Connect with us

ಬೆಂಗಳೂರು

R Ashok ವಿಪಕ್ಷ ಸ್ಧಾನಕ್ಕೆ ಕುತ್ತು: ಮಠಕ್ಕೆ ಓಡೋಡಿ ಬಂದ ಅಶೋಕ್!

Published

on

ಬೆಂಗಳೂರು: ಬಿಜೆಪಿ ಹೈಕಮಾಂಡ್ ಪ್ರತಿಪಕ್ಷ ನಾಯಕರ ಬದಲಾವಣೆಗೆ ಮುಂದಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಸ್ಧಾನಕ್ಕೆ ಕುತ್ತು ಬಂದಿದೆ, ಇದರಿಂದ ಒಕ್ಕಲಿಗ ಸ್ವಾಮೀಜಿಗಳು ಸಿಎಂ ಸ್ಧಾನದ ನಂತರ ಪ್ರತಿಪಕ್ಷ ನಾಯಕನ ಸ್ಧಾನ ಉಳಿಸಿಕೊಳ್ಳಲು ಒತ್ತಡ ತಂತ್ರ ಅನುಸರಿಸುವ ಸಾಧ್ಯತೆ ಇದೆ, ಮೇಲ್ಮನೆಯಲ್ಲಿ ಒಕ್ಕಲಿಗ ನಾಯಕನಿಗೆ ವಿಪಕ್ಷ ಸ್ಧಾನ ನೀಡಿದರೆ, ಕೆಳಮನೆಯಲ್ಲಿ ಒಕ್ಕಲಿಗ ನಾಯಕನ ಬದಲಾವಣೆ ಅನಿವಾರ್ಯ ಎಂಬುದು ಭಾರೀ ಚರ್ಚೆ ನಡೆಯುತ್ತಿದೆ, ಇದರಿಂದ ಕೆಳಮನೆ ಅಂದರೆ ವಿಧಾನಸಭಾ ಪ್ರತಿಪಕ್ಷ ನಾಯಕರಾಗಿರುವ ಅಶೋಕ್ ಸ್ಧಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ,
ಹಳೆ ಮೈಸೂರು ಭಾಗದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಿಂದ ಹೆಚ್ಚು ಕ್ಷೇತ್ರ ಗೆಲ್ಲಲು ಸಾಧ್ಯವಾಯಿತು, ಈ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಸಚಿವರಾಗಿರುವ ಎಚ್ ಡಿ ಕುಮಾರಸ್ವಾಮಿ ಸಲಹೆ ಮೇರೆಗೆ ರಾಜ್ಯದಲ್ಲಿ ಕೆಲವು ಬದಲಾವಣೆ ಮಾಡುವ ಸಾದ್ಯತೆ ಇದೆ ಎಂದು ಹೇಳಲಾಗಿದೆ,
ಪ್ರತಿಪಕ್ಷ ಸ್ಧಾನ ಕಳೆದುಕೊಳ್ಳುವ ಸುಳಿವಿನ ಬೆನ್ನಲ್ಲೇ ಒಕ್ಕಲಿಗರ ಸಮುದಾಯದ ಸ್ವಾಮೀಜಿಯನ್ನು ಆರ್ ಅಶೋಕ್ ಭೇಟಿ ಮಾಡಿದ್ದಾರೆ, ಸೋಮವಾರ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ,
ಮುಂದಿನ ತಿಂಗಳು ಎರಡನೇ ವಾರದಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಸ್ವಾಮೀಜಿ ಮುಖಾಂತರ ಕೈಕಮಾಂಡ್ ಗೆ ಸಂದೇಶ ರವಾನೆ ಮಾಡಿ ಪ್ರತಿಪಕ್ಷ ಸ್ಧಾನ ಉಳಿಸಿಕೊಳ್ಳಲು ಅಶೋಕ್ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ದೇಶ

