Connect with us

ಬೆಂಗಳೂರು

ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ

ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ

ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ

ಹೋಗಲ್ಲ ಹಾಗಲ್ಲ ಹೀಗಲ್ಲ ಎನ್ನುತ್ತಲೇ ಬಾಂಬೆ ಶಾಸಕರ ತವರು ಪಕ್ಷದ ಮೋಹ ಹೆಚ್ಚಾಗುತ್ತಿದೆ. ಸೋಮಶೇಖರ್ ಸಿಎಂ ಭೇಟಿ ಬಳಿಕ ಇದೀಗ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆಗೆ ನಾಂದಿ ಹಾಡಿದ್ದು ಯಲ್ಲಾಪುರದ ಶಾಸಕರು. ಬಾಂಬೆ ತಂಡದ ಖಾಯಂ ಸದಸ್ಯರಾಗಿದ್ದ ಶಿವರಾಮ್ ಹೆಬ್ಬಾರ್ ಕೂಡ ಈಗ ಎತ್ತ ಮುಖ ಮಾಡಿದ್ದಾರೆ ಎಂಬುದಕ್ಕೆ ಸಿಎಂ ಭೇಟಿ ಉತ್ತರ ಕೊಟ್ಟಿದೆ. ಇದರೊಂದಿಗೆ ಬಾಂಬೆ ಫ್ರೆಂಡ್ಸ್‌ ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ ಮೂಡಿವೆ.

ಬಾಂಬೆ ಶಾಸಕರು ಮತ್ತೆ ತವರು ಮನೆಯ ಕದವನ್ನು ತಟ್ಟುತ್ತಿರುವ ಸುದ್ದಿ ಹಳೆಯದೇನೂ ಅಲ್ಲ. ಆಪರೇಷನ್ ಹಸ್ತದ ಚಟುವಟಿಕೆ ಗುಟ್ಟಾಗಿಯೂ ಉಳಿದಿಲ್ಲ. ಎಸ್.ಟಿ ಸೋಮಶೇಖರ್  ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಬಿಜೆಪಿ ಬಿಟ್ಟು ವಾಪಸ್‌ ಕಾಂಗ್ರೆಸ್‌ಗೆ ತೆರಳುವ ಸುದ್ದಿಗೆ ಮತ್ತಷ್ಟು ಜೀವ ಬರುವಂತೆ ಮಾಡಿತ್ತು. ಇದೀಗ ಮತ್ತೊಬ್ಬ ಬಾಂಬೆ ಫ್ರೆಂಡ್ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಮತ್ತೆ ಸೋಮಶೇಖರ್ ಹಾದಿಯನ್ನೇ ತುಳಿದಿದ್ದಾರ. ಶಿವರಾಮ್ ಹೆಬ್ಬಾರ್ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಹೆಬ್ಬಾರ್ ಕೂಡ  ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂಬುದಕ್ಕೆ ಇದು ಬಲವಾದ ಪುಷ್ಟಿ ನೀಡಿದೆ. ಬಿಜೆಪಿಯ ಉಳಿದ ಶಾಸಕರಿಗೆ ಇಲ್ಲದ ಕ್ಷೇತ್ರದ ಕೆಲಸಗಳು ಬಾಂಬೆ ಫ್ರೆಂಡ್ಸ್ ಖ್ಯಾತಿಯ ಶಾಸಕರಿಗೆ ಮಾತ್ರ ಸಿಎಂ ಸಿದ್ದರಾಮಯ್ಯ ಬಳಿ ಹೆಚ್ಚಾಗಿ ನಡೆಯುತ್ತಿರುವುದು ಎಲ್ಲ ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ. ಮುಂಬರುವ ದಿನಗಳಲ್ಲಿ ಶಿವರಾಂ ಹೆಬ್ಬಾರ್ ಕೂಡ ಕಾಂಗ್ರೆಸ್ ಕಡೆ ಮುಖ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಅಡಿಪಾಯ ಹಾಕಿದಂತಿದೆ.  ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಈಗಾಗಲೇ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಎಸ್‌ಟಿಎಸ್ ಅವರ ಆಪ್ತರು, ಅನೇಕ ಬೆಂಬಲಿಗರು ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ… ಯಾವಾಗ ಬೇಕಾದ್ರೂ ಎಸ್‌ಟಿ.ಸೋಮಶೇಖರ್ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಇದ್ರ ಬೆನ್ನಲ್ಲೇ ಎಸ್‌ಟಿ ಸೋಮಶೇಖರ್ ಕ್ಷೇತ್ರದ ಮೇಲೆ ಡಿಸಿಎಂ ಡಿಕೆಶಿವಕುಮಾರ್‌ಗೂ ಪ್ರೀತಿ ಹೆಚ್ಚಾಗಿದೆ. ನಿನ್ನೆ(ಆಗಸ್ಟ್ 26) ಯಶವಂತಪುರ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

