Connect with us

ದೇಶ

L. K Advani ಅಡ್ವಾಣಿ ವಿಧಿವಶರಾಗಿದ್ದಾರೆ ಮೌನಾಚರಣೆ ಮಾಡಿ….ಸೋಮಣ್ಣ ಯಡವಟ್ಟು

Published

on

ಬೆಂಗಳೂರು: ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ನಿಧನರಾಗಿದ್ದಾರೆಂದು ತಪ್ಪು ಮಾಹಿತಿ ಗ್ರಹಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಶ್ರಂದ್ಧಾಂಜಲಿ ಸಲ್ಲಿಸುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ,
ಇಂದು ತುಮಕೂರಿನ ಗುಬ್ಬಿಯಲ್ಲಿ ನಡೆಯುತ್ತಿದ್ದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಈ ಪ್ರಸಂಗ ನಡೆದಿದೆ, ಅಡ್ವಾಣಿ ಅವರು ನಿಧನರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ, ಎಲ್ಲರೂ ಎದ್ದು ನಿಂತು ಮೌನಾಚರಣೆ ಮಾಡಿ, ನಿಧನ ಸುದ್ದಿ ಒಮ್ಮೆ ಕನ್ಫರ್ಮ್ ಕೂಡ ಮಾಡಿಕೊಳ್ಳಿ ಎಂದು ಸಚಿವರು ಹೇಳಿದಾಗ ಪ್ರಮುಖ ಮುಖಂಡರು ಹೌದು..ಹೌದು.. ಸರಿ ಇದೆ ಎಂದರು, ತದನಂತರ ಸೋಮಣ್ಣ ಅವರು ಸತತ 1 ಒರೆ ನಿಮಿಷಕ್ಕೂ ಹೆಚ್ಚು ಮಾತನಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು, ಅದರೆ ಕೆಲ ಗಂಟೆಗಳ ನಂತರ ಸುಳ್ಳು ಸುದ್ದಿ ಎಂದು ತಿಳಿದಾಗ… ಅವರು ಕ್ಷಮೆಯಾಚಿಸಿದ್ದಾರೆ,

ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಡ್ವಾಣಿ ಅವರ ಆರೋಗ್ಯ ಸದ್ಯ ಸ್ಧಿರವಾಗಿದ್ದು ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ..

ದೇಶ

ತಾಲಿಬಾನ್ ವಿರುದ್ಧ ಪಾಕಿಸ್ತಾನದ ಆಪರೇಷನ್: ನೂರಾರು ಉಗ್ರರು ಸಾವು

Published

on

By

ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರವು ಆಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ‘ಗಜಬ್ ಲಿಲ್ ಹಕ್’ (Ghazab lil-Haq) ಕಾರ್ಯಾಚರಣೆಯಲ್ಲಿ ಸುಮಾರು 800 ತಾಲಿಬಾನ್ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭಾನುವಾರ ಹೇಳಿಕೆ ನೀಡಿದೆ.

ಪಾಕಿಸ್ತಾನದ ಮಾಹಿತಿ ಸಚಿವ Attaullah Tarar ಅವರು ಈ ಕುರಿತು ಮಾಹಿತಿ ನೀಡಿದ್ದು, ಈ ಕಾರ್ಯಾಚರಣೆಯಲ್ಲಿ Tehreek-e-Taliban Pakistan (ಟಿಟಿಪಿ) ಹಾಗೂ ಫಿತ್ನಾ ಅಲ್ ಖವಾರಿಜ್ (FAK) ಉಗ್ರ ಸಂಘಟನೆಗೆ ಭಾರೀ ಹೊಡೆತ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, ಕಾರ್ಯಾಚರಣೆ ಆರಂಭವಾದ ಬಳಿಕ ಕನಿಷ್ಠ 796 ಉಗ್ರರು ಸಾವನ್ನಪ್ಪಿದ್ದು, 1,043ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, ಆಫ್ಘಾನ್ ತಾಲಿಬಾನ್‌ನ 286 ಪೋಸ್ಟ್‌ಗಳನ್ನು ನಾಶಪಡಿಸಲಾಗಿದ್ದು, ಇನ್ನೂ 44 ಪೋಸ್ಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆಗಳಿಗೆ ಸೇರಿದ 249 ಟ್ಯಾಂಕ್‌ಗಳು, ಕವಚಿತ ವಾಹನಗಳು, ತೋಪುಗಳು ಹಾಗೂ ಡ್ರೋನ್‌ಗಳನ್ನು ಧ್ವಂಸಗೊಳಿಸಲಾಗಿದೆ. ಪಾಕಿಸ್ತಾನ ಸೇನೆಯ ಈ ದಾಳಿ ಗಡಿಭಾಗದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಪಾಕಿಸ್ತಾನವು ತನ್ನ ಭದ್ರತೆಗೆ ಧಕ್ಕೆಯಾಗುತ್ತಿರುವ ಉಗ್ರ ಚಟುವಟಿಕೆಗಳನ್ನು ನಿಯಂತ್ರಿಸಲು ಈ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಹೇಳಿದೆ. ಆದರೆ, ಈ ಬೆಳವಣಿಗೆಗಳು ಆಫ್ಘಾನಿಸ್ತಾನ-ಪಾಕಿಸ್ತಾನ ನಡುವಿನ ಸಂಬಂಧಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Continue Reading