ವಿದ್ಯಾರ್ಥಿಗಳಿಗೆ ಪಾಠವೇ? SIR ಕರ್ತವ್ಯವೇ? ದ್ವಂದ್ವದಲ್ಲಿ ಸರ್ಕಾರಿ ಶಾಲಾ ಶಿಕ್ಷಕರು

Published

on

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ Special Intensive Revision (SIR) ಅಥವಾ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕಾಗಿ ಸರ್ಕಾರಿ ಶಾಲಾ ಶಿಕ್ಷಕರನ್ನು ದೊಡ್ಡ ಪ್ರಮಾಣದಲ್ಲಿ ಬೂತ್ ಮಟ್ಟದ ಅಧಿಕಾರಿಗಳಾಗಿ (BLO) ನಿಯೋಜಿಸಿರುವುದು ಶಾಲಾ ಶಿಕ್ಷಣದ ಮೇಲೆ ಪರಿಣಾಮ ಬೀರುವ ಆತಂಕವನ್ನು ಹುಟ್ಟುಹಾಕಿದೆ. ಬೋಧನಾ ಕರ್ತವ್ಯ ಮತ್ತು ಚುನಾವಣಾ ಸಂಬಂಧಿತ ಜವಾಬ್ದಾರಿಗಳನ್ನು ಒಂದೇ ವೇಳೆ ನಿರ್ವಹಿಸಬೇಕಾದ ಕಾರಣ ಶಿಕ್ಷಕರು ತೀವ್ರ ಒತ್ತಡ ಎದುರಿಸುತ್ತಿದ್ದಾರೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಬಹುತೇಕ ಶಿಕ್ಷಕರನ್ನು ಎಸ್‌ಐಆರ್ ಕಾರ್ಯಕ್ಕೆ ನಿಯೋಜಿಸಲಾಗಿದೆ. ಪರಿಣಾಮವಾಗಿ ಕೆಲವು ಶಾಲೆಗಳಲ್ಲಿ ಒಬ್ಬರು ಅಥವಾ ಇಬ್ಬರು ಶಿಕ್ಷಕರು ಮಾತ್ರ ಉಳಿದಿದ್ದು, ಅವರು ಎಲ್ಲ ತರಗತಿಗಳಿಗೆ ಪಾಠ ಮಾಡುವುದರ ಜೊತೆಗೆ ಮಧ್ಯಾಹ್ನದ ಊಟ, ಹಾಲು, ಮೊಟ್ಟೆ, ಬಾಳೆಹಣ್ಣು ವಿತರಣೆ, ವಿದ್ಯಾರ್ಥಿಗಳ ಆನ್‌ಲೈನ್ ಹಾಜರಾತಿ ಹಾಗೂ ಆಡಳಿತಾತ್ಮಕ ಕೆಲಸಗಳನ್ನು ನಿರ್ವಹಿಸಬೇಕಾಗಿದೆ.

ಶಾಲಾ ಅವಧಿಯಲ್ಲೇ ಎಸ್‌ಐಆರ್ ಸಭೆಗಳಿಗೆ ಹಾಜರಾಗುವಂತೆ ವಾಟ್ಸಾಪ್ ಮೂಲಕ ಸೂಚನೆ ಬಂದಿರುವುದರಿಂದ ಯಾವ ಕರ್ತವ್ಯಕ್ಕೆ ಆದ್ಯತೆ ನೀಡಬೇಕು ಎಂಬ ಗೊಂದಲ ಶಿಕ್ಷಕರಲ್ಲಿ ಮೂಡಿದೆ. ಸಭೆಗೆ ಗೈರಾಗಿದ್ದರೆ ಶಿಸ್ತು ಕ್ರಮದ ಭೀತಿಯೂ ಎದುರಾಗುತ್ತಿದೆ ಎಂದು ಶಿಕ್ಷಕರು ಹೇಳುತ್ತಿದ್ದಾರೆ.

ಇನ್ನೊಂದೆಡೆ, ನಗರ ಪ್ರದೇಶಗಳಲ್ಲಿ ಮತದಾರರು ಆಗಾಗ್ಗೆ ಮನೆ ಬದಲಾಯಿಸುತ್ತಿರುವುದರಿಂದ ಮನೆ-ಮನೆ ಸಮೀಕ್ಷೆ ನಡೆಸುವುದು ಸವಾಲಾಗಿ ಪರಿಣಮಿಸಿದೆ. ಹಳೆಯ ಮತದಾರರ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಲು ಹೆಚ್ಚಿನ ಸಮಯ ಬೇಕಾಗುತ್ತಿದೆ.