ಇನ್ನೊಂದೆಡೆ ಸ್ವಪಕ್ಷೀಯ ನಾಯಕರ ವಿರುದ್ಧ ಎಸ್.ಟಿ.ಸೋಮಶೇಖರ್ ಮತ್ತೆ ಬಹಿರಂಗವಾಗಿ ಟೀಕಿಸಿದ್ದಾರೆ. ಬಿಜೆಪಿಯಲ್ಲಿ ಬೂದಿಮುಚ್ಚಿದ ಕೆಂಡದಂಥ ಪರಿಸ್ಥಿತಿ ಇರುವುದು ನಿಜ ಎಂದು ಹೇಳಿರುವುದು ಅಚ್ಚರಿಕೆ ಕಾರಣವಾಗಿದೆ. ಇದೆ ವೇಳೆ ನನ್ನ ರಾಜಕೀಯ ಬೆಳವಣಿಗೆಗೆ ಡಿ.ಕೆ.ಶಿವಕುಮಾರ್ ಕಾರಣ ಅಂತಲೂ ಬಣ್ಣಿಸಿದ್ದಾರೆ.

ಇನ್ನು ಯಶವಂತಪುರದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಿಕೆಶಿ ಮಾತನಾಡಿ, ನನ್ನ, ಸೋಮಶೇಖರ್ ಸಂಬಂಧ ಇಂದಿನದ್ದಲ್ಲ, 35 ವರ್ಷ ಹಳೆಯದ್ದು. ನಾವು ಬಿತ್ತಿದ ಬೀಜ, ನಾವು ಗೊಬ್ಬರ ಹಾಕಿದ ಗಿಡ ಈಗ ಮರವಾಗಿದೆ.. ಹಣ್ಣನ್ನು ಬೇರೆಯವರು ಕಿತ್ತು ತಿನ್ನಬಾರದೆಂದು ಇಲ್ಲಿಗೆ ಅವರ ಜತೆ ಬಂದಿರುವೆ ಅಂತೇಳಿದ್ದಾರೆ.

ಎಸ್.ಟಿ ಸೋಮಶೇಖರ್ ಮನವಿ ಮೇರೆಗೆ ಡಿಸಿಎಂ ಡಿಕೆಶಿವಕುಮಾರ್ ಇಂದು ಕನಕಪುರ ರಸ್ತೆಯ ಯಶವಂತಪುರ ಕ್ಷೇತ್ರದ ರೆಸಿಡೆನ್ಶಿಯಲ್ ಅಸೋಸಿಯೇಷನ್‌ಗಳ ಅಹವಾಲು ಆಲಿಸಲಿದ್ದಾರೆ. ಈ ಮೂಲಕ ಸೋಮಶೇಖರ್ ಕೂಡ ಕಾಂಗ್ರೆಸ್ ಸೇರ್ಪಡೆಗೆ ಬೇಕಾದ ವೇದಿಕೆಯನ್ನು ಕನಕಪುರ ರಸ್ತೆಯಿಂದಲೇ ಗಟ್ಟಿ ಮಾಡಿಕೊಳ್ಳುವಂತೆ ಕಾಣುತ್ತಿದೆ.