ದೇಶ

ಬೆಂಗಳೂರಿನಲ್ಲಿ ಎಲ್‌ಪಿಜಿ ಸಂಕಷ್ಟ: ಆಟೊ ಚಾಲಕರ ಬದುಕು ಸಂಕಷ್ಟಕ್ಕೆ

Published

on

By

ಬೆಂಗಳೂರು: ನಗರದಲ್ಲಿ ಉಂಟಾಗಿರುವ ಎಲ್‌ಪಿಜಿ ಕೊರತೆಯಿಂದ ಆಟೊ ಚಾಲಕರ ಸಮಸ್ಯೆಗಳು ದಿನೇ ದಿನೇ ಗಂಭೀರವಾಗುತ್ತಿವೆ. ಗ್ಯಾಸ್‌ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಲಭ್ಯವಿರುವ ಬಂಕ್‌ಗಳ ಬಳಿ ಆಟೊ ಚಾಲಕರು ಗಂಟೆಗಟ್ಟಲೆ ಕಾದು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ಬಂಕ್‌ಗಳು ತಾತ್ಕಾಲಿಕವಾಗಿ ಬಾಗಿಲು ಮುಚ್ಚಿದ್ದು, ಉಳಿದ ಬಂಕ್‌ಗಳಲ್ಲೂ ‘ನೋ ಸ್ಟಾಕ್’ ಫಲಕಗಳು ಸಾಮಾನ್ಯ ದೃಶ್ಯವಾಗಿವೆ.

ರಾಜಾಜಿನಗರ, ಮತ್ತೀಕೆರೆ, ದಾಸರಹಳ್ಳಿ, ಗುಟ್ಟಹಳ್ಳಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಮಸ್ಯೆ ತೀವ್ರಗೊಂಡಿದೆ. ಬಂಕ್‌ಗಳ ಬಳಿ ಆಟೊಗಳು ಸಾಲುಗಟ್ಟಿ ನಿಲ್ಲುವುದರಿಂದ ಸಂಚಾರ ದಟ್ಟಣೆಗೂ ಕಾರಣವಾಗುತ್ತಿದೆ. ಎಲ್‌ಪಿಜಿ ಕೊರತೆಯಿಂದ ಸಾವಿರಾರು ಆಟೊಗಳು ರಸ್ತೆಗಿಳಿಯಲು ಸಾಧ್ಯವಾಗದೇ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಒತ್ತಡ ಹೆಚ್ಚಾಗಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್‌ ಪೂರೈಕೆಗೆ ತೀವ್ರ ಹೊಡೆತ ಬಿದ್ದಿದ್ದು, ಆಟೊ ಚಾಲಕರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಗ್ಯಾಸ್‌ ಬೆಲೆ ಏರಿಕೆಯಿಂದಾಗಿ ಚಾಲಕರು ಕಡಿಮೆ ದೂರಕ್ಕೂ ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ವಸೂಲು ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೂ ಹೆಚ್ಚುವರಿ ಹೊರೆ ಬೀಳುತ್ತಿದೆ.

ಗ್ಯಾಸ್‌ ಲಭ್ಯವಿರುವ ಮಾಹಿತಿ ಸಿಕ್ಕ ತಕ್ಷಣ ನೂರಾರು ಆಟೊಗಳು ಬಂಕ್‌ಗಳತ್ತ ಧಾವಿಸುತ್ತಿವೆ. ಪರಿಣಾಮ, ಕೆಲವೇ ಗಂಟೆಗಳಲ್ಲಿ ಸ್ಟಾಕ್‌ ಖಾಲಿಯಾಗುತ್ತಿದೆ. ಸಿಎನ್‌ಜಿ ಕೊರತೆಯೂ ಕಾಣಿಸಿಕೊಂಡಿರುವುದರಿಂದ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗಿದೆ.