ಕಡಿಮೆ ಶಿಕ್ಷಕರಿರುವ ಶಾಲೆಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ. ಐವರು ಶಿಕ್ಷಕರಿರುವ ಶಾಲೆಯಲ್ಲಿ ನಾಲ್ವರನ್ನು ಎಸ್‌ಐಆರ್ ಕರ್ತವ್ಯಕ್ಕೆ ನಿಯೋಜಿಸಿರುವ ಉದಾಹರಣೆಗಳೂ ಇದ್ದು, ಉಳಿದ ಒಬ್ಬ ಶಿಕ್ಷಕರು ಹಲವು ತರಗತಿಗಳನ್ನು ಒಟ್ಟಿಗೆ ನಿರ್ವಹಿಸುತ್ತಿದ್ದಾರೆ. ಜೊತೆಗೆ ಕೆಲ ಶಿಕ್ಷಕರನ್ನು ತಮ್ಮ ಶಾಲೆಯಿಂದ 20 ಕಿ.ಮೀ.ಗೂ ಹೆಚ್ಚು ದೂರದ ಪ್ರದೇಶಗಳಿಗೆ ನಿಯೋಜಿಸಿರುವುದರಿಂದ ಪ್ರಯಾಣ ಹಾಗೂ ಸಮೀಕ್ಷಾ ಕಾರ್ಯದ ಒತ್ತಡವೂ ಹೆಚ್ಚಾಗಿದೆ.

Continue Reading

ದೇಶ

Sakkath Santhe 2026: ಗೃಹ ಉತ್ಪನ್ನಗಳಿಗೆ ವೇದಿಕೆ, ಇಂದಿರಾನಗರದಲ್ಲಿ ಜನಸಾಗರ

Published

on

ಬೆಂಗಳೂರು: ನಗರದ ಇಂದಿರಾನಗರ ಬಡಾವಣೆಯಲ್ಲಿ ಆಯೋಜಿಸಲಾದ ‘ಸಕ್ಕತ್ ಸಂತೆ 2026’ (Sakkath Santhe 2026) ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ನೂರಾರು ವೈವಿಧ್ಯಮಯ ಮಳಿಗೆಗಳಲ್ಲಿ ಪ್ರದರ್ಶನಗೊಂಡ ಗೃಹ ಉತ್ಪನ್ನಗಳು, ಕೈಗಾರಿಕಾ ವಸ್ತುಗಳು ಹಾಗೂ ಸ್ಥಳೀಯ ಉದ್ಯಮಿಗಳ ಉತ್ಪನ್ನಗಳನ್ನು ವೀಕ್ಷಿಸಲು ಸಾವಿರಾರು ಜನರು ಭೇಟಿ ನೀಡಿ ಖರೀದಿಸಿದರು.

ವಿಶೇಷವಾಗಿ ಮಹಿಳಾ ಕಿರು ಉದ್ಯಮಿಗಳು, ಗೃಹಾಧಾರಿತ ಉದ್ಯಮಿಗಳು ಹಾಗೂ ಸ್ಥಳೀಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಈ ಸಂತೆ ಆಯೋಜಿಸಲಾಗಿತ್ತು. ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಪರಿಚಯಿಸುವ ಅವಕಾಶ ದೊರೆತಿದ್ದು, ಉತ್ತಮ ವ್ಯಾಪಾರವೂ ನಡೆದಿರುವುದಾಗಿ ಭಾಗವಹಿಸಿದ ಉದ್ಯಮಿಗಳು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮಕ್ಕೆ ಮಿಸೆಸ್ ಇಂಡಿಯಾ 2021 ವಿಜೇತೆ ಡಾ. ಸ್ಮಿತಾ ಪ್ರಭು ಚಾಲನೆ ನೀಡಿದರು. ಬಳಿಕ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ಪ್ರದರ್ಶನಗೊಂಡಿದ್ದ ನವೀನ ಮತ್ತು ಗುಣಮಟ್ಟದ ಉತ್ಪನ್ನಗಳನ್ನು ವೀಕ್ಷಿಸಿದರು. ಅಲ್ಲದೆ ಮಹಿಳಾ ಉದ್ಯಮಿಗಳು ಹಾಗೂ ಪ್ರತಿಭಾವಂತ ಕಿರು ಉದ್ಯಮಿಗಳೊಂದಿಗೆ ಸಂವಾದ ನಡೆಸಿ, ಅವರ ಪ್ರಯತ್ನಗಳನ್ನು ಶ್ಲಾಘಿಸಿ ಇನ್ನಷ್ಟು ಬೆಳೆಯುವಂತೆ ಪ್ರೋತ್ಸಾಹಿಸಿದರು.