ಸದ್ಯಕ್ಕೆ ಆಪರೇಷನ್ ಹಸ್ತದ ತಂತ್ರಗಾರಿಕೆಗೆ ಸೋಮಶೇಖರ್ ಹಾಗೂ ಹೆಬ್ಬಾರ್ ತಾವೇ ಒಳಗಾದಂತೆ ಕಾಣುತ್ತಿದೆ. ಬರುವವರೆಲ್ಲ ಬರಲಿ ಎಂಬ ಮಾತಿನ ಮೂಲಕ ಉಳಿದ ನಾಯಕರಿಗೆ ಸಿದ್ದರಾಮಯ್ಯ, ಡಿ.ಕೆಶಿವಕುಮಾರ್ ಜೋಡಿ ರೆಡ್ ಕಾರ್ಪೇಟ್ ಹಾಕುತ್ತಿರುವುದು ಸ್ಪಷ್ಟ.

ಬೆಂಗಳೂರು

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನ ಆಕರ್ಷಕ ಪ್ರತಿಕೃತಿಗಳು

ಬೆಂಗಳೂರು: ಲಾಲ್‌ಬಾಗ್ ಉದ್ಯಾನದಲ್ಲಿ ನಾಳೆ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಗಾಜಿನ ಮನೆಯಲ್ಲಿ ಸ್ಥಾಪಿಸಿರುವ ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನವರ ಐಕ್ಯ ಮಂಟಪದ ಪ್ರತಿಕೃತಿಗಳು.

ತೋಟಗಾರಿಕೆ ಇಲಾಖೆ ವಿವಿಧ ರೀತಿಯ ಆಕರ್ಷಕ ಹೂವುಗಳಿಂದ ಗಾಜಿನ ಮನೆಯನ್ನು ಅಲಂಕಾರಗೊಳಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳು ಬಣ್ಣ ಬಣ್ಣದ ಹೂಸಸಿಗಳೊಂದಿಗೆ ಶೃಂಗಾರಗೊಂಡಿವೆ. ಈ ಪ್ರದರ್ಶನದಲ್ಲಿ ಆಂಥೋರಿಯಂ, ಗುಲಾಬಿ, ಆರ್ಕಿಡ್, ಜರ್ಬೇರಾ ಮತ್ತು ಸುಗಂಧ ರಾಜ ಸೇರಿದಂತೆ ಹಲವಾರು ಶೀತ ವಲಯದ ಹೂಗಳು ನೋಡುಗರ ಕಣ್ಮನ ಸೆಳೆಯಲಿವೆ.

ಬೋನ್ಸಾಯ್ ವನವನ್ನು ನವೀಕರಿಸಿ ವಿಭಿನ್ನ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಬೋನ್ಸಾಯ್ ಸಸಿಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಜೊತೆಗೆ ಇಕೆಬಾನಾ, ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಯ ಪ್ರದರ್ಶನವೂ ಈ ಶೋನಲ್ಲಿ ಒಳಗೊಂಡಿವೆ.

ಸುಮಾರು 2.5 ಲಕ್ಷದಿಂದ 3 ಲಕ್ಷ ಹೂವುಗಳಿಂದ ನಿರ್ಮಿತವಾಗಿರುವ ಗಾಜಿನ ಮನೆಯಲ್ಲಿ, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರಿನ ಕೋಟೆ ಪ್ರತಿಕೃತಿ ಸ್ಥಾಪಿಸಲಾಗಿದೆ. ಇದರ ಮುಂಭಾಗದಲ್ಲಿ ಅಶ್ವಾರೂಢ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳು ಹಾಗೂ ಹಿಂಭಾಗದಲ್ಲಿ ಐಕ್ಯ ಮಂಟಪದ ಪ್ರತಿಕೃತಿ ಇದೆ.

ಪ್ರವೇಶ ಶುಲ್ಕ:

  • ಸಾಮಾನ್ಯ ದಿನ: ₹80
  • ರಜಾದಿನಗಳು ಮತ್ತು ವಾರಾಂತ್ಯ: ₹100

ಈ ಪ್ರದರ್ಶನವು ನೈಸರ್ಗಿಕ ಸೌಂದರ್ಯ ಹಾಗೂ ಐತಿಹಾಸಿಕ ಮಹತ್ವವನ್ನು ಒಗ್ಗೂಡಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸುವ ನಿರೀಕ್ಷೆಯಿದೆ.

Continue Reading

ಬೆಂಗಳೂರು

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್‌ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.

ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.

2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.

Continue Reading

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

Trending