಹದಲ್ಲಿ ಸದೃಢ ಸ್ನಾಯುಗಳ (ಮಸಲ್ಸ್) ವೃದ್ಧಿ ಮುಖ್ಯ.
ಜಂಕ್ ಫುಡ್ಗಳಿಗೆ ಅವಲಂಬನೆ ಕಡಿಮೆ ಮಾಡಿ, ನೈಸರ್ಗಿಕ ಹಣ್ಣುಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದು ಉತ್ತಮ ವಿಧಾನವಾಗಿದೆ. ಕೆಲವು ಹಣ್ಣುಗಳು ದೇಹಕ್ಕೆ ಅಗತ್ಯ ಕ್ಯಾಲರಿ, ಪೋಷಕಾಂಶಗಳನ್ನು ನೀಡುವುದರ ಮೂಲಕ ತೂಕ ಹೆಚ್ಚಿಸಲು ಸಹಾಯ ಮಾಡುತ್ತವೆ.
ಬಾಳೆಹಣ್ಣು (Banana): ಕಾರ್ಬೋಹೈಡ್ರೇಟ್ ಮತ್ತು ಕ್ಯಾಲರಿಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣು ತೂಕ ಹೆಚ್ಚಿಸಲು ಪರಿಣಾಮಕಾರಿ. ದಿನಕ್ಕೆ 2–3 ಬಾಳೆಹಣ್ಣು ತಿನ್ನುವುದು ಅಥವಾ ಹಾಲಿನೊಂದಿಗೆ ಬನಾನಾ ಶೇಕ್ ಸೇವಿಸುವುದು ವೇಗವಾಗಿ ಫಲ ನೀಡುತ್ತದೆ.
ಅವಕಾಡೋ (Avocado): ಆರೋಗ್ಯಕರ ಕೊಬ್ಬಿನ ಮೂಲವಾಗಿರುವ ಈ ಹಣ್ಣು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸಿ, ತೂಕವನ್ನು ಸಮತೋಲನದಿಂದ ಹೆಚ್ಚಿಸುತ್ತದೆ.
ಮಾವಿನ ಹಣ್ಣು (Mango): ನೈಸರ್ಗಿಕ ಸಕ್ಕರೆ ಮತ್ತು ಹೆಚ್ಚಿನ ಕ್ಯಾಲರಿಗಳಿಂದ ಕೂಡಿದ ಮಾವಿನ ಹಣ್ಣು ತೂಕ ಹೆಚ್ಚಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ವೃದ್ಧಿಸುತ್ತದೆ.
ಒಣಹಣ್ಣುಗಳು (Dry Fruits): ಅಂಜೂರ, ಖರ್ಜೂರ, ಒಣ ದ್ರಾಕ್ಷಿ ಮುಂತಾದವು ತೂಕ ಹೆಚ್ಚಿಸಲು ಅತ್ಯುತ್ತಮ. ರಾತ್ರಿ ನೆನೆಸಿಟ್ಟು ಬೆಳಗ್ಗೆ ಸೇವಿಸಿದರೆ ಹೆಚ್ಚು ಲಾಭಕರ.
ಇದಲ್ಲದೆ ಸಪೋಟ, ಹಲಸಿನ ಹಣ್ಣುಗಳೂ ಸಹ ಸಹಾಯಕ. ಆದರೆ ಕೇವಲ ಆಹಾರ ಸೇವನೆ ಸಾಕಾಗುವುದಿಲ್ಲ; ಲಘು ವ್ಯಾಯಾಮ ಮತ್ತು ಯೋಗಾಭ್ಯಾಸದಿಂದ ಆಹಾರ ಸ್ನಾಯುವಾಗಿ ಪರಿವರ್ತನೆಗೊಳ್ಳಲು ಸಹಾಯವಾಗುತ್ತದೆ.
ನಿಯಮಿತ ಆಹಾರ ಮತ್ತು ತಾಳ್ಮೆಯೊಂದಿಗೆ ಈ ಕ್ರಮ ಪಾಲಿಸಿದರೆ ಆರೋಗ್ಯಕರ ತೂಕ ಹೆಚ್ಚಿಸಿಕೊಳ್ಳುವುದು ಸಾಧ್ಯ. ಈ ಮಾಹಿತಿಯನ್ನು ಆರೋಗ್ಯ ತಜ್ಞರು ಹಂಚಿಕೊಂಡಿದ್ದು, ಅದರ ಆಧಾರದ ಮೇಲೆ ಹೊಸ ಸುದ್ದಿ (Hosasuddi) ತಂಡವು ಈ ಲೇಖನವನ್ನು ಪ್ರಕಟಿಸಿದೆ.
-
ದೇಶ16 hours agoಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
-
ದೇಶ23 hours agoಪ್ರಚಾರ ವೇಳೆ ಕಾರು ತಡೆದು ಹಲ್ಲೆ: ತರೂರ್ ಬೆಂಗಾವಲು ಮೇಲೆ ದಾಂಧಲೆ
-
ಆರೋಗ್ಯ21 hours agoಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
-
ದೇಶ18 hours agoಕಾಂಗ್ರೆಸ್ ಒಳಜಗಳ ಬಯಲು: ರಾಹುಲ್ ನಿಲುವಿಗೆ ಹಿರಿಯರ ವಿರೋಧ
-
ದೇಶ22 hours agoಜಮೀರ್ ಅಹ್ಮದ್ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!
-
ಚುನಾವಣೆ16 hours agoTN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
-
ದೇಶ18 hours agoಇರಾನ್-ಅಮೆರಿಕಾ ಮಾತುಕತೆ ವಿಫಲ: ಪಾಕಿಸ್ತಾನಕ್ಕೆ ಮುಖಭಂಗ!
-
ಅಪರಾಧ18 hours agoಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!