ಈ ಯಶಸ್ವಿ ಕಾರ್ಯಕ್ರಮದ ಹಿಂದೆ ಶ್ರಮಿಸಿದ ಸ್ವಾತಿ ಶೆಟ್ಟಿ ಹಾಗೂ ಅವರ ಸಂಪೂರ್ಣ ತಂಡಕ್ಕೆ ಸಾರ್ವಜನಿಕರು, ಭಾಗವಹಿಸಿದ ಉದ್ಯಮಿಗಳು ಮತ್ತು ಅತಿಥಿಗಳು ಅಭಿನಂದನೆ ಸಲ್ಲಿಸಿದರು. ಮಹಿಳಾ ಉದ್ಯಮಶೀಲತೆಗೆ ಉತ್ತೇಜನ ನೀಡುವ ಇಂತಹ ಕಾರ್ಯಕ್ರಮಗಳು ಸ್ಥಳೀಯ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ನಿರ್ಮಿಸುವುದರ ಜೊತೆಗೆ ಸಣ್ಣ ಉದ್ಯಮಗಳ ಬೆಳವಣಿಗೆಗೂ ನೆರವಾಗಲಿವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ‘ಸಕ್ಕತ್ ಸಂತೆ’ ಆಯೋಜಿಸಲು ತಂಡಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

Continue Reading

ದೇಶ

SIR ಎಂದರೇನು? ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸಂಪೂರ್ಣ ಮಾಹಿತಿ

Published

on

ಬೆಂಗಳೂರು: ಕರ್ನಾಟಕದಲ್ಲಿ Special Intensive Revision (SIR) ಅಥವಾ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರ ಪಟ್ಟಿಯನ್ನು ಹೆಚ್ಚು ನಿಖರಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ (ECI) ರಾಜ್ಯಾದ್ಯಂತ ಮನೆ-ಮನೆ ಪರಿಶೀಲನೆ ನಡೆಸುತ್ತಿದೆ.

ಈ ಪ್ರಕ್ರಿಯೆಯ ಪ್ರಮುಖ ಉದ್ದೇಶ ಸತ್ತವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ನಕಲಿ ಹಾಗೂ ಅನರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಮತ್ತು ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದಾಗಿದೆ. ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರು ನೋಂದಾಯಿತರಾಗಿದ್ದು, ಅವರಲ್ಲಿ ಸುಮಾರು 91.61% ಮತದಾರರ ವಿವರಗಳು ಈಗಾಗಲೇ ಮ್ಯಾಪ್ ಆಗಿವೆ. ಉಳಿದ ಮತದಾರರ ಮಾಹಿತಿಯನ್ನು ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸಾವಿರಾರು ಅಧಿಕಾರಿಗಳು ಹಾಗೂ 5,950 BLOಗಳು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮತದಾರರಿಗೆ ಅಗತ್ಯ ದಾಖಲೆಗಳು ಹಾಗೂ ಪ್ರಮಾಣಪತ್ರಗಳನ್ನು ಸೇವಾ ಸಿಂಧು, ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯುವ ವ್ಯವಸ್ಥೆಯನ್ನೂ ಸರ್ಕಾರ ಕಲ್ಪಿಸಿದೆ.

ಇದೀಗ SIR ಪ್ರಕ್ರಿಯೆ ರಾಜಕೀಯ ವಿವಾದಕ್ಕೂ ಕಾರಣವಾಗಿದೆ. ಕೆಲವು ರಾಜಕೀಯ ಪಕ್ಷಗಳು ಮನೆ-ಮನೆ ಪರಿಶೀಲನೆಯ ಬದಲು ಸಾರ್ವಜನಿಕ ಸ್ಥಳಗಳಲ್ಲಿ ಅರ್ಜಿ ವಿತರಣೆ, ನಿಯಮ ಉಲ್ಲಂಘನೆ ಹಾಗೂ ರಾಜಕೀಯ ಹಸ್ತಕ್ಷೇಪದ ಆರೋಪಗಳನ್ನು ಮಾಡಿವೆ. ಆದರೆ, ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ಇನ್ನೂ ಮ್ಯಾಪ್ ಆಗದ ಮತದಾರರ ಹೆಸರುಗಳು ತಕ್ಷಣವೇ ಪಟ್ಟಿಯಿಂದ ಕೈಬಿಡಲಾಗುವುದಿಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕ ದಾಖಲೆ ಸಲ್ಲಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಸೂಕ್ತ ಅವಕಾಶ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮತದಾರರ ಪಟ್ಟಿಯನ್ನು ಪಾರದರ್ಶಕ ಹಾಗೂ ನಿಖರವಾಗಿಡುವ ಉದ್ದೇಶದಿಂದ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಚುನಾವಣಾ ಆಯೋಗ ಮನವಿ ಮಾಡಿದೆ.

Continue Reading

Trending