ಇದರಿಂದಾಗಿ ವಿದ್ಯುತ್‌ ಚಾಲಿತ ಆಟೊಗಳ ಬಳಕೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಇವುಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಪರಿಸ್ಥಿತಿ ಮುಂದುವರಿದರೆ ಅನೇಕ ಆಟೊ ಚಾಲಕರು ವೃತ್ತಿ ತೊರೆಯುವ ಸ್ಥಿತಿ ಎದುರಾಗುವ ಸಾಧ್ಯತೆ ಇದೆ.

Continue Reading

ದೇಶ

ಸುಪ್ರೀಂ ಕೋರ್ಟ್ ಆದೇಶ ಬಳಿಕ ಬೀದಿ ನಾಯಿಗಳ ಲೆಕ್ಕಾಚಾರ: ನಗರದಲ್ಲಿ ಆತಂಕ

Published

on

By

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಬೀದಿ ನಾಯಿಗಳ ಸಮಸ್ಯೆ ಗಂಭೀರವಾಗುತ್ತಿರುವ ಹಿನ್ನೆಲೆ, Bruhat Bengaluru Mahanagara Palike ಸರ್ವೆ ಕಾರ್ಯ ಆರಂಭಿಸಿದೆ. Supreme Court of India ನೀಡಿದ ನಿರ್ದೇಶನದಂತೆ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಶಾಲೆ, ಕಾಲೇಜು, ಆಸ್ಪತ್ರೆ, ಬಸ್ ನಿಲ್ದಾಣ, ಕ್ರೀಡಾಂಗಣ ಹಾಗೂ ಆಟದ ಮೈದಾನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 2,670 ಬೀದಿ ನಾಯಿಗಳು ಪತ್ತೆಯಾಗಿವೆ. ಕೇಂದ್ರ ವಲಯದಲ್ಲಿ 504, ಉತ್ತರ ವಲಯದಲ್ಲಿ 875, ಪಶ್ಚಿಮ ವಲಯದಲ್ಲಿ 591, ದಕ್ಷಿಣ ವಲಯದಲ್ಲಿ 331 ಹಾಗೂ ಪೂರ್ವ ವಲಯದಲ್ಲಿ 369 ನಾಯಿಗಳಿವೆ ಎಂದು ಮಾಹಿತಿ ನೀಡಲಾಗಿದೆ.

ಆದರೆ, ಈ ಅಂಕಿ-ಅಂಶಗಳ ನಿಖರತೆ ಬಗ್ಗೆ ಪ್ರಶ್ನೆಗಳು ಮೂಡಿವೆ. ಕೆಲವು ವಲಯಗಳಲ್ಲಿ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದ್ದು, ಕೆಲವು ಸಂಸ್ಥೆಗಳು ತಮ್ಮ ವ್ಯಾಪ್ತಿಯ ಲೆಕ್ಕ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಬೀದಿ ನಾಯಿಗಳ ಸ್ಥಳಾಂತರಕ್ಕಾಗಿ ಆನೇಕಲ್ ವ್ಯಾಪ್ತಿಯ ಬಿಂಗೀಪುರದಲ್ಲಿ 5 ಎಕರೆ ಜಾಗ ಗುರುತಿಸಲಾಗಿದ್ದು, ಸುಮಾರು 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯದ ಶೆಲ್ಟರ್ ನಿರ್ಮಾಣಕ್ಕೆ 2 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ.

ಇದೇ ವೇಳೆ, ಉತ್ತರ ಹಾಗೂ ಪಶ್ಚಿಮ ವಲಯಗಳಲ್ಲಿ ಹೆಚ್ಚುವರಿ ಆಶ್ರಯ ತಾಣ ನಿರ್ಮಾಣದ ಕಾರ್ಯ ಕೂಡ ಪ್ರಗತಿಯಲ್ಲಿದೆ.

ಒಟ್ಟಿನಲ್ಲಿ, ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದರೂ, ಅಂಕಿ-ಅಂಶಗಳ ಸ್ಪಷ್ಟತೆ ಹಾಗೂ ಅನುಷ್ಠಾನದ ಪರಿಣಾಮಕಾರಿತ್ವ ಬಗ್ಗೆ ಇನ್ನೂ ಅನುಮಾನಗಳು ಉಳಿದಿವೆ.

Continue Reading

Trending