Connect with us

ರಾಜಕೀಯ

ಸಿಎಂ ಸರ್ಕಾರಕ್ಕೆ ಸೈಟ್ ವಾಪಸ್ ಕೊಡದಿದ್ದರೆ‌ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ: ಹೆಚ್. ವಿಶ್ವನಾಥ್

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್ ಕೊಡಲಿ. ಅದೇ ಜಾಗದಲ್ಲಿ ಒಂದು ಆಸ್ಪತ್ರೆ ಕಟ್ಟಿಸಿ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತೆ. ಇಲ್ಲದೆ ಇದ್ದರೆ ನಿಮ್ಮ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ (H Vishwanath) ಹೇಳಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಂಭಾಗ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣ ಕುರಿತು ಮಾತನಾಡಿದರು. ಸಿಎಂ ತಮಗೆ 62 ಕೋಟಿ ರೂ. ಬರಬೇಕು ಅಂತಾರೆ. ನನಗೆ ಅರ್ಥವಾಗ್ತಿಲ್ಲ, ಇದು ಯಾವ ಥರ ಲೆಕ್ಕಚಾರ ಅಂತಾ? ಹಣಕಾಸು ಸಚಿವರಾದರು ಹೀಗೆ ಮಾತಾಡಿದ್ರೆ ಹೇಗೆ? ಯಾಕೆ ಸಿದ್ದರಾಮಯ್ಯ (Siddaramaiah) ಮಣ್ಣಿನ ಹಿಂದೆ ಹೋಗ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಸಮಾಜವಾದಿ ಮನಸ್ಸಿನ ಸಿದ್ದರಾಮಯ್ಯ ಯಾಕೆ ಈ ರೀತಿ ಮಣ್ಣಿನ ಹಿಂದೆ ಹೋಗುವ ರೀತಿ ಬದಲಾವಣೆ ಆದ್ರು?. ನೀವು ನಿಮ್ಮ ಅವಧಿಯಲ್ಲಿ ಒಂದು ಸೈಟ್ ಆದ್ರು ಜನ ಸಾಮಾನ್ಯರಿಗೆ ಕೊಡಿಸಿದ್ದಿರಾ?. ಸಿದ್ದರಾಮಯ್ಯ ಪತ್ನಿ ಖರೀದಿಸಿರುವ ದೇವನೂರು ಬಡಾವಣೆ ಜಾಗ ದಲಿತರಿಗೆ ಸೇರಿದ್ದು. ಜವರ ಎಂಬ ವ್ಯಕ್ತಿಗೆ ಸೇರಿದ ಜಮೀನು ಇದು. ಡಿನೋಟಿನೋಫೈ ಆದ ಜಾಗವನ್ನು ಸಿಎಂ ಪತ್ನಿಯ ಅಣ್ಣ ಖರೀದಿ ಮಾಡಿದ್ದರು. ದಾನ ಪತ್ರವಾಗಿ 2010 ರಲ್ಲಿ ಸಿಎಂ ಪತ್ನಿ ಹೆಸರಿಗೆ ಬಂದಿದೆ ಎಂದರು.

ಸಿಎಂ ಅವರು ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಸ್ ಕೊಟ್ಟು ಆ ಜಾಗದಲ್ಲಿ ಒಂದು ಆಸ್ಪತ್ರೆ ಕಟ್ಟಿಸಿ ನಿಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತೆ. ಇಲ್ಲದೆ ಇದ್ದರೆ ನಿಮ್ಮ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ ಯಾಕೆ ಮಾನ ಮರ್ಯಾದೆ ಬೀದಿ ಬೀದಿಯಲ್ಲಿ ಕಳೆದು ಕೊಳ್ತಾ ಇದ್ದೀರಾ?. ಈ ಹಗರಣ ನ್ಯಾಯಾಂಗ ತನಿಖೆ ಗೆ ಒಪ್ಪಿಸಿ ಅಂತಾ ನಿಮ್ಮ ಶಿಷ್ಯರು ಸಲಹೆ ಕೊಡ್ತಾ ಇದ್ದಾರೆ. ನ್ಯಾಯಾಂಗ ತನಿಖೆ ಯಿಂದ ಯಾವ ಪ್ರಯೋಜನವಿಲ್ಲ. ಈ ಹಗರಣ ಸಿಬಿಐ ಗೆ ಕೊಡಿ. ಸಾವಿರಾರು ಕೋಟಿ ರೂ ಹಗರಣ ಇದು ಎಂದು ಹೆಚ್. ವಿಶ್ವನಾಥ್ ಆಗ್ರಹ ಮಾಡಿದರು.

ಪ್ರಾಧಿಕಾರದ ಆಯುಕ್ತರನ್ನು ವರ್ಗಾವಣೆ ಮಾಡಿ ಇಲ್ಲೆ ಯಾಕೆ ಇಟ್ಟು ಕೊಂಡಿದ್ದಿರಿ?. ಇನ್ನೂ ನಿಮ್ಮ ಕೆಲಸ ಇಲ್ಲಿ ಮುಗಿದಿಲ್ಲ. ಸಿಎಂ ಗೆ 62 ಕೋಟಿ ರೂ. ಅನ್ನೋದು ಕಡ್ಲೆ ಕಾಯಿ ಬೀಜವಾಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಜಕೀಯ

ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.

ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.

ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.

ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:

“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.

Continue Reading

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

Trending